1 ಸಮುವೇಲನು 12 : 1 (IRVKN)
ಸಮುವೇಲನ ಬೀಳ್ಕೊಡುಗೆಯ ಭಾಷಣ ಸಮುವೇಲನು ಎಲ್ಲಾ ಇಸ್ರಾಯೇಲ್ಯರಿಗೆ, “ನೋಡಿರಿ, ನಾನು ನಿಮ್ಮ ಬಿನ್ನಹಗಳನ್ನು ಆಲಿಸಿ ನಿಮಗೊಬ್ಬ ಅರಸನನ್ನು ನೇಮಿಸಿದೆನು.
1 ಸಮುವೇಲನು 12 : 2 (IRVKN)
[* ಅರಣ್ಯ 27: 17 ]ಇನ್ನು ಮುಂದೆ ಇವನೇ ನಿಮ್ಮ ಅರಸನಾಗಿರುವನು. ಚಿಕ್ಕಂದಿನಿಂದ ನಿಮ್ಮ ನಾಯಕನಾಗಿದ್ದ ನಾನು ಈಗ ತಲೆನರೆತ ಮುದುಕನಾಗಿದ್ದೇನೆ; ನನ್ನ ಮಕ್ಕಳು ನಿಮ್ಮೊಂದಿಗಿದ್ದಾರೆ.
1 ಸಮುವೇಲನು 12 : 3 (IRVKN)
ಇಲ್ಲಿ ನಿಂತುಕೊಂಡಿರುವ ನಾನು [† ವಿಮೋ 20: 17 ]ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ, ಪೀಡಿಸಿದ್ದೂ, ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ” ಅಂದನು.
1 ಸಮುವೇಲನು 12 : 4 (IRVKN)
ಅವರು, “ನೀನು ನಮ್ಮನ್ನು ವಂಚಿಸಿ ಪೀಡಿಸಿದ್ದಾಗಲಿ, ನಮ್ಮಿಂದ ಏನಾದರೂ ಕಸಿದುಕೊಂಡದ್ದಾಗಲಿ ಇರುವುದಿಲ್ಲ” ಎಂದು ಉತ್ತರ ಕೊಟ್ಟರು.
1 ಸಮುವೇಲನು 12 : 5 (IRVKN)
ಸಮುವೇಲನು ಪುನಃ “ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲ ಎಂಬುದಕ್ಕೆ ಯೆಹೋವನೂ ಆತನ ಅಭಿಷಿಕ್ತನೂ ಸಾಕ್ಷಿಯಾಗಿದ್ದಾರೆ” ಎಂದನು. ಅವರು, “ಹೌದು, ಯೆಹೋವನೇ ಸಾಕ್ಷಿಯಾಗಿದ್ದಾನೆ” ಎಂದು ಹೇಳಿದರು.
1 ಸಮುವೇಲನು 12 : 6 (IRVKN)
ಆಗ ಸಮುವೇಲನು, “ನಿಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರೆತರುವುದಕ್ಕಾಗಿ ಮೋಶೆ ಹಾಗೂ ಆರೋನರನ್ನು ನೇಮಿಸಿದ ಯೆಹೋವನೇ ಇದಕ್ಕೆ ಸಾಕ್ಷಿ.
1 ಸಮುವೇಲನು 12 : 7 (IRVKN)
ಇಲ್ಲಿ ನಿಂತುಕೊಂಡು ಕೇಳಿರಿ; ಯೆಹೋವನು ನಿಮಗೋಸ್ಕರವೂ, ನಿಮ್ಮ ಪೂರ್ವಿಕರಿಗೋಸ್ಕರವೂ ನಡೆಸಿದ ನೀತಿಕಾರ್ಯಗಳನ್ನು ಕುರಿತು ಆತನ ಎದುರಿನಲ್ಲಿ ನಿಮ್ಮ ನೆನಪಿಗೆ ತಂದು, ನಿಮ್ಮನ್ನು ಎಚ್ಚರಿಸುತ್ತೇನೆ.
1 ಸಮುವೇಲನು 12 : 8 (IRVKN)
ಐಗುಪ್ತಕ್ಕೆ ಬಂದ ಯಾಕೋಬನ ವಂಶದವರಾದ ನಿಮ್ಮ ಹಿರಿಯರು ಯೆಹೋವನಿಗೆ ಮೊರೆಯಿಟ್ಟಾಗ, ಆತನು ಮೋಶೆ ಆರೋನರ ಮುಖಾಂತರ ಅವರನ್ನು ಐಗುಪ್ತದಿಂದ ಬಿಡಿಸಿ ಈ ದೇಶದಲ್ಲಿ ನೆಲೆಗೊಳಿಸಿದನು.
1 ಸಮುವೇಲನು 12 : 9 (IRVKN)
ಅವರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಡಲು ಆತನು ಅವರನ್ನು [‡ ನ್ಯಾಯ 13: 1 ]ಹಾಚೋರಿನ ಸೇನಾಧಿಪತಿಯಾದ ಸೀಸೆರನಿಗೂ, ಫಿಲಿಷ್ಟಿಯರಿಗೂ, ಮೋವಾಬ್ ರಾಜನಿಗೂ ಮಾರಿಬಿಟ್ಟನು. ಇವರು ಬಂದು ಅವರೊಡನೆ ಯುದ್ಧಮಾಡಿದರು.
1 ಸಮುವೇಲನು 12 : 10 (IRVKN)
ಆಗ ಅವರು ಯೆಹೋವನಿಗೆ, ‘ನಾವು ಯೆಹೋವನಾದ ನಿನ್ನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸು; ನಾವು ಇನ್ನು ಮುಂದೆ ನಿನ್ನನ್ನೇ ಸೇವಿಸುವೆವು’ ಎಂದು ಮೊರೆಯಿಟ್ಟರು.
1 ಸಮುವೇಲನು 12 : 11 (IRVKN)
ಯೆಹೋವನು § ಗಿದ್ಯೋನ್. ಯೆರುಬ್ಬಾಳ್, * ಬೆದಾನ್. ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ಬಿಡಿಸಿ ಸುರಕ್ಷಿತವಾಗಿ ಜೀವಿಸುವಂತೆ ಮಾಡಿದನು.
1 ಸಮುವೇಲನು 12 : 12 (IRVKN)
ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು, ನಿಮ್ಮ ದೇವರಾದ ಯೆಹೋವನು ನಿಮ್ಮ ಅರಸನಾಗಿದ್ದರೂ ನೀವು, ‘ನಮಗೊಬ್ಬ ಅರಸನನ್ನು ನೇಮಿಸು’ ಎಂದು ನನ್ನನ್ನು ಬೇಡಿಕೊಂಡಿರಿ.
1 ಸಮುವೇಲನು 12 : 13 (IRVKN)
ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸನು ಇವನೇ; ಯೆಹೋವನು ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇಮಿಸಿದ್ದಾನೆ.
1 ಸಮುವೇಲನು 12 : 14 (IRVKN)
† ಯೆಹೋ. 24:14 ನೀವೂ, ನಿಮ್ಮ ಅರಸನೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು, ಆತನಿಗೆ ವಿಧೇಯರಾಗಿ, ಆತನನ್ನು ಸೇವಿಸುತ್ತಾ, ತಪ್ಪದೆ ಆತನ ಮಾತನ್ನು ಪಾಲಿಸುವವರಾಗಿ, ಆತನನ್ನೇ ಹೊಂದಿಕೊಂಡಿರುವುದಾದರೆ ಎಷ್ಟೋ ಒಳ್ಳೆಯದು.
1 ಸಮುವೇಲನು 12 : 15 (IRVKN)
ನೀವು ಯೆಹೋವನ ಮಾತನ್ನು ಕೇಳದೆಯೂ, ಆತನ ಆಜ್ಞೆಗಳನ್ನು ಕೈಕೊಳ್ಳದೆಯೂ ಹೋದರೆ, ಆತನ ಹಸ್ತವು ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವುದು.
1 ಸಮುವೇಲನು 12 : 16 (IRVKN)
[‡ ವಿಮೋ 14: 13 ]ಈಗ ಯೆಹೋವನು ನಿಮ್ಮ ಕಣ್ಣುಮುಂದೆ ಮಾಡುವ ಮಹತ್ಕಾರ್ಯವನ್ನು ಹತ್ತಿರ ಬಂದು ನೋಡಿರಿ.
1 ಸಮುವೇಲನು 12 : 17 (IRVKN)
ನಾನು ಯೆಹೋವನಿಗೆ ಮೊರೆಯಿಡುವೆನು; [§ ಜ್ಞಾನೋ 26: 1 ]ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ, ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ತಪ್ಪು ಎಂಬುದನ್ನು ತೋರಿಸಿಕೊಡುವನು” ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಟ್ಟನು.
1 ಸಮುವೇಲನು 12 : 18 (IRVKN)
ಆಗ ಯೆಹೋವನು ಗುಡುಗು ಮಳೆಗಳನ್ನು ಕಳುಹಿಸಿದನು. [* ಎಜ್ರ. 10: 9 ]ಎಲ್ಲಾ ಜನರು ಯೆಹೋವನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು
1 ಸಮುವೇಲನು 12 : 19 (IRVKN)
ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಸೇರಿಕೊಂಡಿತು; ಆದ್ದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ” ಎಂದು ವಿಜ್ಞಾಪಿಸಲು
1 ಸಮುವೇಲನು 12 : 20 (IRVKN)
ಅವನು, “ಭಯಪಡಬೇಡಿರಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆಯಾದರೂ ಅದನ್ನು ಬಿಟ್ಟು, ಯೆಹೋವನನ್ನು ಅಂಟಿಕೊಂಡು, ಪೂರ್ಣಮನಸ್ಸಿನಿಂದ ಆತನೊಬ್ಬನನ್ನೇ ಸೇವಿಸಿರಿ.
1 ಸಮುವೇಲನು 12 : 21 (IRVKN)
[† 1 ಕೊರಿ 8: 4 ]ದೇವರಿಗೆ ಇಷ್ಟವಿಲ್ಲದ ವಿಷಯಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ, ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ.
1 ಸಮುವೇಲನು 12 : 22 (IRVKN)
‡ 1 ಪೇತ್ರ. 2:9 ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು [§ ಯೆರೆ 20:9,14, 22 ]ತನ್ನ ಮಹೋನ್ನತ ನಾಮದ ನಿಮಿತ್ತ ನಿಮ್ಮನ್ನು ಕೈಬಿಡುವುದೇ ಇಲ್ಲ.
1 ಸಮುವೇಲನು 12 : 23 (IRVKN)
ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.
1 ಸಮುವೇಲನು 12 : 24 (IRVKN)
ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, [* ಪ್ರಸಂಗಿ. 12: 13 ]ಆತನನ್ನು ಸತ್ಯದಿಂದಲೂ, ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;
1 ಸಮುವೇಲನು 12 : 25 (IRVKN)
ನೀವು ದ್ರೋಹಿಗಳಾಗಿಯೇ ಇದ್ದರೆ ನೀವು ಮತ್ತು ನಿಮ್ಮ ಅರಸನು ನಾಶವಾಗುವಿರಿ” ಎಂದು ಹೇಳಿದನು.
❮
❯