1 ಸಮುವೇಲನು 6 : 1 (IRVKN)
ಫಿಲಿಷ್ಟಿಯರು ದೇವರ ಮಂಜೂಷವನ್ನು ಹಿಂದಕ್ಕೆ ಕಳುಹಿಸಿದ್ದು ಯೆಹೋವನ ಮಂಜೂಷವು ಫಿಲಿಷ್ಟಿಯರ ದೇಶದಲ್ಲಿ ಏಳು ತಿಂಗಳ ಕಾಲ ಇತ್ತು.
1 ಸಮುವೇಲನು 6 : 2 (IRVKN)
ನಂತರ ಫಿಲಿಷ್ಟಿಯರು ಪೂಜಾರಿಗಳನ್ನೂ, ಕಣಿಹೇಳುವವರನ್ನೂ ಕರೆದು ಅವರಿಗೆ, “ಯೆಹೋವನ ಮಂಜೂಷವನ್ನು ಏನು ಮಾಡಬೇಕು? ಅದನ್ನು ಪುನಃ ಅದರ ಸ್ಥಳಕ್ಕೆ ಹೇಗೆ ಕಳುಹಿಸಬೇಕು ತಿಳಿಸಿರಿ” ಅನ್ನಲು
1 ಸಮುವೇಲನು 6 : 3 (IRVKN)
ಅವರು, “ನೀವು ಇಸ್ರಾಯೇಲಿನ ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು. [* ಯಾಜಕ. 5: 15- 16 ]ಪ್ರಾಯಶ್ಚಿತ್ತದ್ರವ್ಯದೊಡನೆ ಕಳುಹಿಸಿದರೆ ಮಾತ್ರ ಗುಣಹೊಂದುವಿರಿ. ಆತನ ಶಿಕ್ಷಾಹಸ್ತವು ನಿಮ್ಮನ್ನು ಬಾಧಿಸುತ್ತಿರುವುದಕ್ಕೆ ಕಾರಣವು ಗೊತ್ತಾಗುವುದು” ಎಂದು ಹೇಳಿದರು.
1 ಸಮುವೇಲನು 6 : 4 (IRVKN)
ಜನರು, “ನಾವು ಪ್ರಾಯಶ್ಚಿತ್ತಾರ್ಥವಾಗಿ ಏನು ಕಳುಹಿಸಬೇಕು?” ಎಂದು ಕೇಳಲು ಅವರು, “ನಿಮಗೂ ನಿಮ್ಮ ಪ್ರಭುಗಳಿಗೂ ಒಂದೇ ವಿಧವಾದ ವ್ಯಾಧಿ ಇರುವುದರಿಂದ [† ಯೆಹೋ. 13: 3 ]ಪ್ರಭುಗಳ ಸಂಖ್ಯೆಗೆ ಸರಿಯಾಗಿ ಬಂಗಾರದ ಐದು ಗಡ್ಡೆಗಳನ್ನೂ, ಬಂಗಾರದ ಐದು ಇಲಿಗಳನ್ನು ಮಾಡಿಸಬೇಕು.
1 ಸಮುವೇಲನು 6 : 5 (IRVKN)
ನೀವು ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಗಡ್ಡೆ ಮತ್ತು ಇಲಿ ಇವುಗಳ ಸ್ವರೂಪಗಳನ್ನು ಚಿನ್ನದಿಂದ ಮಾಡಿಸಿ, ಇಸ್ರಾಯೇಲಿನ ದೇವರಿಗೆ ಅದನ್ನು ಅರ್ಪಿಸಿ ಮಹಿಮೆಯನ್ನು ಸಲ್ಲಿಸಿದರೆ, ಆತನ ಶಿಕ್ಷಾಹಸ್ತವು ನಿಮ್ಮನ್ನೂ, ನಿಮ್ಮ ದೇವತೆಗಳನ್ನೂ, ಪ್ರಾಂತ್ಯಗಳನ್ನೂ ಬಿಟ್ಟುಹೋದೀತು.
1 ಸಮುವೇಲನು 6 : 6 (IRVKN)
ಐಗುಪ್ತರಂತೆಯೂ ಫರೋಹನಂತೆಯೂ ನಿಮ್ಮ ಹೃದಯಗಳನ್ನು ಕಠಿಣಪಡಿಸಿಕೊಳ್ಳುವುದೇಕೆ? [‡ ವಿಮೋ 8:13; 12: 31 ]ಇಸ್ರಾಯೇಲ್ಯರನ್ನು ಕಳುಹಿಸಲೊಲ್ಲದ ಇವರನ್ನು ಯೆಹೋವನು ಎಷ್ಟೋ ವಿಧವಾಗಿ ಬಾಧಿಸಬೇಕಾಯಿತಲ್ಲಾ.
1 ಸಮುವೇಲನು 6 : 7 (IRVKN)
ಈಗ ನೀವು ಒಂದು [§ 2 ಸಮು 6: 3 ]ಹೊಸ ಬಂಡಿಯನ್ನು ಮಾಡಿಸಿರಿ. ಅದಕ್ಕೆ ಹಾಲು ಕರೆಯುವ ಮತ್ತು * ಅರಣ್ಯ 19: 2. ಎಂದೂ ನೊಗಹೊರದ ಎರಡು ಹಸುಗಳನ್ನು ಹೂಡಿಸಿರಿ. ಆ ಹಸುಗಳ ಕರುಗಳನ್ನು ಮನೆಗೆ ತೆಗೆದುಕೊಂಡು ಹೋಗಿರಿ
1 ಸಮುವೇಲನು 6 : 8 (IRVKN)
ಆ ಬಂಡಿಯ ಮೇಲೆ ಯೆಹೋವನ ಮಂಜೂಷವನ್ನೂ, ನೀವು ಪ್ರಾಯಶ್ಚಿತ್ತಾರ್ಥವಾಗಿ ಕೊಡುವ ಬಂಗಾರದ ವಸ್ತುಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಟ್ಟು ಕಳುಹಿಸಿಬಿಡಿರಿ.
1 ಸಮುವೇಲನು 6 : 9 (IRVKN)
ಅ ಹಸುಗಳು ತಾವಾಗಿ ಸ್ವದೇಶದ ದಾರಿ ಹಿಡಿದು [† ಯೆಹೋ 15: 10 ]ಬೇತ್ ಷೆಮೆಷಿನ ಕಡೆಗೆ ಹೋದರೆ ಈ ದೊಡ್ಡ ಕೇಡನ್ನು ಬರಮಾಡಿದವನು ಯೆಹೋವನೇ ಎಂದೂ, ಆ ಮಾರ್ಗವನ್ನು ಹಿಡಿಯದಿದ್ದರೆ ಆತನ ಹಸ್ತವು ನಮ್ಮನ್ನು ಬಾಧಿಸಲ್ಲಿಲ್ಲ ಇದು ಆಕಸ್ಮಿಕವಾಗಿ ಬಂದಿದೆ ಎಂದು, ತಿಳಿದುಕೊಳ್ಳಿರಿ” ಅಂದರು.
1 ಸಮುವೇಲನು 6 : 10 (IRVKN)
ಅದೇ ಪ್ರಕಾರ ಫಿಲಿಷ್ಟಿಯರು ಹಾಲುಕರೆಯುವ ಎರಡು ಹಸುಗಳನ್ನು ಹಿಡಿದುಕೊಂಡು ಬಂಡಿಗೆ ಹೂಡಿ ಅವುಗಳ ಕರುಗಳನ್ನು ಮನೆಯಲ್ಲಿ ಕಟ್ಟಿಹಾಕಿದರು.
1 ಸಮುವೇಲನು 6 : 11 (IRVKN)
ಯೆಹೋವನ ಮಂಜೂಷವನ್ನೂ, ಚಿನ್ನದ ಇಲಿಗಳೂ, ಗಡ್ಡೆಗಳೂ ಇದ್ದ ಚಿಕ್ಕ ಪೆಟ್ಟಿಗೆಯನ್ನೂ ಬಂಡಿಯ ಮೇಲಿಟ್ಟರು.
1 ಸಮುವೇಲನು 6 : 12 (IRVKN)
ಕೂಡಲೆ ಆ ಹಸುಗಳು ಬೇತ್ ಷೆಮೆಷಿನ ರಾಜಮಾರ್ಗವನ್ನು ಹಿಡಿದು, ಕೂಗುತ್ತಾ ನೆಟ್ಟಗೆ ಮುಂದೆ ನಡೆದವು; ಎಡಬಲಕ್ಕೆ ತಿರುಗಲಿಲ್ಲ. ಫಿಲಿಷ್ಟಿಯ ಪ್ರಭುಗಳು ಬೇತ್ ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆ ಹೋದರು.
1 ಸಮುವೇಲನು 6 : 13 (IRVKN)
ಬೇತ್ ಷೆಮೆಷಿನವರು ಅಲ್ಲಿನ ತಗ್ಗಿನಲ್ಲಿ ಗೋದಿಯ ಬೆಳೆಯನ್ನು ಕೊಯ್ಯುತ್ತಿದ್ದರು. ಅವರು ಕಣ್ಣೆತ್ತಿ ಯೆಹೋವನ ಮಂಜೂಷವನ್ನು ನೋಡಿ ಬಹು ಸಂತೋಷಪಟ್ಟರು.
1 ಸಮುವೇಲನು 6 : 14 (IRVKN)
ಬಂಡಿಯು ಬೇತ್ ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿದ್ದ ದೊಡ್ಡ ಕಲ್ಲಿನ ಬಳಿಯಲ್ಲಿ ಬಂದು ನಿಂತಿತು. ಆಗ ಅವರು ಹೋಗಿ ಬಂಡಿಯ ಕಟ್ಟಿಗೆಗಳನ್ನು ಸೀಳಿ, ಆ ಹಸುಗಳನ್ನು ಯೆಹೋವನಿಗೆ ಯಜ್ಞಮಾಡಿದರು.
1 ಸಮುವೇಲನು 6 : 15 (IRVKN)
ಲೇವಿಯರು ಯೆಹೋವನ ಮಂಜೂಷವನ್ನೂ, ಚಿನ್ನದ ವಸ್ತುಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ ಆ ದೊಡ್ಡ ಕಲ್ಲಿನ ಮೇಲಿಟ್ಟರು. ಬೇತ್ ಷೆಮೆಷಿನವರು ಅದೇ ದಿನ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಮತ್ತು ಯಜ್ಞಗಳನ್ನೂ ಸಮರ್ಪಿಸಿದರು.
1 ಸಮುವೇಲನು 6 : 16 (IRVKN)
ಇದನ್ನೆಲ್ಲಾ ನೋಡಿದ ಮೇಲೆ [‡ ವ. 4 ]ಫಿಲಿಷ್ಟಿಯರ ಐದು ಮಂದಿ ಪ್ರಭುಗಳು ಅದೇ ದಿನ ಎಕ್ರೋನಿಗೆ ಹಿಂದಿರುಗಿದರು.
1 ಸಮುವೇಲನು 6 : 17 (IRVKN)
ಫಿಲಿಷ್ಟಿಯರು ಯೆಹೋವನಿಗೆ ಸಮರ್ಪಿಸಿದ ಚಿನ್ನದ ಗಡ್ಡೆಗಳು ಅಷ್ಡೋದ್, ಗಾಜಾ, ಅಷ್ಕೆಲೋನ್, ಗತ್ ಊರು, ಎಕ್ರೋನ್ ಎಂಬ ಅವರ ಸಂಸ್ಥಾನಗಳ ಸಂಖ್ಯೆಗಳಿಗೂ
1 ಸಮುವೇಲನು 6 : 18 (IRVKN)
ಅವರು ಕಳುಹಿಸಿದ ಬಂಗಾರದ ಇಲಿಗಳು ಫಿಲಿಷ್ಟಿಯರ ಐದು ಮಂದಿ ಅರಸುಗಳ ಅಧೀನದಲ್ಲಿದ್ದ ಎಲ್ಲಾ ಗ್ರಾಮ ನಗರಗಳ ಸಂಖ್ಯೆಗಳಿಗೂ ಸರಿಯಾಗಿದ್ದವು. ಬೇತ್ ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಇರುವ ಯೆಹೋವನ ಮಂಜೂಷವೂ ಇಡಲ್ಪಟ್ಟ ಆ ದೊಡ್ಡ ಕಲ್ಲೇ ಇದಕ್ಕೆ ಸಾಕ್ಷಿಯಾಗಿ ಇಂದಿಗೂ ಇದೆ.
1 ಸಮುವೇಲನು 6 : 19 (IRVKN)
ಬೇತ್ ಷೆಮೆಷಿನವರು ಯೆಹೋವನ ಮಂಜೂಷದಲ್ಲಿ ಇಣಕಿ ನೋಡಿದ್ದರಿಂದ [§ ವಿಮೋ 19: 21 ]ಯೆಹೋವನು ಅವರಲ್ಲಿ * ಇಬ್ರಿಯ ಪದ 50, 70. ಎಪ್ಪತ್ತು ಮಂದಿಯನ್ನು ಸಾಯಿಸಿದನು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನು ಉಂಟುಮಾಡಿದ್ದರಿಂದ ಬೇತ್ ಷೆಮೆಷಿನವರು ಗೋಳಾಡಿದರು.
1 ಸಮುವೇಲನು 6 : 20 (IRVKN)
ಕಿರ್ಯತ್ಯಾರೀಮಿನಲ್ಲಿ ದೇವರ ಮಂಜೂಷ ಪರಿಶುದ್ಧ ದೇವರಾದ ಯೆಹೋವನ ಮುಂದೆ ಯಾರು ನಿಂತಾರು? ನಮ್ಮನ್ನು ಬಿಟ್ಟು ಈತನು ಹೋಗತಕ್ಕ ಸ್ಥಳ ಯಾವುದು ಎಂದು ಮಾತನಾಡಿಕೊಂಡು
1 ಸಮುವೇಲನು 6 : 21 (IRVKN)
[† ಯೆಹೋ. 9: 17; 18: 14 ]ಕಿರ್ಯತ್ಯಾರೀಮಿನವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಫಿಲಿಷ್ಟಿಯರು ಯೆಹೋವನ ಮಂಜೂಷವನ್ನು ಕಳುಹಿಸಿದ್ದಾರೆ; ನೀವು ಬಂದು ಅದನ್ನು ತೆಗೆದುಕೊಂಡು ಹೋಗಿರಿ” ಎಂದು ಹೇಳಿದರು.
❮
❯
1
2
3
4
5
6
7
8
9
10
11
12
13
14
15
16
17
18
19
20
21