2 ಪೂರ್ವಕಾಲವೃತ್ತಾ 17 : 1 (IRVKN)
ಯೆಹೂದದ ಅರಸನಾದ ಯೆಹೋಷಾಫಾಟನು ಆಸನ ನಂತರ ಅವನ ಮಗನಾದ ಯೆಹೋಷಾಫಾಟನು ಅರಸನಾದನು. ಅವನು ಇಸ್ರಾಯೇಲರೆದುರು ಪ್ರಬಲನಾಗಿದ್ದನು.
2 ಪೂರ್ವಕಾಲವೃತ್ತಾ 17 : 2 (IRVKN)
ಅವನು ಯೆಹೂದದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲೂ ಸೈನ್ಯವನ್ನಿರಿಸಿದನು. ಯೆಹೂದ ದೇಶದಲ್ಲಿಯೂ ತನ್ನ ತಂದೆಯಾದ ಆಸನು ವಶಪಡಿಸಿಕೊಂಡಿದ್ದ ಎಫ್ರಾಯೀಮ್ ರ ಪಟ್ಟಣಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿದನು.
2 ಪೂರ್ವಕಾಲವೃತ್ತಾ 17 : 3 (IRVKN)
ಇವನು ಬಾಳ್ ದೇವರುಗಳನ್ನು ಅವಲಂಬಿಸದೆ, ತನ್ನ ಪೂರ್ವಿಕನಾದ ದಾವೀದನ ಮೊದಲಿನ ನಡತೆಯ ಪ್ರಕಾರ ನಡೆಯುತ್ತಿದ್ದದರಿಂದ ಯೆಹೋವನು ಯೆಹೋಷಾಫಾಟನ ಸಂಗಡ ಇದ್ದನು.
2 ಪೂರ್ವಕಾಲವೃತ್ತಾ 17 : 4 (IRVKN)
ಇವನು ಇಸ್ರಾಯೇಲರಂತೆ ನಡೆಯದೆ, ತನ್ನ ತಂದೆಯ ದೇವರ ಭಕ್ತನಾಗಿ ಆತನ ಆಜ್ಞೆಗಳನ್ನು ಅನುಸರಿಸಿದನು.
2 ಪೂರ್ವಕಾಲವೃತ್ತಾ 17 : 5 (IRVKN)
ಆದುದರಿಂದ ಯೆಹೋವನು ಇವನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿದನು; ಯೆಹೂದ್ಯರೆಲ್ಲರೂ ಯೆಹೋಷಾಫಾಟನಿಗೆ ಕಾಣಿಕೆ ಕೊಡುತ್ತಿದ್ದುದರಿಂದ ಇವನ ಧನ ಘನತೆಗಳು ಹೆಚ್ಚಾದವು.
2 ಪೂರ್ವಕಾಲವೃತ್ತಾ 17 : 6 (IRVKN)
ಇವನು ಯೆಹೋವನ ಮಾರ್ಗದಲ್ಲಿ ನಡೆದು ಧೈರ್ಯಗೊಂಡನು; ಇದಲ್ಲದೆ ಯೆಹೂದ ದೇಶದಲ್ಲಿದ್ದ ಪೂಜಾಸ್ಥಳಗಳನ್ನೂ, ಅಶೇರ ವಿಗ್ರಹ ಸ್ತಂಭಗಳನ್ನೂ ತೆಗೆದು ಹಾಕಿಸಿದನು.
2 ಪೂರ್ವಕಾಲವೃತ್ತಾ 17 : 7 (IRVKN)
ಇವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಅಧಿಕಾರಿಗಳಾದ ಬೆನ್ಹೈಲ್, ಓಬದ್ಯ, ಜೆಕರ್ಯ ನೆತನೇಲ್, ಮಿಕಾಯ ಎಂಬ ಯಾಜಕರನ್ನೂ ಧರ್ಮೋಪದೇಶ ಮಾಡುವುದಕ್ಕೋಸ್ಕರ ಯೆಹೂದ ದೇಶದ ಪಟ್ಟಣಗಳಿಗೆ ಕಳುಹಿಸಿದನು.
2 ಪೂರ್ವಕಾಲವೃತ್ತಾ 17 : 8 (IRVKN)
ಇವರ ಜೊತೆಯಲ್ಲಿ ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ, ಟೋಬೀಯ, ಟೋಬದೋನೀಯ ಎಂಬ ಲೇವಿಯರು ಇದ್ದರು. ಎಲೀಷಾಮಾ, ಯೆಹೋರಾಮ್,
2 ಪೂರ್ವಕಾಲವೃತ್ತಾ 17 : 9 (IRVKN)
ಇವರು ಯೆಹೋವನ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಯೆಹೂದ ದೇಶದ ಪಟ್ಟಣದಲ್ಲೆಲ್ಲಾ ಸಂಚಾರ ಮಾಡಿ ಜನರಿಗೆ ಬೋಧಿಸಿದರು.
2 ಪೂರ್ವಕಾಲವೃತ್ತಾ 17 : 10 (IRVKN)
ಯೆಹೋಷಾಫಾಟನ ವೈಭವ ಯೆಹೂದದ ಸುತ್ತಣ ದೇಶಗಳ ರಾಜ್ಯಗಳವರೆಗೆ ಯೆಹೋವನ ಭಯವಿದ್ದುದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ.
2 ಪೂರ್ವಕಾಲವೃತ್ತಾ 17 : 11 (IRVKN)
ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ, ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರಬಿಯರು ತಮ್ಮ ಪಶುಪ್ರಾಣಿಗಳ ಹಿಂಡುಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ, ಏಳು ಸಾವಿರದ ಏಳು ನೂರು ಆಡುಗಳನ್ನೂ ಕೊಡುತ್ತಿದ್ದರು.
2 ಪೂರ್ವಕಾಲವೃತ್ತಾ 17 : 12 (IRVKN)
ಹೀಗೆ ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ಯೆಹೂದ ದೇಶದಲ್ಲಿ ಕೋಟೆಗಳನ್ನೂ ಮತ್ತು ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.
2 ಪೂರ್ವಕಾಲವೃತ್ತಾ 17 : 13 (IRVKN)
ಯೆಹೂದದ ಪಟ್ಟಣಗಳಲ್ಲಿ ದವಸಧಾನ್ಯಗಳ ದೊಡ್ಡ ಮಳಿಗೆಗಳಿದ್ದವು. ಯೆರೂಸಲೇಮಿನಲ್ಲಿ ಯುದ್ಧವೀರರಾದ ಭಟರೂ ಇದ್ದರು.
2 ಪೂರ್ವಕಾಲವೃತ್ತಾ 17 : 14 (IRVKN)
ಪೂರ್ವಿಕರ ಗೋತ್ರಗಳ ಪ್ರಕಾರ ಲೆಕ್ಕಿಸಲ್ಪಟ್ಟ ಗೋತ್ರ ಪ್ರಧಾನರು ಯಾರೆಂದರೆ: ಯೆಹೂದ್ಯರಲ್ಲಿ ಮೂರು ಲಕ್ಷ ಮಂದಿ ಯುದ್ಧವೀರರ ಅಧಿಪತಿಯಾದ ಅದ್ನ;
2 ಪೂರ್ವಕಾಲವೃತ್ತಾ 17 : 15 (IRVKN)
ಇವನ ತರುವಾಯ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಯುದ್ಧವೀರರ ಅಧಿಪತಿಯಾದ ಯೆಹೋಹಾನಾನ್;
2 ಪೂರ್ವಕಾಲವೃತ್ತಾ 17 : 16 (IRVKN)
ತರುವಾಯ ಎರಡು ಲಕ್ಷ ಮಂದಿ ಯುದ್ಧವೀರರೊಡನೆ ಸ್ವಇಚ್ಛೆಯಿಂದ ತನ್ನನ್ನೇ ಯೆಹೋವನಿಗೆ ಪ್ರತಿಷ್ಠಿಸಿಕೊಂಡ ಜಿಕ್ರಿಯನ ಮಗನಾದ ಅಮಸ್ಯ;
2 ಪೂರ್ವಕಾಲವೃತ್ತಾ 17 : 17 (IRVKN)
ಬೆನ್ಯಾಮೀನ್ಯರಲ್ಲಿ ಬಿಲ್ಲುಗುರಾಣಿಗಳನ್ನು ಹಿಡಿದುಕೊಂಡ ಎರಡು ಲಕ್ಷ ಯುದ್ಧವೀರರ ಅಧಿಪತಿಯಾದ ಎಲ್ಯಾದ;
2 ಪೂರ್ವಕಾಲವೃತ್ತಾ 17 : 18 (IRVKN)
ಒಂದು ಲಕ್ಷದ ಎಂಭತ್ತುಸಾವಿರ ಮಂದಿ ಯುದ್ಧಸನ್ನದ್ಧ ಸೈನಿಕರ ನಾಯಕನಾದ ಯೆಹೋಜಾಬಾದ್ ಎಂಬುವವರು.
2 ಪೂರ್ವಕಾಲವೃತ್ತಾ 17 : 19 (IRVKN)
ಅರಸನಿಗೆ ತನ್ನ ಸನ್ನಿಧಿಯಲ್ಲಿ ಸೇವೆ ಮಾಡುತ್ತಿದ್ದ ಈ ಯೋಧರಲ್ಲದೆ, ಕೋಟೆ ಕೊತ್ತಲಗಳುಳ್ಳ ಯೆಹೂದ ಪಟ್ಟಣಗಳಲ್ಲಿಯೂ ಸೈನಿಕರಿದ್ದರು.
❮
❯
1
2
3
4
5
6
7
8
9
10
11
12
13
14
15
16
17
18
19