1 ಅರಸುಗಳು 16 : 1 (IRVKN)
ಆಗ ಯೆಹೋವನು ಹನಾನೀಯನ ಮಗನಾದ ಯೇಹುವಿನ ಮುಖಾಂತರವಾಗಿ ಅವನಿಗೆ ಹೇಳಿದ್ದೇನೆಂದರೆ,
1 ಅರಸುಗಳು 16 : 2 (IRVKN)
“ನಾನು ನಿನ್ನನ್ನು ಧೂಳಿನಿಂದ ಎತ್ತಿ, ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನನ್ನಾಗಿ ಮಾಡಿದರೂ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿರುವೆ. ಅವರ ಪಾಪದ ಮೂಲಕವಾಗಿ ನನಗೆ ಕೋಪವನ್ನೆಬ್ಬಿಸಿದ್ದಿ.
1 ಅರಸುಗಳು 16 : 3 (IRVKN)
ಆದುದರಿಂದ ನಿನ್ನನ್ನೂ ಮತ್ತು ನಿನ್ನ ಮನೆಯವರನ್ನು ನಾಶಮಾಡುವೆನು. ನೆಬಾಟನ ಮಗನಾದ ಯಾರೊಬ್ಬಾಮನ ಮನೆಗಾದ ಗತಿಯು ನಿನಗೂ, ನಿನ್ನ ಮನೆಯವರಿಗೂ ಆಗುವುದು.
1 ಅರಸುಗಳು 16 : 4 (IRVKN)
ನಿನ್ನ ಕುಟುಂಬದವರಲ್ಲಿ ಪಟ್ಟಣದೊಳಗೆ ಸಾಯುವವರನ್ನು ನಾಯಿಗಳೂ ಮತ್ತು ಅಡವಿಯಲ್ಲಿ ಸಾಯುವವರನ್ನು ಪಕ್ಷಿಗಳು ತಿಂದುಬಿಡುವವು” ಎಂಬುದೇ.
1 ಅರಸುಗಳು 16 : 5 (IRVKN)
ಬಾಷನ ಉಳಿದ ಚರಿತ್ರೆಯೂ ಅವನ ಪರಾಕ್ರಮಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
1 ಅರಸುಗಳು 16 : 6 (IRVKN)
ಅವನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ತಿರ್ಚದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಏಲನು ಅರಸನಾದನು.
1 ಅರಸುಗಳು 16 : 7 (IRVKN)
ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪಬರುವಂತೆ ಮಾಡಿ, ಆತನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಯೆಹೋವನು ಹನಾನೀಯನ ಮಗ ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೂ, ಅವನ ಕುಟುಂಬಕ್ಕೂಆಗುವ ದುರ್ಗತಿಯನ್ನು ಮುಂತಿಳಿಸಿದನು. [PS]
1 ಅರಸುಗಳು 16 : 8 (IRVKN)
{ಇಸ್ರಾಯೇಲರ ಅರಸನಾದ ಏಲನು} [PS] ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತಾರನೆಯ ವರ್ಷದಲ್ಲಿ ಬಾಷನ ಮಗನಾದ ಏಲನು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಎರಡು ವರ್ಷ ಆಳ್ವಿಕೆ ಮಾಡಿದನು.
1 ಅರಸುಗಳು 16 : 9 (IRVKN)
ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿದನು. ಅರಸನು ತಿರ್ಚದಲ್ಲಿ ತನ್ನ ಅರಮನೆಯ ಮೇಲ್ವಿಚಾರಕನಾದ ಅರ್ಚನೆಂಬುವವನ ಮನೆಯಲ್ಲಿ ಕುಡಿದು ಮತ್ತನಾಗಿರುವಾಗ ಜಿಮ್ರಿಯು ಅಲ್ಲಿಗೆ ಹೋದನು.
1 ಅರಸುಗಳು 16 : 10 (IRVKN)
ಜಿಮ್ರಿಯು ಏಲನ ಮೇಲೆ ಬಿದ್ದು ಅವನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ತಾನು ಅರಸನಾದನು. ಇದು ಯೆಹೂದದ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ನಡೆಯಿತು.
1 ಅರಸುಗಳು 16 : 11 (IRVKN)
ಅವನು ಸಿಂಹಾಸನದ ಮೇಲೆ ಕುಳಿತು ಆಳತೊಡಗಿದ ಕೂಡಲೇ ಬಾಷನ ಮನೆಯವರನ್ನೂ ಅವನ ಬಂಧು ಮಿತ್ರರನ್ನೂ ಸಂಹರಿಸಿದನು. ಅವರಲ್ಲಿ ಒಬ್ಬ ಗಂಡಸನ್ನೂ ಉಳಿಸಲಿಲ್ಲ.
1 ಅರಸುಗಳು 16 : 12 (IRVKN)
ಬಾಷನೂ ಹಾಗು ಅವನ ಮಗನಾದ ಏಲನೂ ತಾವು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ, ತಮ್ಮ ವಿಗ್ರಹಗಳಿಂದ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದರು.
1 ಅರಸುಗಳು 16 : 13 (IRVKN)
ಆದುದರಿಂದ ಆತನು ಪ್ರವಾದಿಯಾದ ಯೇಹುವಿನ ಮುಖಾಂತರವಾಗಿ ಬಾಷನ ಮನೆಗೆ ಆಗುವ ದುರ್ಗತಿಯನ್ನು ಮುಂತಿಳಿಸಿದ್ದನು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು.
1 ಅರಸುಗಳು 16 : 14 (IRVKN)
ಏಲನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. [PS]
1 ಅರಸುಗಳು 16 : 15 (IRVKN)
{ಇಸ್ರಾಯೇಲರ ಅರಸನಾದ ಜಿಮ್ರಿಯು} [PS] ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಏಳು ವರ್ಷ ಆಳ್ವಿಕೆ ಮಾಡಿದನು. ಆ ಸಮಯದಲ್ಲಿ ಇಸ್ರಾಯೇಲರು ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದರು.
1 ಅರಸುಗಳು 16 : 16 (IRVKN)
ಜಿಮ್ರಿಯು ಅರಸನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಕೊಂದುಹಾಕಿದನೆಂಬ ವರ್ತಮಾನವು ಪಾಳೆಯದಲ್ಲಿದ್ದ ಇಸ್ರಾಯೇಲರಿಗೆ ಮುಟ್ಟಿತು. ಅವರು ಅದೇ ದಿನ ಅಲ್ಲಿಯೇ ಸೈನ್ಯಾಧಿಪತಿಯಾದ ಒಮ್ರಿಯನ್ನು ತಮ್ಮ ಅರಸನನ್ನಾಗಿ ನೇಮಿಸಿಕೊಂಡರು.
1 ಅರಸುಗಳು 16 : 17 (IRVKN)
ಒಮ್ರಿಯೂ ಅವನ ಜೊತೆಯಲ್ಲಿದ್ದ ಎಲ್ಲಾ ಇಸ್ರಾಯೇಲರೂ ಗಿಬ್ಬೆತೋನನ್ನು ಬಿಟ್ಟುಹೋಗಿ ತಿರ್ಚಕ್ಕೆ ಮುತ್ತಿಗೆ ಹಾಕಿದರು.
1 ಅರಸುಗಳು 16 : 18 (IRVKN)
ಪಟ್ಟಣವು ಅವರ ವಶವಾದುದನ್ನು ಜಿಮ್ರಿಯು ಕಂಡು ಅರಮನೆಯ ಗರ್ಭಗೃಹಕ್ಕೆ ಹೋಗಿ, ಅರಮನೆಗೆ ಬೆಂಕಿ ಹೊತ್ತಿಸಿ ಸುಟ್ಟುಕೊಂಡು ಸತ್ತನು.
1 ಅರಸುಗಳು 16 : 19 (IRVKN)
ಅವನು ಯಾರೊಬ್ಬಾಮನಂತೆ ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ, ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದ ಹೀಗಾಯಿತು.
1 ಅರಸುಗಳು 16 : 20 (IRVKN)
ಜಿಮ್ರಿಯ ಉಳಿದ ಚರಿತ್ರೆಯೂ ಅವನ ಒಳಸಂಚೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
1 ಅರಸುಗಳು 16 : 21 (IRVKN)
ಆ ಕಾಲದಲ್ಲಿ ಇಸ್ರಾಯೇಲರೊಳಗೆ ಎರಡು ಪಕ್ಷಗಳುಂಟಾದವು. ಒಂದು ಪಕ್ಷದವರು ಗೀನತನ ಮಗನಾದ ತಿಬ್ನಿಯನ್ನು ಹಿಂಬಾಲಿಸಿ ಅವನನ್ನು ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು. ಇನ್ನೊಂದು ಪಕ್ಷದವರು ಒಮ್ರಿಯನ್ನು ಹಿಂಬಾಲಿಸಿದರು.
1 ಅರಸುಗಳು 16 : 22 (IRVKN)
ಆದರೆ ಒಮ್ರಿಯ ಪಕ್ಷದವರು ಗೀನತನ ಮಗನಾದ ತಿಬ್ನೀಯ ಪಕ್ಷದವರನ್ನು ಸೋಲಿಸಿದರು. ತಿಬ್ನಿಯು ಮರಣ ಹೊಂದಿದ್ದರಿಂದ ಒಮ್ರಿಯೇ ಅರಸನಾದನು. [PS]
1 ಅರಸುಗಳು 16 : 23 (IRVKN)
{ಇಸ್ರಾಯೇಲರ ಅರಸನಾದ ಒಮ್ರಿಯು} [PS] ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಮೂವತ್ತೊಂದನೆಯ ವರ್ಷದಲ್ಲಿ ಒಮ್ರಿಯು ಇಸ್ರಾಯೇಲರ ಅರಸನಾಗಿ ಹನ್ನೆರಡು ವರ್ಷ ಆಳ್ವಿಕೆ ಮಾಡಿದನು. ಆರು ವರ್ಷಗಳ ವರೆಗೆ ತಿರ್ಚವೇ ಅವನ ರಾಜಧಾನಿಯಾಗಿತ್ತು.
1 ಅರಸುಗಳು 16 : 24 (IRVKN)
ಅನಂತರ ಶೆಮೆರ್ ಎಂಬವನಿಗೆ [* ಸುಮಾರು 70 ಕಿಲೋಗ್ರಾಂ.] ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಅವನಿಂದ ಸಮಾರ್ಯವೆಂಬ ಗುಡ್ಡವನ್ನು ಕೊಂಡುಕೊಂಡು, ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ, ಅದಕ್ಕೆ ಆ ಭೂಮಿಯ ಒಡೆಯನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ಸಮಾರ್ಯ ಎಂಬ ಹೆಸರಿಟ್ಟನು.
1 ಅರಸುಗಳು 16 : 25 (IRVKN)
ಒಮ್ರಿಯು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯೂ ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತ ದುಷ್ಟನಾಗಿದ್ದನು.
1 ಅರಸುಗಳು 16 : 26 (IRVKN)
ಇಸ್ರಾಯೇಲರು ವಿಗ್ರಹಗಳಿಂದ ತಮ್ಮ ದೇವರಾದ ಯೆಹೋವನಿಗೆ ಕೋಪ ಬರಿಸುವಂತೆ ಅವರನ್ನು ಪಾಪಕ್ಕೆ ಪ್ರೇರೇಪಿಸಿ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ಅವನೂ ನಡೆದನು.
1 ಅರಸುಗಳು 16 : 27 (IRVKN)
ಅವನ ಉಳಿದ ಚರಿತ್ರೆಯೂ ಪರಾಕ್ರಮಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
1 ಅರಸುಗಳು 16 : 28 (IRVKN)
ಒಮ್ರಿಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯಪಟ್ಟಣದಲ್ಲಿ ಸಮಾಧಿ ಮಾಡಿದರು. ಅವನ ನಂತರ ಅವನ ಮಗನಾದ ಅಹಾಬನು ಅರಸನಾದನು. [PS]
1 ಅರಸುಗಳು 16 : 29 (IRVKN)
{ಇಸ್ರಾಯೇಲರ ಅರಸನಾದ ಅಹಾಬ} [PS] ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಒಮ್ರಿಯ ಮಗನಾದ ಅಹಾಬನು ಇಸ್ರಾಯೇಲರ ಅರಸನಾಗಿ ಸಮಾರ್ಯಪಟ್ಟಣದಲ್ಲಿ ಇಪ್ಪತ್ತೆರಡು ವರ್ಷ ಆಳ್ವಿಕೆ ಮಾಡಿದನು.
1 ಅರಸುಗಳು 16 : 30 (IRVKN)
ಅವನು ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತಲೂ ದುಷ್ಟನಾಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು
1 ಅರಸುಗಳು 16 : 31 (IRVKN)
ಅವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವುದು ಅಲ್ಪ ಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.
1 ಅರಸುಗಳು 16 : 32 (IRVKN)
ಬಾಳ್ ದೇವರಿಗೋಸ್ಕರ ಸಮಾರ್ಯದಲ್ಲಿ ಒಂದು ಗುಡಿಯನ್ನು ಕಟ್ಟಿಸಿ, ಅದರಲ್ಲಿ ಯಜ್ಞವೇದಿಯನ್ನು ಮಾಡಿಸಿದನು.
1 ಅರಸುಗಳು 16 : 33 (IRVKN)
ಇದಲ್ಲದೆ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದನು. ಹೀಗೆ ಇನ್ನೂ ಎಷ್ಟೋ ಕೆಟ್ಟ ಕೆಲಸಗಳನ್ನು ಮಾಡಿ, ಮುಂಚೆ ಇದ್ದ ಎಲ್ಲಾ ಇಸ್ರಾಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಬರುವಂತೆ ಮಾಡಿದ. [PE][PS]
1 ಅರಸುಗಳು 16 : 34 (IRVKN)
[† ಯೆಹೋ. 6:26 ನೋಡಿರಿ.] ಅವನ ಕಾಲದಲ್ಲಿ ಬೇತೇಲಿನವನಾದ ಹೀಯೇಲನು ಯೆರಿಕೋ ಪಟ್ಟಣವನ್ನು ಕಟ್ಟಿಸಿದನು. ಅವನು ಅದಕ್ಕೆ ಅಸ್ತಿವಾರ ಹಾಕಿದಾಗ ಹಿರಿಯ ಮಗನಾದ ಅಬೀರಾಮನನ್ನೂ ಬಾಗಿಲುಗಳನ್ನಿರಿಸಿದಾಗ ಕಿರಿಯ ಮಗನಾದ ಸೆಗೂಬನನ್ನೂ ಕಳೆದುಕೊಂಡನು. ಹೀಗೆ ಯೆಹೋವನು ನೂನನ ಮಗನಾದ ಯೆಹೋಶುವನಿಂದ ಹೇಳಿಸಿದ ಮಾತು ನೆರವೇರಿತು. [PE]
❮
❯