1 ಸಮುವೇಲನು 31 : 1 (IRVKN)
ಸೌಲನ ಮತ್ತು ಅವನ ಮಕ್ಕಳ ಮರಣ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು.
1 ಸಮುವೇಲನು 31 : 2 (IRVKN)
ಫಿಲಿಷ್ಟಿಯರು ಸೌಲನನ್ನೂ ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ, ಅವನ ಮಕ್ಕಳಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದರು.
1 ಸಮುವೇಲನು 31 : 3 (IRVKN)
ಸೌಲನಿದ್ದ ಕಡೆಯಲ್ಲಿ ಯುದ್ಧವು ಬಹು ಘೋರವಾಗಿತ್ತು. ಬಿಲ್ಲುಗಾರನು ಅವನಿಗೆ ಗುರಿಯಿಟ್ಟನು.
1 ಸಮುವೇಲನು 31 : 4 (IRVKN)
ಆದುದರಿಂದ ಸೌಲನು ಬಹು ಭೀತನಾಗಿ ತನ್ನ ಆಯುಧವಾಹಕನಿಗೆ “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು. ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನ್ನನ್ನು ತಿವಿದು, ಅಪಕೀರ್ತಿಯನ್ನು ಉಂಟುಮಾಡಾರು” ಎಂದು ಹೇಳಲು ಅವನು ಹೆದರಿ, “ನಾನು ಕೊಲ್ಲಲಾರೆ” ಎಂದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.
1 ಸಮುವೇಲನು 31 : 5 (IRVKN)
ಸೌಲನು ಮರಣ ಹೊಂದಿರುವುದನ್ನು ಅವನ ಆಯುಧವಾಹಕನು ಕಂಡು ತಾನೂ ತನ್ನ ಕತ್ತಿಯ ಮೇಲೆ ಬಿದ್ದು ಅಲ್ಲಿಯೇ ಸತ್ತನು.
1 ಸಮುವೇಲನು 31 : 6 (IRVKN)
ಹೀಗೆ ಸೌಲನೂ ಅವನ ಮೂರು ಮಂದಿ ಮಕ್ಕಳೂ, ಅವನ ಆಯುಧವಾಹಕನು, ಎಲ್ಲಾ ಆಳುಗಳೂ ಅದೇ ದಿನದಲ್ಲಿ ಸತ್ತರು.
1 ಸಮುವೇಲನು 31 : 7 (IRVKN)
ಇಸ್ರಾಯೇಲರ ಭಟರು ಸೋತುಹೋದರು. ಸೌಲನೂ ಅವನ ಮಕ್ಕಳೂ ಸತ್ತರು ಎಂಬ ವರ್ತಮಾನವನ್ನು ತಗ್ಗಿನ ಆಚೆಯಲ್ಲಿಯೂ ಯೊರ್ದನಿನ ಆಚೆಯಲ್ಲಿಯೂ ವಾಸವಾಗಿದ್ದ ಇಸ್ರಾಯೇಲರು ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಮಾಡಿದರು.
1 ಸಮುವೇಲನು 31 : 8 (IRVKN)
ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕೆ ಬಂದಾಗ, ಸೌಲನೂ ಅವನ ಮೂರು ಮಂದಿ ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವುದನ್ನು ಕಂಡು
1 ಸಮುವೇಲನು 31 : 9 (IRVKN)
ಸೌಲನ ತಲೆಯನ್ನು ಕಡಿದು ಅವನ ಆಯುಧಗಳನ್ನು ತೆಗೆದುಕೊಂಡನು. ಅವುಗಳನ್ನು ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿ, ತಮ್ಮ ಎಲ್ಲ ಜನರಿಗೂ ದೇವಸ್ಥಾನಗಳಿಗೂ ಜಯವಾರ್ತೆಯನ್ನು ಮುಟ್ಟಿಸಿದರು.
1 ಸಮುವೇಲನು 31 : 10 (IRVKN)
ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಗುಡಿಯಲ್ಲಿಟ್ಟರು. ಅವನ ಶವವನ್ನು ಬೇತ್ಷೆಯಾನಿನ ಕೋಟೆ ಗೋಡೆಗೆ ನೇತುಹಾಕಿದರು.
1 ಸಮುವೇಲನು 31 : 11 (IRVKN)
ಫಿಲಿಷ್ಟಿಯರು ಸೌಲನಿಗೆ ಏನೇನು ಮಾಡಿದರೆಂಬ ವರ್ತಮಾನ ಯಾಬೆಷ್ ಗಿಲ್ಯಾದಿನವರಿಗೆ ಮುಟ್ಟಿದಾಗ
1 ಸಮುವೇಲನು 31 : 12 (IRVKN)
ಅವರಲ್ಲಿದ್ದ ಶೂರರೆಲ್ಲರೂ ಹೊರಟು, ರಾತ್ರಿಯೆಲ್ಲಾ ನಡೆದುಹೋಗಿ, ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಬೇತ್ಷೆಯಾನಿನ ಗೋಡೆಯಿಂದ ಇಳಿಸಿ, ಯಾಬೇಷಿಗೆ ತೆಗೆದುಕೊಂಡು ಬಂದು ಅಲ್ಲಿ ಅವುಗಳನ್ನು ಸುಟ್ಟುಬಿಟ್ಟರು.
1 ಸಮುವೇಲನು 31 : 13 (IRVKN)
ಅವರ ಎಲುಬುಗಳನ್ನು ಯಾಬೇಷಿನಲ್ಲಿದ್ದ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ, ಏಳು ದಿನ ಉಪವಾಸ ಮಾಡಿದರು.

1 2 3 4 5 6 7 8 9 10 11 12 13