1 ಸಮುವೇಲನು 18 : 1 (IRVKN)
ದಾವೀದ ಯೋನಾತಾನರ ಗೆಳೆತನ ದಾವೀದನು ಸೌಲನೊಡನೆ ಮಾತನಾಡಿ ಮುಗಿಸಿದ ಮೇಲೆ [* ಆದಿ 44: 30 ]ಯೋನಾತಾನನ ಪ್ರಾಣವು ದಾವೀದನ ಪ್ರಾಣದೊಡನೆ ಒಂದಾಯಿತು. ಧರ್ಮೋ 13: 6. ಅವನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು.
1 ಸಮುವೇಲನು 18 : 2 (IRVKN)
ಆ ದಿನದಿಂದ ಸೌಲನು ದಾವೀದನನ್ನು ಅವನ ತಂದೆಯ ಮನೆಗೆ ಹೋಗಗೊಡದೇ, ತನ್ನ ಬಳಿಯಲ್ಲೇ ಇಟ್ಟುಕೊಂಡನು.
1 ಸಮುವೇಲನು 18 : 3 (IRVKN)
ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸಿದ್ದರಿಂದ ಅವನೊಡನೆ ಸ್ನೇಹದ ಒಪ್ಪಂದ ಮಾಡಿಕೊಂಡನು.
1 ಸಮುವೇಲನು 18 : 4 (IRVKN)
ಇದಲ್ಲದೆ ಅವನು ತನ್ನ ಮೈಮೇಲಿದ್ದ ನಿಲುವಂಗಿಯನ್ನು ತನ್ನ ಯುದ್ಧವಸ್ತ್ರಗಳನ್ನು, ಕತ್ತಿ, ಬಿಲ್ಲು, ನಡುಕಟ್ಟುಗಳನ್ನೂ ದಾವೀದನಿಗೆ ಕೊಟ್ಟನು.
1 ಸಮುವೇಲನು 18 : 5 (IRVKN)
ದಾವೀದನಾದರೋ ಸೌಲನು ಎಲ್ಲಿಗೆ ಕಳುಹಿಸಿದರೂ ಹೋಗಿ ಎಲ್ಲವನ್ನು ವಿವೇಕದಿಂದ ನಡೆಸುತ್ತಿದ್ದನು. ಸೌಲನು ಇವನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇದು ಅವನ ಸೇವಕರಿಗೂ, ಎಲ್ಲಾ ಜನರಿಗೂ ಮೆಚ್ಚಿಗೆಯಾಯಿತು.
1 ಸಮುವೇಲನು 18 : 6 (IRVKN)
ಸೌಲನು ದಾವೀದನನ್ನು ದ್ವೇಷಿಸಿದ್ದು ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ, ಸರ್ವಜನರೊಡನೆ ಹಿಂದಿರುಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ [‡ ವಿಮೋ 15:20, 21 ]ಸ್ತ್ರೀಯರೂ ಹೊರಗೆ ಬಂದು ದಮ್ಮಡಿತಾಳಗಳನ್ನು ಹಿಡಿದು, ಸಂತೋಷದಿಂದ ಹಾಡುತ್ತಾ, ಕುಣಿಯುತ್ತಾ, ಅರಸನಾದ ಸೌಲನನ್ನು ಎದುರುಗೊಂಡರು.
1 ಸಮುವೇಲನು 18 : 7 (IRVKN)
ಅವರು ಹಾಡುತ್ತಾ, ಕೊಂಡಾಡುತ್ತಾ, “ಸೌಲನು ಸಾವಿರ ಶತ್ರುಗಳನ್ನು ಕೊಂದನು. ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು” ಎಂದು ಹಾಡಿದರು.
1 ಸಮುವೇಲನು 18 : 8 (IRVKN)
ಈ ಮಾತುಗಳ ದೆಸೆಯಿಂದ ಸೌಲನಿಗೆ ಬಹು ಅಸೂಯೆ ಉಂಟಾಗಿ ದಾವೀದನ ಮೇಲೆ ಕೋಪಗೊಂಡನು. ಅವನು “ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನೆಂದೂ, ನಾನು ಸಾವಿರಾರು ಶತ್ರುಗಳನ್ನು ಕೊಂದೆನೆಂದೂ ಹಾಡುತ್ತಾರಲ್ಲಾ, ರಾಜತ್ವದ ಹೊರತು ಅವನಿಗೆ ಇನ್ನೇನು ಕಡಿಮೆಯಾಯಿತು” ಅಂದುಕೊಂಡು
1 ಸಮುವೇಲನು 18 : 9 (IRVKN)
ಅಂದಿನಿಂದ ಅವನು ದಾವೀದನನ್ನು ಸಂಶಯದಿಂದ ನೋಡುತ್ತಿದ್ದನು.
1 ಸಮುವೇಲನು 18 : 10 (IRVKN)
ಮರುದಿನ ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದದ್ದರಿಂದ ಅವನು ಬುದ್ಧಿಗೆಟ್ಟು ಮನೆಯೊಳಗೆ ಕೂಗುತ್ತಿದ್ದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ದಾವೀದನು ವಾಡಿಕೆಯ ಪ್ರಕಾರ ಕಿನ್ನರಿಯನ್ನು ನುಡಿಸುತ್ತಾ ಇದ್ದನು.
1 ಸಮುವೇಲನು 18 : 11 (IRVKN)
ಆಗ ಸೌಲನು ದಾವೀದನನ್ನು ಗೋಡೆಗೆ ಸೇರಿಕೊಳ್ಳುವ ಹಾಗೆ ತಿವಿಯುವೆನು ಎಂದುಕೊಂಡು ಈಟಿಯನ್ನು ಎಸೆದನು. ದಾವೀದನು ಎರಡು ಸಾರಿ ತಪ್ಪಿಸಿಕೊಂಡನು.
1 ಸಮುವೇಲನು 18 : 12 (IRVKN)
ಯೆಹೋವನು ಸೌಲನನ್ನು ಬಿಟ್ಟು ದಾವೀದನ ಸಂಗಡ ಇದ್ದುದರಿಂದ ಸೌಲನು ದಾವೀದನಿಗೆ ಭಯಪಟ್ಟು,
1 ಸಮುವೇಲನು 18 : 13 (IRVKN)
ಅವನನ್ನು ತನ್ನ ಸಾನ್ನಿಧ್ಯಸೇವೆಯಿಂದ ತಪ್ಪಿಸಿ, ಸೈನ್ಯದಲ್ಲಿ ಸಹಸ್ರಾಧಿಪತಿಯನ್ನಾಗಿ ನೇಮಿಸಿದನು. ಹೀಗೆ ದಾವೀದನು ಜನರ ಸಂಗಡ ಹೋಗುತ್ತಾ ಬರುತ್ತಾ ಇದ್ದನು.
1 ಸಮುವೇಲನು 18 : 14 (IRVKN)
ಯೆಹೋವನು ಅವನ ಸಂಗಡ ಇದ್ದದರಿಂದ ದಾವೀದನು ಎಲ್ಲಾ ಕಾರ್ಯಗಳನ್ನು ವಿವೇಕದಿಂದ ನಡೆಸುತ್ತಿದ್ದನು.
1 ಸಮುವೇಲನು 18 : 15 (IRVKN)
ಇದನ್ನು ನೋಡಿ ಸೌಲನು ದಾವೀದನಿಗೆ ಬಹಳವಾಗಿ ಹೆದರಿಕೊಂಡನು.
1 ಸಮುವೇಲನು 18 : 16 (IRVKN)
ಆದರೆ ಇಸ್ರಾಯೇಲರೂ, ಯೆಹೂದ್ಯರೂ ತಮ್ಮ ಸಂಗಡ ಹೋಗುತ್ತಾ ಬರುತ್ತಾ ಇದ್ದ ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದರು.
1 ಸಮುವೇಲನು 18 : 17 (IRVKN)
ದಾವೀದನು ಸೌಲನ ಅಳಿಯನಾದದ್ದು ಒಂದು ದಿನ ಸೌಲನು, ಇವನು ನನ್ನ ಕೈಯಿಂದಲ್ಲ ಫಿಲಿಷ್ಟಿಯರ ಕೈಯಿಂದ ಸಾಯಲಿ ಎಂದು ಆಲೋಚಿಸಿಕೊಂಡು ದಾವೀದನಿಗೆ, “ನನ್ನ ವೀರನಾಗಿ ಹೋಗಿ ಯೆಹೋವನ ಯುದ್ಧಗಳನ್ನು ನಡಿಸು. ನಾನು ನನ್ನ ಹಿರೀ ಮಗಳಾದ ಮೇರಬಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ” ಅಂದನು.
1 ಸಮುವೇಲನು 18 : 18 (IRVKN)
ಅದಕ್ಕೆ ದಾವೀದನು “ಅರಸನ ಅಳಿಯನಾಗುವುದಕ್ಕೆ ನಾನು ಎಷ್ಟರವನು? ಇಸ್ರಾಯೇಲರಲ್ಲಿ ನನ್ನ ತಂದೆಯ ಕುಟುಂಬವೂ ಸಮಾನವೇ?” ಎಂದನು.
1 ಸಮುವೇಲನು 18 : 19 (IRVKN)
ಸೌಲನು ತನ್ನ ಮಗಳಾದ ಮೇರಬಳನ್ನು ದಾವೀದನಿಗೆ ಕೊಡತಕ್ಕ ಕಾಲ ಬಂದಾಗ ಅವನು ಅವಳನ್ನು ಮೆಹೋಲದ ಅದ್ರೀಯೇಲ ಎಂಬವನಿಗೆ ಮದುವೆಮಾಡಿ ಕೊಟ್ಟನು.
1 ಸಮುವೇಲನು 18 : 20 (IRVKN)
ಸೌಲನ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸಿದಳು. ಇದು ಸೌಲನಿಗೆ ತಿಳಿದಾಗ ಅವನಿಗೆ ಸಂತೋಷವಾಯಿತು.
1 ಸಮುವೇಲನು 18 : 21 (IRVKN)
ಅವಳು ದಾವೀದನಿಗೆ ಉರಲಾಗಿರುವಂತೆಯೂ, ಅವನು ಫಿಲಿಷ್ಟಿಯರ ಕೈಗೆ ಸಿಕ್ಕಿಬೀಳುವಂತೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡು ಅವನಿಗೆ, “ನೀನು ನನ್ನ ಅಳಿಯನಾಗುವುದಕ್ಕೆ ಈಗ ಎರಡನೆಯ ಸಂದರ್ಭವುಂಟಾಯಿತು” ಎಂದು ಹೇಳಿದನು.
1 ಸಮುವೇಲನು 18 : 22 (IRVKN)
ಅವನು ತನ್ನ ಸೇವಕರಿಗೆ, “ನೀವು ದಾವೀದನಿಗೆ ಗುಪ್ತವಾಗಿ, ‘ಅರಸನಿಗೆ ನಿನ್ನನ್ನು ಒಲಿಯುತ್ತಾನೆ, ಅವನ ಸೇವಕರು ನಿನ್ನನ್ನು ಪ್ರೀತಿಸುತ್ತಾರೆ. ನೀನು ಅರಸನ ಅಳಿಯನಾಗು’ ಎಂದು ಹೇಳಿರಿ” ಅಂದನು.
1 ಸಮುವೇಲನು 18 : 23 (IRVKN)
ಆ ಸೇವಕರು ದಾವೀದನಿಗೆ ಹಾಗೆಯೇ ಹೇಳಿದಾಗ ಅವನು, “[§ ಅರಣ್ಯ 16: 9 ]ಅರಸನ ಅಳಿಯನಾಗುವುದು ಸಾಧಾರಣವಾದ ಸಂಗತಿಯೆಂದು ನೆನಸುತ್ತೀರೋ? ನಾನು ದರಿದ್ರನೂ, ಅಲ್ಪನೂ ಆಗಿರುತ್ತೆನಲ್ಲಾ” ಎಂದು ಉತ್ತರ ಕೊಟ್ಟನು.
1 ಸಮುವೇಲನು 18 : 24 (IRVKN)
ಸೇವಕರು ದಾವೀದನ ಮಾತುಗಳನ್ನು ಸೌಲನಿಗೆ ತಿಳಿಸಿದರು.
1 ಸಮುವೇಲನು 18 : 25 (IRVKN)
ಆಗ ಅವನು ಅವರಿಗೆ, “ನೀವು ಹೋಗಿ ದಾವೀದನಿಗೆ, ‘ಅರಸನು ತೆರವನ್ನು ಅಪೇಕ್ಷಿಸುವುದಿಲ್ಲ. ತನ್ನ ಶತ್ರುಗಳಾದ ಫಿಲಿಷ್ಟಿಯರಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರು ಮಂದಿಯ ಮುಂದೊಗಲನ್ನು ತಂದುಕೊಡಬೇಕು ಅನ್ನುತ್ತಾನೆ’ ಎಂದು ಹೇಳಿರಿ” ಎಂದು ಆಜ್ಞಾಪಿಸಿದನು. ದಾವೀದನನ್ನು ಫಿಲಿಷ್ಟಿಯರಿಂದ ಕೊಲ್ಲಿಸಬೇಕೆಂಬುದೇ ಅವನ ಉದ್ದೇಶವಾಗಿತ್ತು.
1 ಸಮುವೇಲನು 18 : 26 (IRVKN)
ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅವನು ಅರಸನ ಅಳಿಯನಾಗುವುದಕ್ಕೆ ಒಪ್ಪಿದನು. ನೇಮಕವಾದ ದಿನಗಳು ಮುಗಿಯುವ ಮೊದಲೇ,
1 ಸಮುವೇಲನು 18 : 27 (IRVKN)
ದಾವೀದನು ತನ್ನ ಸೇವಕರೊಡನೆ ಹೊರಟು, ಫಿಲಿಷ್ಟಿಯರ ದೇಶಕ್ಕೆ ಹೋಗಿ, ಅಲ್ಲಿನ [* 2 ಸಮು 3: 14 ]ಇನ್ನೂರು ಜನರನ್ನು ಕೊಂದು, ಮುಂದೊಗಲುಗಳನ್ನು ತಂದು, ಅರಸನ ಅಳಿಯನಾಗುವುದಕ್ಕೋಸ್ಕರ ಅವುಗಳನ್ನು ಪೂರ್ಣವಾಗಿ ಅವನಿಗೆ ಒಪ್ಪಿಸಿದನು. ಆಗ ಸೌಲನು ತನ್ನ ಮಗಳಾದ ಮೀಕಲಳನ್ನು ಅವನಿಗೆ ಮದುವೆಮಾಡಿಕೊಟ್ಟನು.
1 ಸಮುವೇಲನು 18 : 28 (IRVKN)
ಅಥವಾ ಇಸ್ರಾಯೇಲ ಜನರೆಲ್ಲರು ಅವನನ್ನು ಪ್ರೀತಿಸುವವರಾದರು. ಮೀಕಲಳು ಅವನನ್ನು ಬಹಳವಾಗಿ ಪ್ರೀತಿಸುವವಳಾದಳು. ಯೆಹೋವನು ದಾವೀದನ ಸಂಗಡ ಇದ್ದಾನೆಂದು,
1 ಸಮುವೇಲನು 18 : 29 (IRVKN)
ಸೌಲನು ತಿಳಿದು ಅವನಿಗೆ ಮತ್ತಷ್ಟು ಹೆದರುವವನಾಗಿ ಅವನ ನಿತ್ಯವೈರಿಯಾದನು.
1 ಸಮುವೇಲನು 18 : 30 (IRVKN)
[‡ 2 ಸಮು 11: 1 ]ಫಿಲಿಷ್ಟಿಯ ಪ್ರಭುಗಳು ಯುದ್ಧಕ್ಕೆ ಬಂದಾಗೆಲ್ಲಾ ಸೌಲನ ಸೇನಾಧಿಪತಿಗಳಲ್ಲಿ ದಾವೀದನೇ ಹೆಚ್ಚು ಪ್ರಭಾವಶಾಲಿಯಾಗಿ ಬರುತ್ತಿದ್ದುದರಿಂದ ಅವನ ಹೆಸರು ಬಹು ಸುಪ್ರಸಿದ್ಧವಾಯಿತು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30