1 ಸಮುವೇಲನು 4 : 1 (IRVKN)
ಫಿಲಿಷ್ಟಿಯರ ಜಯ - ಏಲಿಯ ಮಕ್ಕಳ ಮರಣ ಇಸ್ರಾಯೇಲರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸಮೀಪದಲ್ಲಿ ಪಾಳೆಯಮಾಡಿಕೊಂಡರು; ಫಿಲಿಷ್ಟಿಯರು ಬಂದು ಅಫೇಕಿನಲ್ಲಿ ಇಳಿದುಕೊಂಡರು.
1 ಸಮುವೇಲನು 4 : 2 (IRVKN)
ಇವರು ಇಸ್ರಾಯೇಲರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧಮಾಡಲು ಇಸ್ರಾಯೇಲರು ಸೋತರು; ಫಿಲಿಷ್ಟಿಯರು ರಣರಂಗದಲ್ಲಿ ಸುಮಾರು ನಾಲ್ಕು ಸಾವಿರ ಮಂದಿ ಇಸ್ರಾಯೇಲರನ್ನು ಸಂಹರಿಸಿದರು.
1 ಸಮುವೇಲನು 4 : 3 (IRVKN)
ಇಸ್ರಾಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರ ಹಿರಿಯರು ಅವರಿಗೆ, “ಯೆಹೋವನು ಈ ಹೊತ್ತು ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶೀಲೋವಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸೋಣ; ಆತನು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ತಪ್ಪಿಸಲಿ” ಎಂದು ಆಲೋಚನೆ ಹೇಳಿದ್ದರಿಂದ ಅವರು ಜನರನ್ನು ಕಳುಹಿಸಿ
1 ಸಮುವೇಲನು 4 : 4 (IRVKN)
[* ವಿಮೋ 25: 22 ]ಕೆರೂಬಿಗಳ ಮಧ್ಯದಲ್ಲಿ ಆಸೀನನಾಗಿರುವ ಸೇನಾಧೀಶ್ವರ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.
1 ಸಮುವೇಲನು 4 : 5 (IRVKN)
ಯೆಹೋವನ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇಲ್ಯರೆಲ್ಲಾ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.
1 ಸಮುವೇಲನು 4 : 6 (IRVKN)
ಫಿಲಿಷ್ಟಿಯರು ಇದನ್ನು ಕೇಳಿ, “ಇಬ್ರಿಯರ ಪಾಳೆಯದಲ್ಲಿ ಇಂಥ ಆರ್ಭಟಕ್ಕೇನು ಕಾರಣ” ಎಂದು ವಿಚಾರಿಸುವಲ್ಲಿ ಯೆಹೋವನ ಮಂಜೂಷವು ಪಾಳೆಯದಲ್ಲಿ ಬಂದದ್ದೇ ಕಾರಣವೆಂದು ತಿಳಿದುಕೊಂಡರು.
1 ಸಮುವೇಲನು 4 : 7 (IRVKN)
ದೇವರು ಇವರ ಪಾಳೆಯಕ್ಕೆ ಬಂದಿದ್ದಾನಲ್ಲಾ ಎಂದು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟು, “ಅಯ್ಯೋ! ಮುಂಚೆ ಹೀಗಾಗಿರಲ್ಲಿಲ್ಲ.
1 ಸಮುವೇಲನು 4 : 8 (IRVKN)
ಅಯ್ಯೋ! ಪರಾಕ್ರಮವುಳ್ಳ ಈ ದೇವರ ಕೈಯಿಂದ ನಮ್ಮನ್ನು ಬಿಡಿಸುವವರು ಯಾರು? ಐಗುಪ್ತ್ಯರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೋ!
1 ಸಮುವೇಲನು 4 : 9 (IRVKN)
[† 1 ಕೊರಿ 16: 13 ]ಫಿಲಿಷ್ಟಿಯರೇ, ಬಲಗೊಳ್ಳಿರಿ, ಶೂರರಾಗಿರಿ; ನಿಮಗೆ ದಾಸರಾಗಿದ್ದ ಇಬ್ರಿಯರಿಗೆ ನೀವೇ ದಾಸರಾದೀರಿ. ಆದಕಾರಣ ಶೌರ್ಯದಿಂದ ಯುದ್ಧಮಾಡಬೇಕು” ಎಂದು ಹೇಳಿಕೊಂಡು
1 ಸಮುವೇಲನು 4 : 10 (IRVKN)
ಫಿಲಿಷ್ಟಿಯರು ಯುದ್ಧಮಾಡಲು ಇಸ್ರಾಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು.
1 ಸಮುವೇಲನು 4 : 11 (IRVKN)
[‡ ಕೀರ್ತ 78:60- 61 ]ದೇವರ ಮಂಜೂಷವು ಶತ್ರುವಶವಾಯಿತು; ಏಲಿಯ ಮಕ್ಕಳಾದ ಹೊಫ್ನಿಯೂ ಮತ್ತು ಫೀನೆಹಾಸನೂ ಹತರಾದರು.
1 ಸಮುವೇಲನು 4 : 12 (IRVKN)
ಏಲಿಯ ಮರಣ ಅದೇ ದಿನ ಒಬ್ಬ ಬೆನ್ಯಾಮೀನನು ರಣರಂಗದಿಂದ ತಪ್ಪಿಸಿಕೊಂಡು [§ ಯೆಹೋ. 7: 6 ]ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು ಶೀಲೋವಿಗೆ ಬಂದು
1 ಸಮುವೇಲನು 4 : 13 (IRVKN)
ನಡೆದದ್ದನ್ನು ತಿಳಿಸಲಾಗಿ ಜನರೆಲ್ಲಾ ಗೋಳಾಡತೊಡಗಿದರು. ದೇವರ ಮಂಜೂಷವೇನಾಯಿತೋ ಎಂಬ ಚಿಂತೆಯಿಂದ ಮಂದಿರದ್ವಾರದ ಬಳಿಯಲ್ಲಿ ಆಸೀನನಾಗಿ ದಾರಿಯನ್ನು ನೋಡುತ್ತಿದ್ದ ಏಲಿಯು ಆ ದುಃಖದ ಧ್ವನಿಯನ್ನು ಕೇಳಿ
1 ಸಮುವೇಲನು 4 : 14 (IRVKN)
ಈ ಗದ್ದಲವೇನೆಂದು ವಿಚಾರಿಸಲು ಒಡನೆ ಆ ಮನುಷ್ಯನು ಏಲಿಯ ಬಳಿಗೆ ಬಂದು ನಡೆದದ್ದೆಲ್ಲವನ್ನೂ ತಿಳಿಸಿದನು. ಏಲಿಯು ತೊಂಭತ್ತೆಂಟು ವರ್ಷದವನು;
1 ಸಮುವೇಲನು 4 : 15 (IRVKN)
ಕಣ್ಣುಗಳು ಇಂಗಿಹೋಗಿ ಕುರುಡನಾಗಿದ್ದನು.
1 ಸಮುವೇಲನು 4 : 16 (IRVKN)
ಆ ಮನುಷ್ಯನು ಏಲಿಗೆ, “ನಾನು ರಣರಂಗದಲ್ಲಿದ್ದವನು; ಈ ಹೊತ್ತೇ ಅಲ್ಲಿಂದ ಓಡಿಬಂದೆನು” ಅನ್ನಲು ಏಲಿಯು ಅವನನ್ನು, “ನನ್ನ ಮಗನೇ, ವರ್ತಮಾನವೇನು?” ಎಂದು ಕೇಳಿದನು.
1 ಸಮುವೇಲನು 4 : 17 (IRVKN)
ಅವನು ಏಲಿಗೆ, “ಇಸ್ರಾಯೇಲರು ಫಿಲಿಷ್ಟಿಯರಿಗೆ ಬೆನ್ನುತೋರಿಸಿದರು; ಮಹಾಸಂಹಾರವಾಯಿತು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸರು ಸತ್ತರು; ದೇವರ ಮಂಜೂಷವು ಶತ್ರುವಶವಾಯಿತು” ಎಂದು ತಿಳಿಸಿದನು.
1 ಸಮುವೇಲನು 4 : 18 (IRVKN)
ಮುದುಕನೂ, ಸ್ಥೂಲಕಾಯನೂ ಆದ ಏಲಿಯು ದೇವರ ಒಡಂಬಡಿಕೆಯ ಮಂಜೂಷದ ವರ್ತಮಾನವನ್ನು ಕೇಳಿದೊಡನೆಯೇ ಪೀಠದಿಂದ ಹಿಂದಕ್ಕೆ ಬಾಗಿಲಿನ ಕಡೆಗೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಅವನು ಇಸ್ರಾಯೇಲರನ್ನು ನಲ್ವತು ವರ್ಷ ಪಾಲಿಸಿದ್ದನು.
1 ಸಮುವೇಲನು 4 : 19 (IRVKN)
ಅವನ ಸೊಸೆಯಾದ ಫೀನೆಹಾಸನ ಹೆಂಡತಿ ದಿನತುಂಬಿದ ಗರ್ಭಿಣಿಯಾಗಿದ್ದಳು. ಅವಳು ದೇವರ ಮಂಜೂಷವು ಶತ್ರು ವಶವಾಯಿತೆಂಬ ವರ್ತಮಾನವನ್ನೂ, ತನ್ನ ಮಾವನೂ, ತನ್ನ ಗಂಡನೂ ಹತರಾದದ್ದನ್ನೂ ಕೇಳಿದೊಡನೆ ಪ್ರಸವವೇದನೆಯುಂಟಾಗಿ ಮಗುವನ್ನು ಹೆತ್ತಳು.
1 ಸಮುವೇಲನು 4 : 20 (IRVKN)
ಆಕೆಯು ಸಾಯುವ ಸಮಯದಲ್ಲಿ ಬಳಿಯಲ್ಲಿ ನಿಂತಿದ್ದ ಸ್ತ್ರೀಯರು, “ಭಯಪಡಬೇಡ, ಮಗನನ್ನು ಹಡೆದಿರುವೆ” ಎಂದು ಹೇಳಿದರು. ಆಕೆಯು ಅವರ ಮಾತಿಗೆ ಲಕ್ಷ್ಯಕೊಡಲಿಲ್ಲ, ಪ್ರತ್ಯುತ್ತರಕೊಡಲಿಲ್ಲ.
1 ಸಮುವೇಲನು 4 : 21 (IRVKN)
ದೇವರ ಮಂಜೂಷವು ಶತ್ರುವಶವಾದ್ದರಿಂದಲೂ, ಮಾವನೂ, ಗಂಡನೂ ಮೃತರಾದ್ದರಿಂದಲೂ, “ಮಹಿಮೆಯು ಇಸ್ರಾಯೇಲರನ್ನು ಬಿಟ್ಟು ಹೋಯಿತೆಂದು ಹೇಳಿ ಆ ಕೂಸಿಗೆ * ಅಂದರೆ ಮಹಿಮೆಯು ಬಿಟ್ಟುಹೋಯಿತು. ಈಕಾಬೋದ್” ಎಂದು ಹೆಸರಿಟ್ಟಳು.
1 ಸಮುವೇಲನು 4 : 22 (IRVKN)
“ದೇವರ ಮಂಜೂಷವು ಶತ್ರುವಶವಾದ್ದರಿಂದಲೇ ಇಸ್ರಾಯೇಲರ ಮಹಿಮೆಯು ಹೊರಟುಹೋಯಿತೆಂದು” ಹೇಳಿದಳು.

1 2 3 4 5 6 7 8 9 10 11 12 13 14 15 16 17 18 19 20 21 22