2 ಪೂರ್ವಕಾಲವೃತ್ತಾ 16 : 1 (IRVKN)
{ಅರಸನಾದ ಆಸನ ಅಂತ್ಯ} [PS] ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರಾಯೇಲರ ರಾಜನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಹೊರಟುಬಂದನು. ಯಾರೂ ಯೆಹೂದ್ಯರ, ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಕೋಟೆಯನ್ನು ಭದ್ರಪಡಿಸಿದನು.
2 ಪೂರ್ವಕಾಲವೃತ್ತಾ 16 : 2 (IRVKN)
ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಿಂದ ಬೆಳ್ಳಿ ಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿದ್ದ ಅರಾಮ್ಯರ ಅರಸನಾದ ಬೆನ್ಹದದನಿಗೆ ಕಳುಹಿಸಿ
2 ಪೂರ್ವಕಾಲವೃತ್ತಾ 16 : 3 (IRVKN)
ಅವನಿಗೆ, “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಪ್ಪಂದ ಇದೆಯಲ್ಲಾ? ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಳುಹಿಸಿದ್ದೇನೆ: ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಮಾಡು; ಅವನ ಸಂಗಡ ನೀನು ಮಾಡಿಕೊಂಡಿರುವ ಒಪ್ಪಂದವನ್ನು ಮುರಿದುಬಿಡು” ಎಂದು ಹೇಳಿ ಕಳುಹಿಸಿದನು.
2 ಪೂರ್ವಕಾಲವೃತ್ತಾ 16 : 4 (IRVKN)
ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಇಸ್ರಾಯೇಲ್ಯರ ಪಟ್ಟಣಗಳಿಗೆ ವಿರುದ್ಧವಾಗಿ ಕಳುಹಿಸಿದನು; ಅವರು ಇಯ್ಯೋನ್, ದಾನ್, ಆಬೇಲ್ಮಯಿಮ್, ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲಾ ಉಗ್ರಾಣಗಳನ್ನೂ ಹಾಳು ಮಾಡಿದರು.
2 ಪೂರ್ವಕಾಲವೃತ್ತಾ 16 : 5 (IRVKN)
ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆ ಕಟ್ಟಿಸುವ ಕೆಲಸವನ್ನು ನಿಲ್ಲಿಸಿಬಿಟ್ಟನು.
2 ಪೂರ್ವಕಾಲವೃತ್ತಾ 16 : 6 (IRVKN)
ಅನಂತರ ಅರಸನಾದ ಆಸನು ಎಲ್ಲಾ ಯೆಹೂದ್ಯರನ್ನು ಕರೆಯಿಸಿ ರಾಮ ಕೋಟೆಗಾಗಿ ಬಾಷನು ತರಿಸಿದ್ದ ಕಲ್ಲುಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಗೆಬ, ಮಿಚ್ಪ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.
2 ಪೂರ್ವಕಾಲವೃತ್ತಾ 16 : 7 (IRVKN)
ಆ ಕಾಲದಲ್ಲಿ ದರ್ಶಕನಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವನನ್ನು ಆಶ್ರಯಿಸಿಕೊಳ್ಳದೆ ಅರಾಮ್ಯರ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಅರಾಮ್ ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.
2 ಪೂರ್ವಕಾಲವೃತ್ತಾ 16 : 8 (IRVKN)
ಕೂಷ್ಯ ಹಾಗೂ ಲೂಬ್ಯರ ಸೈನ್ಯವು ಅಪರಿಮಿತ ರಥಾಶ್ವಬಲಗಳುಳ್ಳ ಮಹಾಸೈನ್ಯವಲ್ಲವೇ? ನೀನು ಯೆಹೋವನನ್ನು ಆಶ್ರಯಿಸಿಕೊಂಡದ್ದರಿಂದ ಆತನು ಅದನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟನು.
2 ಪೂರ್ವಕಾಲವೃತ್ತಾ 16 : 9 (IRVKN)
ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.
2 ಪೂರ್ವಕಾಲವೃತ್ತಾ 16 : 10 (IRVKN)
ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.
2 ಪೂರ್ವಕಾಲವೃತ್ತಾ 16 : 11 (IRVKN)
ಆಸನ ಪೂರ್ವೋತ್ತರಚರಿತ್ರೆಗಳನ್ನು ಯೆಹೂದ ಮತ್ತು ಇಸ್ರಾಯೇಲ್ ರಾಜರ ಇತಿಹಾಸ ಗ್ರಂಥಗಳಲ್ಲಿ ಬರೆದಿರುತ್ತದೆ.
2 ಪೂರ್ವಕಾಲವೃತ್ತಾ 16 : 12 (IRVKN)
ಆಸನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ಬಹು ಕಠಿಣವಾದ ರೋಗ ತಗಲಿತು. ಈ ರೋಗದಲ್ಲೂ ಅವನು ಯೆಹೋವನ ಸಹಾಯವನ್ನು ಕೋರದೆ ವೈದ್ಯರ ಸಹಾಯವನ್ನೇ ಕೋರಿದನು.
2 ಪೂರ್ವಕಾಲವೃತ್ತಾ 16 : 13 (IRVKN)
ಆಸನು ತನ್ನ ಆಳ್ವಿಕೆಯ ನಲ್ವತ್ತೊಂದನೆಯ ವರ್ಷದಲ್ಲಿ ತೀರಿಕೊಂಡು ಪೂರ್ವಿಕರ ಬಳಿಗೆ ಸೇರಿದನು.
2 ಪೂರ್ವಕಾಲವೃತ್ತಾ 16 : 14 (IRVKN)
ಅವನ ಶರೀರವನ್ನು ವೈದ್ಯರ ಆಲೋಚನೆ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರಹದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗೋಸ್ಕರ ದಾವೀದನಗರದಲ್ಲಿ ತೆಗೆಸಿದ್ದ ಸಮಾಧಿಯಲ್ಲಿ ಇಟ್ಟರು. ಹೇರಳವಾಗಿ ಅವನಿಗೋಸ್ಕರ ಬಹಳಷ್ಟು ಧೂಪ ಹಾಕಿ ಸಂತಾಪ ಸೂಚಿಸಿದರು. [PE]
❮
❯