1 ಅರಸುಗಳು 8 : 1 (IRVKN)
ಮಂಜೂಷವನ್ನು ದೇವಾಲಯಕ್ಕೆ ತಂದದ್ದು ಮತ್ತು ಪ್ರತಿಷ್ಠಾಪಿಸಿದ್ದು ಅನಂತರ ಅರಸನಾದ ಸೊಲೊಮೋನನು ದಾವೀದ ನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರುವುದಕ್ಕಾಗಿ ಇಸ್ರಾಯೇಲರ ಹಿರಿಯರೂ ಕುಲಾಧಿಪತಿಗಳು ಇವರೇ ಮೊದಲಾದ ಇಸ್ರಾಯೇಲ್ ಪ್ರಧಾನಪುರುಷರನ್ನು ಯೆರೂಸಲೇಮಿಗೆ ತನ್ನ ಹತ್ತಿರಕ್ಕೆ ಕರೆಯಿಸಿಕೊಂಡನು.
1 ಅರಸುಗಳು 8 : 2 (IRVKN)
ಇಸ್ರಾಯೇಲರೆಲ್ಲರೂ ಏಳನೆಯ ತಿಂಗಳಾದ ಆಶ್ವೀಜ ಮಾಸದಲ್ಲಿ ಜಾತ್ರೆಗೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಕೂಡಿಬಂದರು.
1 ಅರಸುಗಳು 8 : 3 (IRVKN)
ಇಸ್ರಾಯೇಲರ ಎಲ್ಲಾ ಹಿರಿಯರು ಒಟ್ಟಾಗಿ ಬಂದಾಗ ಯಾಜಕರು ಯೆಹೋವನ ಮಂಜೂಷವನ್ನು ಹೊತ್ತುಕೊಂಡರು.
1 ಅರಸುಗಳು 8 : 4 (IRVKN)
ಉಳಿದ ಯಾಜಕರೂ ಮತ್ತು ಲೇವಿಯರೂ ದೇವದರ್ಶನದ ಗುಡಾರ, ಅದರಲ್ಲಿದ್ದ ಪರಿಶುದ್ಧವಸ್ತು ಇವುಗಳನ್ನು ಹೊತ್ತುಕೊಂಡರು.
1 ಅರಸುಗಳು 8 : 5 (IRVKN)
ಅರಸನಾದ ಸೊಲೊಮೋನನು ಅಲ್ಲಿ ಕೂಡಿ ಬಂದಿದ್ದ ಎಲ್ಲಾ ಇಸ್ರಾಯೇಲರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿದನಗಳನ್ನು ಯಜ್ಞಮಾಡಿದರು.
1 ಅರಸುಗಳು 8 : 6 (IRVKN)
ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿ ಇಟ್ಟರು.
1 ಅರಸುಗಳು 8 : 7 (IRVKN)
ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದುದರಿಂದ ಮಂಜೂಷವೂ ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.
1 ಅರಸುಗಳು 8 : 8 (IRVKN)
ಆ ಕೋಲುಗಳು ಬಹಳ ಉದ್ದವಾಗಿದ್ದುದರಿಂದ ಅವುಗಳ ತುದಿಗಳು ಗರ್ಭಗೃಹದ ಎದುರಿನಲ್ಲಿರುವ ಪರಿಶುದ್ಧ ಸ್ಥಳದಲ್ಲಿ ನಿಂತವರಿಗೆ ಕಾಣಿಸಿದರೂ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ. ಅವು ಇಂದಿನವರೆಗೂ ಅಲ್ಲೇ ಇವೆ.
1 ಅರಸುಗಳು 8 : 9 (IRVKN)
ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿರಿಸಿದನು.
1 ಅರಸುಗಳು 8 : 10 (IRVKN)
ಯಾಜಕರು ಪರಿಶುದ್ಧ ಸ್ಥಳದಿಂದ ಹೊರಗೆ ಬಂದ ಕೂಡಲೆ ಮೇಘವು ಯೆಹೋವನ ಆಲಯವನ್ನು ತುಂಬಿಕೊಂಡಿತು.
1 ಅರಸುಗಳು 8 : 11 (IRVKN)
ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡ ಮೇಘವು ಆಲಯವನ್ನು ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲು ಆಗಲಿಲ್ಲ.
1 ಅರಸುಗಳು 8 : 12 (IRVKN)
ತರುವಾಯ ಸೊಲೊಮೋನನು, “ಯೆಹೋವನೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ.
1 ಅರಸುಗಳು 8 : 13 (IRVKN)
ನಾನು ನಿನಗೋಸ್ಕರ ಒಂದು ಮಂದಿರವನ್ನು ಕಟ್ಟಿಸಿದ್ದೇನೆ. ಅದು ನಿನಗೆ ಶಾಶ್ವತವಾದ ವಾಸಸ್ಥಳವಾಗಿರಲಿ” ಎಂದು ಪ್ರಾರ್ಥನೆಮಾಡಿದನು.
1 ಅರಸುಗಳು 8 : 14 (IRVKN)
ಸೊಲೊಮೋನನ ಭಾಷಣ ಇದಾದ ಮೇಲೆ ಅರಸನು ಎದ್ದು ನಿಂತು ಇಸ್ರಾಯೇಲ್ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿ,
1 ಅರಸುಗಳು 8 : 15 (IRVKN)
“ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ನನ್ನ ತಂದೆಯಾದ ದಾವೀದನಿಗೆ ಆತನ ಬಾಯಿ ನುಡಿದಿದ್ದನ್ನು ಆತನ ಹಸ್ತವು ಈಗ ನೆರವೇರಿಸಿದೆ.
1 ಅರಸುಗಳು 8 : 16 (IRVKN)
ಆತನು, ‘ನಾನು ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದಿಂದ ಬರಮಾಡಿದಂದಿನಿಂದ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನು ಆರಿಸಿಕೊಂಡೆನೇ ಹೊರತು ನನ್ನ ನಾಮದ ನಿವಾಸಕ್ಕೋಸ್ಕರ ಆಲಯ ಸ್ಥಾನವನ್ನಾಗಿ ಇಸ್ರಾಯೇಲ್ ಕುಲಗಳ ಯಾವ ಪಟ್ಟಣವನ್ನೂ ಆರಿಸಿಕೊಳ್ಳಲಿಲ್ಲ’ ಎಂದು ಹೇಳಿದ್ದನು.
1 ಅರಸುಗಳು 8 : 17 (IRVKN)
ನನ್ನ ತಂದೆಯಾದ ದಾವೀದನು ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿಗೋಸ್ಕರ ಮನೆಯನ್ನು ಕಟ್ಟಬೇಕೆಂದು ಮನಸ್ಸು ಮಾಡಿದ್ದನು.
1 ಅರಸುಗಳು 8 : 18 (IRVKN)
ಆಗ ಯೆಹೋವನು ಅವನಿಗೆ, ‘ನೀನು ನನ್ನ ಹೆಸರಿಗೋಸ್ಕರ ಒಂದು ಮನೆಯನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೇದೆ ಸರಿ. ಆದರೂ ನೀನು ಅದನ್ನು ಕಟ್ಟಬಾರದು.
1 ಅರಸುಗಳು 8 : 19 (IRVKN)
ನಿನ್ನಿಂದ ಹುಟ್ಟುವ ಮಗನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕು’ ಎಂದು ಹೇಳಿದನು.
1 ಅರಸುಗಳು 8 : 20 (IRVKN)
ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದನು. ಆತನ ವಾಗ್ದಾನದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲ್ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಈ ಆಲಯವನ್ನು ಕಟ್ಟಿದೆನು.
1 ಅರಸುಗಳು 8 : 21 (IRVKN)
ಇದಲ್ಲದೆ ಐಗುಪ್ತದೇಶದಿಂದ ಬಿಡುಗಡೆ ಹೊಂದಿದ ನಮ್ಮ ಪೂರ್ವಿಕರಿಗೆ ಯೆಹೋವನಿಂದ ದೊರಕಿದ ನಿಬಂಧನಾಶಾಸನಗಳಿರುವ ಮಂಜೂಷಕ್ಕೆ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇರಿಸಿದೆನು” ಎಂದು ಹೇಳಿದನು.
1 ಅರಸುಗಳು 8 : 22 (IRVKN)
ಸೊಲೊಮೋನನ ಪ್ರಾರ್ಥನೆ ತರುವಾಯ ಸೊಲೊಮೋನನು ಎಲ್ಲಾ ಇಸ್ರಾಯೇಲರ ಎದುರಿನಲ್ಲಿ ಯೆಹೋವನ ಯಜ್ಞವೇದಿಯ ಮುಂದೆ ನಿಂತು ಆಕಾಶದ ಕಡೆಗೆ ಕೈಗಳನ್ನೆತ್ತಿ ಹೀಗೆ ಪ್ರಾರ್ಥಿಸಿದನು,
1 ಅರಸುಗಳು 8 : 23 (IRVKN)
“ಇಸ್ರಾಯೇಲ್ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ, ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ. ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ, ಕೃಪೆಯನ್ನೂ ನೆರವೇರಿಸುವವನು.
1 ಅರಸುಗಳು 8 : 24 (IRVKN)
ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿರುವೆ. ನಿನ್ನ ಬಾಯಿ ನುಡಿದಿದ್ದನ್ನು ನಿನ್ನ ಹಸ್ತವು ಈಗ ನೆರವೇರಿಸಿದೆ.
1 ಅರಸುಗಳು 8 : 25 (IRVKN)
ಇಸ್ರಾಯೇಲ್ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವುದಾದರೆ, ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು’ ಎಂಬುದಾಗಿ ವಾಗ್ದಾನ ಮಾಡಿದಿಯಲ್ಲಾ ಅದನ್ನು ನೆರವೇರಿಸು.
1 ಅರಸುಗಳು 8 : 26 (IRVKN)
ಇಸ್ರಾಯೇಲ್ ದೇವರೇ, ನೀನು ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನುಡಿದಿದ್ದೆಲ್ಲವೂ ಸಾರ್ಥಕವಾಗಲಿ.
1 ಅರಸುಗಳು 8 : 27 (IRVKN)
“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲದು. ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು?
1 ಅರಸುಗಳು 8 : 28 (IRVKN)
ಆದರೂ ನನ್ನ ದೇವರೇ, ಯೆಹೋವನೇ, ನಿನ್ನ ಸೇವಕನ ಪ್ರಾರ್ಥನೆಗೂ, ವಿಜ್ಞಾಪನೆಗೂ ಕಿವಿಗೊಡು. ಈ ಹೊತ್ತು ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಸೇವಕನ ಮೊರೆಯನ್ನು ಲಾಲಿಸು.
1 ಅರಸುಗಳು 8 : 29 (IRVKN)
ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’ ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ. ಇಲ್ಲಿ ನಿನ್ನ ಸೇವಕರು ನಿನ್ನನ್ನು ಪ್ರಾರ್ಥಿಸುವಾಗೆಲ್ಲಾ ಅವರಿಗೆ ಸದುತ್ತರವನ್ನು ದಯಪಾಲಿಸು.
1 ಅರಸುಗಳು 8 : 30 (IRVKN)
ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವುದಾದರೆ, ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು.
1 ಅರಸುಗಳು 8 : 31 (IRVKN)
“ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ ಅಂಥವನು ಈ ಆಲಯಕ್ಕೆ ಬಂದು ನಿನ್ನ ಈ ಯಜ್ಞವೇದಿಯ ಮುಂದೆ ನಿಂತು ಪ್ರಮಾಣಮಾಡುವುದಾದರೆ,
1 ಅರಸುಗಳು 8 : 32 (IRVKN)
ಪರಲೋಕದಲ್ಲಿರುವ ನೀನು ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು. ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ, ಅವನು ಅಪರಾಧಿಯೆಂದು ತೋರಿಸು. ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದೂ ತೋರಿಸಿಕೊಡು.
1 ಅರಸುಗಳು 8 : 33 (IRVKN)
“ತಮ್ಮ ಪಾಪಗಳ ಫಲವಾಗಿ ಶತ್ರುಗಳಿಂದ ತಗ್ಗಿಸಲ್ಪಟ್ಟ ನಿನ್ನ ಪ್ರಜೆಗಳಾದ ಇಸ್ರಾಯೇಲರು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ನಾಮವನ್ನು ಸ್ತುತಿಸಿ ಈ ಆಲಯದಲ್ಲಿ ನಿನಗೆ ವಿಜ್ಞಾಪನೆಯನ್ನು ಮತ್ತು ಪ್ರಾರ್ಥನೆಯನ್ನೂ ಮಾಡುವುದಾದರೆ,
1 ಅರಸುಗಳು 8 : 34 (IRVKN)
ಪರಲೋಕದಲ್ಲಿರುವ ನೀನು ಅದನ್ನು ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ಪೂರ್ವಿಕರಿಗೆ ನೀನು ಕೊಟ್ಟ ದೇಶಕ್ಕೆ ಅವರನ್ನು ಮರಳಿ ಬರುವಂತೆಮಾಡು.
1 ಅರಸುಗಳು 8 : 35 (IRVKN)
“ಅವರ ಪಾಪಗಳ ನಿಮಿತ್ತವಾಗಿ ಆಕಾಶವು ಮಳೆಗರೆಯದಂತೆ ಮುಚ್ಚಿಕೊಂಡಾಗ ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ನಿನ್ನ ನಾಮವನ್ನು ಸ್ತುತಿಸಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವುದಾದರೆ,
1 ಅರಸುಗಳು 8 : 36 (IRVKN)
ಪರಲೋಕದಲ್ಲಿರುವ ನೀನು ಆಲಿಸಿ, ನಿನ್ನ ಸೇವಕರೂ ಪ್ರಜೆಗಳೂ ಆದ ಇಸ್ರಾಯೇಲರ ಪಾಪಗಳನ್ನು ಕ್ಷಮಿಸಿ ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿ, ನಿನ್ನ ಪ್ರಜೆಗೆ ಸ್ವತ್ತಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು.
1 ಅರಸುಗಳು 8 : 37 (IRVKN)
“ದೇಶಕ್ಕೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಜೊಳ್ಳು, ಮಿಡತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಅಂತು ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ ಬಾಧೆ ಉಂಟಾಗುವಾಗ,
1 ಅರಸುಗಳು 8 : 38 (IRVKN)
ಮನಸ್ಸಾಕ್ಷಿ ಪೀಡಿತರಾದ ಎಲ್ಲಾ ಇಸ್ರಾಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ ಈ ಆಲಯದ ಕಡೆಗೆ ಕೈಯೆತ್ತಿ ಸ್ತುತಿಸಿ ನಿನಗೆ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನು ಮಾಡುವುದಾದರೆ,
1 ಅರಸುಗಳು 8 : 39 (IRVKN)
ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ, ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸು. ನೀನೊಬ್ಬನೇ ಎಲ್ಲಾ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು.
1 ಅರಸುಗಳು 8 : 40 (IRVKN)
ಆಗ ನಮ್ಮ ಪೂರ್ವಿಕರಿಗೆ ನೀನು ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿರುವರು.
1 ಅರಸುಗಳು 8 : 41 (IRVKN)
“ನಿನ್ನ ಪ್ರಜೆಗಳಾದ ಇಸ್ರಾಯೇಲನಲ್ಲದ ಒಬ್ಬ ಪರದೇಶದವನು ನಿನ್ನ ನಾಮಸ್ತುತಿಗೋಸ್ಕರ ದೂರದೇಶದಿಂದ ಬರುವಾಗ
1 ಅರಸುಗಳು 8 : 42 (IRVKN)
ಅಲ್ಲಿ ನಿನ್ನ ನಾಮಮಹತ್ತು, ಭುಜಬಲ, ಶಿಕ್ಷಾಹಸ್ತ ಇವುಗಳ ವರ್ತಮಾನವು ಪರರಾಜ್ಯಗಳವರಿಗೂ ಗೊತ್ತಾಗುವುದು. ಅವನು ಈ ಆಲಯದ ಮುಂದೆ ನಿಂತು ನಿನ್ನನ್ನು ಪ್ರಾರ್ಥಿಸುವುದಾದರೆ,
1 ಅರಸುಗಳು 8 : 43 (IRVKN)
ನಿನ್ನ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ, ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಪರರಾಜ್ಯದವರೂ, ಲೋಕದ ಎಲ್ಲಾ ಜನರು ನಿನ್ನ ನಾಮಮಹತ್ತನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿನ್ನ ಹೆಸರಿಗಾಗಿ ಈ ಆಲಯವನ್ನು ಕಟ್ಟಸಿದ್ದೇನೆಂದು ತಿಳಿದುಕೊಳ್ಳುವರು.
1 ಅರಸುಗಳು 8 : 44 (IRVKN)
ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧಮಾಡುವುದಕ್ಕೋಸ್ಕರ ಎಲ್ಲಿಗಾದರು ಕಳುಹಿಸಿದಾಗ ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ಯೆಹೋವನಾದ ನಿನ್ನನ್ನು ಪ್ರಾರ್ಥಿಸುವುದಾದರೆ
1 ಅರಸುಗಳು 8 : 45 (IRVKN)
ಪರಲೋಕದಲ್ಲಿರುವ ನೀನು ವಿಜ್ಞಾಪನೆಯನ್ನು ಮತ್ತು ಪ್ರಾರ್ಥನೆಯನ್ನೂ ಕೇಳಿ, ಅವರ ನ್ಯಾಯವನ್ನು ಸ್ಥಾಪಿಸು.
1 ಅರಸುಗಳು 8 : 46 (IRVKN)
“ಅವರು ನಿನಗೆ ವಿರುದ್ಧವಾಗಿ ಪಾಪ ಮಾಡಬಹುದು. ಪಾಪಮಾಡದ ಮನುಷ್ಯನು ಒಬ್ಬನೂ ಇಲ್ಲ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ,
1 ಅರಸುಗಳು 8 : 47 (IRVKN)
ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು,
1 ಅರಸುಗಳು 8 : 48 (IRVKN)
‘ನಾವು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ಒಪ್ಪಿ ಪೂರ್ಣಮನಸ್ಸಿನಿಂದ ನಿನ್ನನ್ನು ಪ್ರಾರ್ಥಿಸುವುದಾದರೆ,
1 ಅರಸುಗಳು 8 : 49 (IRVKN)
ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ಪ್ರಾರ್ಥನೆಯನ್ನು ಲಾಲಿಸಿ ಅವರ ನ್ಯಾಯವನ್ನು ಸ್ಥಾಪಿಸು.
1 ಅರಸುಗಳು 8 : 50 (IRVKN)
ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನೀನು ಬಿಡಿಸಿದ ಈ ಜನರು ನಿನ್ನ ಸ್ವಕೀಯ ಜನರಾಗಿದ್ದಾರೆಂಬುದನ್ನು ನೆನಪುಮಾಡಿಕೊ.
1 ಅರಸುಗಳು 8 : 51 (IRVKN)
ಅವರು ನಿನಗೆ ವಿರುದ್ಧವಾಗಿ ಮಾಡಿದ ಎಲ್ಲಾ ಅಪರಾಧ ದ್ರೋಹಗಳನ್ನು ಕ್ಷಮಿಸಿ ಅವರನ್ನು ಸೆರೆಯೊಯ್ದವರ ಮನಸ್ಸಿನಲ್ಲಿ ಅವರ ಮೇಲೆ ದಯೆಹುಟ್ಟಿಸು.
1 ಅರಸುಗಳು 8 : 52 (IRVKN)
ನಿನ್ನ ಸೇವಕನ ಮೇಲೆಯೂ, ನಿನ್ನ ಪ್ರಜೆಗಳಾದ ಇಸ್ರಾಯೇಲರ ಮೇಲೆಯೂ ಕಟಾಕ್ಷವಿಟ್ಟು ಅವರು ಪ್ರಾರ್ಥಿಸುವಾಗೆಲ್ಲಾ ಅವರ ವಿಜ್ಞಾಪನೆಗಳನ್ನು ಲಾಲಿಸು.
1 ಅರಸುಗಳು 8 : 53 (IRVKN)
ಕರ್ತನೇ, ಯೆಹೋವನೇ, ನೀನು ನಮ್ಮ ಪೂರ್ವಿಕರನ್ನು ಐಗುಪ್ತದೇಶದಿಂದ ಬಿಡಿಸುವಾಗ ಅವರಿಗೆ ನಾನು ನಿಮ್ಮನ್ನು ಎಲ್ಲಾ ಜನಾಂಗಗಳೊಳಗಿಂದ ಪ್ರತ್ಯೇಕಿಸಿ, ಸ್ವಕೀಯಜನರನ್ನಾಗಿ ಮಾಡಿಕೊಂಡಿದ್ದೇನೆಂದು ಮೋಶೆಯ ಮುಖಾಂತರವಾಗಿ ಹೇಳಿದಿಯಲ್ಲವೇ” ಎಂದು ದೇವರನ್ನು ಪ್ರಾರ್ಥಿಸಿದನು.
1 ಅರಸುಗಳು 8 : 54 (IRVKN)
ಸೊಲೊಮೋನನು ಇಸ್ರಾಯೇಲ್ ಸಮೂಹವನ್ನು ಆಶೀರ್ವದಿಸಿದ್ದು ಸೊಲೊಮೋನನು ಆಕಾಶದ ಕಡೆಗೆ ಕೈಯೆತ್ತಿ ಯೆಹೋವನ ಯಜ್ಞವೇದಿಯ ಮುಂದೆ ಮೊಣಕಾಲೂರಿ ಯೆಹೋವನನ್ನು ಪ್ರಾರ್ಥಿಸಿದ ನಂತರ ಎದ್ದು ನಿಂತು
1 ಅರಸುಗಳು 8 : 55 (IRVKN)
ಇಸ್ರಾಯೇಲ್ ಸರ್ವಸಮೂಹದವರನ್ನು ಆಶೀರ್ವದಿಸಿ ಗಟ್ಟಿಯಾಗಿ ಹೇಳಿದ್ದೇನಂದರೆ,
1 ಅರಸುಗಳು 8 : 56 (IRVKN)
“ತಾನು ವಾಗ್ದಾನ ಮಾಡಿದಂತೆ ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ.
1 ಅರಸುಗಳು 8 : 57 (IRVKN)
ನಮ್ಮ ದೇವರಾದ ಯೆಹೋವನು ನಮ್ಮ ಪೂರ್ವಿಕರ ಸಂಗಡ ಇದ್ದ ಹಾಗೆ ನಮ್ಮ ಸಂಗಡಲೂ ಇರಲಿ, ಆತನು ನಮ್ಮನ್ನು ಕೈಬಿಡದಿರಲಿ, ನಿರಾಕರಿಸದಿರಲಿ.
1 ಅರಸುಗಳು 8 : 58 (IRVKN)
ನಾವು ನಮ್ಮ ಪೂರ್ವಿಕರಿಗೆ ಕೊಡಲ್ಪಟ್ಟ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವಂತೆ ನಮ್ಮ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿಕೊಳ್ಳಿಲಿ.
1 ಅರಸುಗಳು 8 : 59 (IRVKN)
ನಾನು ಈಗ ನಮ್ಮ ದೇವರಾದ ಯೆಹೋವನಿಗೆ ಮಾಡಿದ ವಿಜ್ಞಾಪನೆಯು ಹಗಲಿರುಳು ಆತನ ಜ್ಞಾಪಕದಲ್ಲಿರಲಿ.
1 ಅರಸುಗಳು 8 : 60 (IRVKN)
ಭೂಲೋಕದ ಜನರೆಲ್ಲರೂ ಯೆಹೋವನ ಹೊರತು ಬೇರೆ ದೇವರಿಲ್ಲವೆಂಬುದನ್ನು ತಿಳಿದುಕೊಳ್ಳುವಂತೆ ಆತನು ಅಗತ್ಯವಿರುವಾಗೆಲ್ಲಾ ತನ್ನ ಸೇವಕನ ಮತ್ತು ಪ್ರಜೆಗಳಾದ ಇಸ್ರಾಯೇಲರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.
1 ಅರಸುಗಳು 8 : 61 (IRVKN)
ನೀವಾದರೋ ಈಗಿನಂತೆ ಮುಂದೆಯೂ ನಮ್ಮ ದೇವರಾದ ಯೆಹೋವನಲ್ಲಿ ಪೂರ್ಣ ಭಯಭಕ್ತಿಯುಳ್ಳವರಾಗಿ, ಆತನ ವಿಧಿಗಳನ್ನು ಅನುಸರಿಸಿ, ಆತನ ಆಜ್ಞೆಗಳನ್ನು ಕೈಕೊಳ್ಳಿರಿ” ಎಂಬುದೇ.
1 ಅರಸುಗಳು 8 : 62 (IRVKN)
ದೇವಾಲಯದ ಪ್ರತಿಷ್ಠೆ ಆನಂತರ ಅರಸನೂ, ಎಲ್ಲಾ ಇಸ್ರಾಯೇಲರೂ ಯೆಹೋವನ ಸನ್ನಿಧಿಯಲ್ಲಿ ಯಜ್ಞಮಾಡಿದರು.
1 ಅರಸುಗಳು 8 : 63 (IRVKN)
ಸೊಲೊಮೋನನು ಯೆಹೋವನಿಗೋಸ್ಕರ ಮಾಡಿದ ಸಮಾಧಾನಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ ಮತ್ತು ಕುರಿಗಳು ಲಕ್ಷದ ಇಪ್ಪತ್ತು ಸಾವಿರ, ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲರೂ ಯೆಹೋವನ ಆಲಯವನ್ನು ಪ್ರತಿಷ್ಠೆ ಮಾಡಿದರು.
1 ಅರಸುಗಳು 8 : 64 (IRVKN)
ಯೆಹೋವನ ಆಲಯದ ಮುಂದಿರುವ ತಾಮ್ರದ ಯಜ್ಞವೇದಿಯು ಈ ಎಲ್ಲಾ ಸರ್ವಾಂಗಹೋಮ ದ್ರವ್ಯಗಳನ್ನೂ, ಧಾನ್ಯ ನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಹಿಡಿಯಲಾರದಷ್ಟು ‍ಚಿಕ್ಕದಾಗಿದ್ದುದರಿಂದ ಸೊಲೊಮೋನನು ಆ ದಿನ ದೇವಾಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ, ಅಲ್ಲಿ ಅವುಗಳನ್ನೆಲ್ಲಾ ಸಮರ್ಪಿಸಿದನು.
1 ಅರಸುಗಳು 8 : 65 (IRVKN)
ಈ ರೀತಿಯಾಗಿ ಸೊಲೊಮೋನನು ಹಮಾತ್ ಪಟ್ಟಣದ ದಾರಿಯಿಂದ ಐಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಎರಡು ವಾರ ಅಂದರೆ ಹದಿನಾಲ್ಕು ದಿನಗಳ ವರೆಗೆ ತಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.
1 ಅರಸುಗಳು 8 : 66 (IRVKN)
ಎಂಟನೆಯ ದಿನ ಜನರಿಗೆ ಹೋಗುವುದಕ್ಕೆ ಅಪ್ಪಣೆಯಾಗಲು ಅವರು ಅರಸನನ್ನು ವಂದಿಸಿ ಯೆಹೋವನು ತನ್ನ ಸೇವಕನಾದ ದಾವೀದನಿಗೂ ತನ್ನ ಪ್ರಜೆಗಳಾದ ಇಸ್ರಾಯೇಲರಿಗೂ ಮಾಡಿದ ಸರ್ವೋಪಕಾರಗಳನ್ನು ನೆನದು ಆನಂದಚಿತ್ತರಾಗಿ, ಹರ್ಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ತೆರಳಿದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57 58 59 60 61 62 63 64 65 66