1 ಸಮುವೇಲನು 24 : 1 (IRVKN)
ದಾವೀದನು ಸೌಲನಿಗೆ ಕೇಡುಮಾಡದೆ ಬಿಟ್ಟಿದ್ದು ಸೌಲನು ಫಿಲಿಷ್ಟಿಯರನ್ನು ಓಡಿಸಿ ಹಿಂದಿರುಗಿದಾಗ ದಾವೀದನು ಏಂಗೆದಿಯ ಅರಣ್ಯದಲ್ಲಿ ಇದ್ದಾನೆಂದು ಅವನಿಗೆ ತಿಳಿದುಬಂದಿತು.
1 ಸಮುವೇಲನು 24 : 2 (IRVKN)
ಆಗ ಅವನು ಎಲ್ಲಾ ಇಸ್ರಾಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಕಾಡುಗುರಿಬಂಡೆಗಳಲ್ಲಿದ್ದ ದಾವೀದನನ್ನೂ, ಅವನ ಜನರನ್ನೂ ಹುಡುಕುವುದಕ್ಕೋಸ್ಕರ ಹೊರಟನು.
1 ಸಮುವೇಲನು 24 : 3 (IRVKN)
ಅವನು ಮಾರ್ಗದಲ್ಲಿ ಕುರಿಹಟ್ಟಿಗಳ ಬಳಿಯಲ್ಲಿ ಒಂದು ಗವಿಯನ್ನು ಕಂಡು ಶೌಚಕ್ಕೋಸ್ಕರ ಅದರೊಳಗೆ ಪ್ರವೇಶಿಸಿದನು. [* ಕೀರ್ತ 57; 142 ]ದಾವೀದನೂ ಅವನ ಜನರೂ ಅದೇ ಗವಿಯ ಹಿಂಭಾಗದಲ್ಲಿ ಅಡಗಿಕೊಂಡಿದ್ದರು.
1 ಸಮುವೇಲನು 24 : 4 (IRVKN)
ಜನರು ದಾವೀದನಿಗೆ “ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು, ಆಗ ನೀನು ಅವನನ್ನು ಮನಸ್ಸಿಗೆ ಬಂದಂತೆ ನಡೆಸಬಹುದು ಎಂದು ಯೆಹೋವನು ನಿನಗೆ ಹೇಳಿದ ಮಾತು ನೆರವೇರುವ ದಿನ ಇದೇ” ಅಂದಾಗ ಅವನೆದ್ದು ಮೆಲ್ಲನೆ ಹೋಗಿ ಸೌಲನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡನು.
1 ಸಮುವೇಲನು 24 : 5 (IRVKN)
ಅನಂತರ ಸೌಲನ ನಿಲುವಂಗಿಯ ತುದಿಯನ್ನು ಕತ್ತರಿಸಿದ್ದಕ್ಕಾಗಿ ಅವನ ಮನಸ್ಸಾಕ್ಷಿಯು ಅವನನ್ನು ಚುಚ್ಚತೊಡಗಿತು.
1 ಸಮುವೇಲನು 24 : 6 (IRVKN)
ಅವನು ತನ್ನ ಜನರಿಗೆ, “ಅವನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ, ನನ್ನ ಒಡೆಯನೂ ಆಗಿದ್ದಾನೆ. ನಾನು ನಿಮ್ಮ ಮಾತು ಕೇಳಿ ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನಗೆ ಅಡ್ಡಿ ಮಾಡಲಿ” ಎಂದು ಹೇಳಿದನು
1 ಸಮುವೇಲನು 24 : 7 (IRVKN)
ಈ ಮಾತುಗಳಿಂದ ಅವನು ಸೌಲನಿಗೆ ವಿರೋಧವಾಗಿ ಏಳದಂತೆ ತನ್ನ ಜನರನ್ನು ತಡೆದನು. ಸೌಲನು ಗವಿಯಿಂದ ಹೊರಗೆ ಬಂದು ಸ್ವಲ್ಪ ಮುಂದೆ ಹೋದ ಮೇಲೆ
1 ಸಮುವೇಲನು 24 : 8 (IRVKN)
ದಾವೀದನೂ ಹೊರಗೆ ಬಂದು, “ಅರಸನೇ ನನ್ನ ಒಡೆಯನೇ” ಎಂದು ಅವನನ್ನು ಕೂಗಿದನು. ಸೌಲನು ಹಿಂದಿರುಗಿ ನೋಡಲು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ,
1 ಸಮುವೇಲನು 24 : 9 (IRVKN)
“ದಾವೀದನು ನಿನಗೆ ಕೇಡುಮಾಡಬೇಕೆಂದಿರುತ್ತಾನೆಂದು ಹೇಳುವವರ ಮಾತಿಗೆ ನೀನೇಕೆ ಕಿವಿಗೊಡುತ್ತೀ?
1 ಸಮುವೇಲನು 24 : 10 (IRVKN)
ಈ ಹೊತ್ತು ಯೆಹೋವನು ಗವಿಯಲ್ಲಿ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದಾನೆಂಬುದು ಈಗ ನಿನಗೆ ಗೊತ್ತಾಯಿತಲ್ಲವೋ? ನಿನ್ನನ್ನು ಕೊಂದುಬಿಡಬೇಕೆಂದು ಕೆಲವರು ನನಗೆ ಹೇಳಿದರು. ಆದರೆ ನಾನು ಅವರಿಗೆ, ‘ಯೆಹೋವನ ಅಭಿಷಿಕ್ತನಾದ ನನ್ನ ಒಡೆಯನ ಮೇಲೆ ಕೈಹಾಕುವುದಿಲ್ಲ’ ಎಂದು ಹೇಳಿ ನಿನ್ನನ್ನು ಉಳಿಸಿದೆನು.
1 ಸಮುವೇಲನು 24 : 11 (IRVKN)
ನನ್ನ ತಂದೆಯೇ, ಇಗೋ ನೋಡು, ನನ್ನ ಕೈಯಲ್ಲಿ ನಿನ್ನ ನಿಲುವಂಗಿಯ ತುಂಡು ಇದೆ. ನಾನು ನಿನ್ನನ್ನು ಕೊಲ್ಲದೆ, ನಿನ್ನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡೆನಷ್ಟೇ [† ಕೀರ್ತ 7: 4 ]ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ. ನಾನು ನಿನಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೋ. ಆದರೂ ನೀನು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿಯಲ್ಲಾ.
1 ಸಮುವೇಲನು 24 : 12 (IRVKN)
‡ ಆದಿ 16:5; ರೋಮ. 12:19; ಯೆಹೋವನೇ ನಮ್ಮಿಬ್ಬರ ಮಧ್ಯೆ ವ್ಯಾಜ್ಯವನ್ನು ತೀರಿಸಲಿ. ಆತನೇ ನನಗೋಸ್ಕರ ನಿನಗೆ ಮುಯ್ಯಿ ತೀರಿಸಲಿ. ನಾನಂತೂ ನಿನಗೆ ವಿರೋಧವಾಗಿ ಕೈಯೆತ್ತುವುದಿಲ್ಲ.
1 ಸಮುವೇಲನು 24 : 13 (IRVKN)
‘ಕೆಟ್ಟವರಿಂದಲೇ ಕೆಡುಕು’ ಎಂಬುದಾಗಿ ಹಿರಿಯರ ಗಾದೆಯುಂಟಷ್ಟೆ. ನಾನು ನಿನಗೆ ವಿರೋಧವಾಗಿ ಕೈಯೆತ್ತುವುದಿಲ್ಲ.
1 ಸಮುವೇಲನು 24 : 14 (IRVKN)
ಇಸ್ರಾಯೇಲರ ಅರಸನೇ ಯಾರನ್ನು ಹಿಂಬಾಲಿಸಿ ಹೊರಟಿರುವೇ? ಯಾರನ್ನು ಹಿಡಿಯಬೇಕೆಂದಿರುತ್ತೀ? ಸತ್ತ ನಾಯಿಯನ್ನೋ? ಒಂದು ಬಡ ನೊಣವನ್ನೋ?.
1 ಸಮುವೇಲನು 24 : 15 (IRVKN)
ಯೆಹೋವನು ನ್ಯಾಯಾಧಿಪತಿಯಾಗಿ ನಮ್ಮಿಬ್ಬರ ವ್ಯಾಜ್ಯವನ್ನು ತೀರಿಸಲಿ. ಆತನೇ ನೋಡಿ [§ ಕೀರ್ತ 35:1; 43:1; ಜ್ಞಾನ. 22: 23 ]ನನಗೋಸ್ಕರ ವಾದಿಸಿ ನನ್ನನ್ನು ನಿನ್ನ ಕೈಯಿಂದ ತಪ್ಪಿಸಲಿ” ಎಂದು ಹೇಳಿದನು.
1 ಸಮುವೇಲನು 24 : 16 (IRVKN)
ದಾವೀದನ ಮಾತುಗಳು ಮುಗಿದ ನಂತರ ಸೌಲನು, “ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ?” ಅಂದು ಗಟ್ಟಿಯಾಗಿ ಅತ್ತನು.
1 ಸಮುವೇಲನು 24 : 17 (IRVKN)
ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತನೂ. ನಾನು ನಿನಗೆ ಕೇಡುಮಾಡಿದರೂ ನೀನು ನನಗೆ ಒಳ್ಳೆಯದನ್ನೇ ಮಾಡಿದಿ.
1 ಸಮುವೇಲನು 24 : 18 (IRVKN)
ಯೆಹೋವನು ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ. ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬುದು ಈ ಹೊತ್ತು ಪ್ರಕಟವಾಯಿತು.
1 ಸಮುವೇಲನು 24 : 19 (IRVKN)
ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುವನೋ? ನೀನು ಈ ಹೊತ್ತು ನನಗೆ ಉಪಕಾರಮಾಡಿದ್ದಕ್ಕಾಗಿ ಯೆಹೋವನು ನಿನಗೆ ಉಪಕಾರ ಮಾಡಲಿ.
1 ಸಮುವೇಲನು 24 : 20 (IRVKN)
ಕೇಳು, ನೀನು ಹೇಗೂ ಅರಸನಾಗುವಿ ಎಂದೂ ಇಸ್ರಾಯೇಲ್ ರಾಜ್ಯವು ನಿನ್ನಿಂದ ಸ್ಥಿರವಾಗುವುದೆಂದು ಬಲ್ಲೆನು.
1 ಸಮುವೇಲನು 24 : 21 (IRVKN)
ಹೀಗಿರುವುದರಿಂದ ನೀನು ನನ್ನ ಸಂತಾನವನ್ನು ನಿರ್ಮೂಲಮಾಡುವುದಿಲ್ಲವೆಂದೂ, ನಮ್ಮ ಕುಲದಿಂದ ನನ್ನ ಹೆಸರನ್ನು ತೆಗೆದುಹಾಕುವುದಿಲ್ಲವೆಂದೂ ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡು” ಎಂದು ಬೇಡಿಕೊಂಡ ಹಾಗೆ ದಾವೀದನು ಪ್ರಮಾಣಮಾಡಿದನು.
1 ಸಮುವೇಲನು 24 : 22 (IRVKN)
ಅನಂತರ ಸೌಲನು ತನ್ನ ಮನೆಗೆ ಹೊರಟನು. ದಾವೀದನು ತನ್ನ ಜನರೊಡನೆ ಆಶ್ರಯಗಿರಿಗೆ ಹೋದನು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22