1 ಸಮುವೇಲನು 11 : 1 (IRVKN)
{ಸೌಲನು ಅಮ್ಮೋನಿಯರನ್ನು ಸೋಲಿಸಿದ್ದು} [PS] ಅಮ್ಮೋನಿಯನಾದ ನಾಹಾಷನು ಹೊರಟು ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಲು, ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನನ್ನು ಸೇವಿಸುವೆವು” ಎಂದು ಬೇಡಿಕೊಂಡರು.
1 ಸಮುವೇಲನು 11 : 2 (IRVKN)
ಅದಕ್ಕೆ ಅವನು, “ಎಲ್ಲಾ ಇಸ್ರಾಯೇಲರನ್ನು ಅವಮಾನಪಡಿಸುವುದಕ್ಕಾಗಿ ನಾನು ಮೊದಲು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕುತ್ತೇನೆ. ಇದಕ್ಕೆ ನೀವು ಒಪ್ಪುವುದಾದರೆ ನಿಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ” ಎಂದು ಉತ್ತರಕೊಟ್ಟನು.
1 ಸಮುವೇಲನು 11 : 3 (IRVKN)
ಆಗ ಯಾಬೇಷಿನ ಹಿರಿಯರು ಅವನಿಗೆ, “ಏಳು ದಿನಗಳವರೆಗೆ ಸಮಯ ಕೊಡು; ಅಷ್ಟರೊಳಗೆ ನಾವು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ಯಾರೂ ರಕ್ಷಿಸದಿದ್ದರೆ, ನಾವು ನಿನ್ನ ಬಳಿಗೆ ಹೊರಟು ಬಂದು ನಿನಗೆ ಅಧೀನರಾಗುತ್ತೇವೆ” ಎಂದು ತಿಳಿಸಿದರು.
1 ಸಮುವೇಲನು 11 : 4 (IRVKN)
ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ವರ್ತಮಾನವನ್ನು ತಿಳಿಸಲು ಎಲ್ಲರೂ ಅಳತೊಡಗಿದರು.
1 ಸಮುವೇಲನು 11 : 5 (IRVKN)
ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಅವನು, “ಜನರು ಗೋಳಾಡುವುದಕ್ಕೆ ಕಾರಣವೇನು?” ಎಂದು ಕೇಳಲು ಅವರು ಅವನಿಗೆ ಯಾಬೇಷಿನವರ ವರ್ತಮಾನವನ್ನು ತಿಳಿಸಿದರು.
1 ಸಮುವೇಲನು 11 : 6 (IRVKN)
ಆಗ ಯೆಹೋವನ ಆತ್ಮವು ಅವನ ಮೇಲೆ ಬಂದಿತು. ಅವನು ಬಹಳ ಕೋಪಗೊಂಡು, [* ನ್ಯಾಯ 19:29.] ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿದನು.
1 ಸಮುವೇಲನು 11 : 7 (IRVKN)
ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿ, “ಯಾರು ಸೌಲ, ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳು ಹೀಗೆಯೇ ಕಡಿಯಲ್ಪಡುವವು” ಎಂದು ಹೇಳಿ ಕಳುಹಿಸಿದನು. ಯೆಹೋವನಿಗೆ ಭಯಪಟ್ಟು ಜನರೆಲ್ಲರೂ ಏಕಮನಸ್ಸಿನಿಂದ ಬೆಜೆಕಿನಲ್ಲಿ ಕೂಡಿಬಂದರು.
1 ಸಮುವೇಲನು 11 : 8 (IRVKN)
ಅವರನ್ನು ಬೆಜೆಕಿನಲ್ಲಿ ಕ್ರಮಪಡಿಸಿ ಲೆಕ್ಕಿಸಿದಾಗ ಇಸ್ರಾಯೇಲರಲ್ಲಿ ಮೂರು ಲಕ್ಷ ಸೈನಿಕರೂ ಯೆಹೂದ್ಯರಲ್ಲಿ ಮೂವತ್ತು ಸಾವಿರ ಸೈನಿಕರೂ ಇದ್ದರು.
1 ಸಮುವೇಲನು 11 : 9 (IRVKN)
ಅವರು ಬಂದಿದ್ದ ದೂತರಿಗೆ, “ನಾಳೆ ಮಧ್ಯಾಹ್ನದಲ್ಲಿ ನಿಮಗೆ ಸಹಾಯ ಸಿಕ್ಕುವುದೆಂದು ಯಾಬೇಷ್ ಗಿಲ್ಯಾದಿನವರಿಗೆ ತಿಳಿಸಿರಿ” ಎಂದು ಹೇಳಿ ಅವರನ್ನು ಕಳುಹಿಸಿದರು.
1 ಸಮುವೇಲನು 11 : 10 (IRVKN)
ದೂತರು ಹೋಗಿ ಈ ವರ್ತಮಾನವನ್ನು ತಿಳಿಸಲು ಯಾಬೇಷಿನವರು ಬಹಳವಾಗಿ ಸಂತೋಷಪಟ್ಟು ಅಮ್ಮೋನಿಯರಿಗೆ, “ನಾವು ನಾಳೆ ನಿಮ್ಮ ಬಳಿಗೆ ಬರುವೆವು; ನಿಮಗೆ ಸರಿ ಕಾಣುವ ಪ್ರಕಾರ ಮಾಡಿರಿ” ಎಂದು ಹೇಳಿದರು.
1 ಸಮುವೇಲನು 11 : 11 (IRVKN)
ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಗುಂಪನ್ನಾಗಿ ಮಾಡಿ ಅಮ್ಮೋನಿಯರ ಪಾಳೆಯದೊಳಗೆ ನುಗ್ಗಿ ಅವರನ್ನು ಮಧ್ಯಾಹ್ನದ ವರೆಗೆ ಹತ್ಯೆಮಾಡಿದನು. ಉಳಿದವರನ್ನು ಒಟ್ಟಾಗಿ ಸೇರಿಸಿಕೊಳ್ಳದ ಹಾಗೆ ಚದರಿಸಿಬಿಟ್ಟನು. [PE][PS]
1 ಸಮುವೇಲನು 11 : 12 (IRVKN)
ತರುವಾಯ ಜನರು ಸಮುವೇಲನಿಗೆ, “ಸೌಲನು ನಮಗೆ ಅರಸನಾಗಬಾರದು ಎಂದು ಹೇಳಿದವರು ಯಾರು? [† ಲೂಕ 19:27.] ಅವರನ್ನು ನಮಗೆ ಒಪ್ಪಿಸಿರಿ; ನಾವು ಕೊಂದುಹಾಕುತ್ತೇವೆ” ಎಂದರು.
1 ಸಮುವೇಲನು 11 : 13 (IRVKN)
ಸೌಲನು ಅವರಿಗೆ, “ಯೆಹೋವನು ಈ ದಿನ ಇಸ್ರಾಯೇಲ್ಯರಿಗೆ ಜಯವನ್ನು ಉಂಟುಮಾಡಿರುವುದರಿಂದ ಯಾರನ್ನೂ ಕೊಲ್ಲಬಾರದು” ಎಂದು ಹೇಳಿದನು.
1 ಸಮುವೇಲನು 11 : 14 (IRVKN)
ಸಮುವೇಲನು ಜನರಿಗೆ, “ಬನ್ನಿರಿ; ಗಿಲ್ಗಾಲಿಗೆ ಹೋಗಿ ಸೌಲನ ಅರಸುತನವನ್ನು ಸ್ಥಿರಪಡಿಸೋಣ” ಅನ್ನಲು
1 ಸಮುವೇಲನು 11 : 15 (IRVKN)
ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಸ್ಥಿರಪಡಿಸಿ, ಯೆಹೋವನಿಗೆ ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ಸೌಲನೊಡನೆ ಬಹಳವಾಗಿ ಆನಂದಿಸಿದರು. [PE]

1 2 3 4 5 6 7 8 9 10 11 12 13 14 15

BG:

Opacity:

Color:


Size:


Font: