1 ಸಮುವೇಲನು 21 : 1 (IRVKN)
ದಾವೀದನು ನೋಬಕ್ಕೆ ಹೋದದ್ದು ದಾವೀದನು [* ನೆಹೆ 11:32; ಯೆಶಾ 10: 32 ]ನೋಬ್ ಊರಲ್ಲಿದ್ದ † ಮಾರ್ಕ 2: 26. ಯಾಜಕನಾದ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಭಯಭಕ್ತಿಯಿಂದ ಎದುರುಗೊಂಡು, “ನಿನ್ನ ಜೊತೆಯಲ್ಲಿ ಒಬ್ಬನಾದರೂ ಇಲ್ಲವಲ್ಲಾ, ನೀನು ಒಬ್ಬನೇ ಬಂದದ್ದೇಕೆ?” ಎಂದು ಅವನನ್ನು ಕೇಳಿದನು.
1 ಸಮುವೇಲನು 21 : 2 (IRVKN)
ಅವನು, “ಅರಸನು ಒಂದು ಕೆಲಸವನ್ನು ಆಜ್ಞಾಪಿಸಿ, ಇದನ್ನು ಯಾರಿಗೂ ತಿಳಿಸಬಾರದೆಂದು ನನ್ನನ್ನು ಕಳುಹಿಸಿದ್ದಾನೆ. ನನ್ನ ಆಳುಗಳು ಇಂಥಿಂಥ ಸ್ಥಳದಲ್ಲಿ ನನ್ನನ್ನು ಸಂಧಿಸಬೇಕೆಂದು ಗೊತ್ತುಮಾಡಿದ್ದಾನೆ.
1 ಸಮುವೇಲನು 21 : 3 (IRVKN)
ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ನಾಲ್ಕೈದು ರೊಟ್ಟಿಗಳಾದರೂ, ಬೇರೆ ಯಾವ ಆಹಾರಪದಾರ್ಥವಾದರೂ ಇದ್ದರೆ ನನಗೆ ಕೊಟ್ಟುಬಿಡು” ಎಂದನು.
1 ಸಮುವೇಲನು 21 : 4 (IRVKN)
ಯಾಜಕನು ದಾವೀದನಿಗೆ, “ನನ್ನ ಬಳಿಯಲ್ಲಿ [‡ ವಿಮೋ 25:30; ಮತ್ತಾ 12:3; ಯಾಜ 24:5-9; ಲೂಕ 6:3, 4 ]ಮೀಸಲು ರೊಟ್ಟಿಗಳು ಹೊರತು ಬೇರೆ ರೊಟ್ಟಿಗಳಿಲ್ಲ. ನಿನ್ನ ಆಳುಗಳು ಸ್ತ್ರೀಸಂಗ ಬಿಟ್ಟವರಾಗಿದ್ದರೆ ಅವುಗಳನ್ನು ಕೊಡಬಹುದು” ಎಂದನು.
1 ಸಮುವೇಲನು 21 : 5 (IRVKN)
ದಾವೀದನು, “ನಮ್ಮ ಎಲ್ಲಾ ಯುದ್ಧ ಪ್ರಯಾಣಗಳಲ್ಲಿ ಸ್ತ್ರೀಸಂಗವನ್ನು ನಿಷೇಧಮಾಡುವಂತೆ ಈಗಲೂ ಮಾಡಿದ್ದೇವೆ. ನಾವು ಸಾಧಾರಣ ಕಾರ್ಯಕ್ಕೆ ಹೊರಟಾಗಲೂ ಆಳುಗಳು, ಸಾಮಾನುಗಳು ಪರಿಶುದ್ಧವಾಗಿರುತ್ತವೆ. ಈ ದಿನದಲ್ಲಿ ಅವು ಎಷ್ಟೋ ಹೆಚ್ಚಾಗಿ ಪರಿಶುದ್ಧವಾಗಿರುತ್ತದಲ್ಲವೇ” ಎಂದು ಉತ್ತರ ಕೊಟ್ಟನು
1 ಸಮುವೇಲನು 21 : 6 (IRVKN)
[§ ಯಾಜ 24:8, 9 ]ಬಿಸಿರೊಟ್ಟಿಗಳನ್ನು ಅರ್ಪಿಸಿದ ಆ ದಿನಗಳಲ್ಲಿ ಯೆಹೋವನ ಸನ್ನಿಧಿಯಿಂದ ತೆಗೆಯಲ್ಪಟ್ಟ ನೈವೇದ್ಯವಾದ ಮೊದಲ ರೊಟ್ಟಿಗಳ ಹೊರತು ಅಲ್ಲಿ ಬೇರೆ ರೊಟ್ಟಿಗಳು ಇರಲಿಲ್ಲವಾದ್ದರಿಂದ, ಯಾಜಕನು ಆ * ವಿಮೋ 25: 30. ಪರಿಶುದ್ಧವಾದ ರೊಟ್ಟಿಗಳನ್ನೇ ಕೊಟ್ಟುಬಿಟ್ಟನು.
1 ಸಮುವೇಲನು 21 : 7 (IRVKN)
ಅದೇ ದಿನ ಸೌಲನ ಪಶುಪಾಲರಲ್ಲಿ ಪ್ರಧಾನನಾದ [† ಕೀರ್ತ 52 ]ದೋಯೇಗನೆಂಬ ಎದೋಮ್ಯನು ಯೆಹೋವನ ಆಲಯದಲ್ಲಿ ಉಳಿದುಕೊಂಡಿದ್ದನು.
1 ಸಮುವೇಲನು 21 : 8 (IRVKN)
ದಾವೀದನು ಅಹೀಮೆಲೆಕನನ್ನು, “ಅರಸನ ಕಾರ್ಯವು ತುರ್ತಾದ್ದರಿಂದ ಕತ್ತಿಯನ್ನಾಗಲಿ, ಬೇರೆ ಆಯುಧವನ್ನಾಗಲಿ ತೆಗೆದುಕೊಂಡು ಬರಲಿಲ್ಲ, ನಿನ್ನ ಬಳಿಯಲ್ಲಿ ಬರ್ಜಿಯಾಗಲಿ ಕತ್ತಿಯಾಗಲಿ ಇಲ್ಲವೋ?” ಎಂದು ಕೇಳಿದನು.
1 ಸಮುವೇಲನು 21 : 9 (IRVKN)
ಅವನು, “ನೀನು ಏಲಾ ತಗ್ಗಿನಲ್ಲಿ ಕೊಂದು ಹಾಕಿದ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯು ಒಂದು ಬಟ್ಟೆಯಲ್ಲಿ ಸುತ್ತಲ್ಪಟ್ಟು, [‡ ನ್ಯಾಯ 8: 27 ]ಏಫೋದಿನ ಹಿಂದೆ ಇಡಲ್ಪಟ್ಟಿದೆ. ಬೇಕಾದರೆ ಅದನ್ನು ತೆಗೆದುಕೊ. ಅದರ ಹೊರತು ನನ್ನ ಬಳಿಯಲ್ಲಿ ಬೇರೊಂದಿಲ್ಲ” ಎಂದು ಉತ್ತರಕೊಟ್ಟನು. ದಾವೀದನು, “ಅದಕ್ಕೆ ಸಮಾನವಾದದ್ದು ಮತ್ತೊಂದಿಲ್ಲ. ಅದನ್ನೇ ಕೊಡು” ಎಂದು ಹೇಳಿ ತೆಗೆದುಕೊಂಡನು.
1 ಸಮುವೇಲನು 21 : 10 (IRVKN)
ದಾವೀದನು ಗತ್ ಊರಿಗೆ ಓಡಿಹೋದದ್ದು ದಾವೀದನನು ಸೌಲನ ಭಯದಿಂದ ಅದೇ ದಿನ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿಹೋದನು.
1 ಸಮುವೇಲನು 21 : 11 (IRVKN)
ಆಕೀಷನ ಸೇವಕರು, “ಸೌಲನು ಸಾವಿರಾರು ಶತ್ರುಗಳನ್ನು ಕೊಂದನು, ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು ಎಂಬುದಾಗಿ ಸ್ತ್ರೀಯರು ಕುಣಿಯುತ್ತಾ ಹಾಡಿದ್ದು ಇವನ ಕುರಿತಲ್ಲವೋ?” ಎಂದು ಮಾತನಾಡಿಕೊಂಡರು.
1 ಸಮುವೇಲನು 21 : 12 (IRVKN)
ದಾವೀದನು [§ ಲೂಕ 2:19; ಮೀಕ. 1: 15 ]ಈ ಮಾತುಗಳನ್ನು ಕೇಳುತ್ತಲೇ ಗತ್ ಊರಿನ ಅರಸನಾದ ಆಕೀಷನಿಗೆ ಬಹಳವಾಗಿ ಹೆದರಿ,
1 ಸಮುವೇಲನು 21 : 13 (IRVKN)
ಅವನ ಸೇವಕರ ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿಕೊಂಡು, ಗಡ್ಡದ ಮೇಲೆಲ್ಲಾ ಜೊಲ್ಲು ಸುರಿಸುತ್ತಾ, ಬಾಗಿಲುಗಳನ್ನು ಕೆರೆಯುತ್ತಾ, ತನ್ನನ್ನು ಹುಚ್ಚನಂತೆ ನಟಿಸಿದನು.
1 ಸಮುವೇಲನು 21 : 14 (IRVKN)
ಆಗ ಆಕೀಷನು ತನ್ನ ಸೇವಕರಿಗೆ, “ಈ ಮನುಷ್ಯನು ಹುಚ್ಚನೆಂದು ನಿಮಗೆ ಕಾಣುವುದಿಲ್ಲವೋ, ಇವನನ್ನು ನನ್ನ ಹತ್ತಿರ ಯಾಕೆ ಕರೆತಂದಿರಿ?
1 ಸಮುವೇಲನು 21 : 15 (IRVKN)
ನನ್ನ ಬಳಿಯಲ್ಲಿ ಹುಚ್ಚರು ಕಡಿಮೆಯೆಂದು ನೆನಸಿ ನನ್ನನ್ನು ಬೇಸರಗೊಳಿಸುವುದಕ್ಕಾಗಿ ಇವನನ್ನು ಕರೆತಂದಿರೋ? ಇಂಥವನೂ ನನ್ನ ಮನೆಗೆ ಬರಬೇಕೋ?” ಅಂದನು.
❮
❯
1
2
3
4
5
6
7
8
9
10
11
12
13
14
15