1 ಸಮುವೇಲನು 5 : 1 (IRVKN)
{ದೇವರ ಮಂಜೂಷವು ಫಿಲಿಷ್ಟಿಯರಿಗೆ ಮಾರಕವಾದದ್ದು} [PS] ಫಿಲಿಷ್ಟಿಯರು ದೇವರ ಮಂಜೂಷವನ್ನು ಎಬೆನೆಜೆರಿನಿಂದ ಅಷ್ಡೋದಿನಲ್ಲಿರುವ
1 ಸಮುವೇಲನು 5 : 2 (IRVKN)
[* ನ್ಯಾಯ 16:23.] ದಾಗೋನನ ಗುಡಿಗೆ ತೆಗೆದುಕೊಂಡು ಹೋಗಿ ಅಲ್ಲಿ ದಾಗೋನನ ಮಗ್ಗುಲಲ್ಲೇ ಇಟ್ಟರು.
1 ಸಮುವೇಲನು 5 : 3 (IRVKN)
ಅಷ್ಡೋದಿನವರು ಮರುದಿನ ಬೆಳಿಗ್ಗೆ ಎದ್ದು ನೋಡಲಾಗಿ [† ಯೆಶಾ 46:1-2] ದಾಗೋನ್ ವಿಗ್ರಹವು ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿರುವುದನ್ನು ಕಂಡು ಅದನ್ನು ಎತ್ತಿ ತಿರುಗಿ ಅದರ ಸ್ಥಳದಲ್ಲಿಟ್ಟರು.
1 ಸಮುವೇಲನು 5 : 4 (IRVKN)
ಮಾರನೆಯ ದಿನ ಬೆಳಿಗ್ಗೆ ನೋಡುವಾಗ ದಾಗೋನನ ತಲೆಯೂ, ಕೈಗಳೂ ಕಡಿಯಲ್ಪಟ್ಟು ಹೊಸ್ತಿಲಿನ ಮೇಲೆ ಬಿದ್ದಿದ್ದವು; ಮುಂಡ ಮಾತ್ರ ಯೆಹೋವನ ಮಂಜೂಷದ ಮುಂದೆ ಬಿದ್ದಿತ್ತು;
1 ಸಮುವೇಲನು 5 : 5 (IRVKN)
ಆದ್ದರಿಂದ ಈ ದಿನದ ವರೆಗೂ ದಾಗೋನನ ಯಾಜಕರೂ ಮತ್ತು ದಾಗೋನನ ಮನೆಗೆ ಬರುವವರೆಲ್ಲರೂ [‡ ಚೆಫ. 1:9.] ಅಷ್ಡೋದಿನ ಗುಡಿಯ ಹೊಸ್ತಿಲನ್ನು ಇಂದಿಗೂ ತುಳಿಯದಿರುವುದಕ್ಕೆ ಇದೇ ಕಾರಣ. [PE][PS]
1 ಸಮುವೇಲನು 5 : 6 (IRVKN)
[§ ಅ.ಕೃ. 13:11.] ಯೆಹೋವನ ಹಸ್ತವು ಅಷ್ಡೋದಿನವರಿಗೆ ಬಾಧಕವಾಗಿತ್ತು; ಆತನು ಆ ನಗರದಲ್ಲಿಯೂ, ಅದರ ಗ್ರಾಮಗಳಲ್ಲಿಯೂ ಗಡ್ಡೆ ರೋಗವನ್ನು ಬರಮಾಡಿ ಅವರನ್ನು ನಾಶಮಾಡಿದನು.
1 ಸಮುವೇಲನು 5 : 7 (IRVKN)
ಅಷ್ಡೋದಿನ ಜನರು ಅದನ್ನು ನೋಡಿ, “ಇಸ್ರಾಯೇಲಿನ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಏಕೆಂದರೆ ಆತನ ಹಸ್ತವು ನಮಗೂ, ನಮ್ಮ ದೇವರಾದ ದಾಗೋನನಿಗೂ ಬಾಧಕವಾಗಿದೆ” ಎಂದು ಹೇಳಿ
1 ಸಮುವೇಲನು 5 : 8 (IRVKN)
[* ಯೆಹೋ. 13:3.] ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ, “ಇಸ್ರಾಯೇಲಿನ ದೇವರ ಮಂಜೂಷವನ್ನು ಏನು ಮಾಡೋಣ?” ಎಂದು ಕೇಳಲು ಅವರು, “ಅದನ್ನು ಗತ್ ಊರಿಗೆ ಕಳುಹಿಸಿ ಕೊಡಬೇಕೆಂದು ನಿರ್ಣಯಿಸಿದರು.” ಅವರು ಹಾಗೆಯೇ ಇಸ್ರಾಯೇಲಿನ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.
1 ಸಮುವೇಲನು 5 : 9 (IRVKN)
ಮಂಜೂಷವು ಅಲ್ಲಿ ಹೋದ ಮೇಲೆ [† ಧರ್ಮೋ 2:15.] ಯೆಹೋವನ ಹಸ್ತವು ಆ ಊರಿನವರಿಗೂ ಬಾಧಕವಾದುದರಿಂದ ಅಲ್ಲಿ ದೊಡ್ಡ ಗದ್ದಲವಾಯಿತು. ಯೆಹೋವನು ಊರಿನ ಚಿಕ್ಕವರಲ್ಲಿಯೂ, ದೊಡ್ಡವರಲ್ಲಿಯೂ ಗಡ್ಡೆಗಳನ್ನು ಬರಮಾಡಿದನು.
1 ಸಮುವೇಲನು 5 : 10 (IRVKN)
ಆದ್ದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು, “ನೋಡಿರಿ, ನಮ್ಮನ್ನೂ, ನಮಗೆ ಸೇರಿದವರನ್ನೂ ಕೊಲ್ಲುವುದಕ್ಕೋಸ್ಕರ ಇಸ್ರಾಯೇಲಿನ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ” ಎಂದು ಕೂಗಿಕೊಂಡರು.
1 ಸಮುವೇಲನು 5 : 11 (IRVKN)
ದೇವರ ಹಸ್ತವು ಅವರಿಗೂ ಬಾಧಕವಾಗಿದ್ದುದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ ಅವರಿಗೆ, “ಇಸ್ರಾಯೇಲಿನ ದೇವರ ಮಂಜೂಷವನ್ನು ಹಾಗೆಯೇ ಅದರ ಸ್ಥಳಕ್ಕೆ ಕಳುಹಿಸಿಬಿಡಿರಿ” ಅಂದರು.
1 ಸಮುವೇಲನು 5 : 12 (IRVKN)
ಸಾಯದೆ ಉಳಿದ ಜನರಿಗೂ ಗಡ್ಡೆರೋಗ ಬಂದಿತ್ತು. ಪಟ್ಟಣದ ಗೋಳಾಟವು ಆಕಾಶವನ್ನು ಮುಟ್ಟಿತು. [PE]

1 2 3 4 5 6 7 8 9 10 11 12

BG:

Opacity:

Color:


Size:


Font: