1 ತಿಮೊಥೆಯನಿಗೆ 5 : 1 (IRVKN)
ವಿಶ್ವಾಸಿಗಳೊಂದಿಗಿನ ಕರ್ತವ್ಯಗಳು * ಯಾಜ 19:32 ವೃದ್ಧರನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಅಣ್ಣತಮ್ಮಂದಿರೆಂದೂ,
1 ತಿಮೊಥೆಯನಿಗೆ 5 : 2 (IRVKN)
ವೃದ್ಧಸ್ತ್ರೀಯರನ್ನು ತಾಯಿಯಂತೆಯೂ, ಯೌವನಸ್ತ್ರೀಯರನ್ನು ಪೂರ್ಣ ಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ತಕ್ಕ ಹಾಗೆ ಬುದ್ಧಿಹೇಳು.
1 ತಿಮೊಥೆಯನಿಗೆ 5 : 3 (IRVKN)
(3-4)ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು. ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮತ್ತಾ 15:4-6; ಮಾರ್ಕ 7:10-13; ಎಫೆ 6:1,2; ಆದಿ 45:9-11 ಮೊದಲು ತಮ್ಮ ಮನೆಯವರಿಗೆ ಭಕ್ತಿತೋರಿಸುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ‡ 1 ತಿಮೊ. 2:3 ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
1 ತಿಮೊಥೆಯನಿಗೆ 5 : 4 (IRVKN)
1 ತಿಮೊಥೆಯನಿಗೆ 5 : 5 (IRVKN)
ದಿಕ್ಕಿಲ್ಲದೆ ಒಬ್ಬೊಂಟಿಗಳಾಗಿರುವ ವಿಧವೆಯು, ದೇವರ ಮೇಲೆ ನಿರೀಕ್ಷೆಯನ್ನಿಟ್ಟು, § ಲೂಕ 2:37; 18:15 ಹಗಲಿರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.
1 ತಿಮೊಥೆಯನಿಗೆ 5 : 6 (IRVKN)
ಆದರೆ ಸುಖಭೋಗದಲ್ಲಿರುವ ವಿಧವೆಯು * ಪ್ರಕ 3:1 ಬದುಕಿದ್ದರೂ ಸತ್ತಂತೆಯೇ.
1 ತಿಮೊಥೆಯನಿಗೆ 5 : 7 (IRVKN)
ವಿಧವೆಯರು ನಿಂದೆಗೆ ಗುರಿಯಾಗದಂತೆ 1 ತಿಮೊ. 4:11; 6:2 ಈ ವಿಷಯಗಳನ್ನು ಆಜ್ಞಾಪಿಸು.
1 ತಿಮೊಥೆಯನಿಗೆ 5 : 8 (IRVKN)
ಯಾವನಾದರೂ ಸ್ವಂತ ಜನರನ್ನು, ಗಲಾ. 6:10 ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ.
1 ತಿಮೊಥೆಯನಿಗೆ 5 : 9 (IRVKN)
ವಯಸ್ಸಿನಲ್ಲಿ ಅರುವತ್ತು ವರ್ಷ ಮೇಲ್ಪಟ್ಟ, ವಿಧವೆಯನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬಹುದು. ಅಂಥವಳಾದರೂ § 1 ತಿಮೊ. 3:2 ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳಾಗಿ,
1 ತಿಮೊಥೆಯನಿಗೆ 5 : 10 (IRVKN)
ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿದ್ದಲ್ಲಿ, ಅವರು ಮಕ್ಕಳನ್ನು ಸಾಕಿಕೊಂಡು, ಅತಿಥಿಸತ್ಕಾರವನ್ನು ಮಾಡುತ್ತಾ, * ದೇವಜನರ ಕಾಲುಗಳನ್ನು ತೊಳೆಯುವುದು; ಆದಿ 18:4 ದೇವಜನರಿಗೆ ಉಪಚಾರಮಾಡಿದವಳಾಗಲಿ, ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡುತ್ತಾ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಿರಲಿ.
1 ತಿಮೊಥೆಯನಿಗೆ 5 : 11 (IRVKN)
ಯೌವನ ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ, ಅವರು ದೈಹಿಕ ಆಸೆಗಳಿಂದ ಸೋಲಿಸಲ್ಪಟ್ಟು, ಕ್ರಿಸ್ತನಿಗೆ ವಿಮುಖರಾಗಿ ಮದುವೆಮಾಡಿಕೊಳ್ಳಬೇಕೆಂದು ಇಷ್ಟಪಟ್ಟಾರು.
1 ತಿಮೊಥೆಯನಿಗೆ 5 : 12 (IRVKN)
ಅಂಥವರು ತಾವು ಮೊದಲು ಮಾಡಿದ ಪ್ರತಿಜ್ಞೆಯನ್ನು ಉಲ್ಲಂಘಿಸಿ ತೀರ್ಪಿಗೆ ಗುರಿಯಾಗಿರುವರು.
1 ತಿಮೊಥೆಯನಿಗೆ 5 : 13 (IRVKN)
ಇದಲ್ಲದೆ ಅವರು ಮನೆಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ. ಮೈಗಳ್ಳರಾಗುವುದಲ್ಲದೆ, 3 ಯೋಹಾ 10 ಹರಟೆಮಾತನಾಡುವವರೂ, ‡ 2 ಥೆಸ. 3:11; 1 ಪೇತ್ರ 4:15 ಇತರರ ವಿಷಯಗಳಲ್ಲಿ ತಲೆ ಹಾಕುವವರೂ ಆಗಿ ಆಡಬಾರದ ಮಾತುಗಳನ್ನಾಡುತ್ತಾರೆ.
1 ತಿಮೊಥೆಯನಿಗೆ 5 : 14 (IRVKN)
ಆದ್ದರಿಂದ ಯೌವನ § 1 ಕೊರಿ 7:9 ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯನ್ನು ನಿರ್ವಹಿಸುವವರಾಗಿರುವುದು ನನಗೆ ಒಳ್ಳೆಯದಾಗಿ ತೋಚುತ್ತದೆ. ಹಾಗೆ ಮಾಡುವುದರಿಂದ * 1 ತಿಮೊ 1:20 ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.
1 ತಿಮೊಥೆಯನಿಗೆ 5 : 15 (IRVKN)
ಇಷ್ಟರೊಳಗೆ ಕೆಲವರು ಅಡ್ಡದಾರಿ ಹಿಡಿದು ಸೈತಾನನನ್ನು ಹಿಂಬಾಲಿಸಿದ್ದಾರೆ.
1 ತಿಮೊಥೆಯನಿಗೆ 5 : 16 (IRVKN)
ನಂಬುವವಳಾದ ಸ್ತ್ರೀಯ ಬಂಧುಭಾಂಧವರಲ್ಲಿ ವಿಧವೆಯರಿದ್ದರೆ ಆಕೆಯೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯ ಮಾಡಬೇಕಾಗಿರುವುದರಿಂದ ಆಕೆಯು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.
1 ತಿಮೊಥೆಯನಿಗೆ 5 : 17 (IRVKN)
ಹಿರಿಯರ ವಿಷಯದಲ್ಲಿ ನಡೆಯಬೇಕಾದ ರೀತಿ ಚೆನ್ನಾಗಿ ರೋಮಾ. 12:8; 1 ಥೆಸ. 5:12; 1 ಕೊರಿ 12:28; ಇಬ್ರಿ. 13:7, 17 ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.
1 ತಿಮೊಥೆಯನಿಗೆ 5 : 18 (IRVKN)
ಧರ್ಮೋ 25:4; 1 ಕೊರಿ 9:9 “ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದು,” ಮತ್ತು “ § ಮತ್ತಾ 10:10; ಲೂಕ 10:7; ಯಾಜ 19:13; ಧರ್ಮೋ 19:15; 1 ಕೊರಿ 9:4 7-14 ಆಳು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ” ಎಂದು ಶಾಸ್ತ್ರದಲ್ಲಿ ಹೇಳಿದೆಯಲ್ಲಾ.
1 ತಿಮೊಥೆಯನಿಗೆ 5 : 19 (IRVKN)
ಸಭೆಯ ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ಒಪ್ಪಿಕೊಳ್ಳಬೇಡ.
1 ತಿಮೊಥೆಯನಿಗೆ 5 : 20 (IRVKN)
ಪಾಪದಲ್ಲಿ ನಡೆಯುವವರನ್ನು * ತೀತ 1:13; 2:15 ಎಲ್ಲರ ಮುಂದೆಯೇ ಗದರಿಸು. † ಧರ್ಮೋ 13:11 ಇವರಿಂದ ಉಳಿದವರಿಗೂ ಭಯವುಂಟಾಗುವುದು.
1 ತಿಮೊಥೆಯನಿಗೆ 5 : 21 (IRVKN)
ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.
1 ತಿಮೊಥೆಯನಿಗೆ 5 : 22 (IRVKN)
1 ತಿಮೊ. 3:10 ಅವಸರದಿಂದ § ಅ. ಕೃ. 6:6 ಯಾರ ತಲೆಯ ಮೇಲೆಯಾದರೂ * ಹಸ್ತವನ್ನಿಡಬೇಡ ಹಸ್ತವನ್ನಿಟ್ಟು ಸಭೆಯ ನಾಯಕತ್ವಕ್ಕೆ ನೇಮಿಸಬೇಡ. † 2 ಯೋಹಾ 11 ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನಾಗದೆ, ನೀನು ಶುದ್ಧನಾಗಿರುವ ಹಾಗೆ ನೋಡಿಕೋ.
1 ತಿಮೊಥೆಯನಿಗೆ 5 : 23 (IRVKN)
ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ, ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು 1 ತಿಮೊ. 3:8 ಸ್ವಲ್ಪವಾಗಿ ತೆಗೆದುಕೊ.
1 ತಿಮೊಥೆಯನಿಗೆ 5 : 24 (IRVKN)
ಕೆಲವರ ಪಾಪಕೃತ್ಯಗಳು ತೀರ್ಪಿಗೆ ಮುಂಚೆಯೇ ಬಯಲಾಗುತ್ತವೆ, ಬೇರೆ ಕೆಲವರ ಪಾಪಕೃತ್ಯಗಳು ಮರೆಯಾಗಿದ್ದು ತರುವಾಯ ತಿಳಿದುಬರುತ್ತವೆ.
1 ತಿಮೊಥೆಯನಿಗೆ 5 : 25 (IRVKN)
ಹಾಗೆಯೇ ಕೆಲವು ಸತ್ಕ್ರಿಯೆಗಳು ಪ್ರಸಿದ್ಧವಾಗಿವೆ, ಬೇರೆ ಕೆಲವು ಸತ್ಕ್ರಿಯೆಗಳು ಬೆಳಕಿಗೆ ಬಾರದ್ದಿದ್ದರೂ § ಕೀರ್ತ 37:6 ಮರೆಯಾಗಿರಲಾರವು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25