1 ಸಮುವೇಲನು 13 : 1 (IRVKN)
ಇಸ್ರಾಯೇಲ್ಯರ ಮತ್ತು ಫಿಲಿಷ್ಟಿಯರ ಯುದ್ಧ ಸೌಲನು ಅರಸನಾದಾಗ ಮೂವತ್ತು ವರ್ಷದವನಾಗಿದ್ದನು. ಅವನು ಇಸ್ರಾಯೇಲರನ್ನು ಎರಡು ವರ್ಷಗಳ ಕಾಲ ಆಳಿದನು.
1 ಸಮುವೇಲನು 13 : 2 (IRVKN)
ಅವನು ಇಸ್ರಾಯೇಲರಿಂದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡನು, ಅವರಲ್ಲಿ ಎರಡು ಸಾವಿರ ಜನರು ಅವನೊಂದಿಗೆ ಮಿಕ್ಮಾಷಿನಲ್ಲಿಯೂ, ಬೇತೇಲಿನ ಗುಡ್ಡದಲ್ಲಿಯೂ ಇದ್ದರು. ಒಂದು ಸಾವಿರ ಜನರನ್ನು ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು. ಉಳಿದ ಇಸ್ರಾಯೇಲರನ್ನು ಅವರವರ ಮನೆಗಳಿಗೆ ಕಳುಹಿಸಿದನು.
1 ಸಮುವೇಲನು 13 : 3 (IRVKN)
ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದನು. ಈ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿತು. ಸೌಲನು “ಎಲ್ಲಾ ಇಬ್ರಿಯರು ಕೇಳಲಿ” ಎಂದು [* ನ್ಯಾಯ 3: 27 ]ದೇಶದಲ್ಲೆಲ್ಲಾ ತುತ್ತೂರಿ ಊದಿಸಿದನು.
1 ಸಮುವೇಲನು 13 : 4 (IRVKN)
ಸೌಲನು ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದ್ದರಿಂದ ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಾಯೇಲರು ತಿಳಿದು ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.
1 ಸಮುವೇಲನು 13 : 5 (IRVKN)
ಆಗ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೋಸ್ಕರ ಮೂವತ್ತು ಸಾವಿರ ರಥಬಲವನ್ನೂ, ಆರು ಸಾವಿರ ಅಶ್ವಬಲವನ್ನೂ, ಸಮುದ್ರದ ಮರಳಿನಷ್ಟು ಅಸಂಖ್ಯವಾದ ಕಾಲಾಳುಗಳನ್ನೂ ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡರು.
1 ಸಮುವೇಲನು 13 : 6 (IRVKN)
ಇಸ್ರಾಯೇಲರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು [† ಇಬ್ರಿ. 11: 38 ]ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.
1 ಸಮುವೇಲನು 13 : 7 (IRVKN)
ಕೆಲವರು ಯೊರ್ದನ್ ಹೊಳೆದಾಟಿ ಗಾದ್ಯರ ದೇಶಕ್ಕೂ, ಗಿಲ್ಯಾದ್ ಪ್ರಾಂತ್ಯಕ್ಕೂ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸಂಗಡ ಇದ್ದವರು ಭಯದಿಂದ ನಡುಗುತ್ತ ಅವನನ್ನು ಹಿಂಬಾಲಿಸಿದರು.
1 ಸಮುವೇಲನು 13 : 8 (IRVKN)
ಸೌಲನು ಸಮುವೇಲನ ಆಜ್ಞೆಯಂತೆ ಗಿಲ್ಗಾಲಿನಲ್ಲೇ ಏಳು ದಿನ ಇದ್ದರೂ ಸಮುವೇಲನು ಬರಲಿಲ್ಲ; ಅಷ್ಟರಲ್ಲಿ ಜನರು ಚದರಿಹೋದರು.
1 ಸಮುವೇಲನು 13 : 9 (IRVKN)
ಸೌಲನ ಅವಿಧೇಯತೆ ಮತ್ತು ಸಮುವೇಲನು ಗದರಿಸಿದ್ದು ಆಗ ಸೌಲನು ಜನರಿಂದ ಸರ್ವಾಂಗಹೋಮಕ್ಕೂ, ಸಮಾಧಾನ ಯಜ್ಞಕ್ಕೂ ಬೇಕಾದದ್ದನ್ನು ತರಿಸಿ ಸರ್ವಾಂಗಹೋಮವನ್ನು ಅರ್ಪಿಸಿದನು.
1 ಸಮುವೇಲನು 13 : 10 (IRVKN)
ಅದು ಮುಗಿಯುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸುವುದಕ್ಕೋಸ್ಕರ ಎದುರಿಗೆ ಹೋಗಲು
1 ಸಮುವೇಲನು 13 : 11 (IRVKN)
ಸಮುವೇಲನು ಅವನನ್ನು, “ಇದೇನು ನೀನು ಮಾಡಿದ್ದು?” ಎಂದು ಕೇಳಲು ಅವನು, “ಜನರು ಚದರಿಹೋಗುವುದನ್ನೂ, ನೀನು ನಿಯಮಿತಕಾಲದಲ್ಲಿ ಬಾರದಿರುವುದನ್ನೂ, ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ನಮಗೆ ವಿರೋಧವಾಗಿ ಕೂಡಿಕೊಂಡಿರುವುದನ್ನೂ ನೋಡಿದೆನು.
1 ಸಮುವೇಲನು 13 : 12 (IRVKN)
ಆಗ ನಾನು ‘ಫಿಲಿಷ್ಟಿಯರು ಗಿಲ್ಗಾಲಿನಲ್ಲಿರುವ ನನ್ನ ಬಳಿಗೆ ಬಂದು ನನ್ನ ಮೇಲೆ ಬಿದ್ದಾರು, ನಾನು ಯೆಹೋವನ ದಯೆಯನ್ನು ಬೇಡಿಕೊಳ್ಳಲಿಲ್ಲ’ ಎಂದು, ಭಯಪಟ್ಟು ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಮುಂದಾದೆನು” ಅಂದನು.
1 ಸಮುವೇಲನು 13 : 13 (IRVKN)
ಆಗ ಸಮುವೇಲನು, “ನೀನು ಬುದ್ಧಿಹೀನಕಾರ್ಯವನ್ನು ಮಾಡಿದೆ; ನೀನು ನಿನ್ನ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕೈಕೊಂಡಿದ್ದರೆ ಆತನು ನಿನ್ನ ರಾಜ್ಯವನ್ನು ಇಸ್ರಾಯೇಲ್ಯರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದನು.
1 ಸಮುವೇಲನು 13 : 14 (IRVKN)
ಈಗಲಾದರೋ ನಿನ್ನ ಅರಸುತನವು ನಿಲ್ಲುವುದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಹೋದುದರಿಂದ ಆತನು [‡ ಅ.ಕೃ. 13: 22 ]ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇಮಿಸಿದ್ದಾನೆ” ಎಂದು ಹೇಳಿದನು.
1 ಸಮುವೇಲನು 13 : 15 (IRVKN)
ಅನಂತರ ಸಮುವೇಲನು ಗಿಲ್ಗಾಲನ್ನು ಬಿಟ್ಟು ಬೆನ್ಯಾಮೀನ್ಯರ ಗಿಬೆಯಕ್ಕೆ ಹೋದನು.
1 ಸಮುವೇಲನು 13 : 16 (IRVKN)
ಆಯುಧ ರಹಿತರಾದ ಇಸ್ರಾಯೇಲ್ಯರು ಸೌಲನು ತನ್ನ ಜೊತೆಯಲ್ಲಿದ್ದ ಸೈನಿಕರನ್ನು ಲೆಕ್ಕಿಸಿದಾಗ ಆರು ನೂರು ಪುರುಷರಿದ್ದರು. ಅವರೊಡನೆ ಅವನೂ ಅವನ ಮಗನಾದ ಯೋನಾತಾನನೂ ಬೆನ್ಯಾಮೀನ್ಯರ ಗೆಬದಲ್ಲಿ ಇಳಿದುಕೊಂಡರು. ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡಿದ್ದರು.
1 ಸಮುವೇಲನು 13 : 17 (IRVKN)
ಸುಲಿಗೆ ಮಾಡುವುದಕ್ಕೋಸ್ಕರ ಫಿಲಿಷ್ಟಿಯರ ಪಾಳೆಯದಿಂದ ಮೂರು ಗುಂಪುಗಳು ಹೊರಟು, ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್‌ ನಾಡಿಗೂ,
1 ಸಮುವೇಲನು 13 : 18 (IRVKN)
ಇನ್ನೊಂದು ಗುಂಪು § ಯೆಹೋ. 10:10 ಬೇತ್‌ಹೋರೋನಿನ ಕಡೆಗೂ, ಮತ್ತೊಂದು ಜೆಬೋಯೀಮಿನ ಕಣಿವೆಯ ಕೆಳಗಿರುವ ಅರಣ್ಯವನ್ನು ನೋಡಬಹುದಾದ ಸ್ಥಳಕ್ಕೂ ಹೋದವು.
1 ಸಮುವೇಲನು 13 : 19 (IRVKN)
ಇಬ್ರಿಯರು ಈಟಿಕತ್ತಿಗಳನ್ನು ಮಾಡಿಕೊಳ್ಳಬಾರದೆಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ ಇಸ್ರಾಯೇಲ್‌ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.
1 ಸಮುವೇಲನು 13 : 20 (IRVKN)
ಅವರು ತಮ್ಮ ನೇಗಿಲಿನ ಗುಳ, ಸಲಿಕೆ, ಕೊಡಲಿ, ಗುದ್ದಲಿ ಇವುಗಳನ್ನು ಹರಿತ ಮಾಡಿಸುವುದಕ್ಕೆ ಫಿಲಿಷ್ಟಿಯರ ಹತ್ತಿರವೇ ಹೋಗಬೇಕಿತ್ತು.
1 ಸಮುವೇಲನು 13 : 21 (IRVKN)
ಗುದ್ದಲಿ, ಸಲಿಕೆ, ತ್ರಿಶೂಲ, ಕೊಡಲಿ, ಮುಳ್ಳುಗೋಲು ಇವುಗಳನ್ನು ಹದಮಾಡುವುದಕ್ಕೋಸ್ಕರ ಅವರಲ್ಲಿ * ಅರ. ಹರಿತ ಮಾಡುವ ಕಲ್ಲು ಮಾತ್ರ ಇತ್ತು.
1 ಸಮುವೇಲನು 13 : 22 (IRVKN)
ಹೀಗಿರುವುದರಿಂದ ಯುದ್ಧ ಪ್ರಾರಂಭಿಸಿದಾಗ ಸೌಲ ಮತ್ತು ಯೋನಾತಾನರ ಹೊರತು ಅವರ ಜೊತೆಯಲ್ಲಿದ್ದ ಜನರಲ್ಲಿ ಒಬ್ಬನ ಕೈಯಲ್ಲಾದರೂ, ಕತ್ತಿಯಾಗಲಿ ಬರ್ಜಿಯಾಗಲಿ ಇರಲಿಲ್ಲ.
1 ಸಮುವೇಲನು 13 : 23 (IRVKN)
ಯೋನಾತಾನನ ಶೌರ್ಯ ಫಿಲಿಷ್ಟಿಯರ ಕಾವಲುದಂಡು ಮಿಕ್ಮಾಷಿನ ಕಣಿವೆಯ ಕಡೆಗೆ ಹೊರಟಿತು.

1 2 3 4 5 6 7 8 9 10 11 12 13 14 15 16 17 18 19 20 21 22 23