1 ಅರಸುಗಳು 7 : 1 (IRVKN)
ಸೊಲೊಮೋನನು ತನ್ನ ಅರಮನೆಯನ್ನು ಕಟ್ಟಿದ್ದು ಸೊಲೊಮೋನನು ತನ್ನ ಅರಮನೆಯನ್ನು ಹದಿಮೂರು ವರ್ಷಗಳಲ್ಲಿ ಕಟ್ಟಿಸಿ ಮುಗಿಸಿದನು.
1 ಅರಸುಗಳು 7 : 2 (IRVKN)
ಅವನು ಕಟ್ಟಿಸಿದ ಲೆಬನೋನಿನ ತೋಪು ಎನ್ನಿಸಿಕೊಳ್ಳುವ ಮಂದಿರವು ನೂರು ಮೊಳ ಉದ್ದ, ಐವತ್ತು ಮೊಳ ಅಗಲ ಮತ್ತು ಮೂವತ್ತು ಮೊಳ ಎತ್ತರವಾಗಿತ್ತು. ಅದರ ಮಾಳಿಗೆಗೆ ದೇವದಾರಿನ ಮೂರು ಸಾಲು ಕಂಬಗಳೂ, ಅವುಗಳ ಮೇಲೆ ಇಡಲ್ಪಟ್ಟ ದೇವದಾರಿನ ತೊಲೆಗಳೂ ಅದಕ್ಕೆ ಆಧಾರವಾಗಿದ್ದವು.
1 ಅರಸುಗಳು 7 : 3 (IRVKN)
ಸ್ತಂಭಗಳ ಮೇಲಿರುವ ತೊಲೆಗಳ ಮೇಲೆ ದೇವದಾರಿನ ಹಲಿಗೆಗಳಿಂದ ಮಾಡಿದ ಮಾಳಿಗೆಯಿತ್ತು. ಸ್ತಂಭಗಳು ಪ್ರತಿಯೊಂದು ಸಾಲಿನಲ್ಲಿ ಹದಿನೈದರಂತೆ ಒಟ್ಟು ನಲ್ವತ್ತೈದು ಇದ್ದವು.
1 ಅರಸುಗಳು 7 : 4 (IRVKN)
ಬೆಳಕು ಎದುರೆದುರಾಗಿ ಬೀಳುವಂತೆ ಎರಡು ಗೋಡೆಗಳಿಗೆ ಮೂರು ಮೂರು ಸಾಲು ಬೆಳಕಿನ ಕಿಟಕಿಗಳಿದ್ದವು
1 ಅರಸುಗಳು 7 : 5 (IRVKN)
ಎಲ್ಲಾ ದ್ವಾರಗಳೂ, ಬೆಳಕಿನ ಕಿಟಕಿಗಳೂ ಚತುಷ್ಕೋಣದ ಆಕಾರವುಳ್ಳವುಗಳಾಗಿದ್ದವು. ಮೂರು ಮೂರು ಸಾಲು ಬೆಳಕಿನ ಕಿಟಕಿಗಳು ಎದುರುಬದುರಾಗಿದ್ದವು.
1 ಅರಸುಗಳು 7 : 6 (IRVKN)
ಇದಲ್ಲದೆ ಸೊಲೊಮೋನನು ಒಂದು ಕಂಬ ಮಂಟಪವನ್ನು ಕಟ್ಟಿಸಿದನು. ಅದರ ಉದ್ದ ಐವತ್ತು ಮೊಳ, ಅಗಲ ಮೂವತ್ತು ಮೊಳ. ಅದರ ಮುಂದುಗಡೆಯಲ್ಲಿ ಒಂದು ಪಡಸಾಲೆಯಿತ್ತು. ಆ ಪಡಸಾಲೆಗೆ ಕಂಬಗಳೂ ಮೆಟ್ಟಲುಗಳೂ ಇದ್ದವು.
1 ಅರಸುಗಳು 7 : 7 (IRVKN)
ಇದಲ್ಲದೆ ಅವನು ಸಿಂಹಾಸನ ಮಂದಿರವನ್ನು ಕಟ್ಟಿಸಿದನು. ಅವನು ಅಲ್ಲಿ ನ್ಯಾಯತೀರ್ಮಾನ ಮಾಡುತ್ತಿದ್ದರಿಂದ ಅದಕ್ಕೆ ನ್ಯಾಯಮಂದಿರವೆಂತಲೂ ಹೆಸರಾಯಿತು. ಇದರ ಎಲ್ಲಾ ಗೋಡೆಗಳೂ ನೆಲದಿಂದ ಮಾಳಿಗೆಯ ವರೆಗೆ ದೇವದಾರು ಮರದ ಹಲಿಗೆಗಳಿಂದ ಹೊದಿಸಲ್ಪಟ್ಟಿದ್ದವು.
1 ಅರಸುಗಳು 7 : 8 (IRVKN)
ನ್ಯಾಯಮಂದಿರದ ಹಿಂದಿನ ಪ್ರಾಕಾರದಲ್ಲಿ ತನ್ನ ವಾಸಕ್ಕಾಗಿ ಅರಮನೆಯನ್ನೂ, ತನ್ನ ಹೆಂಡತಿಯಾದ ಫರೋಹನ ಮಗಳಿಗೋಸ್ಕರ ಇನ್ನೊಂದು ಮನೆಯನ್ನು ಕಟ್ಟಿಸಿದನು. ಅದನ್ನು ನ್ಯಾಯಮಂದಿರದ ಹಾಗೆಯೇ ಇವುಗಳನ್ನು ಕಟ್ಟಿಸಿದನು.
1 ಅರಸುಗಳು 7 : 9 (IRVKN)
ಈ ಎಲ್ಲಾ ಮಂದಿರಗಳನ್ನೂ ಅವುಗಳ ಸುತ್ತು ಗೋಡೆಯನ್ನೂ, ದೊಡ್ಡ ಪ್ರಾಕಾರದ ಸುತ್ತು ಗೋಡೆಯನ್ನೂ, ಅಸ್ತಿವಾರದ ಮೇಲಣಿಂದ ಕಡೇ ವರಸೆಯವರೆಗೆ ಅಳತೆಯ ಮೇರೆಗೆ ಕೆತ್ತಲ್ಪಟ್ಟ ಎರಡು ಮಗ್ಗುಲಿಗೂ ಗರಗಸದಿಂದ ಕೊಯ್ಯಲ್ಪಟ್ಟಂಥ ಶ್ರೇಷ್ಠವಾದ ಕಲ್ಲುಗಳಿಂದ ಕಟ್ಟಿಸಿದನು.
1 ಅರಸುಗಳು 7 : 10 (IRVKN)
ಅಸ್ತಿವಾರಕ್ಕೆ ಹಾಕಿದ ಶ್ರೇಷ್ಠವಾದ ದೊಡ್ಡ ಕಲ್ಲುಗಳು ಎಂಟು ಮೊಳ ಹಾಗೂ ಹತ್ತು ಮೊಳ ಉದ್ದವಾಗಿದ್ದವು.
1 ಅರಸುಗಳು 7 : 11 (IRVKN)
ಅಸ್ತಿವಾರದ ಮೇಲಣ ಭಾಗಕ್ಕೆ ಅಳತೆಯ ಮೇರೆಗೆ ಕೆತ್ತಿದ ಶ್ರೇಷ್ಠವಾದ ಕಲ್ಲುಗಳನ್ನೂ, ದೇವದಾರಿನ ಮರವನ್ನೂ ಉಪಯೋಗಿಸಿದನು.
1 ಅರಸುಗಳು 7 : 12 (IRVKN)
ಒಳಗಿನ ಪ್ರಾಕಾರವೆನ್ನಿಸಿಕೊಳ್ಳುವ ಯೆಹೋವನ ಆಲಯದ ಪ್ರಾಕಾರಕ್ಕೂ ಅರಮನೆಯ ಪ್ರಾಕಾರಕ್ಕೂ ಹೇಗೋ ಹಾಗೆಯೇ ಎಲ್ಲಾ ಮಂದಿರಗಳ ಸುತ್ತಲಿರುವ ದೊಡ್ಡ ಪ್ರಾಕಾರಕ್ಕೆ ಮೂರು ಸಾಲು ಕಲ್ಲಿನ ಕಂಬಗಳೂ, ಒಂದು ಸಾಲು ದೇವದಾರಿನ ಮರದ ಕಂಬಗಳೂ ಇದ್ದವು.
1 ಅರಸುಗಳು 7 : 13 (IRVKN)
ತಾಮ್ರದ ಕಂಬಗಳೂ ದೇವಾಲಯದ ಉಪಕರಣಗಳು ಅರಸನಾದ ಸೊಲೊಮೋನನು ತೂರ್ ಪಟ್ಟಣದಿಂದ ಹೀರಾಮ್ ಎಂಬುವನನ್ನು ಕರೆಯಿಸಿದನು.
1 ಅರಸುಗಳು 7 : 14 (IRVKN)
ಅವನು ನಫ್ತಾಲಿ ಕುಲದ ಒಬ್ಬ ವಿಧವೆಯಲ್ಲಿ ತೂರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ, ತಾಮ್ರದ ಕೆಲಸದಲ್ಲಿ ನಿಪುಣನೂ, ಅನುಭವಶಾಲಿಯೂ ಆಗಿದ್ದ ಅವನು ಅರಸನ ಬಳಿಗೆ ಬಂದು ಅರಸನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ಮಾಡಿ ಮುಗಿಸಿದನು.
1 ಅರಸುಗಳು 7 : 15 (IRVKN)
ಅವನು ಎರಡು ತಾಮ್ರದ ಕಂಬಗಳನ್ನು ಮಾಡಿದನು. ಅವು ಹದಿನೆಂಟು ಮೊಳ ಎತ್ತರವಿದ್ದವು. ಅವುಗಳ ಸುತ್ತಳತೆಯು ಹನ್ನೆರಡು ಮೊಳ.
1 ಅರಸುಗಳು 7 : 16 (IRVKN)
ಇದಲ್ಲದೆ ಅವನು ತಾಮ್ರವನ್ನು ಎರಕ ಹೊಯ್ದು ಕಂಬಗಳ ಮೇಲೆ ಇಡುವುದಕ್ಕೊಸ್ಕರ ಐದೈದು ಮೊಳ ಎತ್ತರವಾದ ಎರಡು ಕುಂಭಗಳನ್ನೂ,
1 ಅರಸುಗಳು 7 : 17 (IRVKN)
ಒಂದೊಂದಕ್ಕೆ ಏಳೇಳರಂತೆ ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ತಾಮ್ರದ ಸರಿಗೆಯ ಜಾಲರಿಗಳನ್ನೂ ಮಾಡಿದನು.
1 ಅರಸುಗಳು 7 : 18 (IRVKN)
ಇದಲ್ಲದೆ ಅವನು ತಾಮ್ರದ ದಾಳಿಂಬೆಹಣ್ಣುಗಳನ್ನು ಮಾಡಿ, ಅವುಗಳನ್ನು ಕಂಬಗಳ ಮೇಲಣ ಪ್ರತಿಯೊಂದು ಕುಂಭದ ಜಾಲರಿಯ ಸುತ್ತಲೂ ಎರಡೆರಡು ಸಾಲಾಗಿ ಸಿಕ್ಕಿಸಿದನು.
1 ಅರಸುಗಳು 7 : 19 (IRVKN)
ಕಂಬಗಳ ಮೇಲಿರುವ ಕುಂಭಗಳ ಒಡಲು ನಾಲ್ಕು ಮೊಳಗಳವರೆಗೆ ಕಮಲದ ಆಕಾರ ಉಳ್ಳದ್ದಾಗಿತ್ತು.
1 ಅರಸುಗಳು 7 : 20 (IRVKN)
ಆ ಕುಂಭಗಳ ಮೇಲಿರುವ ಭಾಗದಲ್ಲಿ ಒಡಲಿನ ಸುತ್ತಲೂ ಜಾಲರಿಯ ಹೊರಗೆ ದಾಳಿಂಬೆ ಹಣ್ಣಿನ ಆಕಾರವುಳ್ಳ ಗುಂಡುಗಳಿದ್ದವು. ಪ್ರತಿಯೊಂದು ಕುಂಭದ ಸುತ್ತಲೂ ಇನ್ನೂರು ಗುಂಡುಗಳನ್ನು ಸಾಲಾಗಿ ಸಿಕ್ಕಿಸಿದನು.
1 ಅರಸುಗಳು 7 : 21 (IRVKN)
ತರುವಾಯ ಅವನು ಆ ಎರಡು ಕಂಬಗಳನ್ನೂ ದೇವಾಲಯದ ಮಂಟಪದ ಬಳಿಯಲ್ಲಿ ನಿಲ್ಲಿಸಿ, ಬಲಗಡೆಯ ಕಂಬಕ್ಕೆ ಯಾಕೀನ್ ಎಂದೂ, ಎಡಗಡೆಯ ಕಂಬಕ್ಕೆ ಬೋವಜ್ ಎಂದು ಹೆಸರಿಟ್ಟನು.
1 ಅರಸುಗಳು 7 : 22 (IRVKN)
ಅವನು ಕಂಬಗಳ ಮೇಲೆ ಕಮಲಾಕಾರವನ್ನು ಮಾಡಿ ಅವುಗಳ ಕೆಲಸವನ್ನು ತೀರಿಸಿದನು.
1 ಅರಸುಗಳು 7 : 23 (IRVKN)
ಅನಂತರ ಹೀರಾಮನು ಸಮುದ್ರ ಎನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿದನು. ಅದರ ಬಾಯಿ‍ ಚಂದ್ರಾಕಾರವಾಗಿಯೂ, ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ ಮತ್ತು ಸುತ್ತಳತೆ ಮೂವತ್ತು ಮೊಳ.
1 ಅರಸುಗಳು 7 : 24 (IRVKN)
ಅದನ್ನು ಎರಕ ಹೊಯ್ಯುವಾಗ ಅದರ ಅಂಚಿನ ಕೆಳಗೆ ಸುತ್ತಲೂ ಹತ್ತತ್ತು ಮೊಳ ಉದ್ದವಾದ ಬಳ್ಳಿಗಳನ್ನು ಎರಡು ಸಾಲಾಗಿ ಎರಕ ಹೊಯ್ದಿದ್ದನು.
1 ಅರಸುಗಳು 7 : 25 (IRVKN)
ಹನ್ನೆರಡು ಎರಕದ ಹೋರಿಗಳು ಅದನ್ನು ಹೊತ್ತಿದ್ದವು. ಅವುಗಳಲ್ಲಿ ಮೂರು ಉತ್ತರ ದಿಕ್ಕಿಗೂ, ಮೂರು ಪಶ್ಚಿಮ ದಿಕ್ಕಿಗೂ, ಮೂರು ದಕ್ಷಿಣ ದಿಕ್ಕಿಗೂ ಮತ್ತು ಮೂರು ಪೂರ್ವದಿಕ್ಕಿಗೂ ಮುಖಮಾಡಿಕೊಂಡಿದ್ದವು. ಸಮುದ್ರವು ಅವುಗಳ ಬೆನ್ನಿನ ಮೇಲೆ ಇತ್ತು. ಅವುಗಳ ಹಿಂಭಾಗವು ಒಳಗಡೆ ಇತ್ತು.
1 ಅರಸುಗಳು 7 : 26 (IRVKN)
ಪಾತ್ರೆಯು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲದ ಆಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು * ಸುಮಾರು 44,000 ಲೀಟರುಗಳು. ಎರಡು ಸಾವಿರ ಬಾನೆಗಳಷ್ಟು ನೀರು ಹಿಡಿಯುತ್ತಿತ್ತು.
1 ಅರಸುಗಳು 7 : 27 (IRVKN)
ಇದಲ್ಲದೆ ಅವನು ಹತ್ತು ತಾಮ್ರದ ಪೀಠಗಳನ್ನು ಮಾಡಿದನು. ಪ್ರತಿಯೊಂದು ನಾಲ್ಕು ಮೊಳ ಉದ್ದ, ನಾಲ್ಕು ಮೊಳ ಅಗಲ, ಮೂರು ಮೊಳ ಎತ್ತರ ಇತ್ತು.
1 ಅರಸುಗಳು 7 : 28 (IRVKN)
ಅವುಗಳನ್ನು ಮಾಡಿದ ವಿಧಾನ ಹೇಗೆಂದರೆ, ಅವುಗಳಲ್ಲಿ ನಿಲುವು ಪಟ್ಟಿಗಳಿಂದ ಕೂಡಿದ ಅಡ್ಡಪಟ್ಟಿಗಳಿದ್ದವು.
1 ಅರಸುಗಳು 7 : 29 (IRVKN)
ಆ ಅಡ್ಡಪಟ್ಟಿಗಳ ಮೇಲೆ ಸಿಂಹ, ಹೋರಿ ಮತ್ತು ಕೆರೂಬಿ ಇವುಗಳ ಚಿತ್ರಗಳಿದ್ದವು. ನಿಲುವುಪಟ್ಟಿಗಳಿಗೂ ಇದೇ ಅಲಂಕಾರವಿತ್ತು. ಸಿಂಹ, ಹೋರಿ ಇವುಗಳ ಮೇಲೂ ಕೆಳಗೂ ತೋರಣ ಚಿತ್ರಗಳಿದ್ದವು.
1 ಅರಸುಗಳು 7 : 30 (IRVKN)
ಪ್ರತಿಯೊಂದು ಪೀಠಕ್ಕೆ ನಾಲ್ಕು ತಾಮ್ರದ ಗಾಲಿಗಳೂ ಅಚ್ಚುಗಳೂ ಇದ್ದವು. ಪ್ರತಿಯೊಂದು ನಿಲುವುಪಟ್ಟಿಯ ಮೇಲಣ ತುದಿಯಲ್ಲಿ ಎರಕ ಹೊಯ್ದ ತಾಮ್ರದ ಹಿಡಿಗಳಿದ್ದವು. ಅವು ಪೀಠದ ಮೇಲಣ ಗಂಗಾಳವನ್ನು ಗಂಗಾಳವನ್ನು ನೀರು ತುಂಬುವ ಬೋಗುಣಿಗಳು ಹಿಡಿಯುತ್ತಿದ್ದವು. ಅವುಗಳ ಹೊರಮೈಗೆ ತೋರಣ ಚಿತ್ರಗಳಿದ್ದವು.
1 ಅರಸುಗಳು 7 : 31 (IRVKN)
ಗಂಗಾಳವನ್ನು ಇಡುವುದಕ್ಕೋಸ್ಕರ ಪೀಠದ ಮೇಲಣ ಭಾಗದಲ್ಲಿ ಒಂದು ಅಥವಾ ಒಂದುವರೆ ಮೊಳ ಎತ್ತರವಾದ ಬಾಯಿತ್ತು. ಚಕ್ರಾಕಾರವಾಗಿರುವ ಈ ಬಾಯಿಯು ಒಂದುವರೆ ಮೊಳ ಅಗಲವಾಗಿತ್ತು. ಇದರ ಮೇಲೆಯೂ ಚಿತ್ರಗಳಿದ್ದವು. ಇದಕ್ಕೆ ಆಧಾರವಾದ ಅಡ್ಡಪಟ್ಟಿಗಳು ಚಕ್ರಾಕಾರವಾಗಿರದೆ ಚೌಕಾಕಾರವಾಗಿದ್ದವು.
1 ಅರಸುಗಳು 7 : 32 (IRVKN)
ಮೇಲೆ ಕಂಡ ನಾಲ್ಕು ಗಾಲಿಗಳು ಅಡ್ಡಪಟ್ಟಿಗಳ ಕೆಳಗಿದ್ದವು. ತಿರುಗೋಲು ಮತ್ತು ಪೀಠವು ಅಖಂಡವಾಗಿದ್ದವು. ಪ್ರತಿಯೊಂದು ಗಾಲಿಯು ಒಂದುವರೆ ಮೊಳ ಎತ್ತರವಿತ್ತು.
1 ಅರಸುಗಳು 7 : 33 (IRVKN)
ಅವು ಸಾಧಾರಣವಾದ ಬಂಡಿಗಳ ಗಾಲಿಗಳಂತೆಯೇ ಇದ್ದವು. ಆದರೆ ಅವುಗಳ ಕಟ್ಟು, ಅರ, ಕುಂಭ ಇವುಗಳಿಗೆ ಸಂಬಂಧಪಟ್ಟ ತಿರುಗೋಲು ತಾಮ್ರದವುಗಳು.
1 ಅರಸುಗಳು 7 : 34 (IRVKN)
ಪ್ರತಿಯೊಂದು ಪೀಠದ ತುದಿಯಲ್ಲಿದ್ದ ನಾಲ್ಕು ಹಿಡಿಗಳು ಪೀಠದೊಡನೆ ಅಖಂಡವಾಗಿದ್ದವು.
1 ಅರಸುಗಳು 7 : 35 (IRVKN)
ಪೀಠದ ಮೇಲಣ ಭಾಗದಲ್ಲಿದ್ದ ಚಕ್ರಾಕಾರವಾದ ಬಾಯಿಯು ಅರ್ಧ ಮೊಳ ಎತ್ತರವಾಗಿತ್ತು. ಪೀಠದ ಮೇಲಿನ ಭಾಗದಲ್ಲಿದ್ದ ಹಿಡಿಗಳೂ ಅಡ್ಡ ಪಟ್ಟಿಗಳೂ ಅದರೊಡನೆ ಅಖಂಡವಾಗಿದ್ದವು.
1 ಅರಸುಗಳು 7 : 36 (IRVKN)
ಅಡ್ಡಪಟ್ಟಿಗಳಿಗೂ ಹಿಡಿಗಳ ಹೊರಮೈಗೂ ಸ್ಥಳವಿದ್ದ ಕಡೆಗೆ ಕೆರೂಬಿ, ಸಿಂಹ, ಖರ್ಜೂರವೃಕ್ಷ ಇವುಗಳ ಚಿತ್ರಗಳನ್ನೂ ಈ ಚಿತ್ರಗಳ ಸುತ್ತಲೂ ತೋರಣ ಚಿತ್ರಗಳನ್ನೂ ಮಾಡಿಸಿದನು.
1 ಅರಸುಗಳು 7 : 37 (IRVKN)
ಲೋಹಗಳನ್ನು ಒಂದೇ ಸಾರಿ ಕರಗಿಸಿ ಆ ಹತ್ತು ಪೀಠಗಳನ್ನು ಮಾಡಿದನು. ಅವುಗಳ ಆಕಾರವು ಅಳತೆಯೂ ಒಂದೇಯಾಗಿತ್ತು.
1 ಅರಸುಗಳು 7 : 38 (IRVKN)
ಇದಲ್ಲದೆ ಅವನು ನಲ್ವತ್ತು ಬತ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಗಂಗಾಳಗಳನ್ನು ಮಾಡಿ, ಪ್ರತಿಯೊಂದು ಪೀಠದ ಮೇಲೆ ಒಂದೊಂದನ್ನು ಇಟ್ಟನು.
1 ಅರಸುಗಳು 7 : 39 (IRVKN)
ಐದು ಪೀಠಗಳನ್ನು ದೇವಾಲಯದ ಬಲಗಡೆಯಲ್ಲಿಯೂ, ಐದು ಪೀಠಗಳನ್ನು ಎಡಗಡೆಯಲ್ಲಿಯೂ ಇಟ್ಟನು. ಸಮುದ್ರವೆನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ ಪ್ರಾಕಾರದ ಆಗ್ನೇಯ ದಿಕ್ಕಿನಲ್ಲಿರಿಸಿದನು.
1 ಅರಸುಗಳು 7 : 40 (IRVKN)
ಇದಲ್ಲದೆ ಹೀರಾಮನು ಬಟ್ಟಲುಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ ಮಾಡಿದನು. ಅವನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕೋಸ್ಕರ ಹೀರಾಮನು ಮಾಡಿಸಿದ ಒಟ್ಟು ಸಾಮಾನುಗಳ ಪಟ್ಟಿ.
1 ಅರಸುಗಳು 7 : 41 (IRVKN)
ಎರಡು ಕಂಬಗಳು ಅವುಗಳ ಮೇಲಿನ ಎರಡು ಕುಂಭಗಳು, ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ಎರಡು ಜಾಲರಿಗಳು
1 ಅರಸುಗಳು 7 : 42 (IRVKN)
ಜಾಲರಿಗಳ ಮೇಲೆ ಎರಡೆರಡು ಸಾಲಾಗಿ ಸಿಕ್ಕಿಸುವುದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬಹಣ್ಣುಗಳು,
1 ಅರಸುಗಳು 7 : 43 (IRVKN)
ಹತ್ತು ಪೀಠಗಳು, ಅವುಗಳ ಮೇಲಿದ್ದ ಹತ್ತು ಗಂಗಾಳಗಳು,
1 ಅರಸುಗಳು 7 : 44 (IRVKN)
ಸಮುದ್ರವೆನಿಸಿಕೊಳ್ಳುವ ಪಾತ್ರೆಯೂ, ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು,
1 ಅರಸುಗಳು 7 : 45 (IRVKN)
ಹಂಡೆ, ಸಲಿಕೆ ಬೋಗುಣಿಗಳು ಇವೇ. ಹೀರಾಮನು ಅರಸನಾದ ಸೊಲೊಮೋನನ ಅಪ್ಪಣೆಯಂತೆ ಯೆಹೋವನ ಆಲಯಕ್ಕೋಸ್ಕರ ಈ ಎಲ್ಲಾ ಸಾಮಾನುಗಳನ್ನು ರುಜುವಾತು ಪಡಿಸಿ ತಾಮ್ರದಿಂದ ಮಾಡಿಸಿದನು.
1 ಅರಸುಗಳು 7 : 46 (IRVKN)
ಅರಸನು ಯೊರ್ದನಿನ ತಗ್ಗಿನಲ್ಲಿ ಸುಕ್ಕೋತಿಗೂ ಮತ್ತು ಚಾರೆತಾನಿಗೂ ಮಧ್ಯದಲ್ಲಿರುವ ಜೇಡಿ ಮಣ್ಣು ಇರುವ ನೆಲದಲ್ಲಿ ಎರಕ ಹೊಯ್ಯಿಸಿದನು.
1 ಅರಸುಗಳು 7 : 47 (IRVKN)
ಸೊಲೊಮೋನನು ತಾನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದರಿಂದ ಅವುಗಳ ತಾಮ್ರದ ತೂಕವು ಎಷ್ಟೆಂಬುದನ್ನು ಗೊತ್ತುಮಾಡಲಾಗಲ್ಲಿಲ್ಲ.
1 ಅರಸುಗಳು 7 : 48 (IRVKN)
ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವುವೆಂದರೆ - ಬಂಗಾರದ ಧೂಪವೇದಿಯು ನೈವೇದ್ಯವಾದ ರೊಟ್ಟಿಗಳನ್ನಿಡುವುದಕ್ಕಾಗಿ ಬಂಗಾರದ ಮೇಜು,
1 ಅರಸುಗಳು 7 : 49 (IRVKN)
ಮಹಾಪರಿಶುದ್ಧಸ್ಥಳದ ಎದುರಿಗೆ ಎಡಗಡೆಯಲ್ಲಿಯೂ, ಬಲಗಡೆಯಲ್ಲಿಯೂ ಇಡುವುದಕ್ಕಾಗಿ ಐದೈದರಂತೆ ಇಡುವುದಕ್ಕೋಸ್ಕರ ಚೊಕ್ಕ ಬಂಗಾರದಿಂದ ಮಾಡಿದ ಪುಷ್ಪಾಲಂಕಾರವುಳ್ಳ ಹತ್ತು ದೀಪಸ್ತಂಭಗಳು, ಬಂಗಾರದ ಹಣತೆ, ಇಕ್ಕಳಗಳು, ಚೊಕ್ಕ ಬಂಗಾರದ ಬಟ್ಟಲುಗಳು,
1 ಅರಸುಗಳು 7 : 50 (IRVKN)
ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದ ಬಾಗಿಲುಗಳಿಗೂ
1 ಅರಸುಗಳು 7 : 51 (IRVKN)
ಪರಿಶುದ್ಧಸ್ಥಳದ ಬಾಗಿಲುಗಳಿಗೂ ಇರುವ ಬಂಗಾರದ ತಿರುಗುಣಿಗಳು ಇವುಗಳೇ. ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ ತನ್ನ ತಂದೆಯಾದ ದಾವೀದನು ಯೆಹೋವನಿಗೆ ಹರಕೆಹೊತ್ತು ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನೂ ಮತ್ತು ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51