1 ಸಮುವೇಲನು 17 : 1 (IRVKN)
ಗೊಲ್ಯಾತನನ್ನು ಇಸ್ರಾಯೇಲರಿಗೆ ಸವಾಲು ಹಾಕಿದ್ದು ಫಿಲಿಷ್ಟಿಯರು ಯುದ್ಧ ಮಾಡುವುದಕ್ಕೋಸ್ಕರ ಯೆಹೂದ ದೇಶದ ಸೋಕೋವಿನಲ್ಲಿ ಸೈನ್ಯವನ್ನು ಕೂಡಿಸಿಕೊಂಡು ಬಂದು ಸೋಕೋವಿಗೂ ಅಜೇಕಕ್ಕೂ ಮಧ್ಯದಲ್ಲಿರುವ ಎಫೆಸ್ದಮ್ಮೀಮಿನಲ್ಲಿ ಪಾಳೆಯಮಾಡಿಕೊಂಡರು.
1 ಸಮುವೇಲನು 17 : 2 (IRVKN)
ಸೌಲನೂ, ಇಸ್ರಾಯೇಲ್ಯರೂ ಫಿಲಿಷ್ಟಿಯರೊಡನೆ ಯುದ್ಧಮಾಡುವುದಕ್ಕಾಗಿ ಸೈನ್ಯವನ್ನು ಕೂಡಿಸಿ ಏಲಾ ತಗ್ಗಿನಲ್ಲಿ ಪಾಳೆಯಮಾಡಿಕೊಂಡು ವ್ಯೂಹಕಟ್ಟಿದರು.
1 ಸಮುವೇಲನು 17 : 3 (IRVKN)
ಫಿಲಿಷ್ಟಿಯರು ಒಂದು ಗುಡ್ಡದ ಪಕ್ಕದಲ್ಲಿ, ಇಸ್ರಾಯೇಲರು ಇನ್ನೊಂದು ಗುಡ್ಡದ ಪಕ್ಕದಲ್ಲಿಯೂ ನಿಂತರು. ಅವರ ಮಧ್ಯದಲ್ಲಿ ಒಂದು ಕಣಿವೆ ಇತ್ತು.
1 ಸಮುವೇಲನು 17 : 4 (IRVKN)
ಫಿಲಿಷ್ಟಿಯರ ಪಾಳೆಯದಿಂದ [* ಯೆಹೋ. 11: 22 ]ಗತ್ ಊರಿನವನಾದ † 2 ಸಮು 21: 19. ಗೊಲ್ಯಾತನೆಂಬ ಒಬ್ಬ ರಣಶೂರನು ಹೊರಟುಬಂದನು. ಅವನು ಆರುವರೆ ಮೊಳ ಎತ್ತರವಾಗಿದ್ದನು.
1 ಸಮುವೇಲನು 17 : 5 (IRVKN)
ಅವನ ಶಿರಸ್ತ್ರಾಣವು ತಾಮ್ರದ್ದು. ತಾಮ್ರ ಲೋಹದ ಬಿಲ್ಲೆಗಳಿಂದ ಪರೆಪರೆಯಾಗಿ ಜೋಡಿಸಲ್ಪಟ್ಟ ಅವನ ಕವಚವು ‡ 125 ಪೌಂಡ್ ಅಥವಾ 57 ಕೇಜಿಯಷ್ಟು ತೂಕವುಳ್ಳದ್ದು (ಐದು ಸಾವಿರ ಶೆಕೆಲಿನ ತಾಮ್ರದ ನಾಣ್ಯಗಳಷ್ಟು ತೂಕವಾಗಿತ್ತು.)
1 ಸಮುವೇಲನು 17 : 6 (IRVKN)
ಅವನ ಪಾದರಕ್ಷೆಗಳು, ಹೆಗಲ ಮೇಲಣ ಈಟಿಯೂ ತಾಮ್ರದವು.
1 ಸಮುವೇಲನು 17 : 7 (IRVKN)
ಅವನ ಬರ್ಜಿಯ ಹಿಡಿಕೆಯು ನೇಯಿಗಾರ ಕುಂಟೆಯಷ್ಟು ಗಾತ್ರವಾಗಿತ್ತು. ಅದರ ಅಲಗು ಆರುನೂರು ತೊಲೆ ಕಬ್ಬಿಣದಿಂದ ಮಾಡಿದ್ದು. ಅವನ ಗುರಾಣಿಯನ್ನು ಹೊರುವವನು ಅವನ ಮುಂದೆ ಹೋಗುತ್ತಿದ್ದನು.
1 ಸಮುವೇಲನು 17 : 8 (IRVKN)
ಅವನು ನಿಂತು ಇಸ್ರಾಯೇಲ ಸೈನ್ಯದವರನ್ನು ಕೂಗಿ ಅವರಿಗೆ, “ನೀವು ಯುದ್ಧಮಾಡಲು ಬಂದದ್ದೇಕೆ? ನಾನು ಫಿಲಿಷ್ಟಿಯನು. ನೀವು ಸೌಲನ ಸೇವಕರು. ನಿಮ್ಮಲ್ಲಿ ಒಬ್ಬನನ್ನು ಆರಿಸಿಕೊಂಡು ನನ್ನ ಬಳಿಗೆ ಕಳುಹಿಸಿರಿ.
1 ಸಮುವೇಲನು 17 : 9 (IRVKN)
ಅವನು ನನ್ನೊಡನೆ ಯುದ್ಧಮಾಡಿ ನನ್ನನ್ನು ಕೊಂದರೆ ನಾವು ನಿಮಗೇ ದಾಸರಾಗಿರುವೆವು. ಆದರೆ ನಾನು ಅವನನ್ನು ಸೋಲಿಸಿ ಕೊಂದರೆ ಆಗ ನೀವು ನಮ್ಮ ಗುಲಾಮರಾಗಿ ನಮ್ಮನ್ನು ಸೇವೆಮಾಡುವವರಾಗುವಿರಿ” ಎಂದು ಹೇಳಿದನು.
1 ಸಮುವೇಲನು 17 : 10 (IRVKN)
ಮತ್ತು ಅವನು, “ಈಹೊತ್ತು ಇಸ್ರಾಯೇಲ ಸೈನ್ಯದವರನ್ನು ಕುರಿತು. ನನ್ನೊಡನೆ ಕಾಳಗಕ್ಕೆ ನಿಮ್ಮಲ್ಲಿಂದ ಒಬ್ಬ ಮನುಷ್ಯನನ್ನು ಕಳುಹಿಸಿರಿ ನೋಡೋಣ” ಎಂದು ಸವಾಲು ಹಾಕಿದನು.
1 ಸಮುವೇಲನು 17 : 11 (IRVKN)
ಸೌಲನೂ ಎಲ್ಲಾ ಇಸ್ರಾಯೇಲರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿ ಎದೆಗುಂದಿದವರಾಗಿ ಬಹಳ ಭಯಪಟ್ಟರು.
1 ಸಮುವೇಲನು 17 : 12 (IRVKN)
ಯುದ್ಧ ಪಾಳೆಯದಲ್ಲಿ ದಾವೀದನು ಸೌಲನ ಕಾಲದಲ್ಲಿ ಯೆಹೂದ ಬೇತ್ಲೆಹೇಮ್ ಎಂಬ ಊರಿನ [§ ಆದಿ 35: 19 ]ಎಫ್ರಾತ್ಯನಾದ * ರೂತ. 4: 22. ಇಷಯನೆಂಬ ಒಬ್ಬ ವೃದ್ಧನಿದ್ದನು. ಇವನ ಎಂಟು ಮಂದಿ ಮಕ್ಕಳಲ್ಲಿ ದಾವೀದನು ಒಬ್ಬನು.
1 ಸಮುವೇಲನು 17 : 13 (IRVKN)
ಇವನ ಮೂರು ಹಿರಿಯ ಮಕ್ಕಳು ಸೌಲನ ಜೊತೆಯಲ್ಲಿ ಯುದ್ಧಕ್ಕೆ ಹೋಗಿದ್ದರು. ಅವರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬ, ಎರಡನೆಯ ಮಗನ ಹೆಸರು ಅಬೀನಾದಾಬ, ಮೂರನೆಯವನ ಹೆಸರು ಶಮ್ಮ,
1 ಸಮುವೇಲನು 17 : 14 (IRVKN)
ದಾವೀದನೇ ಎಲ್ಲರಿಗಿಂತಲೂ ಕಿರಿಯನು. ಮೂರು ಮಂದಿ ಹಿರಿ ಮಕ್ಕಳು ಸೌಲನ ಜೊತೆಯಲ್ಲಿ ಯುದ್ಧಕ್ಕೆ ಹೋದ್ದರಿಂದ
1 ಸಮುವೇಲನು 17 : 15 (IRVKN)
ದಾವೀದನು ಸೌಲನನ್ನು ಬಿಟ್ಟು ತನ್ನ ತಂದೆಯ ಕುರಿಗಳನ್ನು ಮೇಯಿಸುವುದಕ್ಕೋಸ್ಕರ ಬೇತ್ಲೆಹೇಮಿಗೆ ಹೋದನು.
1 ಸಮುವೇಲನು 17 : 16 (IRVKN)
ಆ ಫಿಲಿಷ್ಟಿಯನು ನಲ್ವತ್ತು ದಿನ ಉದಯದಲ್ಲಿಯೂ, ಸಾಯಂಕಾಲದಲ್ಲಿಯೂ, ಬಂದು ಅದೇ ಪ್ರಕಾರ ಕೂಗುತ್ತಾ ಸವಾಲು ಹಾಕುತ್ತಾ ಯುದ್ಧಕ್ಕೆ ನಿಲ್ಲುತ್ತಿದ್ದನು.
1 ಸಮುವೇಲನು 17 : 17 (IRVKN)
ಒಂದು ದಿನ ಇಷಯನು ತನ್ನ ಮಗನಾದ ದಾವೀದನಿಗೆ, “ಇಗೋ ಇಲ್ಲಿ † 10 ಕಿಲೋಗ್ರಾಂ. ಮೂವತ್ತು ಸೇರು ಹುರಿದ ಧಾನ್ಯ, ಹತ್ತು ರೊಟ್ಟಿಗಳೂ ಇರುತ್ತವೆ. ಇವುಗಳನ್ನು ತೆಗೆದುಕೊಂಡು ಶೀಘ್ರವಾಗಿ ಪಾಳೆಯಕ್ಕೆ ಹೋಗಿ ನಿನ್ನ ಅಣ್ಣಂದಿರಿಗೆ ಕೊಡು.
1 ಸಮುವೇಲನು 17 : 18 (IRVKN)
ಇದಲ್ಲದೆ ಇಲ್ಲಿ ಹತ್ತು ಗಿಣ್ಣದ ಉಂಡೆಗಳಿವೆ, ಇವುಗಳನ್ನು ಅವರ ಸಹಸ್ರಾಧಿಪತಿಗೆ ಕೊಡು. ಬರುವಾಗ ನಿನ್ನ ಅಣ್ಣಂದಿರ ಕ್ಷೇಮಸಮಾಚಾರವನ್ನು ವಿಚಾರಿಸಿಕೊಂಡು ಅವರಿಂದ ಒಂದು ಗುರುತನ್ನು ತೆಗೆದುಕೊಂಡು ಬಾ.
1 ಸಮುವೇಲನು 17 : 19 (IRVKN)
ಸೌಲನೂ, ಇಸ್ರಾಯೇಲರೂ ಏಲಾ ತಗ್ಗಿನಲ್ಲಿ ಫಿಲಿಷ್ಟಿಯರೊಡನೆ ಯುದ್ಧಮಾಡುತ್ತಿದ್ದಾರಲ್ಲಾ” ಎಂದು ಹೇಳಿದನು.
1 ಸಮುವೇಲನು 17 : 20 (IRVKN)
ದಾವೀದನು ಮರುದಿನ ಬೆಳಿಗ್ಗೆ ಎದ್ದು ಕುರಿ ಕಾಯುವವನಿಗೆ ಕುರಿಗಳನ್ನು ಒಪ್ಪಿಸಿ, ತನ್ನ ತಂದೆಯಾದ ಇಷಯನು ಹೇಳಿದವುಗಳನ್ನು ತೆಗೆದುಕೊಂಡು ಸೈನ್ಯವು ಹೊರಟು ಯುದ್ಧಕ್ಕಾಗಿ ಅರ್ಭಟಿಸುವ ಹೊತ್ತಿನಲ್ಲಿ ‡ 1 ಸಮು 26:5 ಪಾಳೆಯದ ರಥಗಳು ನಿಂತಿದ್ದ ಸ್ಥಳಕ್ಕೆ ಬಂದನು.
1 ಸಮುವೇಲನು 17 : 21 (IRVKN)
ಇಸ್ರಾಯೇಲರು, ಫಿಲಿಷ್ಟಿಯರೂ ಎದುರೆದುರು ವ್ಯೂಹಕಟ್ಟುವಷ್ಟರಲ್ಲಿ
1 ಸಮುವೇಲನು 17 : 22 (IRVKN)
ದಾವೀದನು ತಾನು ತಂದವುಗಳನ್ನು ಸಾಮಾನು ಕಾಯುವವನ ಬಳಿಯಲ್ಲಿಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸುತ್ತಾ ಅವರೊಡನೆ ಮಾತನಾಡುತ್ತಿದ್ದನು.
1 ಸಮುವೇಲನು 17 : 23 (IRVKN)
ಅಷ್ಟರಲ್ಲಿ ಗತ್ ಊರಿನ ಯುದ್ಧವೀರನಾದ ಗೊಲ್ಯಾತನೆಂಬ ಆ ಫಿಲಿಷ್ಟಿಯನು ತನ್ನ ಸೈನ್ಯದಿಂದ ಹೊರಗೆ ಬಂದು ಮುಂಚಿನಂತೆಯೇ ಕೂಗಿದನು. ದಾವೀದನು ಅವನ ಮಾತುಗಳನ್ನು ಕೇಳಿದನು.
1 ಸಮುವೇಲನು 17 : 24 (IRVKN)
ಇಸ್ರಾಯೇಲರು ಅವನನ್ನು ನೋಡಿ ಬಹಳವಾಗಿ ಭಯಪಟ್ಟು ಅಲ್ಲಿಂದ ಓಡಿಹೋದರು.
1 ಸಮುವೇಲನು 17 : 25 (IRVKN)
ಅವರು, “ಇಸ್ರಾಯೇಲ್ಯರಾದ ನಮ್ಮನ್ನು ಹೀಯಾಳಿಸುವುದಕ್ಕೋಸ್ಕರ ಬಂದಿರುವ ಈ ಮನುಷ್ಯನನ್ನು ಕಂಡಿರಾ? ಯಾವನು ಇವನನ್ನು ಕೊಲ್ಲುವನೋ ಅಂಥವನಿಗೆ ಅರಸನು ಅಪಾರದ್ರವ್ಯದೊಡನೆ [§ ಯೆಹೋ. 15: 16 ]ತನ್ನ ಮಗಳನ್ನು ಕೊಟ್ಟು ಮದುವೆ ಮಾಡುವನು. ಇದಲ್ಲದೆ ಅವನ ತಂದೆಯ ಕುಟುಂಬವನ್ನು ಎಲ್ಲಾ ತೆರಿಗೆಯಿಂದ ವಿಮೋಚಿಸುವನು” ಎಂದು ಮಾತನಾಡಿಕೊಳ್ಳುತ್ತಿದ್ದರು.
1 ಸಮುವೇಲನು 17 : 26 (IRVKN)
ದಾವೀದನು, “[* ಧರ್ಮೋ 5: 26 ]ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವುದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಏನು ಸಿಕ್ಕುವುದು ಹೇಳಿರಿ” ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಿದನು,
1 ಸಮುವೇಲನು 17 : 27 (IRVKN)
ಅದಕ್ಕೆ ಅವರು ಮುಂಚಿನಂತೆ ಇಂಥಿಂಥದು ದೊರಕುವುದೆಂದು ಉತ್ತರಕೊಟ್ಟರು.
1 ಸಮುವೇಲನು 17 : 28 (IRVKN)
ದಾವೀದನು ಜನರ ಸಂಗಡ ಹೀಗೆ ಮಾತನಾಡುತ್ತಿರುವುದನ್ನು ಅವನ ಹಿರಿಯ ಅಣ್ಣನಾದ ಎಲೀಯಾಬನು ಕೇಳಿ ಕೋಪಗೊಂಡು, “ನೀನು ಇಲ್ಲಿಗೆ ಬಂದದ್ದೇಕೆ? ಅಡವಿಯಲ್ಲಿರುವ ನಾಲ್ಕಾರು ಕುರಿಗಳನ್ನು ಯಾರಿಗೊಪ್ಪಿಸಿ ಬಂದಿರುವೆ. ನಿನ್ನ ಸೊಕ್ಕು, ತುಂಟತನವು ನನಗೆ ಗೊತ್ತಿದೆ. ನೀನು ಯುದ್ಧವನ್ನು ನೋಡುವುದಕ್ಕೆ ಬಂದಿದ್ದೀ” ಎಂದು ಅವನನ್ನು ಗದರಿಸಿದನು.
1 ಸಮುವೇಲನು 17 : 29 (IRVKN)
ಆಗ ದಾವೀದನು, “ನಾನೇನು ತಪ್ಪು ಮಾಡಿದೆನು? ಸುಮ್ಮನೆ ಮಾತನಾಡಿದೆನಷ್ಟೆ” ಎಂದು ಹೇಳಿ
1 ಸಮುವೇಲನು 17 : 30 (IRVKN)
ಅವನನ್ನು ಬಿಟ್ಟು ಬೇರೆ ಕಡೆಗೆ ಹೋಗಿ ಹಾಗೆಯೇ ವಿಚಾರಿಸಲು ಜನರು ಮುಂಚಿನಂತೆಯೇ ಉತ್ತರಕೊಟ್ಟರು.
1 ಸಮುವೇಲನು 17 : 31 (IRVKN)
ದಾವೀದನು ಈ ಪ್ರಕಾರ ವಿಚಾರಿಸುತ್ತಿರುವುದನ್ನು ಕೇಳಿದವರು ಸೌಲನಿಗೆ ತಿಳಿಸಿದರು. ಅವನು ದಾವೀದನನ್ನು ಕರೆದುಕೊಂಡು ಬರಲು ಹೇಳಿದನು.
1 ಸಮುವೇಲನು 17 : 32 (IRVKN)
ದಾವೀದನು ಸೌಲನಿಗೆ, “ಆ ಫಿಲಿಷ್ಟಿಯನ ನಿಮಿತ್ತವಾಗಿ ಯಾವನೂ ಧೈರ್ಯಗೆಡಬಾರದು ನಿನ್ನ ಸೇವಕನಾದ ನಾನು ಹೋಗಿ ಅವನೊಡನೆ ಯುದ್ಧಮಾಡುವೆನು” ಅನ್ನಲು,
1 ಸಮುವೇಲನು 17 : 33 (IRVKN)
ಸೌಲನು ಅವನಿಗೆ, “ಅವನೊಡನೆ ಕಾದಾಡಲಾರೆ, ನೀನು ಇನ್ನೂ ಹುಡುಗನು ಅವನಾದರೋ ಚಿಕ್ಕಂದಿನಿಂದಲೇ ಯುದ್ಧವೀರನು” ಎಂದು ಹೇಳಿದನು.
1 ಸಮುವೇಲನು 17 : 34 (IRVKN)
ಆಗ ದಾವೀದನು ಅವನಿಗೆ, “ನಿನ್ನ ಸೇವಕನಾದ ನಾನು ನನ್ನ ತಂದೆಯ ಕುರಿಗಳನ್ನು ಕಾಯುತ್ತಿರುವಾಗ ಸಿಂಹವಾಗಲಿ, ಕರಡಿಯಾಗಲಿ ಹಿಂಡಿನಲ್ಲಿನ ಕುರಿಮರಿಯನ್ನು ಹಿಡಿದುಕೊಂಡು ಹೋಗಲು ಬಂದರೆ
1 ಸಮುವೇಲನು 17 : 35 (IRVKN)
ನಾನು ಒಡನೇ ಬೆನ್ನಟ್ಟಿ, ಅದನ್ನು ಹೊಡೆದು, ಕುರಿಮರಿಯನ್ನು ಕಿತ್ತುಕೊಳ್ಳುತ್ತಿದ್ದೆನು. ಅದು ಹಿಂದಿರುಗಿ ನನ್ನ ಮೇಲೆ ಬೀಳಲು ಬಂದಾಗ ಅದರ ಗದ್ದಹಿಡಿದು ಬಡಿದು ಕೊಂದುಹಾಕುತ್ತಿದ್ದೆನು.
1 ಸಮುವೇಲನು 17 : 36 (IRVKN)
ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ, ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.
1 ಸಮುವೇಲನು 17 : 37 (IRVKN)
[† 2 ತಿಮೊ. 4: 17 ]ನನ್ನನ್ನು ಅಂಥ ಸಿಂಹದ ಮತ್ತು ಕರಡಿಯ ಉಗುರುಗಳಿಗೆ ತಪ್ಪಿಸಿದ ಯೆಹೋವನು ಈ ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವನು” ಎಂದನು. ಆಗ ಸೌಲನು ದಾವೀದನಿಗೆ “ಹೋಗು ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿ,
1 ಸಮುವೇಲನು 17 : 38 (IRVKN)
ಅವನಿಗೆ ತನ್ನ ಯುದ್ಧ ವಸ್ತ್ರಗಳನ್ನು, ಕವಚವನ್ನೂ ತೊಣಿಸಿ, ತಲೆಗೊಂದು ತಾಮ್ರದ ಶಿರಸ್ತ್ರಾಣವನ್ನಿಟ್ಟನು.
1 ಸಮುವೇಲನು 17 : 39 (IRVKN)
ದಾವೀದನು ಯುದ್ಧ ವಸ್ತ್ರದ ಮೇಲೆ ಕತ್ತಿಯನ್ನೂ ಬಿಗಿದುಕೊಂಡ ನಂತರ ನಡೆಯಲು ಸಾಧ್ಯವಾಗುತ್ತದೆಯೇ ಎಂದು ಪರೀಕ್ಷಿಸಿದ ಮೇಲೆ ಸೌಲನಿಗೆ, “ನನಗೆ ಅಭ್ಯಾಸವಿಲ್ಲದೆ ಇರುವುದರಿಂದ ಇವುಗಳನ್ನು ಧರಿಸಿಕೊಂಡು ನಡೆಯಲಾರೆ” ಎಂದು ಹೇಳಿ ಅವುಗಳನ್ನು ತೆಗೆದಿಟ್ಟು
1 ಸಮುವೇಲನು 17 : 40 (IRVKN)
ತನ್ನ ಕೋಲನ್ನು ತೆಗೆದುಕೊಂಡು ಹೊರಟು, ಹಳ್ಳದಲ್ಲಿನ ಐದು ನುಣುಪುಕಲ್ಲುಗಳನ್ನು ಆರಿಸಿಕೊಂಡು, ಅವುಗಳನ್ನು ಕುರುಬರ ಪದ್ಧತಿಯಂತೆ ತನಗಿರುವ ಸೊಂಟದ ಚೀಲದಲ್ಲಿ ಹಾಕಿ ಕೈಯಲ್ಲಿ [‡ ನ್ಯಾಯ 20: 16 ]ಕವಣೆಯನ್ನು ಹಿಡಿದು ಫಿಲಿಷ್ಟಿಯನ ಬಳಿಗೆ ಹೋದನು.
1 ಸಮುವೇಲನು 17 : 41 (IRVKN)
ದಾವೀದನು ಗೊಲ್ಯಾತನನ್ನು ಕೊಂದುಹಾಕಿದು ಇತ್ತ ಫಿಲಿಷ್ಟಿಯನೂ ದಾವೀದನ ಸಮೀಪಕ್ಕೆ ಬಂದನು. ಗುರಾಣಿ ಹೊರುವವರು ಅವನ ಮುಂದೆ ಇದ್ದರು.
1 ಸಮುವೇಲನು 17 : 42 (IRVKN)
ಫಿಲಿಷ್ಟಿಯನು ಕೆಂಬಣ್ಣದವನೂ, ಸುಂದರನೂ, ಯೌವನಸ್ಥನೂ ಆದ ದಾವೀದನನ್ನು ನೋಡಿ ತಿರಸ್ಕಾರದಿಂದ ಅವನಿಗೆ,
1 ಸಮುವೇಲನು 17 : 43 (IRVKN)
“ನೀನು ಕೋಲುಹಿಡಿದು ನನ್ನ ಬಳಿಗೆ ಬರುವುದೇನು? [§ 2 ಅರಸು. 2: 13 ]ನಾನು ನಾಯಿಯೋ” ಎಂದು ಹೇಳಿ ಅವನನ್ನು ತನ್ನ ದೇವರ ಹೆಸರಿನಲ್ಲಿ ಶಪಿಸಿ,
1 ಸಮುವೇಲನು 17 : 44 (IRVKN)
“ಇಲ್ಲಿ ಬಾ, ನಿನ್ನ ಮಾಂಸವನ್ನು ಮೃಗ ಪಕ್ಷಿಗಳಿಗೆ ಹಂಚಿಕೊಡುತ್ತೇನೆ” ಅಂದನು.
1 ಸಮುವೇಲನು 17 : 45 (IRVKN)
ಆಗ ದಾವೀದನು ಅವನಿಗೆ, “ನೀನು ಈಟಿ, ಕತ್ತಿ, ಬರ್ಜಿಗಳೊಡನೆ ನನ್ನ ಬಳಿಗೆ ಬರುತ್ತೀ. ನಾನಾದರೋ ನೀನು ಹೀಯಾಳಿಸಿದಂಥ ಸೇನಾಧೀಶ್ವರನೂ, ಇಸ್ರಾಯೇಲ್ಯರ ಯುದ್ಧಭಟರ ದೇವರೂ ಆಗಿರುವ ಯೆಹೋವನ ನಾಮದೊಡನೆ ನಿನ್ನ ಬಳಿಗೆ ಬಂದಿದ್ದೇನೆ.
1 ಸಮುವೇಲನು 17 : 46 (IRVKN)
ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವನು. ನಾನು ನಿನ್ನನ್ನು ಕೊಂದು ನಿನ್ನ ತಲೆಯನ್ನು ಕಡಿದು ಹಾಕಿ ಫಿಲಿಷ್ಟಿಯ ಸೈನ್ಯದ ಶವಗಳನ್ನು ಮೃಗ ಪಕ್ಷಿಗಳಿಗೆ ಹಂಚಿಕೊಡುವೆನು. [* ಯೆಹೋ. 4: 24 ]ಇದರಿಂದ ಇಸ್ರಾಯೇಲರೊಳಗೆ ದೇವರಿದ್ದಾನೆಂಬುದು ಭೂಲೋಕದವರಿಗೆಲ್ಲಾ ತಿಳಿದುಬರುವುದು.
1 ಸಮುವೇಲನು 17 : 47 (IRVKN)
[† ಕೀರ್ತ 44:6; ಜೆಕ. 4: 6 ]ಯೆಹೋವನು ಈಟಿಕತ್ತಿಗಳಿಲ್ಲದೇ ರಕ್ಷಿಸಬಲ್ಲನೆಂಬುದು ಇಲ್ಲಿ ಕೂಡಿರುವವರಿಗೆಲ್ಲಾ ತಿಳಿದುಬರುವುದು. ಯಾಕೆಂದರೆ ಯುದ್ಧಫಲವು ಯೆಹೋವನ ಕೈಯಲ್ಲಿದೆ. ಆತನು ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವನು” ಅಂದನು.
1 ಸಮುವೇಲನು 17 : 48 (IRVKN)
ಕೂಡಲೇ ಆ ಫಿಲಿಷ್ಟಿಯನು ಹೊರಟು ದಾವೀದನೊಡನೆ ಯುದ್ಧಮಾಡುವುದಕ್ಕೆ ಸಮೀಪಿಸಿದಾಗ ದಾವೀದನು ಫಿಲಿಷ್ಟಿಯರ ಸೈನ್ಯದ ಕಡೆಗೆ ಓಡಿಹೋಗಿ ಆ ಫಿಲಿಷ್ಟಿಯನನ್ನು ಸಂಧಿಸಿ,
1 ಸಮುವೇಲನು 17 : 49 (IRVKN)
ಚೀಲದಲ್ಲಿ ಕೈ ಹಾಕಿ, ಒಂದು ಕಲ್ಲನ್ನು ತೆಗೆದು ಅವನ ಹಣೆಗೆ ಗುರಿಯಿಟ್ಟು ಕವಣೆಯನ್ನು ಬೀಸಿ ಹೊಡೆಯಲು ಕಲ್ಲು ಅವನ ಹಣೆಯೊಳಗೆ ಹೊಕ್ಕಿತು. ಅವನು ಬೋರಲುಬಿದ್ದನು
1 ಸಮುವೇಲನು 17 : 50 (IRVKN)
ಕೂಡಲೇ ಅವನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನು ತೆಗೆದುಕೊಂಡು, ಅದರಿಂದಲೇ ಅವನ ತಲೆಯನ್ನು ಕತ್ತರಿಸಿ, ಅವನನ್ನು ಸಾಯಿಸಿದನು.
1 ಸಮುವೇಲನು 17 : 51 (IRVKN)
ಈ ಪ್ರಕಾರ ದಾವೀದನು ಕತ್ತಿಯಿಂದಲ್ಲ ಬರೀ ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನನ್ನು ಸೋಲಿಸಿ, ಕೊಂದು ಹಾಕಿದನು ಫಿಲಿಷ್ಟಿಯರು ತಮ್ಮ ರಣವೀರನು ಸತ್ತುಹೋದದ್ದನ್ನು ಕಂಡು ಓಡಿಹೋದರು.
1 ಸಮುವೇಲನು 17 : 52 (IRVKN)
ಇಸ್ರಾಯೇಲರು ಯೆಹೂದ್ಯರು ಎದ್ದು ಆರ್ಭಟಿಸಿ ಫಿಲಿಷ್ಟಿಯರನ್ನು ತಗ್ಗಿನ ದಾರಿಯವರೆಗೂ [‡ ಯೆಹೋ. 15: 11 ]ಎಕ್ರೋನಿನ ಬಾಗಿಲುಗಳವರೆಗೂ ಹಿಂದಟ್ಟಿದರು. ಫಿಲಿಷ್ಟಿಯರ ಹೆಣಗಳು ಶಾರಯಿಮಿನಿಂದ § ಗತ್ ಕಣಿವೆ. ಗತ್ ಎಕ್ರೋನ್ ಪಟ್ಟಣಗಳವರೆಗೂ ಬಿದ್ದಿದ್ದವು.
1 ಸಮುವೇಲನು 17 : 53 (IRVKN)
ಅನಂತರ ಇಸ್ರಾಯೇಲರು ಹಿಂತಿರುಗಿ ಬಂದು ಫಿಲಿಷ್ಟಿಯರ ಪಾಳೆಯವನ್ನು ಸೂರೆಮಾಡಿದರು.
1 ಸಮುವೇಲನು 17 : 54 (IRVKN)
ದಾವೀದನು ಆ ಫಿಲಿಷ್ಟಿಯನ ತಲೆಯನ್ನು ಯೆರೂಸಲೇಮಿಗೆ ಒಯ್ದನು. ಅವನ ಆಯುಧಗಳನ್ನು ತನ್ನ ಗುಡಾರದಲ್ಲಿಟ್ಟುಕೊಂಡನು.
1 ಸಮುವೇಲನು 17 : 55 (IRVKN)
ಸೌಲ ದಾವೀದರ ಪರಿಚಯ. ದಾವೀದನು ಫಿಲಿಷ್ಟಿಯರೊಡನೆ ಯುದ್ಧಮಾಡುವುದಕ್ಕೆ ಹೊರಟದ್ದನ್ನು ಸೌಲನು ಕಂಡು ತನ್ನ ಸೇನಾಪತಿಯಾದ ಅಬ್ನೇರನನ್ನು, “ಅಬ್ನೇರನೇ ಈ ಹುಡುಗನು ಯಾರ ಮಗನು?” ಎಂದು ಕೇಳಿದ್ದಕ್ಕೆ ಅವನು ಸೌಲನಿಗೆ, “ಅರಸನೇ ನಿನ್ನ ಜೀವದಾಣೆ ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟನು.
1 ಸಮುವೇಲನು 17 : 56 (IRVKN)
ಆಗ ಅರಸನು ಅವನಿಗೆ, “ಆ ಪ್ರಾಯಸ್ಥನು ಯಾರ ಮಗನೆಂದು ವಿಚಾರಿಸು” ಎಂದು ಆಜ್ಞಾಪಿಸಿದನು.
1 ಸಮುವೇಲನು 17 : 57 (IRVKN)
ದಾವೀದನು ಫಿಲಿಷ್ಟಿಯನನ್ನು ಕೊಂದು ಅವನ ತಲೆಯನ್ನು ಹಿಡಿದುಕೊಂಡು ಹಿಂದಿರುಗಿ ಬರುವಾಗ ಅಬ್ನೇರನು ಅವನನ್ನು ಕರೆದು ಸೌಲನ ಮುಂದೆ ನಿಲ್ಲಿಸಿದನು.
1 ಸಮುವೇಲನು 17 : 58 (IRVKN)
ಸೌಲನು ಅವನನ್ನು, “ಹುಡುಗನೇ ನೀನು ಯಾರ ಮಗನು?” ಎಂದು ಕೇಳಿದ್ದಕ್ಕೆ ಅವನು, “ನಾನು ಬೇತ್ಲೆಹೇಮಿನವನೂ ನಿನ್ನ ಸೇವಕನೂ ಆದ ಇಷಯನ ಮಗನು” ಎಂದು ಉತ್ತರಕೊಟ್ಟನು.
❮
❯