1 ಸಮುವೇಲನು 3 : 1 (IRVKN)
ಸಮುವೇಲನಿಗಾದ ದೈವೋಕ್ತಿ ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆಮಾಡುತ್ತಿದ್ದನು. * ಅಮೋ. 8:11 ಆ ಕಾಲದಲ್ಲಿ ದೈವೋಕ್ತಿಗಳು ವಿರಳವಾಗಿದ್ದವು; ದೇವದರ್ಶನಗಳು ಅಪರೂಪವಾಗಿದ್ದವು.
1 ಸಮುವೇಲನು 3 : 2 (IRVKN)
ಏಲಿಯ ಕಣ್ಣುಗಳು ದಿನದಿನಕ್ಕೆ ಮೊಬ್ಬಾಗುತ್ತಾ ಬಂದು ಸರಿಯಾಗಿ ಕಾಣಿಸದೆಹೋಗಿದ್ದವು. ಅವನು ಒಂದು ರಾತ್ರಿ ತನ್ನ ಸ್ಥಳದಲ್ಲಿ ಮಲಗಿದ್ದನು;
1 ಸಮುವೇಲನು 3 : 3 (IRVKN)
ಸಮುವೇಲನು ಯೆಹೋವನ ಮಂದಿರದಲ್ಲಿ ದೇವರ ಮಂಜೂಷವಿದ್ದ ಸ್ಥಳದಲ್ಲಿ ಮಲಗಿದ್ದನು. ಆಗ [† ವಿಮೋ 27:20- 21 ]ದೇವದೀಪವು ಇನ್ನೂ ಉರಿಯುತ್ತಿತ್ತು.
1 ಸಮುವೇಲನು 3 : 4 (IRVKN)
ಯೆಹೋವನು ಸಮುವೇಲನನ್ನು ಕರೆದನು; ಸಮುವೇಲನು “ಇಗೋ ಬಂದೆ” ಎಂದು ಉತ್ತರಕೊಟ್ಟು ಒಡನೆ ಏಲಿಯ ಬಳಿಗೆ ಹೋಗಿ,
1 ಸಮುವೇಲನು 3 : 5 (IRVKN)
“ಇಗೋ ಬಂದಿದ್ದೇನೆ; ನೀನು ನನ್ನನ್ನು ಕರೆದೆಯಲ್ಲವೇ?” ಅಂದನು. ಆಗ ಏಲಿಯು, “ನಾನು ನಿನ್ನನ್ನು ಕರೆಯಲಿಲ್ಲ, ಹೋಗಿ ಮಲಗಿಕೋ” ಅಂದನು. ಸಮುವೇಲನು ಹೋಗಿ ಮಲಗಿದನು.
1 ಸಮುವೇಲನು 3 : 6 (IRVKN)
ಯೆಹೋವನು ತಿರುಗಿ, “ಸಮುವೇಲನೇ” ಎಂದು ಕರೆದನು. ಸಮುವೇಲನು ಕೂಡಲೆ ಎದ್ದು ಏಲಿಯ ಬಳಿಗೆ ಹೋಗಿ, “ಇಗೋ, ಬಂದಿದ್ದೇನೆ; ನೀನು ನನ್ನನ್ನು ಕರೆದೆಯಲ್ಲಾ” ಅನ್ನಲು ಅವನು, “ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲಾ, ಹೋಗಿ ಮಲಗಿಕೋ” ಎಂದನು.
1 ಸಮುವೇಲನು 3 : 7 (IRVKN)
ಆವರೆಗೂ ಸಮುವೇಲನಿಗೆ ಯೆಹೋವನ ಅನುಭವವಿರಲಿಲ್ಲ; ಅವನು ದೈವೋಕ್ತಿಗಳನ್ನು ಹೊಂದಿರಲಿಲ್ಲ.
1 ಸಮುವೇಲನು 3 : 8 (IRVKN)
ಯೆಹೋವನು ಸಮುವೇಲನನ್ನು ಮೂರನೆಯ ಸಾರಿ ಕರೆದನು. ಅವನು ತಟ್ಟನೆ ಏಲಿಯ ಹತ್ತಿರ ಹೋಗಿ, “ಇಗೋ, ಬಂದಿದ್ದೇನೆ, ನನ್ನನ್ನು ಕರೆದಿಯಲ್ಲಾ” ಅನ್ನಲು, ಹುಡುಗನನ್ನು ಕರೆದವನು ಯೆಹೋವನೇ ಎಂದು ಏಲಿಯು ತಿಳಿದು ಅವನಿಗೆ, “ಹೋಗಿ ಮಲಗಿಕೋ;
1 ಸಮುವೇಲನು 3 : 9 (IRVKN)
ಪುನಃ ಆತನು ನಿನ್ನನ್ನು ಕರೆದರೆ ಯೆಹೋವನೇ, ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ” ಎಂದು ಹೇಳು ಅಂದನು. ಸಮುವೇಲನು ತಿರುಗಿ ಹೋಗಿ ತನ್ನ ಸ್ಥಳದಲ್ಲಿ ಮಲಗಿಕೊಂಡನು.
1 ಸಮುವೇಲನು 3 : 10 (IRVKN)
ಯೆಹೋವನು ಪ್ರತ್ಯಕ್ಷನಾಗಿ ಮುಂಚಿನಂತೆಯೇ “ಸಮುವೇಲನೇ, ಸಮುವೇಲನೇ” ಅಂದನು. ಸಮುವೇಲನು, “ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ” ಎಂದನು.
1 ಸಮುವೇಲನು 3 : 11 (IRVKN)
ಯೆಹೋವನು ಸಮುವೇಲನಿಗೆ “ನಾನು ಇಸ್ರಾಯೇಲ್ಯರಲ್ಲಿ ಒಂದು ವಿಶೇಷಕಾರ್ಯವನ್ನು ನಡೆಸುವೆನು; [‡ ಯೆರೆ 19: 3 ]ಅದರ ವಿಷಯ ಕೇಳುವವರ ಎರಡು ಕಿವಿಗಳೂ ನಿಮಿರುವುವು.
1 ಸಮುವೇಲನು 3 : 12 (IRVKN)
ಏಲಿಯ ಮನೆಯನ್ನು ಕುರಿತು ತಿಳಿಸಿದ್ದೆಲ್ಲವನ್ನೂ ಆ ದಿನದಲ್ಲಿ ತಪ್ಪದೆ ನೆರವೇರಿಸುವೆನು.
1 ಸಮುವೇಲನು 3 : 13 (IRVKN)
ಅವನ ಮಕ್ಕಳು § ಅಥವಾ ದೇವದೂಷಕರೆಂದು. ಶಾಪಗ್ರಸ್ತರಾದರೆಂದು ಅವನಿಗೆ ತಿಳಿದು ಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿಮಿತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.
1 ಸಮುವೇಲನು 3 : 14 (IRVKN)
[* ಯೆಶಾ 22: 14 ]ಏಲಿಯ ಮನೆಯವರ ಅಪರಾಧಕ್ಕೆ ಯಜ್ಞ ಅಥವಾ ನೈವೇದ್ಯಗಳಿಂದ ಎಂದಿಗೂ ಪ್ರಾಯಶ್ಚಿತ್ತವಾಗುವುದಿಲ್ಲ ಎಂಬುದಾಗಿ ಆಣೆಯಿಟ್ಟಿದ್ದೇನೆ” ಎಂದು ಹೇಳಿದನು.
1 ಸಮುವೇಲನು 3 : 15 (IRVKN)
ಅನಂತರ ಸಮುವೇಲನು ಮಲಗಿ ಮುಂಜಾನೆಯಲ್ಲೇ ಎದ್ದು ಯೆಹೋವನ ಮಂದಿರದ ಬಾಗಿಲುಗಳನ್ನು ತೆರೆದನು. ಅವನು ತಾನು ಕಂಡದ್ದನ್ನು ಏಲಿಗೆ ತಿಳಿಸುವುದಕ್ಕೆ ಭಯಪಟ್ಟನು.
1 ಸಮುವೇಲನು 3 : 16 (IRVKN)
ಆದರೆ ಏಲಿಯು, “ನನ್ನ ಮಗನೇ, ಸಮುವೇಲನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು.
1 ಸಮುವೇಲನು 3 : 17 (IRVKN)
ಆಗ ಏಲಿಯು ಅವನಿಗೆ, “ಯೆಹೋವನು ನಿನಗೆ ತಿಳಿಸಿದ್ದೇನು? ಆತನ ಮಾತುಗಳಲ್ಲಿ ಒಂದನ್ನಾದರೂ ಮುಚ್ಚಿಡಬೇಡ; [† ರೂತ 1: 17 ]ಮುಚ್ಚಿಟ್ಟರೆ ಆತನು ಬೇಕಾದ ಹಾಗೆ ನಿನ್ನನ್ನು ದಂಡಿಸಲಿ” ಎಂದು ಹೇಳಲು
1 ಸಮುವೇಲನು 3 : 18 (IRVKN)
ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನು ತಿಳಿಸಿದನು. ಏಲಿಯು ಅದನ್ನು ಕೇಳಿ, [‡ ಯೋಬ 1:21; 2: 10 ]“ಆತನು ಯೆಹೋವನು; ತನಗೆ ಸರಿಕಾಣುವುದನ್ನು ಮಾಡಲಿ” ಎಂದನು.
1 ಸಮುವೇಲನು 3 : 19 (IRVKN)
ಸಮುವೇಲನು ದೊಡ್ಡವನಾಗುತ್ತಾ ಬಂದನು. ಯೆಹೋವನು ಅವನೊಡನೆ ಇದ್ದುದ್ದರಿಂದ § ಅಥವಾ ಯೆಹೋವನ. ಅವನ ಪ್ರವಾದನೆಗಳಲ್ಲಿ ಒಂದೂ ಬಿದ್ದುಹೋಗಲಿಲ್ಲ.
1 ಸಮುವೇಲನು 3 : 20 (IRVKN)
ಯೆಹೋವನು ಅವನನ್ನು ತನ್ನ ಪ್ರವಾದಿಯನ್ನಾಗಿ ನೇಮಿಸಿಕೊಂಡದ್ದು ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲಾ ಇಸ್ರಾಯೇಲರಿಗೆ ಗೊತ್ತಾಯಿತು.
1 ಸಮುವೇಲನು 3 : 21 (IRVKN)
ಯೆಹೋವನು ಶೀಲೋವಿನಲ್ಲಿ ದರ್ಶನಕೊಡುವುದಕ್ಕೆ ಪ್ರಾರಂಭಿಸಿ ತನ್ನ ವಾಕ್ಯದಿಂದ ಸಮುವೇಲನಿಗೆ ತನ್ನನ್ನು ಪ್ರಕಟಿಸಿಕೊಳ್ಳುತ್ತಾ ಬಂದನು. ಸಮುವೇಲನು ಇಸ್ರಾಯೇಲರೆಲ್ಲರಿಗೆ ದೈವೋತ್ತರಗಳನ್ನು ತಿಳಿಸುತ್ತಿದ್ದನು.
❮
❯
1
2
3
4
5
6
7
8
9
10
11
12
13
14
15
16
17
18
19
20
21