1 ಸಮುವೇಲನು 19 : 1 (IRVKN)
ಸೌಲನು ದಾವೀದನನ್ನು ಕೊಲ್ಲಲು ಪ್ರಯತ್ನಿಸಿದ್ದು ಸೌಲನು ದಾವೀದನನ್ನು ಕೊಲ್ಲಬೇಕೆಂದು ತನ್ನ ಮಗನಾದ ಯೋನಾತಾನನಿಗೂ, ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.
1 ಸಮುವೇಲನು 19 : 2 (IRVKN)
ಆದ್ದರಿಂದ ಅವನು ದಾವೀದನಿಗೆ, “ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದಿರುತ್ತಾನೆ. ನೀನು ಜಾಗರೂಕತೆಯಿಂದಿರು. ನಾಳೆ ಬೆಳಿಗ್ಗೆ ಒಂದು ಗುಪ್ತವಾದ ಸ್ಥಳದಲ್ಲಿ ಅಡಗಿಕೊಂಡಿರು.
1 ಸಮುವೇಲನು 19 : 3 (IRVKN)
ನೀನು ಅಡಗಿಕೊಂಡಿರುವ ಹೊಲಕ್ಕೆ ನಾನು ಬಂದು, ನನ್ನ ತಂದೆಯ ಬಳಿಯಲ್ಲಿ ನಿಂತು, ನಿನ್ನ ವಿಷಯವನ್ನು ಮಾತನಾಡಿ, ಅವನಿಂದ ತಿಳಿದು ಬರುವ ವಿಚಾರವನ್ನು ನಿನಗೆ ತಿಳಿಸುವೆನು” ಎಂದು ಹೇಳಿದನು.
1 ಸಮುವೇಲನು 19 : 4 (IRVKN)
ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿ, “ಒಡೆಯನು ತನ್ನ ಸೇವಕನಾದ ದಾವೀದನಿಗೆ ಅನ್ಯಾಯ ಮಾಡದಿರಲಿ. ಅವನು ನಿನಗೆ ದ್ರೋಹ ಮಾಡಲಿಲ್ಲ. ಅವನು ಮಾಡಿದ್ದೆಲ್ಲವೂ ನಿನ್ನ ಹಿತಕ್ಕಾಗಿಯೇ.
1 ಸಮುವೇಲನು 19 : 5 (IRVKN)
[* ನ್ಯಾಯ 12: 3 ]ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಫಿಲಿಷ್ಟಿಯನನ್ನು ಕೊಂದನು. ಯೆಹೋವನು ಇಸ್ರಾಯೇಲ್ಯರಿಗೆ ಮಹಾ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ. ದಾವೀದನನ್ನು ನಿಷ್ಕರುಣೆಯಾಗಿ ಕೊಂದು, † ಮತ್ತಾ 27: 4. ನಿರಪರಾಧಿಯ ರಕ್ತವನ್ನು ಸುರಿಸಿ, ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ?” ಅಂದನು.
1 ಸಮುವೇಲನು 19 : 6 (IRVKN)
ಸೌಲನು ಯೋನಾತಾನನ ಮಾತುಗಳನ್ನು ಲಾಲಿಸಿ, “[‡ ರೂತ. 3: 13 ]ಯೆಹೋವನಾಣೆ, ಅವನನ್ನು ಕೊಲ್ಲುವುದಿಲ್ಲ” ಎಂದು ಪ್ರಮಾಣಮಾಡಿದನು.
1 ಸಮುವೇಲನು 19 : 7 (IRVKN)
ಆಗ ಯೋನಾತಾನನು ದಾವೀದನನ್ನು ಕರೆದು, ಅವನಿಗೆ ಈ ಮಾತುಗಳನ್ನು ತಿಳಿಸಿ, ಸೌಲನ ಬಳಿಗೆ ಕರೆದುಕೊಂಡು ಬಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲಿ ಇರುವವನಾದನು.
1 ಸಮುವೇಲನು 19 : 8 (IRVKN)
ಫಿಲಿಷ್ಟಿಯರು ತಿರುಗಿ ಯುದ್ಧಕ್ಕೆ ಬಂದಾಗ ದಾವೀದನು ಹೋಗಿ ಅವರೊಡನೆ ಯುದ್ಧಮಾಡಿ ಅವರನ್ನು ಸಂಪೂರ್ಣವಾಗಿ ಸೋಲಿಸಿ, ಓಡಿಸಿಬಿಟ್ಟನು.
1 ಸಮುವೇಲನು 19 : 9 (IRVKN)
ಒಂದು ದಿನ ಸೌಲನು ಕೈಯಲ್ಲಿ ಈಟಿಯನ್ನು ಹಿಡಿದುಕೊಂಡು ತನ್ನ ಮನೆಯಲ್ಲಿ ಕುಳಿತುಕೊಂಡಿದ್ದಾಗ ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂದಿತು.
1 ಸಮುವೇಲನು 19 : 10 (IRVKN)
ಅವನು ಒಡನೆ ಕಿನ್ನರಿಯನ್ನು ನುಡಿಸುತ್ತಿದ್ದ ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವಂತೆ ತಿವಿಯಬೇಕೆಂದು ತನ್ನ ಈಟಿಯನ್ನು ಎಸೆದನು. ಆದರೆ ದಾವೀದನು ಪಕ್ಕನೆ ಸೌಲನೆದುರಿನಿಂದ ಸರಿದುಕೊಂಡ ಕಾರಣ, ಅದು ಗೋಡೆಯೊಳಗೆ ನಾಟಿತು. ದಾವೀದನು ಆ ರಾತ್ರಿಯಲ್ಲೇ ತಪ್ಪಿಸಿಕೊಂಡು ಓಡಿಹೋದನು.
1 ಸಮುವೇಲನು 19 : 11 (IRVKN)
ಸೌಲನು ಕೂಡಲೇ ದೂತರನ್ನು ಕರಿಸಿ [§ ಕೀರ್ತ 59 ]ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕೆಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ, “ನೀನು ಈ ರಾತ್ರಿಯೇ ತಪ್ಪಿಸಿಕೊಳ್ಳದಿದ್ದರೆ ನಾಳೆ ಬೆಳಿಗ್ಗೆ ಹತನಾಗುವಿ” ಎಂದು ಹೇಳಿ
1 ಸಮುವೇಲನು 19 : 12 (IRVKN)
[* ಅ.ಕೃ. 9: 25 ]ಅವನನ್ನು ಕಿಟಕಿಯಿಂದ ಕೆಳಕ್ಕಿಳಿಸಲು ಅವನು ಓಡಿಹೋಗಿ ತಪ್ಪಿಸಿಕೊಂಡನು.
1 ಸಮುವೇಲನು 19 : 13 (IRVKN)
ಅನಂತರ ಆಕೆಯು ಮನೆಯಲ್ಲಿದ್ದ [† ಆದಿ 31: 19 ]ಒಂದು ವಿಗ್ರಹವನ್ನು ತಂದು, ಹಾಸಿಗೆಯ ಮೇಲೆ ಮಲಗಿಸಿ, ಅದರ ಮುಖದ ಮೇಲೆ ಮೇಕೆಕೂದಲಿನಿಂದ ಹೆಣೆದ ಜಾಲರಿಯನ್ನು ತಲೆದಿಂಬಿನ ಜಾಗದಲ್ಲಿ ಹಾಕಿ ಕಂಬಳಿಯನ್ನು ಹೊದಿಸಿದಳು.
1 ಸಮುವೇಲನು 19 : 14 (IRVKN)
ಸೌಲನ ದೂತರು ದಾವೀದನನ್ನು ಹಿಡಿಯುವುದಕ್ಕೆ ಬಂದಾಗ ಅವಳು ಅವನಿಗೆ ಸ್ವಸ್ಥವಿಲ್ಲವೆಂದು ಹೇಳಿಕಳುಹಿಸಿದಳು.
1 ಸಮುವೇಲನು 19 : 15 (IRVKN)
ಸೌಲನು ತಿರುಗಿ ತನ್ನ ಆಳುಗಳನ್ನು, “ನೀವು ಹೋಗಿ ನೋಡಿ ದಾವೀದನನ್ನು ಹಾಸಿಗೆಯೊಡನೆ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ, ಕೊಂದುಹಾಕುತ್ತೇನೆ” ಎಂದು ಆಜ್ಞಾಪಿಸಿದನು.
1 ಸಮುವೇಲನು 19 : 16 (IRVKN)
ಅವರು ಹೋಗಿ ನೋಡಲು ಹಾಸಿಗೆಯ ಮೇಲಿರುವುದು ಮೇಕೆಕೂದಲಿನಿಂದ ಹೆಣೆದ ಜಾಲರಿಯ ಒಂದು ವಿಗ್ರಹ ಎಂದು ತಿಳಿದುಬಂತು.
1 ಸಮುವೇಲನು 19 : 17 (IRVKN)
ಆಗ ಸೌಲನು ಮೀಕಲಳಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ? ನನ್ನ ಶತ್ರುವನ್ನು ಕಳುಹಿಸಿ ಅವನು ತಪ್ಪಿಸಿಕೊಳ್ಳುವಂತೆ ಮಾಡಿದಿಯಲ್ಲಾ” ಎನ್ನಲು ಆಕೆಯು ಅವನಿಗೆ, “ನನ್ನನ್ನು ಕಳುಹಿಸದಿದ್ದರೆ ನಿನ್ನನ್ನು ಕೊಂದುಬಿಡುತ್ತೇನೆ ಎಂದು ಅವನು ನನಗೆ ಹೇಳಿದನು” ಅಂದಳು.
1 ಸಮುವೇಲನು 19 : 18 (IRVKN)
ದಾವೀದನು ಸಮುವೇಲನ ಬಳಿಗೆ ಬಂದದ್ದು ದಾವೀದನು ತಪ್ಪಿಸಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದೆಲ್ಲವನ್ನು ತಿಳಿಸಿದನು. ಅವರಿಬ್ಬರೂ ಹೋಗಿ ಅಲ್ಲಿನ ನಯೋತ್ ಎಂಬ ಸ್ಥಳದಲ್ಲಿ ವಾಸವಾಗಿದ್ದರು.
1 ಸಮುವೇಲನು 19 : 19 (IRVKN)
ದಾವೀದನು ರಾಮದ ನಯೋತಿನಲ್ಲಿರುವುದು ಸೌಲನಿಗೆ ಗೊತ್ತಾಗಲು,
1 ಸಮುವೇಲನು 19 : 20 (IRVKN)
ಅವನು ದಾವೀದನನ್ನು ಹಿಡಿದು ತರುವುದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿ ಸಮೂಹವು ಪ್ರವಾದಿಸುತ್ತಿರುವುದನ್ನೂ, ಸಮುವೇಲನು ಅವರ ನಾಯಕನಾಗಿ ನಿಂತಿರುವುದನ್ನು ಕಂಡಾಗ, ದೇವರ ಆತ್ಮವು ಅವರ ಮೇಲೆಯೂ ಬಂದಿತು. [‡ ಅರಣ್ಯ 11:25; ಯೋವೆ. 2: 28 ]ಅವರೂ ಪ್ರವಾದಿಸಿದರು.
1 ಸಮುವೇಲನು 19 : 21 (IRVKN)
ಸೌಲನಿಗೆ ಈ ವರ್ತಮಾನವು ಮುಟ್ಟಿದಾಗ ಅವನು ಬೇರೆ ಆಳುಗಳನ್ನು ಕಳುಹಿಸಿದನು. ಇವರೂ ಪ್ರವಾದಿಸಿದರು. ಅವನು ಮೂರನೆಯ ಸಾರಿ ಇನ್ನೂ ಕೆಲವು ಮಂದಿ ಆಳುಗಳನ್ನು ಕಳುಹಿಸಿದನು. ಅವರೂ ಪ್ರವಾದಿಸಿದರು.
1 ಸಮುವೇಲನು 19 : 22 (IRVKN)
ಆಗ ಸೌಲನು ತಾನೇ ರಾಮಕ್ಕೆ ಹೋಗಬೇಕೆಂದು ಹೊರಟು, ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದು, “ಸಮುವೇಲ ದಾವೀದರು ಎಲ್ಲಿರುತ್ತಾರೆ?” ಎಂದು ವಿಚಾರಿಸಿದನು. ಆಗ ಜನರು, “ರಾಮದ ನಯೋತಿನಲ್ಲಿ ಇರುತ್ತಾರೆ” ಎಂದು ಉತ್ತರಕೊಟ್ಟರು.
1 ಸಮುವೇಲನು 19 : 23 (IRVKN)
ಅವನು ಅಲ್ಲಿಂದ ರಾಮದ ನಯೋತಿಗೆ ಹೋಗುವಾಗ ದೇವರ ಆತ್ಮವು ಅವನ ಮೇಲೆಯೂ ಬಂದಿತು. ಅವನು ಆ ಊರನ್ನು ಮುಟ್ಟುವ ತನಕ ಪ್ರವಾದಿಸುತ್ತಾ ಹೋದನು.
1 ಸಮುವೇಲನು 19 : 24 (IRVKN)
ಅಲ್ಲಿಗೆ ಸೇರಿದ ಮೇಲೆ ಅವನು [§ ಯೆಶಾ 20: 2 ]ತನ್ನ ಬಟ್ಟೆಗಳನ್ನು ತೆಗೆದುಹಾಕಿ, ಸಮುವೇಲನ ಮುಂದೆ ಪ್ರವಾದಿಸುತ್ತಾ, ಆ ದಿನ ಹಗಲಿರುಳು ಬೆತ್ತಲೆಯಾಗಿ ಬಿದ್ದುಕೊಂಡಿದ್ದನು. ಇದರಿಂದ “ಸೌಲನೂ ಕೂಡ ಪ್ರವಾದಿಗಳಲ್ಲಿ ಒಬ್ಬನಾಗಿದ್ದಾನೆಯೇ” ಎಂಬ ಮಾತು ಪ್ರಚಲಿತವಾಯಿತು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24