1 ಸಮುವೇಲನು 1 : 1 (IRVKN)
ಎಲ್ಕಾನನು ಮತ್ತು ಅವನ ಕುಟುಂಬ [* ಯೆಹೋ. 24: 33 ]ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ರಾಮಾತಯಿಮ್ ಚೋಫೀಮ್ ಊರಿನಲ್ಲಿ ಎಲ್ಕಾನನೆಂಬ ಒಬ್ಬ ಮನುಷ್ಯನಿದ್ದನು. ಇವನು ಯೆರೋಹಾಮನ ಮಗನೂ ಎಲೀಹುವಿನ ಮೊಮ್ಮಗನೂ ತೋಹುವಿನ ಮರಿಮಗನೂ ಆಗಿದ್ದನು. ತೋಹು ಎಂಬವನು ಎಫ್ರಾಯೀಮ್ಯನಾದ ಚೂಫನ ಮಗನು.
1 ಸಮುವೇಲನು 1 : 2 (IRVKN)
ಎಲ್ಕಾನನಿಗೆ ಇಬ್ಬರು ಹೆಂಡತಿಯರಿದ್ದರು. ಮೊದಲನೆಯವಳು ಹನ್ನಳು, ಎರಡನೆಯವಳು ಪೆನಿನ್ನಳು. ಪೆನಿನ್ನಳಿಗೆ ಮಕ್ಕಳಿದ್ದರು; ಹನ್ನಳಿಗೆ ಮಕ್ಕಳಿರಲಿಲ್ಲ.
1 ಸಮುವೇಲನು 1 : 3 (IRVKN)
ಅವನು ಪ್ರತಿವರ್ಷವೂ ಸೇನಾಧೀಶ್ವರನಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸಿ ಆತನನ್ನು ಆರಾಧಿಸುವುದಕ್ಕೋಸ್ಕರ ತನ್ನ ಊರಿನಿಂದ ಶೀಲೋವಿಗೆ ಹೋಗುತ್ತಿದ್ದನು. ಅಲ್ಲಿ ಏಲಿಯನ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸ್ ಎಂಬವರು ಯೆಹೋವನ ಯಾಜಕರಾಗಿದ್ದರು.
1 ಸಮುವೇಲನು 1 : 4 (IRVKN)
ಎಲ್ಕಾನನು ಯಜ್ಞವನ್ನರ್ಪಿಸಿದಾಗೆಲ್ಲಾ ತನ್ನ ಹೆಂಡತಿಯಾದ ಪೆನಿನ್ನಳಿಗೂ ಆಕೆಯ ಎಲ್ಲಾ ಗಂಡು ಹೆಣ್ಣುಮಕ್ಕಳಿಗೂ ಭಾಗಗಳನ್ನು ಕೊಡುತ್ತಿದ್ದನು.
1 ಸಮುವೇಲನು 1 : 5 (IRVKN)
ಅವನು ಹನ್ನಳನ್ನು ಬಹಳವಾಗಿ ಪ್ರೀತಿಸಿದರೂ, ಯೆಹೋವನು ಆಕೆಯ ಗರ್ಭವನ್ನು ಮುಚ್ಚಿದ್ದರಿಂದ ಅವನು ಆಕೆಗೆ † ಒಂದು. ಎರಡು ಭಾಗವನ್ನು ಕೊಡುತ್ತಿದ್ದನು.
1 ಸಮುವೇಲನು 1 : 6 (IRVKN)
ಇದಲ್ಲದೆ ಆಕೆಯ ಸವತಿಯಾದ ಪೆನಿನ್ನಳು, “ಯೆಹೋವನು ನಿನ್ನನ್ನು ಬಂಜೆಯನ್ನಾಗಿ ಮಾಡಿದ್ದಾನೆ” ಎಂದು ಹೇಳಿ ಆಕೆಯನ್ನು ಕೆಣಕಿ ನೋಯಿಸುತ್ತಿದ್ದಳು.
1 ಸಮುವೇಲನು 1 : 7 (IRVKN)
ಅವರು ಪ್ರತಿವರ್ಷವೂ ಕುಟುಂಬವಾಗಿ ಯೆಹೋವನ ಮಂದಿರಕ್ಕೆ ಹೋದಾಗೆಲ್ಲಾ ಪೆನಿನ್ನಳು ಆಕೆಯನ್ನು ಕೆಣಕುತ್ತಿದ್ದುದರಿಂದ ಹನ್ನಳು ಊಟ ಮಾಡದೆ ಅಳುತ್ತಾ ಇದ್ದಳು.
1 ಸಮುವೇಲನು 1 : 8 (IRVKN)
ಆಗ ಆಕೆಯ ಗಂಡನಾದ ಎಲ್ಕಾನನು ಆಕೆಗೆ “ಹನ್ನಾ, ಏಕೆ ಅಳುತ್ತೀ? ಊಟ ಮಾಡದಿರುವುದಕ್ಕೆ ಕಾರಣವೇನು? ನೀನು ವ್ಯಸನಪಡುವುದೇಕೆ? ನಾನು ನಿನಗೆ ಹತ್ತು ಮಂದಿ ಗಂಡು ಮಕ್ಕಳಿಗಿಂತ ಹೆಚ್ಚಾಗಿದ್ದೇನಲ್ಲಾ” ಅಂದನು.
1 ಸಮುವೇಲನು 1 : 9 (IRVKN)
ಹನ್ನಳ ಪ್ರಾರ್ಥನೆ ಅವರು ಶೀಲೋವಿನಲ್ಲಿದ್ದ ಒಂದು ಸಂದರ್ಭದಲ್ಲಿ, ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ, ಹನ್ನಳು ಎದ್ದು ಯೆಹೋವನ ಮಂದಿರಕ್ಕೆ ಹೋದಳು. ಯಾಜಕನಾದ ಏಲಿಯು ಮಂದಿರದ್ವಾರದ ನಿಲುವುಗಳ ಬಳಿಯಲ್ಲಿದ್ದ ತನ್ನ ಪೀಠದ ಮೇಲೆ ಕುಳಿತ್ತಿದ್ದನು.
1 ಸಮುವೇಲನು 1 : 10 (IRVKN)
ಹನ್ನಳು ಬಹುದುಃಖದಿಂದ ಕಣ್ಣೀರು ಸುರಿಸುತ್ತಾ ಯೆಹೋವನಿಗೆ,
1 ಸಮುವೇಲನು 1 : 11 (IRVKN)
“ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; [‡ ನ್ಯಾಯ 13: 5 ]ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು.
1 ಸಮುವೇಲನು 1 : 12 (IRVKN)
ಆಕೆಯು ಬಹಳ ಹೊತ್ತಿನ ವರೆಗೆ ಯೆಹೋವನ ಮುಂದೆ ಪ್ರಾರ್ಥನೆಮಾಡುತ್ತಿರುವಾಗ ಏಲಿಯು ಆಕೆಯ ಬಾಯನ್ನೇ ನೋಡುತ್ತಿದ್ದನು.
1 ಸಮುವೇಲನು 1 : 13 (IRVKN)
ಆಕೆ ತನ್ನ ಹೃದಯದಲ್ಲಿ ಪ್ರಾರ್ಥಿಸುತ್ತಿದ್ದರಿಂದ ತುಟಿಗಳು ಮಾತ್ರ ಅಲ್ಲಾಡುತ್ತಿದ್ದವು; ಶಬ್ದ ಕೇಳಿಸುತ್ತಿರಲಿಲ್ಲ. ಆದ್ದರಿಂದ ಆಕೆಯು ಮದ್ಯಪಾನಮಾಡಿದ್ದಾಳೆಂದು ತಿಳಿದು
1 ಸಮುವೇಲನು 1 : 14 (IRVKN)
ಏಲಿಯು, “ನಿನ್ನ ಕುಡಿತದ ಅಮಲು ಇನ್ನೂ ಇಳಿಯಲಿಲ್ಲವೇ? ದ್ರಾಕ್ಷಾರಸದ ನಿಶೆ ನಿನ್ನನ್ನು ಬಿಟ್ಟು ಹೋಗಲಿ” ಅಂದನು.
1 ಸಮುವೇಲನು 1 : 15 (IRVKN)
ಅದಕ್ಕೆ ಹನ್ನಳು “ಸ್ವಾಮೀ, ಹಾಗಲ್ಲ; ನಾನು ಬಹು ದುಃಖಪೀಡಿತಳು; ದ್ರಾಕ್ಷಾರಸವನ್ನಾದರೂ ಬೇರೆ ಯಾವ ಮದ್ಯವನ್ನಾದರೂ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಯೆಹೋವನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ.
1 ಸಮುವೇಲನು 1 : 16 (IRVKN)
ನಿನ್ನ ದಾಸಿಯಾದ ನನ್ನನ್ನು [§ 1 ಅರಸು 21: 10 ]ಅಯೋಗ್ಯಳೆಂದು ನೆನಸಬೇಡ; ಈವರೆಗೆ ನನ್ನ ಹೆಚ್ಚಾದ ಚಿಂತೆಯನ್ನೂ, ವ್ಯಥೆಯನ್ನೂ ಅರಿಕೆಮಾಡಿಕೊಳ್ಳುತ್ತಿದ್ದೆನು” ಎಂದು ಹೇಳಿದಳು.
1 ಸಮುವೇಲನು 1 : 17 (IRVKN)
ಆಗ ಏಲಿಯು ಆಕೆಗೆ, “ಸಮಾಧಾನದಿಂದ ಹೋಗು; ಇಸ್ರಾಯೇಲಿನ ದೇವರು ನಿನ್ನ ಪ್ರಾರ್ಥನೆಯನ್ನು ನೆರವೇರಿಸಲಿ” ಎಂದನು.
1 ಸಮುವೇಲನು 1 : 18 (IRVKN)
ಹನ್ನಳು ಏಲಿಗೆ, “ನಿನ್ನ ದಾಸಿಯ ಮೇಲೆ ಕಟಾಕ್ಷವಿರಲಿ” ಎಂದು ಹೇಳಿ ಹೊರಟುಹೋಗಿ ಊಟಮಾಡಿದಳು. ಆ ಮೇಲೆ ಆಕೆಯ ಮುಖದಲ್ಲಿ ದುಃಖವು ಕಾಣಲಿಲ್ಲ.
1 ಸಮುವೇಲನು 1 : 19 (IRVKN)
ಸಮುವೇಲನ ಜನನ ಮತ್ತು ಸಮರ್ಪಣೆ ಅವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ ರಾಮದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳೊಂದಿಗೆ ಸಂಗಮಿಸಲು, ಯೆಹೋವನು ಆಕೆಯ ಪ್ರಾರ್ಥನೆಯನ್ನು ಪರಿಗಣಿಸಿದ್ದರಿಂದ ಆಕೆಯು ಗರ್ಭಿಣಿಯಾದಳು.
1 ಸಮುವೇಲನು 1 : 20 (IRVKN)
ಹನ್ನಳು ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡೆದುಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು.
1 ಸಮುವೇಲನು 1 : 21 (IRVKN)
ಎಲ್ಕಾನನು ಎಂದಿನಂತೆ ಕುಟುಂಬ ಸಹಿತವಾಗಿ ಯೆಹೋವನಿಗೆ ವಾರ್ಷಿಕಯಜ್ಞವನ್ನು ಅರ್ಪಿಸಿ ಹರಕೆಸಲ್ಲಿಸಬೇಕೆಂದು ಶೀಲೋವಿಗೆ ಹೋಗುವುದಕ್ಕೆ ಸಿದ್ಧನಾಗಲು ಹನ್ನಳು
1 ಸಮುವೇಲನು 1 : 22 (IRVKN)
“ಮಗನು ಮೊಲೆಬಿಡುವ ವರೆಗೂ ನಾನು ಬರುವುದಿಲ್ಲ; ಅವನು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಯಾವಾಗಲೂ ಅಲ್ಲಿಯೇ ಇರುವ ಹಾಗೆ ಅವನನ್ನು * ಕೆಲವು ಹಸ್ತಪ್ರತಿಗಳಲ್ಲಿ ನಾನು ಅವನನ್ನು ಅಲ್ಲಿ ಯಾವಾಗಲೂ ನಾಜೀರನಾಗಿ ಇಡುವೆನು. ಕರೆದುಕೊಂಡು ಬರುವೆನು” ಎಂದು ಹೇಳಿದಳು.
1 ಸಮುವೇಲನು 1 : 23 (IRVKN)
ಆಕೆಯ ಗಂಡನಾದ ಎಲ್ಕಾನನು ಆಕೆಗೆ “ನಿನಗೆ ಸರಿತೋರುವ ಹಾಗೆ ಆಗಲಿ; ಮಗನು ಮೊಲೆಬಿಡುವವರೆಗೆ ಇರು. ಯೆಹೋವನು ತನ್ನ ವಾಕ್ಯವನ್ನು ದೃಢಪಡಿಸಲಿ” ಅಂದನು. ಮಗನು ಮೊಲೆಬಿಡುವ ತನಕ ಹನ್ನಳು ಮನೆಯಲ್ಲೇ ಇದ್ದು ಅವನನ್ನು ಸಾಕಿದಳು.
1 ಸಮುವೇಲನು 1 : 24 (IRVKN)
ಅನಂತರ ಆಕೆಯು † ಅಥವಾ ಮೂರು ಹೋರಿಗಳು. ಮೂರು ವರ್ಷದ ಒಂದು ಹೋರಿಯನ್ನೂ, ‡ ಸುಮಾರು 10 ಕಿಲೋಗ್ರಾಂ ಅಥವಾ ಮೂವತ್ತು ಸೇರು. ಒಂದು ಏಫಾ ಹಿಟ್ಟನ್ನೂ, ಒಂದು ತಿತ್ತಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಪುತ್ರನೊಂದಿಗೆ ಶೀಲೋವಿನಲ್ಲಿದ್ದ ಯೆಹೋವನ ಮಂದಿರಕ್ಕೆ ಬಂದಳು. ಮಗನು ಇನ್ನೂ ಚಿಕ್ಕವನಾಗಿದ್ದನು.
1 ಸಮುವೇಲನು 1 : 25 (IRVKN)
ಅವರು ಹೋರಿಯನ್ನು ಯಜ್ಞಮಾಡಿದ ಮೇಲೆ ಮಗನನ್ನು ಏಲಿಯ ಬಳಿಗೆ ಕರೆದುಕೊಂಡು ಬಂದರು.
1 ಸಮುವೇಲನು 1 : 26 (IRVKN)
ಹನ್ನಳು ಏಲಿಗೆ “ಸ್ವಾಮೀ, ನಿನ್ನ ಜೀವದಾಣೆ; ಮೊದಲು ಯೆಹೋವನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ, ಇಲ್ಲಿ ನಿನ್ನ ಹತ್ತಿರ ನಿಂತಿದ್ದ ಸ್ತ್ರೀಯು ನಾನೇ.
1 ಸಮುವೇಲನು 1 : 27 (IRVKN)
ಆತನು ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ;
1 ಸಮುವೇಲನು 1 : 28 (IRVKN)
ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು” ಎಂದು ಹೇಳಿದಳು. ಆ ಮೇಲೆ ಅವರು ಶಿಲೋವಿನಲ್ಲಿ ಯೆಹೋವನನ್ನು ಆರಾಧಿಸಿದರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28