1 ಸಮುವೇಲನು 7 : 1 (IRVKN)
1 ಸಮುವೇಲನು 7 : 2 (IRVKN)
ಆಗ ಕಿರ್ಯತ್ಯಾರೀಮಿನವರು ಬಂದು ಯೆಹೋವನ ಮಂಜೂಷವನ್ನು ತೆಗೆದುಕೊಂಡು ಹೋಗಿ, ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಲ್ಲಿಟ್ಟು, ಅವನ ಮಗನಾದ ಎಲ್ಲಾಜಾರನನ್ನು ಅದರ ಸೇವೆಗೋಸ್ಕರ ಪ್ರತಿಷ್ಠಿಸಿದರು. ಇಸ್ರಾಯೇಲ್ಯರು ದೇವರ ಕಡೆಗೆ ತಿರುಗಿಕೊಂಡದ್ದು; ಫಿಲಿಷ್ಟಿಯರು ಅಪಜಯಹೊಂದಿದ್ದು ಮಂಜೂಷವು ಕಿರ್ಯಾತ್ಯಾರೀಮಿಗೆ ಬಂದು ಬಹಳ ದಿನಗಳು ಅಂದರೆ, ಇಪ್ಪತ್ತು ವರ್ಷಗಳು ಕಳೆದು ಹೋದವು. ಈ ಕಾಲದಲ್ಲಿ ಎಲ್ಲಾ ಇಸ್ರಾಯೇಲ್ಯರು ದುಃಖಿಸುತ್ತಾ ಯೆಹೋವನ ಕಡೆಗೆ ತಿರುಗಿಕೊಳ್ಳಲು ಹಂಬಲಿಸುತ್ತಿದ್ದರು.
1 ಸಮುವೇಲನು 7 : 3 (IRVKN)
ಆಗ ಸಮುವೇಲನು ಅವರಿಗೆ, “[* 1 ಅರಸು. 8: 48 ]ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರುಗಿಕೊಂಡಿರುವುದಾದರೆ ಆದಿ 35: 2. ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ‡ ಮತ್ತಾ 4: 10. ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ. ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು” ಅಂದನು.
1 ಸಮುವೇಲನು 7 : 4 (IRVKN)
ಹಾಗೆಯೇ ಇಸ್ರಾಯೇಲ್ಯರು ಬಾಳ್ ಅಷ್ಟೋರೆತ್ ದೇವತೆಗಳನ್ನು ತೆಗೆದುಹಾಕಿ ಯೆಹೋವನೊಬ್ಬನನ್ನೇ ಆರಾಧಿಸತೊಡಗಿದರು.
1 ಸಮುವೇಲನು 7 : 5 (IRVKN)
ಸಮುವೇಲನು ತಿರುಗಿ ಅವರಿಗೆ, “ಇಸ್ರಾಯೇಲ್ಯರೆಲ್ಲರೂ ಮಿಚ್ಪೆಯಲ್ಲಿ ಕೂಡಿಬರಲಿ; ನಾನು ನಿಮಗೋಸ್ಕರ ಯೆಹೋವನನ್ನು ಪ್ರಾರ್ಥಿಸುವೆನು” ಅಂದನು.
1 ಸಮುವೇಲನು 7 : 6 (IRVKN)
ಅವರು ಅಲ್ಲಿ ಕೂಡಿಬಂದು, ನೀರು ಸೇದಿ, ಯೆಹೋವನ ಮುಂದೆ ಹೊಯ್ದು, ಆ ದಿನ ಉಪವಾಸವಿದ್ದು, “ನಾವು ನಿನಗೆ ದ್ರೋಹಿಗಳಾಗಿದ್ದೇವೆ” ಎಂದು ಯೆಹೋವನಿಗೆ ಅರಿಕೆಮಾಡಿದರು. ಆನಂತರ ಸಮುವೇಲನು ನ್ಯಾಯಪಾಲಕನಾಗಿದ್ದು, ಮಿಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.
1 ಸಮುವೇಲನು 7 : 7 (IRVKN)
ಇಸ್ರಾಯೇಲ್ಯರು ಮಿಚ್ಪೆಯಲ್ಲಿ ಕೂಡಿಬಂದಿದ್ದಾರೆ ಎಂದು ಫಿಲಿಷ್ಟಿಯರಿಗೆ ಗೊತ್ತಾದಾಗ ಅವರ ರಾಜರು ಇಸ್ರಾಯೇಲ್ಯರಿಗೆ ವಿರೋಧವಾಗಿ ಹೊರಟರು. ಇದನ್ನು ತಿಳಿದ ಇಸ್ರಾಯೇಲರು ಬಹಳವಾಗಿ ಭಯಪಟ್ಟು ಸಮುವೇಲನಿಗೆ,
1 ಸಮುವೇಲನು 7 : 8 (IRVKN)
“ನಮ್ಮ ದೇವರಾದ ಯೆಹೋವನು ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರ ಆತನಿಗೆ ಮೊರೆಯಿಡು, ಸುಮ್ಮನಿರಬೇಡ” ಅಂದರು.
1 ಸಮುವೇಲನು 7 : 9 (IRVKN)
ಆಗ ಸಮುವೇಲನು ಹಾಲುಕುಡಿಯುವ ಕುರಿಮರಿಯನ್ನು ತಂದು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿ [§ ಯೆರೆ 15: 1 ]ಇಸ್ರಾಯೇಲ್ಯರಿಗೋಸ್ಕರ ಮೊರೆಯಿಡಲು ಆತನು ಸದುತ್ತರವನ್ನು ದಯಪಾಲಿಸಿದನು.
1 ಸಮುವೇಲನು 7 : 10 (IRVKN)
ಹೇಗೆಂದರೆ, ಸಮುವೇಲನು ಯಜ್ಞವನ್ನು ಅರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ವಿರುದ್ಧ ಯುದ್ಧಕ್ಕೋಸ್ಕರ ಸಮೀಪಿಸಲಾಗಿ, [* ಕೀರ್ತನೆ. 18: 13 ]ಯೆಹೋವನು ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ ಇಸ್ರಾಯೇಲರಿಗೆ ಸೋತು ಓಡಿ ಹೋಗುವಂತೆ ಮಾಡಿದನು.
1 ಸಮುವೇಲನು 7 : 11 (IRVKN)
ಇಸ್ರಾಯೇಲ್ಯರಾದರೋ ಮಿಚ್ಪೆಯಿಂದ ಹೊರಟು ಫಿಲಿಷ್ಟಿಯರನ್ನು ಹಿಂದಟ್ಟಿ ಬೇತ್ಕರಿನ ತಗ್ಗಿನವರೆಗೆ ಅವರನ್ನು ಹತಮಾಡಿದರು.
1 ಸಮುವೇಲನು 7 : 12 (IRVKN)
ಅನಂತರ ಸಮುವೇಲನು ಮಿಚ್ಪೆಗೂ ಅಥವಾ ಏಸಾನ್. ಶೇನಿಗೂ ಮಧ್ಯದಲ್ಲಿ [‡ ಆದಿ 28: 18 ]ಒಂದು ಕಲ್ಲನ್ನು ನಿಲ್ಲಿಸಿ, “ಯೆಹೋವನು ಇಲ್ಲಿಯವರೆಗೆ ನಮಗೆ ಸಹಾಯಮಾಡಿದ್ದಾನೆ” ಎಂದು ಹೇಳಿ ಅದಕ್ಕೆ § ಎಬೆನೆಜರ್ ಅಂದರೆ ಸಹಾಯ ಶಿಲೆ. ಎಬೆನೆಜೆರ್ ಎಂದು ಹೆಸರಿಟ್ಟನು.
1 ಸಮುವೇಲನು 7 : 13 (IRVKN)
ಫಿಲಿಷ್ಟಿಯರು ಬಹಳವಾಗಿ ತಗ್ಗಿಸಲ್ಪಟ್ಟದರಿಂದ ತಿರುಗಿ ಇಸ್ರಾಯೇಲ್ಯರ ಪ್ರಾಂತ್ಯದೊಳಗೆ ಬರಲೇ ಇಲ್ಲ. ಸಮುವೇಲನ ಜೀವಮಾನದಲ್ಲೆಲ್ಲಾ ಯೆಹೋವನ ಹಸ್ತವು [* ನ್ಯಾಯ 13: 1 ]ಫಿಲಿಷ್ಟಿಯರಿಗೆ ವಿರೋಧವಾಗಿಯೇ ಇತ್ತು.
1 ಸಮುವೇಲನು 7 : 14 (IRVKN)
ಅವರು ಎಕ್ರೋನ್ ಮೊದಲುಗೊಂಡು ಗತ್ ಊರಿನ ವರೆಗೆ ಇಸ್ರಾಯೇಲರಿಂದ ಕಿತ್ತುಕೊಂಡಿದ್ದ ಎಲ್ಲಾ ಪಟ್ಟಣಗಳು ಇಸ್ರಾಯೇಲರಿಗೇ ದೊರಕಿದವು. ಅವುಗಳಿಗೆ ಸೇರಿದ ಗ್ರಾಮಗಳನ್ನೂ ಇಸ್ರಾಯೇಲರು ಫಿಲಿಷ್ಟಿಯರಿಂದ ತೆಗೆದುಕೊಂಡರು. ಇಸ್ರಾಯೇಲರಿಗೂ ಅಮೋರಿಯರಿಗೂ ಸಮಾಧಾನವಿತ್ತು.
1 ಸಮುವೇಲನು 7 : 15 (IRVKN)
ಸಮುವೇಲನು ಜೀವದಿಂದ ಇರುವವರೆಗೆ ಇಸ್ರಾಯೇಲರಿಗೆ ನ್ಯಾಯತೀರಿಸುತ್ತಿದ್ದನು.
1 ಸಮುವೇಲನು 7 : 16 (IRVKN)
ಅವನು ಇಸ್ರಾಯೇಲರ ನ್ಯಾಯಗಳನ್ನು ತೀರಿಸುವುದಕ್ಕೋಸ್ಕರ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್, ಮಿಚ್ಪೆ ಎಂಬ ಪಟ್ಟಣಗಳನ್ನು ಸುತ್ತಿ [† 1 ಸಮು 1: 19 ]ರಾಮಕ್ಕೆ ತಿರುಗಿ ಬರುತ್ತಿದ್ದನು.
1 ಸಮುವೇಲನು 7 : 17 (IRVKN)
ಅಲ್ಲಿ ಅವನ ಸ್ವಂತ ಮನೆಯಿದ್ದುದರಿಂದ ಅಲ್ಲಿಯೇ ಯೆಹೋವನಿಗೆ ಒಂದು ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ವಿವಾದಗಳನ್ನು ತೀರಿಸುತ್ತಿದ್ದನು.

1 2 3 4 5 6 7 8 9 10 11 12 13 14 15 16 17