1 ಅರಸುಗಳು 9 : 1 (IRVKN)
{ಯೆಹೋವನು ಸೊಲೊಮೋನನಿಗೆ ಪುನಃ ಪ್ರತ್ಯಕ್ಷನಾದದ್ದು} [PS] ಸೊಲೊಮೋನನು ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿದ ನಂತರ,
1 ಅರಸುಗಳು 9 : 2 (IRVKN)
ಯೆಹೋವನು ಅವನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದಂತೆ ಎರಡನೆಯ ಸಾರಿ ಪ್ರತ್ಯಕ್ಷನಾದನು.
1 ಅರಸುಗಳು 9 : 3 (IRVKN)
ಆತನು ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ. ನನ್ನ ದೃಷ್ಟಿಯೂ, ಮನಸ್ಸೂ ಪ್ರತಿದಿನವೂ ಅದರ ಮೇಲಿರುವವು.
1 ಅರಸುಗಳು 9 : 4 (IRVKN)
ನೀನು ನಿನ್ನ ತಂದೆಯಾದ ದಾವೀದನಂತೆ ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ನನಗೆ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುತ್ತಾ ಬರುವುದಾದರೆ,
1 ಅರಸುಗಳು 9 : 5 (IRVKN)
ಇಸ್ರಾಯೇಲರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು. ‘ಇಸ್ರಾಯೇಲ್ ಸಿಂಹಾಸನದ ಮೇಲೆ ನಿನ್ನ ಸಂತಾನದವರು ತಪ್ಪದೆ ಕುಳಿತುಕೊಳ್ಳುವರು’ ಎಂಬುದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.
1 ಅರಸುಗಳು 9 : 6 (IRVKN)
ಆದರೆ ನೀವಾಗಲಿ, ನಿಮ್ಮ ಮಕ್ಕಳಾಗಲಿ, ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳದೆ, ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಕೈಮುಗಿಯುವುದಾದರೆ
1 ಅರಸುಗಳು 9 : 7 (IRVKN)
ಇಸ್ರಾಯೇಲರನ್ನು ನಾನು ಅವರಿಗೆ ಕೊಟ್ಟ ದೇಶದಿಂದ ತೆಗೆದು ಹಾಕಿ, ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ‘ಇಸ್ರಾಯೇಲರು’ ಎಲ್ಲಾ ಜನಾಂಗಗಳವರ ಗಾದೆಗೂ ನಿಂದೆಗೂ, ಲೋಕದ ಅಪವಾದಕ್ಕೂ ಗುರಿಯಾಗುವಾಗುವರು.
1 ಅರಸುಗಳು 9 : 8 (IRVKN)
[* ಅಥವಾ ಈ ಮಂದಿರವು ಕಲ್ಲುಗುಪ್ಪೆಯಾಗುತ್ತದೆ.] ಉನ್ನತವಾದ ಈ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ, ‘ಅಬ್ಬಬ್ಬಾ ಇದೇನು, ಯೆಹೋವನು ಈ ದೇಶವನ್ನು ಮತ್ತು ಈ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.
1 ಅರಸುಗಳು 9 : 9 (IRVKN)
ಆಗ ಈ ದೇಶದವರು ಅವರಿಗೆ, ‘ನಮ್ಮ ಪೂರ್ವಿಕರನ್ನು ಐಗುಪ್ತದಿಂದ ಬರಮಾಡಿದ ದೇವರಾದ ಯೆಹೋವನನ್ನು ಬಿಟ್ಟು, ಅನ್ಯದೇವತೆಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದಲೇ ಯೆಹೋವನು ಈ ಎಲ್ಲಾ ಆಪತ್ತನ್ನು ಬರಮಾಡಿದ್ದಾನೆ’ ಎಂಬ ಉತ್ತರ ಹೇಳುವರು” ಎಂದನು. [PS]
1 ಅರಸುಗಳು 9 : 10 (IRVKN)
{ಸೊಲೊಮೋನನು ಮಾಡಿದ ಇತರ ಸಂಗತಿಗಳು} [PS] ಅರಸನಾದ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವನ ಆಲಯವನ್ನೂ ಮತ್ತು ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು.
1 ಅರಸುಗಳು 9 : 11 (IRVKN)
ಆನಂತರ ಅವನು ತನಗೆ ಬೇಕಾದಷ್ಟು ದೇವದಾರುಮರಗಳನ್ನೂ, ತುರಾಯಿಮರಗಳನ್ನೂ ಮತ್ತು ಬಂಗಾರವನ್ನೂ ಕೊಟ್ಟಂಥ ತೂರಿನ ಅರಸನಾದ ಹೀರಾಮನಿಗೆ ಗಲಿಲಾಯ ಪ್ರಾಂತ್ಯದಲ್ಲಿ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.
1 ಅರಸುಗಳು 9 : 12 (IRVKN)
ಹೀರಾಮನು ತೂರಿನಿಂದ ಬಂದು ಆ ಪಟ್ಟಣಗಳನ್ನು ನೋಡಲು ಅವು ಅವನಿಗೆ ಮೆಚ್ಚಿಗೆಯಾಗಲಿಲ್ಲ.
1 ಅರಸುಗಳು 9 : 13 (IRVKN)
ಆದುದರಿಂದ ಅವನು ಸೊಲೊಮೋನನಿಗೆ, “ಸಹೋದರನೇ, ನೀನು ನನಗೆ ಎಂಥಾ ಪಟ್ಟಣಗಳನ್ನು ಕೊಟ್ಟಿರುವೇ?” ಎಂದು ಹೇಳಿ ಅವುಗಳಿಗೆ [† ಅಂದರೆ ನಿಷ್ಪ್ರಯೋಜಕ.] ಕಾಬೂಲ್ ದೇಶವೆಂದು ಹೆಸರಿಟ್ಟನು. ಅವುಗಳಿಗೆ ಇಂದಿನವರೆಗೂ ಇದೇ ಹೆಸರಿರುತ್ತದೆ.
1 ಅರಸುಗಳು 9 : 14 (IRVKN)
ಹೀರಾಮನು ಸೊಲೊಮೋನನಿಗೆ [‡ ಸುಮಾರು 4,000 ಕಿಲೋಗ್ರಾಂ.] ನೂರಿಪ್ಪತ್ತು ತಲಾಂತು ಬಂಗಾರವನ್ನು ಕೊಟ್ಟನು. [PE][PS]
1 ಅರಸುಗಳು 9 : 15 (IRVKN)
ಸೊಲೊಮೋನನ ಬಿಟ್ಟೀ ಕೆಲಸದವರು [§ ಬಿಟ್ಟೀ ಕೆಲಸದವರು ಒತ್ತಾಯ ಪೂರ್ವಕವಾಗಿ ಕರೆದುಕೊಂಡು ಬಂದ.] ಕಟ್ಟಿದವುಗಳು ಯಾವುವೆಂದರೆ, ಯೆಹೋವನ ಆಲಯ, ಅರಮನೆ, ಮಿಲ್ಲೋ ಕೋಟೆ, ಯೆರೂಸಲೇಮಿನ ಪೌಳಿಗೋಡೆ, ಹಾಚೋರ್ ಮೆಗಿದ್ದೋ ಮತ್ತು ಗೆಜೆರ್ ಇವುಗಳೇ.
1 ಅರಸುಗಳು 9 : 16 (IRVKN)
ಐಗುಪ್ತದ ಅರಸನಾದ ಫರೋಹನು ಗೆಜೆರ್ ಪಟ್ಟಣವನ್ನು ಹಿಡಿದು ಅದಕ್ಕೆ ಬೆಂಕಿಹೊತ್ತಿಸಿ, ಅದರಲ್ಲಿದ್ದ ಕಾನಾನ್ಯರನ್ನು ಹತಿಸಿ, ಅದನ್ನು ವಶಮಾಡಿಕೊಂಡು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಮದುವೆಯ ಉಡುಗೊರೆಯಾಗಿ ಕೊಟ್ಟಿದ್ದನು.
1 ಅರಸುಗಳು 9 : 17 (IRVKN)
ಸೊಲೊಮೋನನು ಗೆಜೆರ್ ಪಟ್ಟಣದ ಹೊರತಾಗಿ ಕೆಳಗಿನ ಬೆತ್ ಹೋರೋನ್,
1 ಅರಸುಗಳು 9 : 18 (IRVKN)
ಯೆಹೂದದ ಅರಣ್ಯಪ್ರದೇಶದಲ್ಲಿರುವ ಬಾಲಾತ್ ಮತ್ತು ತಾಮಾರ್,
1 ಅರಸುಗಳು 9 : 19 (IRVKN)
ತನ್ನ ಎಲ್ಲಾ ಉಗ್ರಾಣ ಪಟ್ಟಣಗಳು, ಯುದ್ಧ ರಥಗಳನ್ನಿರಿಸುವ ಪಟ್ಟಣಗಳು, ರಾಹುತರ ಪಟ್ಟಣಗಳು ಇವುಗಳನ್ನೂ ಕಟ್ಟಿಸಿದನು. ಇದಲ್ಲದೆ ಯೆರೂಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲಿಯೂ ತನ್ನ ಮನಸ್ಸಿಗೆ ಬಂದವುಗಳನ್ನೆಲ್ಲಾ ಕಟ್ಟಿಸಿದನು.
1 ಅರಸುಗಳು 9 : 20 (IRVKN)
ಇದಲ್ಲದೆ ಅವನು ಇಸ್ರಾಯೇಲರಿಂದ ಸಂಹೃತರಾದ ಅನ್ಯ ಜನರನ್ನೂ, ಕಾನಾನ್ ದೇಶದಲ್ಲಿ ಉಳಿದ ಅಮೋರಿಯ, ಹಿತ್ತಿಯ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ,
1 ಅರಸುಗಳು 9 : 21 (IRVKN)
ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನು ತನ್ನ ಕೆಲಸಕ್ಕಾಗಿ ಬಿಟ್ಟೀಹಿಡಿದನು. ಇಂದಿನ ವರೆಗೂ ಅವರು ಬಿಟ್ಟೀಕೆಲಸದವರಾಗಿರುತ್ತಾರೆ.
1 ಅರಸುಗಳು 9 : 22 (IRVKN)
ಆದರೆ ಅವನು ಇಸ್ರಾಯೇಲರನ್ನು ಬಿಟ್ಟೀಹಿಡಿಯಲಿಲ್ಲ. ಅವರನ್ನು ಸೈನಿಕರನ್ನಾಗಿಯೂ, ಪರಿವಾರದವರನ್ನಾಗಿಯೂ ಅಧಿಪತಿಗಳನ್ನಾಗಿಯೂ, ಸರದಾರರನ್ನಾಗಿಯೂ, ರಥಾಶ್ವಬಲಗಳ ನಾಯಕರನ್ನಾಗಿಯೂ ನೇಮಿಸಿಕೊಂಡನು.
1 ಅರಸುಗಳು 9 : 23 (IRVKN)
ಇದಲ್ಲದೆ ಅವನು ಬಿಟ್ಟೀಕೆಲಸ ಮಾಡುವವರ ಮೇಲೆ ಐನೂರೈವತ್ತು ಮಂದಿ ಇಸ್ರಾಯೇಲರನ್ನು ಅಧಿಕಾರಿಗಳನ್ನಾಗಿಯೂ ನೇಮಿಸಿದನು.
1 ಅರಸುಗಳು 9 : 24 (IRVKN)
ಫರೋಹನ ಮಗಳು ದಾವೀದನಗರದಿಂದ ತನಗೋಸ್ಕರ ಕಟ್ಟಿಸಿದ ಅರಮನೆಗೆ ಬಂದಳು. ಅನಂತರ ಸೊಲೊಮೋನನು ಮಿಲ್ಲೋ ಕೋಟೆಯನ್ನು [* ಮಿಲ್ಲೋ ಕೋಟೆಯನ್ನು ಮಿಲ್ಲೋ ಒಂದು ರೀತಿಯ ನೆಲಭರ್ತಿಯ ಬಗ್ಗೆ ಸೂಚಿಸುತ್ತದೆ, ಮತ್ತು ಯೆರೂಸಲೇಮಿನ ಪೂರ್ವ ಪರ್ವತಶ್ರೇಣಿಯ ಪೂರ್ವ ಭಾಗದಲ್ಲಿ ನಿರ್ಮಿಸಲಾದ ಮಹಡಿಯನ್ನು ಸೂಚಿಸುತ್ತದೆಂದು ಕೆಲವರು ನಂಬುತ್ತಾರೆ.] ಕಟ್ಟಿಸಿದನು.
1 ಅರಸುಗಳು 9 : 25 (IRVKN)
ಸೊಲೊಮೋನನು ಯೆಹೋವನ ಆಲಯದ ಮುಂದೆ ತಾನು ಯೆಹೋವನಿಗೋಸ್ಕರ ಕಟ್ಟಿಸಿದ ಯಜ್ಞವೇದಿಯ ಮೇಲೆ ವರ್ಷಕ್ಕೆ ಮೂರು ಸಾರಿ ಸರ್ವಾಂಗಹೋಮ, ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸಿ ಧೂಪಹಾಕುತ್ತಿದ್ದನು. ಹೀಗೆ ಅವನು ದೇವಾಲಯವನ್ನು ಕಟ್ಟಿ ಸಂಪೂರ್ಣಗೊಳಿಸಿದನು. [PE][PS]
1 ಅರಸುಗಳು 9 : 26 (IRVKN)
ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದಲ್ಲಿ ಏಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು.
1 ಅರಸುಗಳು 9 : 27 (IRVKN)
ಹೀರಾಮನು ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರೊಡನೆ ಆ ಹಡಗುಗಳಲ್ಲಿ ಕಳುಹಿಸಿದನು.
1 ಅರಸುಗಳು 9 : 28 (IRVKN)
ಅವರು ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ [† ಸುಮಾರು 14,000 ಕಿಲೋಗ್ರಾಂ.] ನಾನೂರಿಪ್ಪತ್ತು ತಲಾಂತು ಬಂಗಾರವನ್ನು ತೆಗೆದುಕೊಂಡು ಬಂದರು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28

BG:

Opacity:

Color:


Size:


Font: