1 ಥೆಸಲೊನೀಕದವರಿಗೆ 3 : 1 (IRVKN)
ಆದುದರಿಂದ ನಾನು ಇನ್ನು ತಾಳಲಾರದೆ * ಅ. ಕೃ. 17:15, 16: ಅಥೇನೆಯಲ್ಲಿ ಒಬ್ಬಂಟಿಗನಾಗಿಯೇ ಇರುವುದು ಒಳ್ಳೆಯದೆಂದು ಯೋಚಿಸಿ,
1 ಥೆಸಲೊನೀಕದವರಿಗೆ 3 : 2 (IRVKN)
ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ಉತ್ತೇಜನಪಡಿಸುವುದಕ್ಕೂ 2 ಕೊರಿ 1:1; ಕೊಲೊ 1:1; ಫಿಲೆ. 1; ಇಬ್ರಿ. 13:23: ನಮ್ಮ ಸಹೋದರನೂ, ಕ್ರಿಸ್ತನ ಸುವಾರ್ತೆಯ ಕಾರ್ಯದಲ್ಲಿ ದೇವರ ಸೇವಕನೂ ಆಗಿರುವ ‡ ಫಿಲಿ. 2:19: ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.
1 ಥೆಸಲೊನೀಕದವರಿಗೆ 3 : 3 (IRVKN)
§ ಅ. ಕೃ. 9:16; 14:22: ಸಂಕಟಗಳನ್ನು ಅನುಭವಿಸುವುದಕ್ಕಾಗಿಯೇ ನಾವು ನೇಮಿಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ.
1 ಥೆಸಲೊನೀಕದವರಿಗೆ 3 : 4 (IRVKN)
ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಈ ಮೊದಲೇ ಹೇಳಿದ್ದೆವಲ್ಲಾ. * 1 ಥೆಸ. 2:14: ಅದರಂತೆಯೇ ಆಯಿತು, ಅದು ನಿಮ್ಮ ಅನುಭವಕ್ಕೂ ಬಂದಿತು.
1 ಥೆಸಲೊನೀಕದವರಿಗೆ 3 : 5 (IRVKN)
ಆದ್ದರಿಂದ ಇನ್ನು ತಡೆಯಲಾರದೆ ಒಂದು ವೇಳೆ ಶೋಧಕನು ನಿಮ್ಮನ್ನು ಶೋಧಿಸಿದ್ದರಿಂದ ಫಿಲಿ. 2:16: ನಮ್ಮ ಪ್ರಯಾಸವು ವ್ಯರ್ಥವಾಯಿತೋ ಏನೋ ಎಂದು ನಿಮ್ಮ ನಂಬಿಕೆಯನ್ನು ಕುರಿತು ನಾನು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ನಿಮ್ಮ ಬಳಿಗೆ ಕಳುಹಿಸಿದೆನು.
1 ಥೆಸಲೊನೀಕದವರಿಗೆ 3 : 6 (IRVKN)
1 ಥೆಸಲೊನೀಕದವರಿಗೆ 3 : 7 (IRVKN)
ಅ. ಕೃ. 18:5; 2 ಕೊರಿ 7:6, 9: ಆದರೆ ತಿಮೊಥೆಯನು ನಿಮ್ಮ ಬಳಿಯಿಂದ ಬಂದು § 1 ಥೆಸ 1:3: ನಿಮ್ಮ ನಂಬಿಕೆ ಮತ್ತು ಪ್ರೀತಿಯ ಕುರಿತಾಗಿ ಶುಭವರ್ತಮಾನವನ್ನು ಹೇಳಿ, * 1 ಕೊರಿ 11:2: ನೀವು ನಮ್ಮನ್ನು ಯಾವಾಗಲೂ ಪ್ರೀತಿಪೂರ್ವಕವಾಗಿ ನೆನಪುಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ಸಹ ನಮ್ಮನ್ನು ನೋಡುವುದಕ್ಕಾಗಿ ಅಪೇಕ್ಷಿಸುತ್ತಿದ್ದೀರೆಂಬುದನ್ನು ತಿಳಿಸಿದ್ದಾನೆ. ಸಹೋದರರೇ, ಈ ವಾರ್ತೆಯನ್ನು ಕೇಳಿ 2 ಕೊರಿ 1:4: ನಮ್ಮ ಎಲ್ಲಾ ಕಷ್ಟದಲ್ಲಿಯೂ ಸಂಕಟದಲ್ಲಿಯೂ ನಿಮ್ಮ ನಂಬಿಕೆಯ ಮುಖಾಂತರ ನಮಗೆ ಸಮಾಧಾನವಾಯಿತು.
1 ಥೆಸಲೊನೀಕದವರಿಗೆ 3 : 8 (IRVKN)
1 ಕೊರಿ 16:13: ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಮಗೆ ಜೀವಕಳೆ.
1 ಥೆಸಲೊನೀಕದವರಿಗೆ 3 : 9 (IRVKN)
ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷಗಳಿಗಾಗಿ § 1 ಥೆಸ. 1:2: ದೇವರಿಗೆ ಅಷ್ಟೊಂದು ಸ್ತೋತ್ರ ಮಾಡುವುದು ನಮ್ಮಿಂದಾದಿತೇ?
1 ಥೆಸಲೊನೀಕದವರಿಗೆ 3 : 10 (IRVKN)
* 1 ಥೆಸ. 2:17: ನಿಮ್ಮ ಮುಖವನ್ನು ನೋಡುವುದಕ್ಕೂ † ಎಫೆ 4:12,13: ನಿಮ್ಮ ನಂಬಿಕೆಯ ಕೊರತೆಗಳನ್ನು ನೀಗುವುದಕ್ಕೂ ನಾವು ‡ 2 ತಿಮೊ. 1:3: ಹಗಲಿರುಳು ದೇವರನ್ನು ತುಂಬಾ ಕಳಕಳಿಯಿಂದ ಬೇಡುವವರಾಗಿದ್ದೇವೆ.
1 ಥೆಸಲೊನೀಕದವರಿಗೆ 3 : 11 (IRVKN)
ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು, ನಾವು ನಿಮ್ಮ ಬಳಿಗೆ ಬರುವುದಕ್ಕೆ ಮಾರ್ಗವನ್ನು ಸರಾಗಮಾಡಿಕೊಡಲಿ.
1 ಥೆಸಲೊನೀಕದವರಿಗೆ 3 : 12 (IRVKN)
ನಿಮ್ಮಲ್ಲಿ ನಮ್ಮ ಪ್ರೀತಿಯು ಹೆಚ್ಚಾದ ಹಾಗೆಯೇ ನಿಮ್ಮ ಪ್ರೀತಿಯು § 1 ಥೆಸ. 4:9; 5:15 ಒಬ್ಬರಿಂದೊಬ್ಬರಿಗೆ ಹರಡಿ ಎಲ್ಲಾ ಮನುಷ್ಯರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ಆಶೀರ್ವದಿಸಲಿ.
1 ಥೆಸಲೊನೀಕದವರಿಗೆ 3 : 13 (IRVKN)
ನಮ್ಮ ಕರ್ತನಾದ ಯೇಸು ತನ್ನ * ಜೆಕ. 14:5; ಯೂದ 14: ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ † ಯಾಕೋಬ 5:8; 1 ಪೇತ್ರ 5:10: ನೀವು ಪರಿಶುದ್ಧರೂ, ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ.

1 2 3 4 5 6 7 8 9 10 11 12 13