2 ಪೂರ್ವಕಾಲವೃತ್ತಾ 1 : 1 (IRVKN)
ಸೊಲೊಮೋನನಿಗೆ ಯೆಹೋವನು ಕೊಟ್ಟ ವಿಶೇಷಜ್ಞಾನ ದಾವೀದನ ಮಗನಾದ ಸೊಲೊಮೋನನು ತನ್ನ ರಾಜ್ಯದಲ್ಲಿ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಯೆಹೋವನು ಅವನ ಸಂಗಡ ಇದ್ದು ಅವನನ್ನು ಬಲಾಢ್ಯನಾಗುವಂತೆ ಆಶೀರ್ವದಿಸಿ ನಡೆಸಿದನು.
2 ಪೂರ್ವಕಾಲವೃತ್ತಾ 1 : 2 (IRVKN)
ಆಗ ಸೊಲೊಮೋನನು ಸಮಸ್ತ ಇಸ್ರಾಯೇಲರ ಶತಾಧಿಪತಿಗಳೊಂದಿಗೂ, ಸಹಸ್ರಾಧಿಪತಿಗಳೊಂದಿಗೂ, ನ್ಯಾಯಾಧಿಪತಿಗಳೊಂದಿಗೂ, ಗೋತ್ರ ಪ್ರಧಾನರಾದವರೊಂದಿಗೂ, ಇಸ್ರಾಯೇಲ್ ಪ್ರಭುಗಳೊಂದಿಗೂ ಮಾತನಾಡಿದನು.
2 ಪೂರ್ವಕಾಲವೃತ್ತಾ 1 : 3 (IRVKN)
ಅವನ ಸಂಗಡ ಇದ್ದ ಸರ್ವಸಮೂಹದೊಡನೆ ಗಿಬ್ಯೋನಿನಲ್ಲಿರುವ ಪೂಜಾಸ್ಥಳಕ್ಕೆ ಹೋದನು. ಏಕೆಂದರೆ ಯೆಹೋವನ ಸೇವಕನಾದ ಮೋಶೆಯು ಅರಣ್ಯದಲ್ಲಿ ಮಾಡಿದ ದೇವದರ್ಶನದ ಗುಡಾರವು ಅಲ್ಲಿತ್ತು.
2 ಪೂರ್ವಕಾಲವೃತ್ತಾ 1 : 4 (IRVKN)
ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀಮಿನಿಂದ ತಾನು ಅದನ್ನಿರಿಸಲು ಸಿದ್ಧ ಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಅವನು ಯೆರೂಸಲೇಮಿನಲ್ಲಿ ಅದಕ್ಕಾಗಿ ಗುಡಾರವನ್ನು ಮಾಡಿಸಿದ್ದನು.
2 ಪೂರ್ವಕಾಲವೃತ್ತಾ 1 : 5 (IRVKN)
ಇದಲ್ಲದೆ ಹೂರನ ಮಗನಾದ ಊರಿಯ, ಈತನ ಮಗನಾದ ಬೆಚಲೇಲನು ಮಾಡಿದ ತಾಮ್ರದ ಯಜ್ಞವೇದಿಯು ಅಲ್ಲೇ ಯೆಹೋವನ ಗುಡಾರದ ಮುಂದಿತ್ತು. ಸೊಲೊಮೋನನೂ ಆ ಸಮೂಹದವರೂ ಅಲ್ಲಿಗೆ ಹೋದರು.
2 ಪೂರ್ವಕಾಲವೃತ್ತಾ 1 : 6 (IRVKN)
ಆಗ ಸೊಲೊಮೋನನು ದೇವದರ್ಶನ ಗುಡಾರದ ಬಳಿಯಲ್ಲಿ ಯೆಹೋವನ ಮುಂದೆ ಇರುವ ತಾಮ್ರದ ಯಜ್ಞವೇದಿಯ ಬಳಿಗೆ ಹೋಗಿ ಅದರ ಮೇಲೆ ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು.
2 ಪೂರ್ವಕಾಲವೃತ್ತಾ 1 : 7 (IRVKN)
ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು ಅವನಿಗೆ, “ನಿನಗೆ, ಯಾವ ವರ ಬೇಕು ಕೇಳಿಕೋ” ಎಂದು ಹೇಳಲು
2 ಪೂರ್ವಕಾಲವೃತ್ತಾ 1 : 8 (IRVKN)
ಸೊಲೊಮೋನನು ದೇವರಿಗೆ, “ನೀನು ನನ್ನ ತಂದೆಯಾದ ದಾವೀದನಿಗೆ ಮಹಾ ದಯೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಅರಸನಾಗುವಂತೆ ಮಾಡಿದೆ.
2 ಪೂರ್ವಕಾಲವೃತ್ತಾ 1 : 9 (IRVKN)
ಈಗ ಯೆಹೋವನಾದ ದೇವರೇ, ನೀನು ನನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವು ನೆರವೇರಲಿ. ಏಕೆಂದರೆ ಭೂಮಿಯ ಧೂಳಿನಷ್ಟು ಅಸಂಖ್ಯವಾದ ಜನಾಂಗದವರಿಗೆ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀ.
2 ಪೂರ್ವಕಾಲವೃತ್ತಾ 1 : 10 (IRVKN)
ನಿನ್ನ ಪ್ರಜೆಗಳಾದ ಈ ಮಹಾ ಜನಾಂಗವನ್ನು ಮುನ್ನಡೆಸುವುದಕ್ಕೂ, ಆಳುವುದಕ್ಕೂ, ನ್ಯಾಯತೀರಿಸುವುದಕ್ಕೂ ಜ್ಞಾನ ವಿವೇಕಗಳನ್ನು ಅನುಗ್ರಹಿಸು” ಎಂದು ಕೇಳಿದನು.
2 ಪೂರ್ವಕಾಲವೃತ್ತಾ 1 : 11 (IRVKN)
ಆಗ ದೇವರು ಸೊಲೊಮೋನನಿಗೆ, “ಇದು ನಿನ್ನ ಆಕಾಂಕ್ಷೆಯಾಗಿ ಇದ್ದುದರಿಂದಲೂ ಘನವನ್ನೂ, ಧನವನ್ನೂ, ಐಶ್ವರ್ಯವನ್ನೂ, ನಿನ್ನ ವೈರಿಗಳ ಪ್ರಾಣವನ್ನಾಗಲಿ, ದೀರ್ಘಾಯುಷ್ಯವನ್ನಾಗಲಿ ಕೇಳದೆ, ನಾನು ಯಾರನ್ನು ಮುನ್ನಡೆಸಲು ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನ, ವಿವೇಕಗಳನ್ನು ನೀನು ಕೇಳಿಕೊಂಡದ್ದರಿಂದಲೂ ಜ್ಞಾನವೂ, ವಿವೇಕವೂ ನಿನಗೆ ಕೊಡಲ್ಪಟ್ಟಿವೆ.
2 ಪೂರ್ವಕಾಲವೃತ್ತಾ 1 : 12 (IRVKN)
ಇದಲ್ಲದೆ ನಿನಗಿಂತ ಮೊದಲು ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ, ನಿನ್ನ ತರುವಾಯ ಯಾರಿಗೂ ಇರದಂಥ ಘನ, ಧನ, ಐಶ್ವರ್ಯಗಳನ್ನೂ ಅನುಗ್ರಹಿಸುವೆನು” ಎಂದನು.
2 ಪೂರ್ವಕಾಲವೃತ್ತಾ 1 : 13 (IRVKN)
ಆನಂತರ ಸೊಲೊಮೋನನು ದೇವದರ್ಶನದ ಗುಡಾರವನ್ನು ಬಿಟ್ಟು, ಗಿಬ್ಯೋನಿನಲ್ಲಿರುವ ಪೂಜಾಸ್ಥಳದಿಂದ ಯೆರೂಸಲೇಮಿಗೆ ಬಂದು, ಇಸ್ರಾಯೇಲ್ ರಾಜ್ಯವನ್ನು ಆಳಿದನು.
2 ಪೂರ್ವಕಾಲವೃತ್ತಾ 1 : 14 (IRVKN)
ಸೊಲೊಮೋನನ ವೈಭವ ಅರಸನಾದ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಸಂಗ್ರಹಿಸಿದನು. ಸಾವಿರದ ನಾನೂರು ರಥಗಳೂ ಮತ್ತು ಹನ್ನೆರಡು ಸಾವಿರ ರಾಹುತರೂ ಅವನಿಗೆ ಇದ್ದರು. ಇವರನ್ನು ರಥದ ಪಟ್ಟಣಗಳಲ್ಲಿಯೂ ಕೆಲವರನ್ನು ಯೆರೂಸಲೇಮಿನಲ್ಲಿ ಅರಸನೊಂದಿಗೂ ಇರಿಸಿದನು. ಉಳಿದವುಗಳನ್ನು ರಥಗಳಿಗಾಗಿ ನೇಮಿಸಿದ ಪಟ್ಟಣದಲ್ಲಿ ಇರಿಸಿದನು.
2 ಪೂರ್ವಕಾಲವೃತ್ತಾ 1 : 15 (IRVKN)
ಅರಸನು ಯೆರೂಸಲೇಮಿನಲ್ಲಿ ಬೆಳ್ಳಿ ಬಂಗಾರವು ಹೇರಳವಾಗಿದ್ದು ಅವು ಕಲ್ಲಿನಂತೆಯೂ, ಹಾಗು ದೇವದಾರು ಮರಗಳು ತಗ್ಗಿನಲ್ಲಿರುವ ಅತ್ತಿಮರಗಳಂತೆ ಹೇರಳವಾಗಿರುವಂತೆ ಮಾಡಿದನು.
2 ಪೂರ್ವಕಾಲವೃತ್ತಾ 1 : 16 (IRVKN)
ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತ್ಯ ದೇಶದವುಗಳಾಗಿದ್ದವು. ಅವನ ವರ್ತಕರು ಅವುಗಳನ್ನು ಹಿಂಡು ಹಿಂಡಾಗಿ ಕೊಂಡುಕೊಂಡು ಬರುತ್ತಿದ್ದರು.
2 ಪೂರ್ವಕಾಲವೃತ್ತಾ 1 : 17 (IRVKN)
ರಥಕ್ಕೆ ಆರುನೂರು ಬೆಳ್ಳಿ ನಾಣ್ಯಗಳಂತೆ, ಕುದುರೆಗೆ ನೂರೈವತ್ತು ಬೆಳ್ಳಿನಾಣ್ಯಗಳಂತೆ ಕೊಟ್ಟು, ರಥಗಳನ್ನೂ, ಕುದುರೆಗಳನ್ನೂ ಐಗುಪ್ತ್ಯ ದೇಶದಿಂದ ತರಿಸುತ್ತಿದ್ದರು. ಇವುಗಳನ್ನು ಹಿತ್ತಿಯರ ಮತ್ತು ಅರಾಮ್ಯರ ಅರಸರ ಮುಖಾಂತರವೇ ತರಿಸುತ್ತಿದ್ದರು.
❮
❯
1
2
3
4
5
6
7
8
9
10
11
12
13
14
15
16
17