1 ತಿಮೊಥೆಯನಿಗೆ 2 : 1 (IRVKN)
ಸಭೆಯ ಪ್ರಾರ್ಥನೆ ಮತ್ತು ಆರಾಧನೆ ಎಲ್ಲಾದಕ್ಕಿಂತ ಮೊದಲು ಎಲ್ಲಾ ಜನರಿಗೋಸ್ಕರ ದೇವರಿಗೆ ವಿಜ್ಞಾಪನೆಗಳನ್ನೂ, ಪ್ರಾರ್ಥನೆಗಳನ್ನೂ, ಮನವಿಗಳನ್ನೂ, ಕೃತಜ್ಞತಾಸ್ತುತಿಗಳನ್ನೂ ಮಾಡಬೇಕೆಂದು ಕೇಳಿಕೊಳ್ಳುತ್ತೇನೆ.
1 ತಿಮೊಥೆಯನಿಗೆ 2 : 2 (IRVKN)
ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ, ಗೌರವದಿಂದಲೂ ಜೀವಿಸುವಂತೆ, * ಎಜ್ರ 6:10 ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು.
1 ತಿಮೊಥೆಯನಿಗೆ 2 : 3 (IRVKN)
ಹಾಗೆ ಮಾಡುವುದು ನಮ್ಮ † 1 ತಿಮೊ 1:1 ರಕ್ಷಕನಾದ ದೇವರ ಸನ್ನಿಧಿಯಲ್ಲಿ ಒಳ್ಳೆಯದು, ಮೆಚ್ಚಿಕೆಯಾಗಿಯೂ ಇದೆ.
1 ತಿಮೊಥೆಯನಿಗೆ 2 : 4 (IRVKN)
‡ 1 ತಿಮೊ 4:10; ತೀತ 2:11; ಯೆಹೆ 18:23,32 ಎಲ್ಲಾ ಜನರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬುದೇ ಆತನ ಚಿತ್ತವಾಗಿದೆ.
1 ತಿಮೊಥೆಯನಿಗೆ 2 : 5 (IRVKN)
ಏಕೆಂದರೆ § ಗಲಾ 3:20 ದೇವರು ಒಬ್ಬನೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ, ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ.
1 ತಿಮೊಥೆಯನಿಗೆ 2 : 6 (IRVKN)
* ಮತ್ತಾ 20:28; 26:28; ಯೆಶಾ 53:10-12; ಯೋಹಾ 11:51,52; ರೋಮಾ 4:25; ಇಬ್ರಿ 9:28; 1 ಪೇತ್ರ 1:18,19 ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಕೊಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯಾಗಿದೆ.
1 ತಿಮೊಥೆಯನಿಗೆ 2 : 7 (IRVKN)
ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ † 1 ತಿಮೊ 1:11; ಎಫೆ 3:7,8; 2 ತಿಮೊ 1:11 ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ‡ ಅ. ಕೃ 9:15 ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು § ರೋಮ 9:1 ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ.
1 ತಿಮೊಥೆಯನಿಗೆ 2 : 8 (IRVKN)
ಹೀಗಿರಲಾಗಿ ಪುರುಷರು * ಯೋಹಾ 4:21 ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ, ಭಕ್ತಿಪೂರ್ವಕವಾಗಿ ಪವಿತ್ರ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ.
1 ತಿಮೊಥೆಯನಿಗೆ 2 : 9 (IRVKN)
ಹಾಗೆಯೇ † 1 ಪೇತ್ರ 3:3 ಸ್ತ್ರೀಯರು ಮಾನಸ್ಥೆಯರಾಗಿಯೂ, ಸಭ್ಯತೆಯುಳ್ಳವರಾಗಿಯೂ ಇದ್ದು, ಗೌರವಕ್ಕೆ ತಕ್ಕ ಉಡುಪನ್ನೂ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆಯನ್ನು ಹೆಣೆಯುವುದು, ಚಿನ್ನ, ಮುತ್ತು, ಬೆಲೆಯುಳ್ಳ ವಸ್ತ್ರ
1 ತಿಮೊಥೆಯನಿಗೆ 2 : 10 (IRVKN)
ಮುಂತಾದವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ ದೇವಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.
1 ತಿಮೊಥೆಯನಿಗೆ 2 : 11 (IRVKN)
ಸ್ತ್ರೀಯರು ಮೌನವಾಗಿದ್ದು ಪೂರ್ಣ ಅಧೀನತೆಯಿಂದ ಉಪದೇಶವನ್ನು ಕಲಿಯಬೇಕು.
1 ತಿಮೊಥೆಯನಿಗೆ 2 : 12 (IRVKN)
‡ 1 ಕೊರಿ 14:34 ಉಪದೇಶಮಾಡುವುದಕ್ಕಾಗಲಿ ಪುರುಷರ ಮೇಲೆ ಅಧಿಕಾರ ನಡಿಸುವುದಕ್ಕಾಗಲಿ ಸ್ತ್ರೀಯರಿಗೆ ನಾನು ಅಪ್ಪಣೆ ಕೊಡುವುದಿಲ್ಲ. ಅವರು ಮೌನವಾಗಿರಬೇಕು.
1 ತಿಮೊಥೆಯನಿಗೆ 2 : 13 (IRVKN)
§ ಆದಿ 1:27 2:8 ಮೊದಲು ಸೃಷ್ಟಿಸಲ್ಪಟವನು ಆದಾಮನಲ್ಲವೇ, * ಆದಿ 2:18,22 ಆಮೇಲೆ ಹವ್ವಳು.
1 ತಿಮೊಥೆಯನಿಗೆ 2 : 14 (IRVKN)
ಇದಲ್ಲದೆ ಆದಾಮನು ವಂಚಿಸಲ್ಪಡಲಿಲ್ಲ,† ಆದಿ 3:6,13 ಸ್ತ್ರೀಯು ವಂಚಿಸಲ್ಪಟ್ಟು ಅಪರಾಧಿಯಾದಳು.
1 ತಿಮೊಥೆಯನಿಗೆ 2 : 15 (IRVKN)
ಆದರೂ ಸ್ತ್ರೀಯರು ಸ್ವಸ್ಥಬುದ್ಧಿಯಿಂದ ನಂಬಿಕೆಯಲ್ಲಿಯೂ, ಪ್ರೀತಿಯಲ್ಲಿಯೂ, ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ‡ ಗಲಾ 4:4 ಮಕ್ಕಳನ್ನು ಹೆರುವುದರಲ್ಲಿ ರಕ್ಷಣೆಹೊಂದುವರು.
❮
❯
1
2
3
4
5
6
7
8
9
10
11
12
13
14
15