1 ಸಮುವೇಲನು 20 : 1 (IRVKN)
ದಾವೀದ ಯೋನಾತಾನರ ಒಡಂಬಡಿಕೆ ದಾವೀದನು ರಾಮದ ನಯೋತಿನಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದು ಅವನಿಗೆ, “ನಿನ್ನ ತಂದೆಯು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲ, ನಾನೇನು ಮಾಡಿದೆನು? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹವು ಯಾವುದು?” ಎನ್ನಲು,
1 ಸಮುವೇಲನು 20 : 2 (IRVKN)
ಯೋನಾತಾನನು ಅವನಿಗೆ, “ಇದು ಆಗಲೇಬಾರದು, ನಿನಗೆ ಮರಣವಾಗಕೂಡದು. ನನ್ನ ತಂದೆಯು ಅಲ್ಪಕಾರ್ಯವನ್ನಾಗಲಿ, ಮಹಾಕಾರ್ಯವನ್ನಾಗಲಿ ನನಗೆ ತಿಳಿಸದೇ ಮಾಡುವುದಿಲ್ಲ. ಈ ಕಾರ್ಯವನ್ನು ನನಗೆ ಹೇಗೆ ಮರೆಮಾಡಲು ಸಾಧ್ಯ?” ಎಂದು ಹೇಳಿದನು.
1 ಸಮುವೇಲನು 20 : 3 (IRVKN)
ಅದಕ್ಕೆ ದಾವೀದನು, “ನಿನ್ನ ಕಣ್ಣುಮುಂದೆ ನನಗೆ ದಯೆ ದೊರಕುತ್ತದೆಂಬುದನ್ನು ನಿನ್ನ ತಂದೆಯು ಬಲ್ಲನು. ಆದ್ದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾನೆ. [* 2 ಅರಸು. 2:2,4, 6 ]ನಿನ್ನ ಜೀವದಾಣೆ, ಯೆಹೋವನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಅಂತರವಿದೆ” ಎಂದು ಖಂಡಿತವಾಗಿ ಹೇಳಿದನು.
1 ಸಮುವೇಲನು 20 : 4 (IRVKN)
ಆಗ ಯೋನಾತಾನನು ದಾವೀದನಿಗೆ, “ನಾನು ನಿನಗೋಸ್ಕರ ಮಾಡಬೇಕಾದದ್ದನ್ನು ಹೇಳು ಮಾಡುತ್ತೇನೆ” ಅಂದನು.
1 ಸಮುವೇಲನು 20 : 5 (IRVKN)
[† ಅರಣ್ಯ 10: 10 ]ಅದಕ್ಕೆ ದಾವೀದನು, “ನಾಳೆ ಅಮಾವಾಸ್ಯೆ. ನಾನು ಅರಸನ ಪಂಕ್ತಿಯಲ್ಲಿ ಊಟಮಾಡಬೇಕಾಗಿರುವುದು. ನೀನು ಅಪ್ಪಣೆಕೊಟ್ಟರೆ ನಾನು ಈಗಲೇ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.
1 ಸಮುವೇಲನು 20 : 6 (IRVKN)
ನಿನ್ನ ತಂದೆಯು ನನ್ನನ್ನು ಕುರಿತು ವಿಚಾರ ಮಾಡಿದರೆ, ನೀನು, ‘ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಿ ಬರುವುದಕ್ಕೆ ಅಪ್ಪಣೆಯಾಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು. ಅವನ ಗೋತ್ರದವರು ಅಲ್ಲಿ ವಾರ್ಷಿಕ ಯಜ್ಞಮಾಡುತ್ತಾರೆ’ ಎಂದು ಹೇಳು.
1 ಸಮುವೇಲನು 20 : 7 (IRVKN)
ಅವನು ಆಗಲಿ ಅಂದರೆ ನಿನ್ನ ಸೇವಕನಾದ ನಾನು ಸುರಕ್ಷಿತನಾಗಿರುವೆನು. ಸಿಟ್ಟುಮಾಡಿದರೆ [‡ ಎಸ್ತ. 7: 7 ]ಅವನಿಂದ ನನಗೆ ಕೇಡು ಸಿದ್ಧವಾಗಿದೆ ಎಂದು ತಿಳಿದುಕೋ, ಸೇವಕನ ಮೇಲೆ ದಯೆಯಿರಲಿ.
1 ಸಮುವೇಲನು 20 : 8 (IRVKN)
ನೀನು ಯೆಹೋವನ ಸನ್ನಿಧಿಯಲ್ಲಿ ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿಯಲ್ಲಾ, ನಾನು ಅಪರಾಧಿಯಾಗಿದ್ದರೆ ನನ್ನನ್ನು ನಿನ್ನ ತಂದೆಗೆ ಒಪ್ಪಿಸುವುದೇಕೆ? ನೀನೇ ನನ್ನನ್ನು ಕೊಂದುಹಾಕು” ಎಂದು ಹೇಳಿದನು.
1 ಸಮುವೇಲನು 20 : 9 (IRVKN)
ಯೋನಾತಾನನು ಅವನಿಗೆ, “ಇದು ಆಗಲೇ ಬಾರದು, ನಿನಗೆ ನನ್ನ ತಂದೆಯಿಂದ ಕೇಡು ಸಿದ್ಧವಾಗಿದ್ದರೆ ಅದನ್ನು ನಿನಗೆ ತಿಳಿಸದಿರುತ್ತೇನೆಯೇ?” ಅಂದನು.
1 ಸಮುವೇಲನು 20 : 10 (IRVKN)
ದಾವೀದನು, “ನಿನ್ನ ತಂದೆಯು ಬಿರುನುಡಿಯಿಂದ ಉತ್ತರಕೊಟ್ಟರೆ ಅದನ್ನು ಯಾರ ಮುಖಾಂತರವಾಗಿ ತಿಳಿಸುವಿ?” ಎಂದು ಅವನನ್ನು ಕೇಳಲು
1 ಸಮುವೇಲನು 20 : 11 (IRVKN)
ಯೋನಾತಾನನು ಅವನಿಗೆ, “ನಾವು ಹೊಲಕ್ಕೆ ಹೋಗೋಣ ಬಾ” ಎಂದು ಹೇಳಿದನು.
1 ಸಮುವೇಲನು 20 : 12 (IRVKN)
ಅವರಿಬ್ಬರೂ ಹೊಲಕ್ಕೆ ಹೋದ ಮೇಲೆ ಯೋನಾತಾನನು ದಾವೀದನಿಗೆ, “ಇಸ್ರಾಯೇಲರ ದೇವರಾದ ಯೆಹೋವನೇ ಸಾಕ್ಷಿ, ನಾನು ನಾಳೆ ಇಲ್ಲವೆ ನಾಡಿದ್ದು ನಿನ್ನ ವಿಷಯದಲ್ಲಿ ನನ್ನ ತಂದೆಯೊಡನೆ ಮಾತನಾಡಿ, ನಿನ್ನ ಮೇಲೆ ಅವನಿಗೆ ದಯೆ ಉಂಟೆಂದು ಗೊತ್ತಾದರೆ ಕೂಡಲೆ ನಿನಗೆ ತಿಳಿಸುವೆನು.
1 ಸಮುವೇಲನು 20 : 13 (IRVKN)
ನನ್ನ ತಂದೆಯು ನಿನಗೆ ಕೇಡುಮಾಡುವ ಮನಸ್ಸುಳ್ಳವನಾಗಿದ್ದಾನೆಂದು ಗೊತ್ತಾದರೆ, ಅದನ್ನೂ ನಿನಗೆ ತಿಳಿಸಿ, ನೀನು ತಪ್ಪಿಸಿಕೊಂಡು ಸುರಕ್ಷಿತವಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. [§ ರೂತ. 1: 17 ]ಹಾಗೆ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ, ಆತನು ನನ್ನ ತಂದೆಯ ಸಂಗಡ ಇದ್ದ ಹಾಗೆ * ಯೆಹೋ. 1:5,17; 1 ಅರಸು. 1:37; 1ಪೂರ್ವ 22:11, 16. ನಿನ್ನ ಸಂಗಡಲೂ ಇರಲಿ.
1 ಸಮುವೇಲನು 20 : 14 (IRVKN)
ನೀನು ಯೆಹೋವನನ್ನು ನೆನಸಿ ನನ್ನ ಜೀವಮಾನದಲ್ಲೆಲ್ಲಾ ನನಗೆ ಕೃಪೆತೋರಿಸು.
1 ಸಮುವೇಲನು 20 : 15 (IRVKN)
[† 2 ಸಮು 9:1; 21: 7 ]ನಾನು ಸತ್ತನಂತರ ನನ್ನ ಮನೆಯ ಮೇಲೆಯೂ ಶಾಶ್ವತವಾದ ನಿನ್ನ ದಯೆಯಿರಲಿ. ಯೆಹೋವನು ನಿನ್ನ ಎಲ್ಲಾ ಶತ್ರುಗಳನ್ನು ಭೂಮಿಯಿಂದ ತೆಗೆದು ಹಾಕಿದರೂ ಅದು ನನ್ನ ಮನೆಯಿಂದ ಅಗಲದಿರಲಿ.
1 ಸಮುವೇಲನು 20 : 16 (IRVKN)
ಅಗಲಿದರೆ ಯೆಹೋವನೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿ ಅವರ ಮನೆಯವರೊಡನೆ ಒಡಂಬಡಿಕೆ ಮಾಡಿಕೊಂಡು,
1 ಸಮುವೇಲನು 20 : 17 (IRVKN)
ತಾನು ದಾವೀದನನ್ನು ಸ್ವಂತ ಪ್ರಾಣದಂತೆ ಪ್ರೀತಿಸುತ್ತಿದ್ದುದರಿಂದ ಆ ಪ್ರೀತಿಸಾಕ್ಷಿಯಾಗಿ ಅವನಿಂದ ಪ್ರಮಾಣಮಾಡಿಸಿದನು.
1 ಸಮುವೇಲನು 20 : 18 (IRVKN)
ಯೋನಾತಾನನು ದಾವೀದನಿಗೆ, “ನಾಳೆ ಅಮಾವಾಸ್ಯೆ, ನಿನ್ನ ಸ್ಥಳವು ಬರಿದಾಗಿರುವುದನ್ನು ಅರಸನು ಕಂಡು ನಿನ್ನ ವಿಷಯವಾಗಿ ವಿಚಾರಿಸುವನು.
1 ಸಮುವೇಲನು 20 : 19 (IRVKN)
ನೀನು ಮೂರನೆಯ ದಿನದಲ್ಲಿ ಮೊದಲು ಅಡಗಿಕೊಂಡಿದ್ದ ಸ್ಥಳಕ್ಕೆ ಬೇಗ ಬಂದು ಅಲ್ಲಿನ ಕಲ್ಲುಕುಪ್ಪೆಯ ಬಳಿಯಲ್ಲಿ ಕುಳಿತುಕೊಂಡಿರು.
1 ಸಮುವೇಲನು 20 : 20 (IRVKN)
ನಾನು ಗುರಿಯಿಟ್ಟವನೋ ಎಂಬಂತೆ ಅದರ ಕಡೆಗೆ ಮೂರು ಬಾಣಗಳನ್ನು ಎಸೆದು ಕೂಡಲೇ ಅವುಗಳನ್ನು
1 ಸಮುವೇಲನು 20 : 21 (IRVKN)
ತರುವುದಕ್ಕಾಗಿ ನನ್ನ ಆಳುಗಳನ್ನು ಕಳುಹಿಸುವೆನು. ನಾನು ಅವನಿಗೆ, ‘ಬಾಣಗಳು ಈಚೆ ಬಿದ್ದಿರುತ್ತವೆ ಅವುಗಳನ್ನು ತೆಗೆದುಕೊಂಡು ಬಾ’ ಎಂದು ಹೇಳಿದರೆ ನೀನು ಬಾ ಯೆಹೋವನ ಆಣೆ ಯಾವ ಕೇಡು ಸಂಭವಿಸದೆ ಸುರಕ್ಷಿತನಾಗಿರುವಿ.
1 ಸಮುವೇಲನು 20 : 22 (IRVKN)
ಆದರೆ, ‘ಬಾಣಗಳು ಆಚೆ ಬಿದ್ದಿರುತ್ತವೆ’ ಎಂದು ಹೇಳಿದರೆ ಹೊರಟುಹೋಗು, ನೀನು ಹೋಗುವುದೇ ಯೆಹೋವನ ಚಿತ್ತವಾಗಿದೆ.
1 ಸಮುವೇಲನು 20 : 23 (IRVKN)
ನಮ್ಮಿಬ್ಬರ ಒಡಂಬಡಿಕೆಗೆ ಯೆಹೋವನೇ ನಿತ್ಯ ಸಾಕ್ಷಿಯಾಗಿರುವನು” ಅಂದನು.
1 ಸಮುವೇಲನು 20 : 24 (IRVKN)
ದಾವೀದನು ಹೊಲದಲ್ಲಿ ಅಡಗಿಕೊಂಡನು.
1 ಸಮುವೇಲನು 20 : 25 (IRVKN)
ಅರಸನು ಅಮಾವಾಸ್ಯೆ ದಿನ, ಪದ್ದತಿಯ ಪ್ರಕಾರ ಗೋಡೆಯ ಬಳಿಯಲ್ಲಿರುವ ತನ್ನ ಆಸನದ ಮೇಲೆ ಭೋಜನಕ್ಕೆ ಕುಳಿತುಕೊಂಡನು. ಅರಸನ ಎದುರಾಗಿ ಯೋನಾತಾನನೂ, ಅರಸನ ಪಕ್ಕದಲ್ಲಿ ಅಬ್ನೇರನೂ ಕುಳಿತುಕೊಂಡನು. ಸೌಲನು ದಾವೀದನ ಸ್ಥಳವು ಬರಿದಾಗಿರುವುದನ್ನು ಕಂಡರೂ,
1 ಸಮುವೇಲನು 20 : 26 (IRVKN)
ಆ ದಿನ ಅವನ ವಿಷಯ ಏನೂ ಹೇಳಲಿಲ್ಲ. ಅವನಿಗೆ ಏನಾದರೂ ಸಂಭವಿಸಿರಬೇಕು. [‡ ಯಾಜ 7:21; 15:1- 4 ]ಅವನು ಹೊಲೆಯಾಗಿದ್ದಾನು, ತನ್ನನ್ನು ಇನ್ನು ಶುದ್ಧಪಡಿಸಿಕೊಳ್ಳದೆ ಇರಬಹುದು ಅಂದುಕೊಂಡನು.
1 ಸಮುವೇಲನು 20 : 27 (IRVKN)
ಮರುದಿನದಲ್ಲಿಯೂ, ಅಂದರೆ ತಿಂಗಳಿನ ಎರಡನೆಯ ದಿನದಲ್ಲಿಯೂ ದಾವೀದನ ಸ್ಥಾನ ಬರಿದಾಗಿದ್ದರಿಂದ ಸೌಲನು, “ಇಷಯನ ಮಗನು ನಿನ್ನೆಯೂ, ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ?” ಎಂದು ತನ್ನ ಮಗನಾದ ಯೋನಾತಾನನನ್ನು ಕೇಳಿದನು.
1 ಸಮುವೇಲನು 20 : 28 (IRVKN)
ಅದಕ್ಕೆ ಯೋನಾತಾನನು, “ದಾವೀದನು ‘ಬೇತ್ಲೆಹೇಮಿನಲ್ಲಿ ನಮ್ಮ ಗೋತ್ರದವರು ಯಜ್ಞಮಾಡುತ್ತಾರೆ
1 ಸಮುವೇಲನು 20 : 29 (IRVKN)
ನನ್ನ ಅಣ್ಣನು ಅದಕ್ಕಾಗಿ ನನ್ನನ್ನು ಕರೆದಿದ್ದಾನೆ. ದಯವಿಟ್ಟು ನನಗೆ ಅಪ್ಪಣೆಕೊಡು ನಾನು ಹೋಗಿ ನನ್ನ ಅಣ್ಣಂದಿರನ್ನು ನೋಡಿ ಬರುತ್ತೇನೆ’ ಎಂದು ನನ್ನನ್ನು ಬಹಳವಾಗಿ ಬೇಡಿಕೊಂಡು ಹೋದನು. ಆದ್ದರಿಂದ ಅವನು ಅರಸನ ಪಂಕ್ತಿಗೆ ಬರಲಿಲ್ಲ” ಎಂದು ಉತ್ತರಕೊಟ್ಟನು.
1 ಸಮುವೇಲನು 20 : 30 (IRVKN)
ಆಗ ಸೌಲನು ಬಹಳವಾಗಿ ಕೋಪಗೊಂಡು ಯೋನಾತಾನನಿಗೆ, “ಎಲೈ ದುಷ್ಟ ದಾಸಿಯ ಮಗನೇ, ನೀನು ಇಷಯನ ಮಗನೊಡನೆ ಸ್ನೇಹದಿಂದಿರುವುದು ನನಗೆ ಗೊತ್ತಿಲ್ಲವೋ? ಇದರಿಂದ ನಿನಗೂ, ನಿನ್ನನ್ನು ಹೆತ್ತವಳಿಗೂ ಮಾನಭಂಗವಾಗುವುದು.
1 ಸಮುವೇಲನು 20 : 31 (IRVKN)
ಆ ಇಷಯನ ಮಗನು ಭೂಲೋಕದಲ್ಲಿರುವವರೆಗೆ ನಿನಗಾದರೂ, ನಿನ್ನ ರಾಜ್ಯಕ್ಕಾದರೂ ನೆಲೆಯಿಲ್ಲ. ಆದುದರಿಂದ ಅವನನ್ನು ಕರಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ. ಅವನು ಸಾಯಬೇಕು” ಅಂದನು.
1 ಸಮುವೇಲನು 20 : 32 (IRVKN)
ಅದಕ್ಕೆ ಯೋನಾತಾನನು, “ಅವನು ಯಾಕೆ ಸಾಯಬೇಕು? ಅವನು ಏನು ಮಾಡಿದನು?” ಎಂದು ತನ್ನ ತಂದೆಯನ್ನು ಕೇಳಿದನು.
1 ಸಮುವೇಲನು 20 : 33 (IRVKN)
ಕೂಡಲೆ ಸೌಲನು ಅವನನ್ನು ತಿವಿಯಬೇಕೆಂದು ಈಟಿಯನ್ನೆಸೆದನು. ತನ್ನ ತಂದೆಯು ದಾವೀದನನ್ನು ಕೊಲ್ಲುವುದಕ್ಕೆ ನಿಶ್ಚಯಿಸಿದ್ದಾನೆಂಬುದು ಯೋನಾತಾನಾನಿಗೆ ಗೊತ್ತಾಗಲು
1 ಸಮುವೇಲನು 20 : 34 (IRVKN)
ಅವನು ಬಲು ಸಿಟ್ಟುಗೊಂಡು ಪಂಕ್ತಿಯಿಂದೆದ್ದು ಹೋದನು. ತನ್ನ ತಂದೆಯು ದಾವೀದನನ್ನು ಅಪಮಾನಪಡಿಸಿದ್ದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿನ ಊಟಮಾಡಲೇ ಇಲ್ಲ.
1 ಸಮುವೇಲನು 20 : 35 (IRVKN)
ಅವನು ಮರುದಿನ ಬೆಳಿಗ್ಗೆ ಒಬ್ಬ ಹುಡುಗನನ್ನು ಕರೆದುಕೊಂಡು ದಾವೀದನನ್ನು ನೋಡುವುದಕ್ಕಾಗಿ ಹೊಲಕ್ಕೆ ಹೋಗಿ,
1 ಸಮುವೇಲನು 20 : 36 (IRVKN)
ಹುಡುಗನಿಗೆ, “ಬೇಗ ಹೋಗಿ ನಾನು ಎಸೆದ ಬಾಣಗಳನ್ನು ಕೂಡಿಸಿಕೊಂಡು ಬಾ” ಎಂದು ಹೇಳಿದನು. ಆ ಹುಡುಗನು ಹೋಗುತ್ತಿರುವಾಗ ಯೋನಾತಾನನು ಬಾಣವನ್ನು ಅವನ ಆಚೆಗೆ ಎಸೆದನು.
1 ಸಮುವೇಲನು 20 : 37 (IRVKN)
ಹುಡುಗನು ಬಾಣ ಬಿದ್ದ ಸ್ಥಳಕ್ಕೆ ಬಂದಾಗ ಯೋನಾತಾನನು ಅವನಿಗೆ, “ಬಾಣವು ನಿನ್ನ ಆಚೆ ಬಿದ್ದಿತಲ್ಲಾ
1 ಸಮುವೇಲನು 20 : 38 (IRVKN)
ಬೇಗ ಹೋಗು ನಿಲ್ಲಬೇಡ” ಎಂದು ಕೂಗಿ ಹೇಳಿದನು. ಹುಡುಗನು ಬಾಣಗಳನ್ನು ಕೂಡಿಸಿಕೊಂಡು ಯಜಮಾನನ ಬಳಿಗೆ ಬಂದನು.
1 ಸಮುವೇಲನು 20 : 39 (IRVKN)
ಇದರ ರಹಸ್ಯವು ಯೋನಾತಾನ ದಾವೀದರಿಗೆ ತಿಳಿದಿತ್ತೇ ಹೊರತು ಆ ಹುಡುಗನಿಗೆ ಗೊತ್ತಿರಲಿಲ್ಲ.
1 ಸಮುವೇಲನು 20 : 40 (IRVKN)
ಯೋನಾತಾನನು ತನ್ನ ಆಯುಧಗಳನ್ನು ಹುಡುಗನ ಕೈಯಲ್ಲಿ ಕೊಟ್ಟು ಅವನಿಗೆ, “ಅವುಗಳನ್ನು § 10:26; ಗಿಬೇಯ. ಊರಿಗೆ ತೆಗೆದುಕೊಂಡು ಹೋಗು” ಎಂದು ಹೇಳಿದನು.
1 ಸಮುವೇಲನು 20 : 41 (IRVKN)
ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದ ಎದ್ದುಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.
1 ಸಮುವೇಲನು 20 : 42 (IRVKN)
ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು. ನಾವು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲಾ. ಆತನೇ ನನಗೂ ನಿನಗೂ, ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಾಕ್ಷಿಯಾಗಿರಲಿ” ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು. ಯೋನಾತಾನನು ಊರೊಳಕ್ಕೆ ಹೋದನು.
❮
❯