1 ತಿಮೊಥೆಯನಿಗೆ 1 : 1 (IRVKN)
ನಮ್ಮ ರಕ್ಷಕನಾದ ದೇವರ * ಕೊಲೊ 1:27 ನಮ್ಮ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತ ಯೇಸುವಿನ ಆಜ್ಞೆಯ ಮೇರೆಗೆ ನೇಮಿಸಲ್ಪಟ್ಟ ಕ್ರಿಸ್ತ ಯೇಸುವಿನ † 2 ಕೊರಿ 1:1 ಅಪೊಸ್ತಲನಾದ ಪೌಲನು
1 ತಿಮೊಥೆಯನಿಗೆ 1 : 2 (IRVKN)
ತೀತ 1:4 ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವುದೇನೆಂದರೆ, § 2 ತಿಮೊ 1:2; 2 ಯೊಹಾ 3; ಯೂದ 2 ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಉಂಟಾಗಲಿ.
1 ತಿಮೊಥೆಯನಿಗೆ 1 : 3 (IRVKN)
ಸುಳ್ಳುಬೋಧನೆಯ ಬಗ್ಗೆ ಎಚ್ಚರಿಕೆ ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ, * 1 ತಿಮೊ 6:3 ಗಲಾ 1:6,7 ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ,
1 ತಿಮೊಥೆಯನಿಗೆ 1 : 4 (IRVKN)
1 ತಿಮೊ 4:7; 2 ತಿಮೊ 4:4; ತೀತ 1:14; 2 ಪೇತ್ರ 1:16 ಕಲ್ಪಿತಕಥೆಗಳಿಗೂ, ಕೊನೆಮೊದಲಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ, ಆಜ್ಞಾಪಿಸಬೇಕೆಂಬುದಾಗಿ ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತಿದೇನೆ. ಅಂತಹ ಕಥೆಗಳೂ, ‡ ತೀತ 3:9 ವಂಶಾವಳಿಗಳೂ § 1 ತಿಮೊ. 6:4 ವಿವಾದಕ್ಕೆ ಎಡೆಮಾಡಿಕೊಡುತ್ತದೆಯೇ ಹೊರತು ದೇವರ ಯೋಜನೆಗಳಿಗೆ ಅನುಕೂಲವಾಗಿರುವುದಿಲ್ಲ. ನಂಬಿಕೆಯಿಂದ ಮಾತ್ರ ಅದು ಸಾಧ್ಯವಾಗುತ್ತದೆ.
1 ತಿಮೊಥೆಯನಿಗೆ 1 : 5 (IRVKN)
* 2 ತಿಮೊ. 2:22 ಶುದ್ಧಹೃದಯ, † 1 ಪೇತ್ರ. 3:16, 21 ಒಳ್ಳೆಯ ಮನಸ್ಸಾಕ್ಷಿ, ‡ 2 ತಿಮೊ 1:5 ಪ್ರಾಮಾಣಿಕವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವಾಜ್ಞೆಯ ಗುರಿಯಾಗಿದೆ.
1 ತಿಮೊಥೆಯನಿಗೆ 1 : 6 (IRVKN)
ಕೆಲವರು ಈ ಗುರಿಯನ್ನು ಬಿಟ್ಟು § ತೀತ 1:10 ವ್ಯರ್ಥವಾದ ವಿಚಾರಗಳ ಕಡೆಗೆ ತಿರುಗಿಕೊಂಡಿದ್ದಾರೆ.
1 ತಿಮೊಥೆಯನಿಗೆ 1 : 7 (IRVKN)
ಅವರು ಧರ್ಮೋಪದೇಶಕರಾಗಬೇಕೆಂದು ಬಯಸುತ್ತಿದ್ದರೂ ತಾವು ಹೇಳುವುದಾಗಲಿ, * 1 ತಿಮೊ 6:4; ಕೊಲೊ 2:18 ತಾವು ದೃಢವಾಗಿ ಮಾತನಾಡುವ ವಿಷಯವಾಗಲಿ ಇಂಥದೆಂದು ತಿಳಿಯದವರಾಗಿದ್ದಾರೆ.
1 ತಿಮೊಥೆಯನಿಗೆ 1 : 8 (IRVKN)
ರೋಮ 7:16 ಧರ್ಮಶಾಸ್ತ್ರವು ಒಳ್ಳೆಯದೆಂದು ಬಲ್ಲೆವು. ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು.
1 ತಿಮೊಥೆಯನಿಗೆ 1 : 9 (IRVKN)
ಧರ್ಮಶಾಸ್ತ್ರವು ಗಲಾ 5:23 ನೀತಿವಂತರಿಗೋಸ್ಕರ ಅಲ್ಲ, ಆದರೆ ಅಕ್ರಮಗಾರರು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ಅಪವಿತ್ರರು, ಪ್ರಾಪಂಚಿಕರು, ತಂದೆತಾಯಿಗಳನ್ನು ಕೊಲ್ಲುವವರು, ನರಹತ್ಯಮಾಡುವವರು,
1 ತಿಮೊಥೆಯನಿಗೆ 1 : 10 (IRVKN)
ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, § 2 ತಿಮೊ 4:3; ತೀತ 1:9; 2:1; 1 ತಿಮೊ 6:3; 2 ತಿಮೊ 1:13; ತೀತ 1:13, 2:2 ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ.
1 ತಿಮೊಥೆಯನಿಗೆ 1 : 11 (IRVKN)
ಈ ಬೋಧನೆಯು * 1 ತಿಮೊ 6:15 ಭಾಗ್ಯವಂತನಾದ † 2 ಕೊರಿ 4:4 ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ. ‡ ತೀತ 1:3,4; ಗಲಾ 2:7 ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು.
1 ತಿಮೊಥೆಯನಿಗೆ 1 : 12 (IRVKN)
(12-13) § ಆ. ಕೃ 9:22; ಫಿಲಿ 4:13; 2 ತಿಮೊ 4:17 ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಅದಕ್ಕಾಗಿ ನಾನು ಕೃತಜ್ಞತೆಯುಳ್ಳವನಾಗಿದ್ದೇನೆ. ಮೊದಲು ದೂಷಕನೂ, * ಆ. ಕೃ 8:3 ಹಿಂಸಕನೂ, ಕೇಡುಮಾಡುವವನೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ, † 2 ಕೊರಿ 3:6 ತನ್ನ ಸೇವೆಗೆ ನೇಮಿಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರಮಾಡುತ್ತೇನೆ. ನಾನು ಅಜ್ಞಾನಿಯಾಗಿ ‡ ಆ. ಕೃ. 3:17 ತಿಳಿಯದೆ ಅಪನಂಬಿಕೆಯಲ್ಲಿ ಆ ರೀತಿ ನಡೆದುಕೊಂಡದ್ದರಿಂದ 1 ಕೊರಿ 7:25; 2 ಕೊರಿ 4:1 ನನ್ನ ಮೇಲೆ ಆತನಿಗೆ ಕರುಣೆ ಉಂಟಾಯಿತು;
1 ತಿಮೊಥೆಯನಿಗೆ 1 : 13 (IRVKN)
1 ತಿಮೊಥೆಯನಿಗೆ 1 : 14 (IRVKN)
ಆದರೆ * ರೋಮ 5:20 ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತಯೇಸುವಿನಲ್ಲಿರುವ † ಲೂಕ 7:47, 50; 1 ಥೆಸ. 1:3 ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಕ್ಕಿಸಿತ್ತು.
1 ತಿಮೊಥೆಯನಿಗೆ 1 : 15 (IRVKN)
ಮತ್ತಾ 9:13; ಯೋಹಾ 3:17; ರೋಮ 4:25 ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು § 1 ತಿಮೊ 3:1; 4:9; 2 ತಿಮೊ. 2:11; ತೀತ 3:8 ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ * 1 ಕೊರಿ 15:9 ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು.
1 ತಿಮೊಥೆಯನಿಗೆ 1 : 16 (IRVKN)
ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು.
1 ತಿಮೊಥೆಯನಿಗೆ 1 : 17 (IRVKN)
ಪ್ರಕ 15:3; 4:9,10 ಸರ್ವಯುಗಗಳ ಅರಸನೂ, ‡ 1 ತಿಮೊ 6:15,16; ರೋಮ 1:23 ಅಮರನೂ, § ಯೋಹಾ 1:18; ಕೊಲೊ 1:15; ಇಬ್ರಿ 11:27; 1 ಯೋಹಾ 4:12 ಅದೃಶ್ಯನೂ ಆಗಿರುವ * ಯೂದ 25 ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.
1 ತಿಮೊಥೆಯನಿಗೆ 1 : 18 (IRVKN)
ಮಗನಾದ ತಿಮೊಥೆಯನೇ, 1 ತಿಮೊ 4:14 ನಿನ್ನ ವಿಷಯದಲ್ಲಿ ಮೊದಲು ಉಂಟಾಗಿದ್ದ ಪ್ರವಾದನೆಗಳನ್ನು ನೆನಪಿಸಿಕೊಂಡು, ‡ 1 ಕೊರಿ 9:7; 2 ಕೊರಿ 10:4; 2 ತಿಮೊ 2:3,4 ನೀನು ಅವುಗಳಿಂದ ಧೈರ್ಯಹೊಂದಿ ಒಳ್ಳೆಯ ಯುದ್ಧವನ್ನು ನಡೆಸಬೇಕೆಂದು ನಿನಗೆ ಆಜ್ಞಾಪಿಸುತ್ತಿದ್ದೇನೆ.
1 ತಿಮೊಥೆಯನಿಗೆ 1 : 19 (IRVKN)
§ 1 ತಿಮೊ 3:9 ನಂಬಿಕೆಯನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಗಟ್ಟಿಯಾಗಿ ಹಿಡಿದುಕೊಂಡಿರು. ಕೆಲವರು ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ವಿಷಯದಲ್ಲಿ ಹಡಗು ಒಡೆದು, ನಷ್ಟಪಟ್ಟವರಂತೆ ಇದ್ದಾರೆ.
1 ತಿಮೊಥೆಯನಿಗೆ 1 : 20 (IRVKN)
* 2 ತಿಮೊ 2:7; ಹುಮೆನಾಯನೂ † 1 ತಿಮೊ 4:14 ಅಲೆಕ್ಸಾಂದರನೂ ಇಂಥವರೇ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ‡ ಕೊರಿ 5:5 ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.

1 2 3 4 5 6 7 8 9 10 11 12 13 14 15 16 17 18 19 20