1 ಸಮುವೇಲನು 2 : 1 (IRVKN)
ಹನ್ನಳ ಸ್ತುತಿ ಗೀತೆ ಹನ್ನಳು ದೇವರ ಬಳಿ ಹೀಗೆ ವಿಜ್ಞಾಪಿಸಿದಳು, “* ಲೂಕ 1: 46-53 ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ; † ನನ್ನ ಬಲ. ನನ್ನ ಕೊಂಬು ಯೆಹೋವನಿಂದ ಎತ್ತಲ್ಪಟ್ಟಿದೆ. ಶತ್ರುಗಳ ಮುಂದೆ ನನ್ನ ಬಾಯಿ ಧೈರ್ಯವಾಗಿ ಮಾತನಾಡುತ್ತದೆ, ಯಾಕೆಂದರೆ ನಾನು ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.
1 ಸಮುವೇಲನು 2 : 2 (IRVKN)
“ಯೆಹೋವನಂಥ ಪರಿಶುದ್ಧನು ಇಲ್ಲವೇ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ ನಮ್ಮ ದೇವರಂತಹ ಸಮಾನವಾದ ಆಶ್ರಯವಿಲ್ಲ.
1 ಸಮುವೇಲನು 2 : 3 (IRVKN)
“ಇನ್ನು ಮುಂದೆ ಗರ್ವದಿಂದ ಮಾತನಾಡಬೇಡಿರಿ; ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ. ದೇವರಾದ ಯೆಹೋವನು ಸರ್ವಜ್ಞನು; ಆತನು ಮನುಷ್ಯರ ಕ್ರಿಯೆಗಳನ್ನು ತೂಗಿನೋಡುವನು.
1 ಸಮುವೇಲನು 2 : 4 (IRVKN)
“ಶೂರರ ಬಿಲ್ಲುಗಳು ಮುರಿಯಲ್ಪಟ್ಟಿವೆ, ಎಡವಿದವರು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡಿದ್ದಾರೆ.
1 ಸಮುವೇಲನು 2 : 5 (IRVKN)
ಹೊಟ್ಟೆತುಂಬಾ ಊಟಮಾಡುತ್ತಿದ್ದವರು ಅನ್ನಕ್ಕೋಸ್ಕರ ಕೂಲಿಮಾಡುತ್ತಾರೆ; ಹಸಿದವರು ಉಂಡು ಸುಖದಿಂದಿರುತ್ತಾರೆ. ಬಂಜೆಯು ಏಳು ಮಂದಿ ಮಕ್ಕಳನ್ನು ಹೆರುವಳು; ಮಕ್ಕಳುಳ್ಳವಳು ದಿಕ್ಕಿಲ್ಲದೆ ಹೋಗುವಳು.
1 ಸಮುವೇಲನು 2 : 6 (IRVKN)
“ಯೆಹೋವನೇ ಸಾಯಿಸುವವನೂ ಬದುಕಿಸುವವನೂ; ಪಾತಾಳದಲ್ಲಿ‡ ಇನ್ನೊಂದು ಅರ್ಥ, ಮೃತ್ಯುಲೋಕ ದೊಬ್ಬುವವನೂ ಮೇಲಕ್ಕೆ ಬರಮಾಡುವವನೂ ಆತನೇ.
1 ಸಮುವೇಲನು 2 : 7 (IRVKN)
ಬಡತನ, ಸಿರಿತನಗಳನ್ನು ಕೊಡುವವನೂ ಯೆಹೋವನೇ, ತಗ್ಗಿಸುವವನೂ, ಹೆಚ್ಚಿಸುವವನೂ ಆತನೇ.
1 ಸಮುವೇಲನು 2 : 8 (IRVKN)
ಆತನು ದೀನರನ್ನು ಧೂಳಿನಿಂದ ಎತ್ತಿ; ದರಿದ್ರರನ್ನು ತಿಪ್ಪೆಯಿಂದ ಎಬ್ಬಿಸಿ ಅಧಿಪತಿಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂಮಿಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.
1 ಸಮುವೇಲನು 2 : 9 (IRVKN)
“ಆತನು ತನ್ನ ನಂಬಿಗಸ್ತ ಭಕ್ತರ ಹೆಜ್ಜೆಗಳನ್ನು ಕಾಯುವನು; ಆದರೆ ದುಷ್ಟರನ್ನು ಅಂಧಕಾರದ ಮೌನದಲ್ಲಿ ಮುಳುಗಿಸುವನು, ಭುಜಬಲದಿಂದಲೇ ಯಾವನೂ ಜಯಹೊಂದಲಾರನು.
1 ಸಮುವೇಲನು 2 : 10 (IRVKN)
“ಯೆಹೋವನನ್ನು ವಿರೋಧಿಸುವವರು ಮುರಿಯಲ್ಪಡುತ್ತಾರೆ; ಆತನು ಆಕಾಶದಿಂದ ಅವರ ಮೇಲೆ ಗರ್ಜಿಸುತ್ತಾನೆ. ಯೆಹೋವನು ಭೂಮಿಯ ಕಟ್ಟಕಡೆಯಲ್ಲಿರುವವರಿಗೂ ನ್ಯಾಯತೀರಿಸುವನು. ತಾನು ನೇಮಿಸಿದ ಅರಸನಿಗೆ ಬಲವನ್ನು ಅನುಗ್ರಹಿಸುವನು; ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು.”
1 ಸಮುವೇಲನು 2 : 11 (IRVKN)
1 ಸಮುವೇಲನು 2 : 12 (IRVKN)
ಅನಂತರ ಎಲ್ಕಾನನು ರಾಮದಲ್ಲಿದ್ದ ತನ್ನ ಮನೆಗೆ ಹೋದನು; ಹುಡುಗನು ಯಾಜಕನಾದ ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು. ಏಲಿಯ ಮಕ್ಕಳ ದುಷ್ಟತ್ವ ಏಲಿಯ ಮಕ್ಕಳು ಬಹುದುಷ್ಟರಾಗಿದ್ದರು; ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.
1 ಸಮುವೇಲನು 2 : 13 (IRVKN)
ಯಜ್ಞವನ್ನರ್ಪಿಸುವುದಕ್ಕೆ ಬಂದ ಜನರಲ್ಲಿ ಈ ಯಾಜಕರು ನಡಿಸಿದ್ದೇನಂದರೆ, ಯಜ್ಞಮಾಂಸವು ಬೇಯುತ್ತಿರುವಾಗಲೇ ಯಾಜಕನ ಆಳು ಕೈಯಲ್ಲಿ ತ್ರಿಶೂಲವನ್ನು ಹಿಡಿದುಕೊಂಡು ಬರುತ್ತಿದ್ದನು.
1 ಸಮುವೇಲನು 2 : 14 (IRVKN)
ಆ ಮಾಂಸ ಬೇಯುತ್ತಿರುವ ಕೊಪ್ಪರಿಗೆಯಲ್ಲಾಗಲಿ§ ಎಣ್ಣೆ ಅಥವಾ ತುಪ್ಪ ಇಡುವ ಲೋಹದ ಪಾತ್ರೆ , ಭಾಂಡಲ್ಲಾಗಲಿ (ದೊಡ್ಡ ಹಂಡೆ), ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದ್ದೆಲ್ಲವನ್ನೂ ಯಾಜಕನಿಗೆಂದು ತೆಗೆದುಕೊಳ್ಳುತ್ತಿದ್ದನು. ಶೀಲೋವಿಗೆ ಬರುತ್ತಿದ ಇಸ್ರಾಯೇಲ್ಯರೆಲ್ಲರಿಗೂ ಹೀಗೆಯೇ ಮಾಡುತ್ತಿದ್ದರು.
1 ಸಮುವೇಲನು 2 : 15 (IRVKN)
ಇದಲ್ಲದೆ ಯಾಜಕನ ಆಳು ಕೊಬ್ಬನ್ನು ಹೋಮಮಾಡುವುದಕ್ಕಿಂತ ಮುಂಚೆಯೇ ಬಂದು ಯಜ್ಞವನ್ನರ್ಪಿಸುವವನಿಗೆ, “ಯಾಜಕನಿಗೋಸ್ಕರ ಸುಡತಕ್ಕ ಮಾಂಸವನ್ನು ಕೊಡು; ನೀನು ಬೇಯಿಸಿದ ಮಾಂಸವನ್ನು ಅವನು ತೆಗೆದುಕೊಳ್ಳುವುದಿಲ್ಲ; ಅವನಿಗೆ ಹಸಿಮಾಂಸವೇ ಬೇಕು” ಅನ್ನುವನು.
1 ಸಮುವೇಲನು 2 : 16 (IRVKN)
ಅರ್ಪಿಸುವವನು, ಮೊದಲು ಕೊಬ್ಬನ್ನು ಹೋಮಮಾಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ ಎಂದು ಹೇಳಿದರೆ ಅವನು, “ಈಗಲೇ ಕೊಡಬೇಕು; ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುವೆನು” ಎನ್ನುವನು.
1 ಸಮುವೇಲನು 2 : 17 (IRVKN)
ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಛೀಕರಿಸಿದ್ದರಿಂದ * ಅಥವಾ ಜನರ. ಅವರ ಪಾಪವು ಯೆಹೋವನ ದೃಷ್ಟಿಯಲ್ಲಿ ಆಧಿಕವಾಯಿತು.
1 ಸಮುವೇಲನು 2 : 18 (IRVKN)
ಸಮುವೇಲನು ಶಿಲೋವಿನಲ್ಲಿ ಆದರೆ ಬಾಲಕನಾದ ಸಮುವೇಲನು ಏಫೋದೆಂಬ ನಾರು ಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.
1 ಸಮುವೇಲನು 2 : 19 (IRVKN)
ಅವನ ತಾಯಿಯು ಪ್ರತಿವರ್ಷವೂ ತನ್ನ ಗಂಡನ ಜೊತೆಯಲ್ಲಿ ಯಜ್ಞವನ್ನರ್ಪಿಸುವುದಕ್ಕೆ ಬರುವಾಗ ಒಂದು ಚಿಕ್ಕ ಅಂಗಿಯನ್ನು ಹೊಲಿದು ಅವನಿಗೆ ತಂದುಕೊಡುತ್ತಿದ್ದಳು.
1 ಸಮುವೇಲನು 2 : 20 (IRVKN)
ಏಲಿಯು ಎಲ್ಕಾನನಿಗೆ, “ನೀನು ಯೆಹೋವನಿಗೆ ಒಪ್ಪಿಸಿಬಿಟ್ಟ ಮಗನಿಗೆ ಬದಲಾಗಿ ಆತನು ಈ ಸ್ತ್ರೀಯಿಂದ ನಿನಗೆ ಬೇರೆ ಮಕ್ಕಳನ್ನು ಕೊಡಲಿ” ಎಂದು ಹೇಳಿ ಅವನನ್ನೂ ಅವನ ಹೆಂಡತಿಯನ್ನೂ ಆಶೀರ್ವದಿಸುತ್ತಿದ್ದನು. ಅನಂತರ ಅವರು ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದರು.
1 ಸಮುವೇಲನು 2 : 21 (IRVKN)
ಯೆಹೋವನು ಕಟಾಕ್ಷಿಸಿದ್ದರಿಂದ ಹನ್ನಳಿಗೆ ಮೂರು ಮಂದಿ ಗಂಡುಮಕ್ಕಳೂ, ಇಬ್ಬರು ಹೆಣ್ಣುಮಕ್ಕಳಾದರು. ಬಾಲಕನಾಗಿದ್ದ ಸಮುವೇಲನು ಯೆಹೋವನ ಸನ್ನಿಧಿಯಲ್ಲೇ ಬೆಳೆದು ದೊಡ್ಡವನಾದನು.
1 ಸಮುವೇಲನು 2 : 22 (IRVKN)
ಬಹುವೃದ್ಧನಾದ ಏಲಿಯು ತನ್ನ ಮಕ್ಕಳು ಎಲ್ಲಾ ಇಸ್ರಾಯೇಲರಲ್ಲಿ ನಡೆಸುತ್ತಿರುವುದನ್ನೂ, ಅವರು ದೇವದರ್ಶನ ಗುಡಾರದ ಬಾಗಿಲಿನಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರೊಡನೆ ಸಂಗಮಿಸುತ್ತಿರುವುದನ್ನೂ ಕೇಳಿ
1 ಸಮುವೇಲನು 2 : 23 (IRVKN)
ಅವರಿಗೆ, “ಎಲ್ಲಾ ಜನರಿಂದಲೂ ನಿಮ್ಮ ದುಷ್ಕೃತ್ಯಗಳನ್ನು ಕೇಳುತ್ತೇನೆ. ಹೀಗೇಕೆ ಮಾಡುತ್ತೀರಿ?”
1 ಸಮುವೇಲನು 2 : 24 (IRVKN)
ನನ್ನ ಮಕ್ಕಳೇ, ಹೀಗೆ ಮಾಡಬಾರದು, ನೀವು ಯೆಹೋವನ ಜನರನ್ನು ದುರ್ಮಾರ್ಗಕ್ಕೆ ಎಳೆಯುವವರಾಗಿದ್ದೀರೆಂದು ಕೇಳಿದ್ದೇನೆ; ಇದು ಒಳ್ಳೆಯದಲ್ಲ.
1 ಸಮುವೇಲನು 2 : 25 (IRVKN)
“ಮನುಷ್ಯನು ಮನುಷ್ಯರಿಗೆ ಅಪರಾಧಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಆದರೆ ಮನುಷ್ಯನು ಯೆಹೋವನಿಗೆ ಅಪರಾಧಮಾಡಿದರೆ ಮಧ್ಯಸ್ಥಿಕೆ ವಹಿಸುವವರಾರು?” ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ, ಯಾಕೆಂದರೆ ಯೆಹೋವನು ಅವರನ್ನು ನಾಶಮಾಡಲು ನಿರ್ಧರಿಸಿದ್ದನು.
1 ಸಮುವೇಲನು 2 : 26 (IRVKN)
ಬಾಲಕನಾದ ಸಮುವೇಲನಾದರೋ ಬೆಳೆಯುತ್ತಾ ಬಂದ ಹಾಗೆಲ್ಲಾ ಯೆಹೋವನ ಮತ್ತು ಮನುಷ್ಯರ ದಯೆಗೆ ಪಾತ್ರನಾದನು.
1 ಸಮುವೇಲನು 2 : 27 (IRVKN)
ಏಲಿಯ ಕುಟುಂಬಕ್ಕೆ ಎಚ್ಚರಿಕೆ ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ, “ಯೆಹೋವನು ನಿನಗೆ ಹೇಳುವುದೇನಂದರೆ, ‘ಇಸ್ರಾಯೇಲರು ಐಗುಪ್ತದಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾಗಿ
1 ಸಮುವೇಲನು 2 : 28 (IRVKN)
ಇಸ್ರಾಯೇಲರ ಎಲ್ಲಾ ಕುಟುಂಬಗಳಿಂದ ಅವರನ್ನೇ ಯಾಜಕೋದ್ಯೋಗಕ್ಕೆ ಅಂದರೆ ಯಜ್ಞವನ್ನರ್ಪಿಸುವುದಕ್ಕೂ, ಧೂಪಹಾಕುವುದಕ್ಕೂ, ನನ್ನ ಸನ್ನಿಧಿಯಲ್ಲಿ ಏಫೋದನ್ನು ಧರಿಸಿಕೊಳ್ಳುವುದಕ್ಕೂ ಆರಿಸಿಕೊಂಡೆನು; ಅವರಿಗೆ ಇಸ್ರಾಯೇಲರ ಯಜ್ಞಶೇಷದ ಹಕ್ಕನ್ನು ಅನುಗ್ರಹಿಸಿದೆನು.
1 ಸಮುವೇಲನು 2 : 29 (IRVKN)
ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಆಜ್ಞಾನುಸಾರವಾಗಿ ನನ್ನ ಮಂದಿರಕ್ಕೆ ತರುವ ಯಜ್ಞನೈವೇದ್ಯಗಳ ಘನತೆಯನ್ನು ನೀವು † ಇಬ್ರಿಯ ಪದ ಕಾಲಿನಿಂದ ಒದೆಯುವುದು. ಭಂಗಪಡಿಸಿ, ಅವುಗಳ ಶ್ರೇಷ್ಠ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವುದೇಕೆ? ನೀನು ನನ್ನನ್ನು ಗೌರವಿಸುವುದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವುದು ಸರಿಯೋ?’
1 ಸಮುವೇಲನು 2 : 30 (IRVKN)
ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.
1 ಸಮುವೇಲನು 2 : 31 (IRVKN)
ಇಗೋ, ನಾನು ನಿನ್ನ ಮತ್ತು ನಿನ್ನ ಮನೆಯವರ ‡ ಅಥವಾ ಬಾಹುಬಲಿ. ಭುಜಬಲವನ್ನು ಮುರಿಯುವ ದಿನಗಳು ಬರುವವು. ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟುವುದಿಲ್ಲ.
1 ಸಮುವೇಲನು 2 : 32 (IRVKN)
ನಿನ್ನ ವೈರಿಯು ನನ್ನ ಮಂದಿರದಲ್ಲಿ ಸೇವೆಮಾಡುವುದನ್ನು ನೋಡುವಿ. ಇಸ್ರಾಯೇಲರಿಗೆ ಸರ್ವಶುಭವನ್ನು ದಯಪಾಲಿಸುವೆನು; ಆದರೆ ನಿನ್ನ ಮನೆಯಲ್ಲಿ ಪೂರ್ಣಾಯುಷ್ಯವನ್ನು ಹೊಂದಿ ಜೀವಿಸುವವರು ಇನ್ನು ಮುಂದೆ ಒಬ್ಬರಾದರು ಇರುವುದಿಲ್ಲ.
1 ಸಮುವೇಲನು 2 : 33 (IRVKN)
ನಾನು ನಿನ್ನ ಸಂತಾನವನ್ನು ನನ್ನ ಸಾನ್ನಿಧ್ಯ ಸೇವೆಯಿಂದ ತೆಗೆದುಹಾಕದೆ, ಒಬ್ಬನನ್ನಾದರೂ ಉಳಿಸಿದರೆ ಅವನು ನಿನ್ನ ಕಣ್ಣೀರಿಗೂ ಮತ್ತು ಮನೋವ್ಯಥೆಗೂ ಕಾರಣನಾಗುವನು. ನಿನ್ನ ಸಂತಾನದವರೆಲ್ಲರೂ ಕತ್ತಿಯಿಂದ ಸಂಹಾರವಾಗುವರು.
1 ಸಮುವೇಲನು 2 : 34 (IRVKN)
ಇದೆಲ್ಲಾ ನೆರವೇರುವುದೆಂಬುದಕ್ಕೆ ನಿನ್ನ ಮಕ್ಕಳಾದ ಹೊಫ್ನಿ ಹಾಗೂ ಫೀನೆಹಾಸರು ಒಂದೇ ದಿನದಲ್ಲಿ ಸಾಯುವುದೇ ಗುರುತಾಗಿರುವುದು.
1 ಸಮುವೇಲನು 2 : 35 (IRVKN)
ನನ್ನ ಹೃದಯದ ಹಾಗೂ ಮನಸ್ಸಿನ ಆಲೋಚನೆಗಳನ್ನು ನೆರವೇರಿಸುವ ಒಬ್ಬ ನಂಬಿಗಸ್ತನಾದ ಯಾಜಕನನ್ನು ಎಬ್ಬಿಸುವೆನು; ಅವನಿಗೆ ಶಾಶ್ವತ ಗೃಹವನ್ನು ಅನುಗ್ರಹಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.’
1 ಸಮುವೇಲನು 2 : 36 (IRVKN)
ನಿನ್ನ ಮನೆಯಲ್ಲಿ ಉಳಿದವರು ಬಂದು ಅವನ ಮುಂದೆ ಅಡ್ಡ ಬಿದ್ದು, ನಮಗೆ ಒಂದು ಬೆಳ್ಳಿಕಾಸನ್ನು § ಬೆಳ್ಳಿ ನಾಣ್ಯ ರೊಟ್ಟಿಯ ಚೂರನ್ನು ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ಯಾಜಕನ ಸೇವೆಯಲ್ಲಿ ಯಾವುದಕ್ಕಾದರೂ ನಮ್ಮನ್ನು ಸೇರಿಸಿಕೋ” ಎಂದು ಅವನನ್ನು ಬೇಡಿಕೊಳ್ಳುವರು, ಎಂದು ಹೇಳಿದನು.
❮
❯