1 ಥೆಸಲೊನೀಕದವರಿಗೆ 5 : 1 (IRVKN)
ಸಹೋದರರೇ, * ಅ. ಕೃ. 1:7: ಈ ಸಂಗತಿಗಳು ನಡೆಯಬೇಕಾಗಿರುವ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು † 1 ಥೆಸ. 4:9: ನಿಮಗೆ ಬರೆಯುವುದು ಅಗತ್ಯವಿಲ್ಲ.
1 ಥೆಸಲೊನೀಕದವರಿಗೆ 5 : 2 (IRVKN)
2 ಥೆಸ. 2:2; ಮತ್ತಾ 24:43; ಲೂಕ 17:24: ರಾತ್ರಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವುದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
1 ಥೆಸಲೊನೀಕದವರಿಗೆ 5 : 3 (IRVKN)
“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ § ಲೂಕ 21:34: ನಾಶನವು ಅವರ ಮೇಲೆ * ಯೆಶಾ 13:8: ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.
1 ಥೆಸಲೊನೀಕದವರಿಗೆ 5 : 4 (IRVKN)
ಆದರೆ ಸಹೋದರರೇ, ಕೆಲವು ಪ್ರತಿಗಳಲ್ಲಿ, ಕಳ್ಳರ ಮೇಲೆ ಹಗಲಿನ ಬೆಳಕು ಫಕ್ಕನೆ ಬಂದಿತೋ ಎಂಬಂತೆ ಆ ದಿನವು ಎಂದು ಬರೆದದೆ. ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ, ಯಾಕೆಂದರೆ ‡ 1 ಯೋಹಾ 2:8: ನೀವು ಕತ್ತಲೆಯಲ್ಲಿರುವವರಲ್ಲ.
1 ಥೆಸಲೊನೀಕದವರಿಗೆ 5 : 5 (IRVKN)
ನೀವೆಲ್ಲರೂ ‘ಬೆಳಕಿನ ಮಕ್ಕಳು’ ಹಾಗೂ ‘ಹಗಲಿನ ಮಕ್ಕಳು’ ಆಗಿದ್ದೀರಷ್ಟೆ, ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.
1 ಥೆಸಲೊನೀಕದವರಿಗೆ 5 : 6 (IRVKN)
ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ.
1 ಥೆಸಲೊನೀಕದವರಿಗೆ 5 : 7 (IRVKN)
ನಿದ್ರೆಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ, ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರಷ್ಟೆ.
1 ಥೆಸಲೊನೀಕದವರಿಗೆ 5 : 8 (IRVKN)
ನಾವಾದರೋ ಹಗಲಿನವರಾಗಿರಲಾಗಿ ನಂಬಿಕೆ ಪ್ರೀತಿಗಳೆಂಬ ಎದೆಕವಚವನ್ನೂ, ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.
1 ಥೆಸಲೊನೀಕದವರಿಗೆ 5 : 9 (IRVKN)
ಯಾಕೆಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದಿಕೊಳ್ಳಬೇಕೆಂದು ನೇಮಿಸಿದನು.
1 ಥೆಸಲೊನೀಕದವರಿಗೆ 5 : 10 (IRVKN)
ನಾವು ಎಚ್ಚರವಾಗಿದ್ದರೂ ಸರಿಯೇ ಅಥವಾ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಯೇಸು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟನು.
1 ಥೆಸಲೊನೀಕದವರಿಗೆ 5 : 11 (IRVKN)
ಆದ್ದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರಿ.
1 ಥೆಸಲೊನೀಕದವರಿಗೆ 5 : 12 (IRVKN)
ಕ್ರೈಸ್ತರು ಅನುಸರಿಸತಕ್ಕ ಕೆಲವು ಸೂತ್ರಗಳು ಸಹೋದರರೇ, ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು, ಪ್ರಯಾಸಪಡುತ್ತಾ ನಿಮಗೆ ಬುದ್ಧಿ ಹೇಳುತ್ತರೋ,
1 ಥೆಸಲೊನೀಕದವರಿಗೆ 5 : 13 (IRVKN)
ಅವರನ್ನು ಲಕ್ಷಿಸಿ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿಯಿಂದ ಬಹಳವಾಗಿ ಗೌರವಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ. ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರಿ.
1 ಥೆಸಲೊನೀಕದವರಿಗೆ 5 : 14 (IRVKN)
ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
1 ಥೆಸಲೊನೀಕದವರಿಗೆ 5 : 15 (IRVKN)
ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.
1 ಥೆಸಲೊನೀಕದವರಿಗೆ 5 : 16 (IRVKN)
ಯಾವಾಗಲೂ ಸಂತೋಷಿಸಿರಿ,
1 ಥೆಸಲೊನೀಕದವರಿಗೆ 5 : 17 (IRVKN)
ಎಡೆಬಿಡದೆ ಪ್ರಾರ್ಥನೆಮಾಡಿರಿ,
1 ಥೆಸಲೊನೀಕದವರಿಗೆ 5 : 18 (IRVKN)
ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.
1 ಥೆಸಲೊನೀಕದವರಿಗೆ 5 : 19 (IRVKN)
ಪವಿತ್ರಾತ್ಮನನ್ನು ನಂದಿಸಬೇಡಿ,
1 ಥೆಸಲೊನೀಕದವರಿಗೆ 5 : 20 (IRVKN)
ಪ್ರವಾದನೆಗಳನ್ನು ಹಿನೈಸಬೇಡಿರಿ.
1 ಥೆಸಲೊನೀಕದವರಿಗೆ 5 : 21 (IRVKN)
ಆದರೆ ಎಲ್ಲವನ್ನೂ ಪರೀಕ್ಷಿಸಿ ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.
1 ಥೆಸಲೊನೀಕದವರಿಗೆ 5 : 22 (IRVKN)
ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.
1 ಥೆಸಲೊನೀಕದವರಿಗೆ 5 : 23 (IRVKN)
ಸಮಾಪ್ತಿ ವಾಕ್ಯಗಳು. ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಆತ್ಮ, ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ.
1 ಥೆಸಲೊನೀಕದವರಿಗೆ 5 : 24 (IRVKN)
ನಿಮ್ಮನ್ನು ಕರೆದವನು ನಂಬಿಗಸ್ತನು, ಆತನು ತನ್ನ ಕಾರ್ಯವನ್ನು ಸಾಧಿಸುವನು.
1 ಥೆಸಲೊನೀಕದವರಿಗೆ 5 : 25 (IRVKN)
ಸಹೋದರರೇ, ನಮಗೋಸ್ಕರ ಪ್ರಾರ್ಥನೆ ಮಾಡಿರಿ.
1 ಥೆಸಲೊನೀಕದವರಿಗೆ 5 : 26 (IRVKN)
ಪವಿತ್ರವಾದ ಮುದ್ದಿಟ್ಟು ಸಹೋದರರೆಲ್ಲರನ್ನೂ ವಂದಿಸಿರಿ.
1 ಥೆಸಲೊನೀಕದವರಿಗೆ 5 : 27 (IRVKN)
ಈ ಪತ್ರಿಕೆಯನ್ನು ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನಲ್ಲಿ ಆಜ್ಞಾಪಿಸುತ್ತೇನೆ.
1 ಥೆಸಲೊನೀಕದವರಿಗೆ 5 : 28 (IRVKN)
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28