2 ಪೂರ್ವಕಾಲವೃತ್ತಾ 11 : 1 (IRVKN)
ರೆಹಬ್ಬಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲ್ಯರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೂ, ರಾಜ್ಯವನ್ನು ತಿರುಗಿ ತನ್ನ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಭತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.
2 ಪೂರ್ವಕಾಲವೃತ್ತಾ 11 : 2 (IRVKN)
ಆಗ ದೇವರ ಮನುಷ್ಯನಾದ ಶೆಮಾಯನಿಗೆ, ಯೆಹೋವನ ವಾಕ್ಯವು ಉಂಟಾಗಿ ಹೇಳಿದ್ದೇನಂದರೆ,
2 ಪೂರ್ವಕಾಲವೃತ್ತಾ 11 : 3 (IRVKN)
“ನೀನು ಹೋಗಿ ಸೊಲೊಮೋನನ ಮಗನೂ, ಯೆಹೂದದ ಅರಸನಾದ ರೆಹಬ್ಬಾಮನಿಗೂ ಯೆಹೂದದ ಬೆನ್ಯಾಮೀನ್ ಕುಲಗಳ ಇಸ್ರಾಯೇಲರೆಲ್ಲರಿಗೂ,
2 ಪೂರ್ವಕಾಲವೃತ್ತಾ 11 : 4 (IRVKN)
ಯೆಹೋವನು ಇಂತೆನ್ನುತ್ತಾನೆ, ‘ನೀವು ನಿಮ್ಮ ಸಹೋದರರೊಡನೆ* ಸಹೋದರರೊಡನೆ ಅಥವಾ ಸಂಬಂಧಿಕರೊಡನೆ ಅಥವಾ ಉತ್ತರ ರಾಜ್ಯದವರಾದ ಯೆಹೂದ್ಯರೊಂದಿಗೆ. ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ; ಈ ಕಾರ್ಯವು ಯೆಹೋವನಿಂದಾಗಿದೆ ಎಂದು ಹೇಳಬೇಕು’ ” ಎಂಬ ಯೆಹೋವನ ವಾಕ್ಯವುಂಟಾಗಲು ಅವರು ಯೆಹೋವನ ಮಾತನ್ನು ಕೇಳಿ ಯಾರೊಬ್ಬಾಮನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಡದೆ ಹಿಂತಿರುಗಿ ಹೋದರು.
2 ಪೂರ್ವಕಾಲವೃತ್ತಾ 11 : 5 (IRVKN)
ಅರಸನಾದ ರೆಹಬ್ಬಾಮನು ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸವಾಗಿದ್ದು ಯೆಹೂದ ಸಂರಕ್ಷಣೆಗಾಗಿ ಪಟ್ಟಣಗಳನ್ನು ಕಟ್ಟಿಸಿದನು.
2 ಪೂರ್ವಕಾಲವೃತ್ತಾ 11 : 6 (IRVKN)
ಆ ಪಟ್ಟಣಗಳು ಯಾವುವೆಂದರೆ: ಬೇತ್ಲೆಹೇಮ್, ಏತಾಮ್, ತೆಕೋವ,
2 ಪೂರ್ವಕಾಲವೃತ್ತಾ 11 : 7 (IRVKN)
ಬೇತ್ಚೂರ್, ಸೋಕೋ, ಅದುಲ್ಲಾಮ್,
2 ಪೂರ್ವಕಾಲವೃತ್ತಾ 11 : 8 (IRVKN)
ಗತ್ ಊರು, ಮಾರೇಷ, ಜೀಫ್
2 ಪೂರ್ವಕಾಲವೃತ್ತಾ 11 : 9 (IRVKN)
ಅದೋರೈಮ್, ಲಾಕೀಷ್, ಅಜೇಕ,
2 ಪೂರ್ವಕಾಲವೃತ್ತಾ 11 : 10 (IRVKN)
ಚೊರ್ಗ, ಅಯ್ಯಾಲೋನ್, ಹೆಬ್ರೋನ್. ಕೋಟೆಕೊತ್ತಲುಗಳುಳ್ಳ ಈ ಪಟ್ಟಣಗಳು ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಾಗಿದ್ದವು.
2 ಪೂರ್ವಕಾಲವೃತ್ತಾ 11 : 11 (IRVKN)
ಅವನು ಈ ಕೋಟೆಗಳನ್ನು ಬಲಪಡಿಸಿ, ನಾಯಕರ ವಶಕ್ಕೆ ಕೊಟ್ಟು, ಪ್ರತಿ ಒಂದರಲ್ಲಿ ಆಹಾರಪದಾರ್ಥ, ಎಣ್ಣೆ, ದ್ರಾಕ್ಷಾರಸವನ್ನು ಸಂಗ್ರಹಿಸಿಟ್ಟನು. ಗುರಾಣಿ ಬರ್ಜಿಗಳನ್ನೂ ಸಂಗ್ರಹಿಸಿಟ್ಟನು.
2 ಪೂರ್ವಕಾಲವೃತ್ತಾ 11 : 12 (IRVKN)
ಪ್ರತಿಯೊಂದು ಪಟ್ಟಣದಲ್ಲಿ ಗುರಾಣಿ ಬರ್ಜಿಗಳನ್ನೂ ಸಂಗ್ರಹಿಸಿ, ಅವುಗಳನ್ನು ಮತ್ತಷ್ಟು ಭದ್ರಪಡಿಸಿದನು. ಯೆಹೂದ ಬೆನ್ಯಾಮೀನ್ ಕುಲಗಳು ಅವನ ಸ್ವಾಧೀನದಲ್ಲಿದ್ದವು.
2 ಪೂರ್ವಕಾಲವೃತ್ತಾ 11 : 13 (IRVKN)
ಎಲ್ಲಾ ಇಸ್ರಾಯೇಲ್ ಪ್ರಾಂತ್ಯಗಳಲ್ಲಿದ್ದ ಯಾಜಕರೂ ಮತ್ತು ಲೇವಿಯರೂ ಅವನೊಡನೆ ಬಂದು ಸೇರಿಕೊಂಡರು.
2 ಪೂರ್ವಕಾಲವೃತ್ತಾ 11 : 14 (IRVKN)
ಲೇವಿಯರು ಯೆಹೋವನಿಗೆ ಯಾಜಕ ಸೇವೆ ಮಾಡದಂತೆ ಯಾರೊಬ್ಬಾಮನೂ ಮತ್ತು ಅವನ ಮಕ್ಕಳೂ ಅವರನ್ನು ಬಹಿಷ್ಕರಿಸಿದ್ದರಿಂದ ಲೇವಿಯರು ತಮ್ಮ ಹುಲ್ಲುಗಾವಲುಗಳಿದ್ದ ತಮ್ಮ ಆಸ್ತಿಗಳನ್ನು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.
2 ಪೂರ್ವಕಾಲವೃತ್ತಾ 11 : 15 (IRVKN)
ಯಾರೊಬ್ಬಾಮನು ತಾನು ಏರ್ಪಡಿಸಿದ ಪೂಜಾ ಸ್ಥಳಗಳಿಗಾಗಿ ಹಾಗೂ ಹೋರಿಕುರಿಗಳ ಮೂರ್ತಿ ಪೂಜೆಗಳಿಗಾಗಿ ಬೇರೆ ಪೂಜಾರಿಗಳನ್ನು ನೇಮಿಸಿದನು.
2 ಪೂರ್ವಕಾಲವೃತ್ತಾ 11 : 16 (IRVKN)
ಇಸ್ರಾಯೇಲರ ಎಲ್ಲಾ ಕುಲಗಳಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು.
2 ಪೂರ್ವಕಾಲವೃತ್ತಾ 11 : 17 (IRVKN)
ಇವರೆಲ್ಲರೂ ಮೊದಲನೆಯ ಮೂರು ವರ್ಷಗಳಲ್ಲಿ ದಾವೀದ ಹಾಗು ಸೊಲೊಮೋನರ ಮಾರ್ಗದಲ್ಲೇ ನಡೆಯುತ್ತಿದ್ದರು. ಅಂತೆಯೇ ಯೆಹೂದ ರಾಜ್ಯವು ಆ ವರ್ಷಗಳಲ್ಲಿ ಅಭಿವೃದ್ಧಿಯಾಗಿ, ಸೊಲೊಮೋನನ ಮಗನಾದ ರೆಹಬ್ಬಾಮನು ಬಲಗೊಂಡನು.
2 ಪೂರ್ವಕಾಲವೃತ್ತಾ 11 : 18 (IRVKN)
ರೆಹಬ್ಬಾಮನ ಕುಟುಂಬ ರೆಹಬ್ಬಾಮನು ದಾವೀದನ ಮಗನಾದ ಯೆರೀಮೋತನ ಮಗಳಾದ ಮಹ್ಲತ್ತಳನ್ನು, ಇಷಯನ ಮೊಮ್ಮಗಳೂ ಎಲೀಯಾಬನ ಮಗಳೂ ಆದ ಅಬೀಹೈಲಳನ್ನೂ ಹೆಂಡತಿಯನ್ನಾಗಿ ಮಾಡಿಕೊಂಡನು.
2 ಪೂರ್ವಕಾಲವೃತ್ತಾ 11 : 19 (IRVKN)
ಆಕೆಯು ಅವನಿಂದ ಯೆಗೂಷ್, ಶೆಮರ್ಯ, ಜಾಹಮ್ ಎಂಬ ಗಂಡು ಮಕ್ಕಳನ್ನು ಹೆತ್ತಳು.
2 ಪೂರ್ವಕಾಲವೃತ್ತಾ 11 : 20 (IRVKN)
ಅನಂತರ ಅವನು ಅಬ್ಷಾಲೋಮನ ಮಗಳಾದ ಮಾಕ ಎಂಬಾಕೆಯನ್ನು ಮದುವೆಮಾಡಿಕೊಂಡನು; ಆಕೆಯು ಅವನಿಂದ ಅಬೀಯ, ಅತ್ತೈ, ಜೀಜ, ಶೆಲೋಮೀತ್ ಎಂಬುವರನ್ನು ಹೆತ್ತಳು.
2 ಪೂರ್ವಕಾಲವೃತ್ತಾ 11 : 21 (IRVKN)
ರೆಹಬ್ಬಾಮನು ತನ್ನ ಎಲ್ಲಾ ಪತ್ನಿಯರಲ್ಲಿಯೂ, ಉಪಪತ್ನಿಯರಲ್ಲಿಯೂ ಅಬ್ಷಾಲೋಮನ ಮಗಳಾದ ಮಾಕಳನ್ನು ಹೆಚ್ಚಾಗಿ ಪ್ರೀತಿಸುತ್ತಿದ್ದನು. ಅವನಿಗೆ ಹದಿನೆಂಟು ಮಂದಿ ಪತ್ನಿಯರೂ, ಅರುವತ್ತು ಮಂದಿ ಉಪಪತ್ನಿಯರೂ ಇದ್ದರು. ಇವರಲ್ಲಿ ಅವನಿಗೆ ಇಪ್ಪತ್ತೆಂಟು ಮಂದಿ ಗಂಡುಮಕ್ಕಳೂ ಅರುವತ್ತು ಮಂದಿ ಹೆಣ್ಣುಮಕ್ಕಳೂ ಹುಟ್ಟಿದರು.
2 ಪೂರ್ವಕಾಲವೃತ್ತಾ 11 : 22 (IRVKN)
ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅರಸನನ್ನಾಗಿ ಮಾಡಬೇಕೆಂದು ಅವನನ್ನು ಅವನ ಅಣ್ಣ ತಮ್ಮಂದಿರಲ್ಲಿ ಪ್ರಧಾನನ್ನಾಗಿಯೂ ಪ್ರಭುವನ್ನಾಗಿಯೂ ನೇಮಿಸಿದನು.
2 ಪೂರ್ವಕಾಲವೃತ್ತಾ 11 : 23 (IRVKN)
ತನ್ನ ಉಳಿದ ಎಲ್ಲಾ ಮಕ್ಕಳನ್ನು ಜಾಣತನದಿಂದ ವಿಂಗಡಿಸಿ, ಯೆಹೂದ ಬೆನ್ಯಾಮೀನ್ ಪ್ರದೇಶಗಳಲ್ಲಿದ್ದ ಕೋಟೆಕೊತ್ತಲುಗಳುಳ್ಳ ಆಯಾ ಪಟ್ಟಣಗಳಲ್ಲಿರಿಸಿ, ಅವರಿಗೆ ಬೇಕಾದಷ್ಟು ಆಹಾರವನ್ನು ಏರ್ಪಡಿಸಿ, ಅನೇಕ ಮಂದಿ ಹೆಂಡತಿಯರನ್ನೂ ಗೊತ್ತು ಮಾಡಿಕೊಟ್ಟನು.

1 2 3 4 5 6 7 8 9 10 11 12 13 14 15 16 17 18 19 20 21 22 23