1 ಸಮುವೇಲನು 9 : 1 (IRVKN)
ಸೌಲ ಮತ್ತು ಸಮುವೇಲರ ಭೇಟಿ ಬೆನ್ಯಾಮೀನ್ ಕುಲದಲ್ಲಿ [* 1ಪೂರ್ವ 9: 39 ]ಕೀಷನೆಂಬ ಒಬ್ಬ ಐಶ್ವರ್ಯವಂತ ಮತ್ತು ಪ್ರಭಾವಶಾಲಿಯಾದ ಮನುಷ್ಯನಿದ್ದನು. ಕೀಷನು ಅಬೀಯೇಲನ ಮಗ, ಅಬೀಯೇಲನು ಚೆರೋರನ ಮಗ, ಬೆಕೋರತನ ಮೊಮ್ಮಗ ಹಾಗೂ ಅಫೀಹನ ಮರಿಮಗನು.
1 ಸಮುವೇಲನು 9 : 2 (IRVKN)
ಕೀಷನಿಗೆ ಸೌಲನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಈ ಸೌಲನು ಯೌವನಸ್ಥನೂ, ಎಲ್ಲಾ ಇಸ್ರಾಯೇಲ್ಯರಲ್ಲಿ ಅತಿಸುಂದರನೂ ಆಗಿದ್ದನು. ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾಗಿದ್ದನು.
1 ಸಮುವೇಲನು 9 : 3 (IRVKN)
ಒಂದು ದಿನ ಸೌಲನ ತಂದೆಯಾದ ಕೀಷನ ಕತ್ತೆಗಳು ತಪ್ಪಿಸಿಕೊಂಡು ಹೋದುದರಿಂದ ಅವನು ತನ್ನ ಮಗನಾದ ಸೌಲನಿಗೆ, “ನೀನೆದ್ದು ಆಳುಗಳಲ್ಲಿ ಒಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕುವುದಕ್ಕೆ ಹೋಗು” ಎಂದು ಹೇಳಿದನು.
1 ಸಮುವೇಲನು 9 : 4 (IRVKN)
ಅದರಂತೆಯೇ ಅವನು ಹೊರಟು ಎಫ್ರಾಯೀಮ್ ಪರ್ವತಪ್ರಾಂತ್ಯ, [† 2 ಅರಸು. 4: 42 ]ಶಾಲಿಷಾ ದೇಶ ಇವುಗಳಲ್ಲಿ ಸಂಚರಿಸಿ ಹುಡುಕಿದರೂ ಅವು ಸಿಕ್ಕಲಿಲ್ಲ. ಶಾಲೀಮ್, ಬೆನ್ಯಾಮೀನ್ ಈ ಪ್ರಾಂತ್ಯಗಳಲ್ಲಿಯೂ ಸಿಕ್ಕಲಿಲ್ಲ.
1 ಸಮುವೇಲನು 9 : 5 (IRVKN)
ಕಡೆಗೆ ಅವರು ಚೂಫ್ ದೇಶಕ್ಕೆ ಬಂದಾಗ ಸೌಲನು ತನ್ನ ಆಳಿಗೆ, “ಹಿಂದಿರುಗಿ ಹೋಗೋಣ ನಡಿ; ನಮ್ಮ ತಂದೆಯು ಈಗ ಕತ್ತೆಗಳ ಚಿಂತೆ ಬಿಟ್ಟು ನಮ್ಮ ಚಿಂತೆಯಲ್ಲಿರಬಹುದು” ಅಂದನು
1 ಸಮುವೇಲನು 9 : 6 (IRVKN)
ಆದರೆ ಆ ಆಳು, “ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ [‡ ಧರ್ಮೋ 33: 1 ]ಒಬ್ಬ ದೇವರ ಮನುಷ್ಯನಿರುತ್ತಾನೆ. ಅವನು ನುಡಿಯುವುದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗತಕ್ಕ ಮಾರ್ಗವನ್ನು ತಿಳಿಸುವನು” ಎಂದನು.
1 ಸಮುವೇಲನು 9 : 7 (IRVKN)
ಅದಕ್ಕೆ ಸೌಲನು, “ನಾವು ಅವನ ಬಳಿಗೆ ಹೋಗಬೇಕಾದರೆ § 1 ಅರಸು. 14:3 ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿಯು ಮುಗಿದುಹೋಯಿತು. ಆ ದೇವರ ಮನುಷ್ಯನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿಲ್ಲವಲ್ಲಾ; ಏನು ಕೊಡಬೇಕು?” ಎನ್ನಲು
1 ಸಮುವೇಲನು 9 : 8 (IRVKN)
ಆಳು, “ಇಗೋ, ನನ್ನ ಕೈಯಲ್ಲಿ * ಪಾವಲಿ ಎಂದರೆ ಒಂದು ಬೆಳ್ಳಿ ನಾಣ್ಯದ ಕಾಲು ಭಾಗ. ಒಂದು ಪಾವಲಿಯಿದೆ; ಇದನ್ನು ಅವನಿಗೆ ಕೊಡೋಣ; ಅವನು ನಮಗೆ ಮಾರ್ಗ ತೋರಿಸುವನು” ಎಂದು ಉತ್ತರಕೊಟ್ಟನು.
1 ಸಮುವೇಲನು 9 : 9 (IRVKN)
(ಪೂರ್ವ ಕಾಲದಲ್ಲಿ ಇಸ್ರಾಯೇಲ್ಯರಲ್ಲಿ ಯಾವನಾದರೂ [† ಆದಿ 25: 22 ]ದೈವೋತ್ತರ ಕೇಳಬೇಕಾದರೆ “ದೇವ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ” ಎನ್ನುವರು. ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು, ಆ ಕಾಲದಲ್ಲಿ 1ಪೂರ್ವ 29: 30. ದೇವದರ್ಶಿಗಳೆಂದು ಕರೆಯುತ್ತಿದ್ದರು.)
1 ಸಮುವೇಲನು 9 : 10 (IRVKN)
ಆಗ ಸೌಲನು ಆಳಿಗೆ, “ನೀನು ಹೇಳುವುದು ಒಳ್ಳೆಯದು; ಹೋಗೋಣ ನಡಿ” ಅಂದನು.
1 ಸಮುವೇಲನು 9 : 11 (IRVKN)
ಅವರಿಬ್ಬರೂ ಗುಡ್ಡವನ್ನು ಹತ್ತಿ ದೇವರ ಮನುಷ್ಯನಿದ್ದ ಪಟ್ಟಣವನ್ನು ಸಮೀಪಿಸಲು ನೀರು ಸೇದುವುದಕ್ಕೋಸ್ಕರ ಊರ ಹೊರಗೆ ಬಂದಿದ್ದ ಸ್ತ್ರೀಯರನ್ನು ಕಂಡು, “ದರ್ಶಿಯು ಊರಲ್ಲಿದ್ದಾನೋ” ಎಂದು ಕೇಳಿದರು. ಅವರು, “ಇದ್ದಾನೆ;
1 ಸಮುವೇಲನು 9 : 12 (IRVKN)
ಈ ಹೊತ್ತು ನಮ್ಮ ಊರಿನವರು [§ 1 ಅರಸು. 3:2- 4 ]ಗುಡ್ಡದ ಮೇಲೆ ಯಜ್ಞವನ್ನು ಅರ್ಪಿಸುತ್ತಿರುವುದರಿಂದ ಅವನು ಈಗಲೇ ಇಲ್ಲಿಗೆ ಬಂದಿರುವನು; ಬೇಗನೆ ಹೋಗಿರಿ.
1 ಸಮುವೇಲನು 9 : 13 (IRVKN)
ಅವನು ಯಜ್ಞಭೋಜನಕ್ಕೋಸ್ಕರ ಗುಡ್ಡಕ್ಕೆ ಹೋಗುವ ಮೊದಲು ನೀವು ಊರೊಳಕ್ಕೆ ಹೋದರೆ ಸಿಕ್ಕುವನು. ಅವನು ಅಲ್ಲಿಗೆ ಹೋಗುವ ವರೆಗೆ ಜನರು ಊಟಮಾಡುವುದಿಲ್ಲ. ಅವನು ಹೋಗಿ ಯಜ್ಞಾಹಾರವನ್ನು ಆಶೀರ್ವದಿಸುತ್ತಾನೆ. ಅನಂತರ ಕರೆಯಲ್ಪಟ್ಟವರು ಊಟಮಾಡುತ್ತಾರೆ. ಈಗಲೇ ಹೋಗಿರಿ. ಅವನು ಸಿಕ್ಕುವ ಸಮಯ ಇದೇ” ಅಂದರು.
1 ಸಮುವೇಲನು 9 : 14 (IRVKN)
ಅವರು ಮೇಲೆ ಹತ್ತಿ ಊರಿಗೆ ಬಂದಾಗ ಸಮುವೇಲನು ಗುಡ್ಡಕ್ಕೆ ಹೋಗುವುದಕ್ಕೋಸ್ಕರ ಹೊರಟು ಅವರೆದುರಿಗೆ ಬಂದನು.
1 ಸಮುವೇಲನು 9 : 15 (IRVKN)
ಸೌಲನು ಬರುವುದಕ್ಕೆ ಒಂದು ದಿನ ಮುಂದಾಗಿ ಯೆಹೋವನು ಸಮುವೇಲನಿಗೆ,
1 ಸಮುವೇಲನು 9 : 16 (IRVKN)
“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದ ಒಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಾಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. [* ವಿಮೋ 3:7, 9 ]ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ” ಎಂದು ತಿಳಿಸಿದ್ದನು.
1 ಸಮುವೇಲನು 9 : 17 (IRVKN)
ಸಮುವೇಲನು ಸೌಲನನ್ನು ಕಂಡಾಗ ಯೆಹೋವನು ಅವನಿಗೆ, “ನಾನು ತಿಳಿಸಿದ್ದ ಮನುಷ್ಯನು ಇವನೇ; ಇವನೇ ನನ್ನ ಪ್ರಜೆಯನ್ನು ಆಳತಕ್ಕವನು” ಎಂದು ಸೂಚಿಸಿದನು.
1 ಸಮುವೇಲನು 9 : 18 (IRVKN)
ಊರಬಾಗಿಲಿಗೆ ಬಂದ ಸೌಲನು ತನ್ನ ಎದುರಿನಲ್ಲಿ ಸಮುವೇಲನನ್ನು ನೋಡಿ, “ದರ್ಶಿಯ ಮನೆ ಎಲ್ಲಿದೆ ಎಂಬುದನ್ನು ದಯವಿಟ್ಟು ತಿಳಿಸುವಿಯೋ?” ಎನ್ನಲು ಸಮುವೇಲನು, “ನಾನೇ ಆ ದರ್ಶಿ.
1 ಸಮುವೇಲನು 9 : 19 (IRVKN)
ನೀನು ನನ್ನ ಜೊತೆಯಲ್ಲಿ ಗುಡ್ಡಕ್ಕೆ ಬಾ; ನೀವು ಈ ಹೊತ್ತು ನನ್ನ ಸಂಗಡ ಊಟಮಾಡಬೇಕು. ನಿನ್ನ ಚಿಂತೆಯನ್ನೆಲ್ಲಾ ಪರಿಹರಿಸಿ ನಾಳೆ ಬೆಳಿಗ್ಗೆ ನಿನ್ನನ್ನು ಕಳುಹಿಸಿಕೊಡುವೆನು.
1 ಸಮುವೇಲನು 9 : 20 (IRVKN)
ಮೂರು ದಿನಗಳ ಹಿಂದೆ ತಪ್ಪಿಸಿಕೊಂಡ ನಿನ್ನ ಕತ್ತೆಗಳಿಗೋಸ್ಕರ ಚಿಂತೆಮಾಡಬೇಡ; ಅವು ಸಿಕ್ಕಿವೆ. ಇಸ್ರಾಯೇಲರ ಅಭಿಲಾಷೆಯೆಲ್ಲಾ ಯಾರ ಮೇಲೆ ಇರುವುದು, ನಿನ್ನ ಮತ್ತು ನಿನ್ನ ತಂದೆಯ ಕುಟುಂಬದವರಿಗೂ ಸಲ್ಲುವುದು” ಎಂದು ಹೇಳಿದನು.
1 ಸಮುವೇಲನು 9 : 21 (IRVKN)
ಅದಕ್ಕೆ ಸೌಲನು, “ನಾನು ಇಸ್ರಾಯೇಲ್ ಕುಲಗಳಲ್ಲಿ ಅಲ್ಪವಾಗಿರುವ ಬೆನ್ಯಾಮೀನ್ ಕುಲದವನಲ್ಲವೋ? [† ನ್ಯಾಯ 20: 46 ]ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಯಾಕೆ ಹೇಳುತ್ತೀ?” ಎಂದನು.
1 ಸಮುವೇಲನು 9 : 22 (IRVKN)
ಸಮುವೇಲನು ಸೌಲನನ್ನೂ ಅವನ ಸೇವಕನನ್ನೂ ಮಂಟಪಕ್ಕೆ ಕರೆದುಕೊಂಡು ಹೋದನು; ಭೋಜನಕ್ಕೆ ಬಂದಿದ್ದ ಸುಮಾರು ಮೂವತ್ತು ಜನರಲ್ಲಿ ಅವರಿಬ್ಬರಿಗೂ ಮುಖ್ಯಸ್ಥಾನವನ್ನು ಕೊಟ್ಟನು. ಅನಂತರ ಸಮುವೇಲನು ಅಡಿಗೆಯವನಿಗೆ,
1 ಸಮುವೇಲನು 9 : 23 (IRVKN)
“ನಾನು ನಿನಗೆ ಹೇಳಿ ಪ್ರತ್ಯೇಕವಾಗಿ ಇಡಿಸಿದ್ದ ಮಾಂಸಭಾಗವನ್ನು ತಂದಿಡು” ಅಂದನು.
1 ಸಮುವೇಲನು 9 : 24 (IRVKN)
ಅವನು [‡ ಯಾಜ 7:32- 33 ]ಒಂದು ತೊಡೆಯ ಮಾಂಸವನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಸೌಲನ ಮುಂದಿಟ್ಟನು. ಆಗ ಸಮುವೇಲನು, “ಇಗೋ, ಇದು ನಿನಗೋಸ್ಕರ ಪ್ರತ್ಯೇಕಿಸಿದ್ದು; ಇದನ್ನು ತಿನ್ನು, ಯಾಕೆಂದರೆ ಜನರನ್ನು ಭೋಜನಕ್ಕೆ ಕರೆದಾಗಿನಿಂದ ಇದು ನಿನಗೋಸ್ಕರವಾಗಿಯೇ ಇಡಲ್ಪಟ್ಟಿತ್ತು” ಎಂದು ಸೌಲನಿಗೆ ಹೇಳಿದನು. ಸೌಲನು ಆ ದಿನ ಸಮುವೇಲನ ಸಂಗಡ ಊಟಮಾಡಿದನು.
1 ಸಮುವೇಲನು 9 : 25 (IRVKN)
ಅವರು ಗುಡ್ಡದಿಂದಿಳಿದು ಪಟ್ಟಣಕ್ಕೆ ಬಂದನಂತರ ಸಮುವೇಲನು ಸೌಲನನ್ನು ತನ್ನ § ಮಾಳಿಗೆಯ ಮೇಲೆ ಸೌಲನಿಗಾಗಿ ಮಂಚವನ್ನು ಸಿದ್ಧಪಡಿಸಲಾಗಿತ್ತು ಅವನು ಅದರ ಮೇಲೆ ಮಲಗಿದ್ದನು. ಮನೆಯ ಮಾಳಿಗೆಯ ಮೇಲೆ ಕರೆದುಕೊಂಡು ಹೋಗಿ ಅವನೊಡನೆ ಮಾತನಾಡಿದನು.
1 ಸಮುವೇಲನು 9 : 26 (IRVKN)
ಮರುದಿನ ಬೆಳಿಗ್ಗೆ ಸಮುವೇಲನು ಮಾಳಿಗೆಯ ಮೇಲೆ ಮಲಗಿದ್ದ ಸೌಲನನ್ನು, “ಏಳು, ನಿನ್ನನ್ನು ಕಳುಹಿಸಿ ಕೊಡುತ್ತೇನೆ” ಎಂದು ಎಬ್ಬಿಸಲು ಅವನು ಎದ್ದನು. ತರುವಾಯ ಅವರಿಬ್ಬರೂ ಹೊರಟು ಊರ ಹೊರಗೆ ಬಂದಾಗ
1 ಸಮುವೇಲನು 9 : 27 (IRVKN)
ಸಮುವೇಲನು ಸೌಲನಿಗೆ, “ನಿನ್ನ ಸೇವಕನನ್ನು ಮುಂದೆ ಕಳುಹಿಸಿ ನೀನು ಇಲ್ಲಿ ಸ್ವಲ್ಪ ನಿಲ್ಲು; ನಿನಗೆ ತಿಳಿಸಬೇಕಾದ ದೈವೋಕ್ತಿ ಒಂದುಂಟು” ಎಂದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27