2 ಪೂರ್ವಕಾಲವೃತ್ತಾ 18 : 1 (IRVKN)
ಮೀಕನಿಗೆ ಯೆಹೋವನ ಪ್ರವಾದನೆ ಯೆಹೋಷಾಫಾಟನಿಗೆ ಧನಘನತೆಗಳು ಬಹಳವಾಗಿದ್ದವು. ಅವನು ಅಹಾಬನೊಡನೆ ನೆಂಟಸ್ಥಿಕೆಯನ್ನು ಮಾಡಿಕೊಂಡನು.
2 ಪೂರ್ವಕಾಲವೃತ್ತಾ 18 : 2 (IRVKN)
ಕೆಲವು ವರ್ಷಗಳಾದ ನಂತರ ಅವನ ಬಳಿಗೆ ಸಮಾರ್ಯಕ್ಕೆ ಹೋದನು. ಅಹಾಬನು ಅವನಿಗೂ ಅವನೊಡನೆ ಬಂದ ಜನರಿಗಾಗಿಯೂ ಹಿಂಡುಗಳಿಂದ ಅನೇಕ ದನಕುರಿಗಳನ್ನು ಕೊಯ್ದು ಔತಣವನ್ನು ಏರ್ಪಡಿಸಿದನು. ತನ್ನ ಸಂಗಡ ಯುದ್ಧಕ್ಕಾಗಿ ರಾಮೋತ್ ಗಿಲ್ಯಾದಿಗೆ ಬರಬೇಕೆಂದು ಅವನನ್ನು ಪ್ರೇರೇಪಿಸಿದನು.
2 ಪೂರ್ವಕಾಲವೃತ್ತಾ 18 : 3 (IRVKN)
ಇಸ್ರಾಯೇಲರ ಅರಸನಾದ ಅಹಾಬನು ಯೆಹೂದ್ಯರ ಅರಸನಾದ ಯೆಹೋಷಾಫಾಟನನ್ನು, “ನನ್ನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಿದನು. ಅದಕ್ಕೆ ಅವನು, “ನಾನೂ, ನೀನೂ ನನ್ನ ಜನರೂ ನಿನ್ನ ಜನರೂ ಒಂದೇ ಅಲ್ಲವೇ? ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಬರುವೆನು” ಎಂದು ಉತ್ತರ ಕೊಟ್ಟನು.
2 ಪೂರ್ವಕಾಲವೃತ್ತಾ 18 : 4 (IRVKN)
ಯೆಹೋಷಾಫಾಟನು ಇಸ್ರಾಯೇಲರ ಅರಸನಿಗೆ, “ಇಂದು ಯೆಹೋವನ ಆಲೋಚನೆಯನ್ನು ಕೇಳು” ಎಂದು ಕೇಳಿಕೊಂಡನು.
2 ಪೂರ್ವಕಾಲವೃತ್ತಾ 18 : 5 (IRVKN)
ಅನಂತರ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಸೇರಿಸಿ, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಹೋಗಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವನು” ಎಂದರು.
2 ಪೂರ್ವಕಾಲವೃತ್ತಾ 18 : 6 (IRVKN)
ಆದರೆ ಯೆಹೋಷಾಫಾಟನು ಇಸ್ರಾಯೇಲರ ಅರಸನಿಗೆ, “ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೊಬ್ಬ ಪ್ರವಾದಿ ಇಲ್ಲವೇ?” ಎಂದು ಕೇಳಿದನು.
2 ಪೂರ್ವಕಾಲವೃತ್ತಾ 18 : 7 (IRVKN)
ಅವನು, “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸ ಬಲ್ಲವನಾದ ಒಬ್ಬ ಪ್ರವಾದಿ ಇದ್ದಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನು ನುಡಿಯದೆ, ಅಶುಭವನ್ನೇ ನುಡಿಯುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗನ್ನಬಾರದು” ಎಂದನು.
2 ಪೂರ್ವಕಾಲವೃತ್ತಾ 18 : 8 (IRVKN)
ಆಗ ಇಸ್ರಾಯೇಲರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, “ಬೇಗ ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಕರೆದುಕೊಂಡು ಬಾ” ಎಂದು ಆಜ್ಞಾಪಿಸಿದನು.
2 ಪೂರ್ವಕಾಲವೃತ್ತಾ 18 : 9 (IRVKN)
ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು. ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಪ್ರವಾದಿಸತೊಡಗಿದರು.
2 ಪೂರ್ವಕಾಲವೃತ್ತಾ 18 : 10 (IRVKN)
ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದನು.
2 ಪೂರ್ವಕಾಲವೃತ್ತಾ 18 : 11 (IRVKN)
ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, “ರಾಮೋತ್ ಗಿಲ್ಯಾದಿಗೆ ಹೋಗು; ನೀನು ಜಯಶಾಲಿಯಾಗಿ ಬರುವಿ; ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು” ಎಂದರು.
2 ಪೂರ್ವಕಾಲವೃತ್ತಾ 18 : 12 (IRVKN)
ಇತ್ತ ಮೀಕಾಯೆಹುವನ್ನು ಕರೆಯುವುದಕ್ಕೆ ಬಂದಿದ್ದ ದೂತನು ಅವನಿಗೆ, “ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ತಿಳಿಸುತ್ತಿದ್ದಾರೆ; ದಯವಿಟ್ಟು ನೀನೂ ಅವರಂತೆ ಶುಭವನ್ನೇ ತಿಳಿಸು” ಎಂದು ಹೇಳಿದನು.
2 ಪೂರ್ವಕಾಲವೃತ್ತಾ 18 : 13 (IRVKN)
ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ನನ್ನ ದೇವರು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.
2 ಪೂರ್ವಕಾಲವೃತ್ತಾ 18 : 14 (IRVKN)
ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ? ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ? ಹೋಗಬಾರದೋ? ಎಂದು ಕೇಳಿದನು. ಅವನು, ಹೋಗಬಹುದು, ಕೃತಾರ್ಥನಾಗಿ ಬರುವಿರಿ, ವೈರಿಗಳು ನಿನ್ನ ಕೈವಶವಾಗುವರು” ಎಂದು ಹೇಳಿದನು.
2 ಪೂರ್ವಕಾಲವೃತ್ತಾ 18 : 15 (IRVKN)
ಆಗ ಅರಸನು ಅವನಿಗೆ, “ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಾನು ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು
2 ಪೂರ್ವಕಾಲವೃತ್ತಾ 18 : 16 (IRVKN)
ಆಗ ಅವನು, “ಇಸ್ರಾಯೇಲರೆಲ್ಲರೂ ಕುರುಬನಿಲ್ಲದ ಕುರಿ ಹಿಂಡುಗಳಂತೆ ಬೆಟ್ಟಗಳಲ್ಲಿ ಚದರಿ ಹೋದದ್ದನ್ನು ಕಂಡೆನು; ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’ ” ಎಂಬುದಾಗಿ ಉತ್ತರಕೊಟ್ಟನು.
2 ಪೂರ್ವಕಾಲವೃತ್ತಾ 18 : 17 (IRVKN)
ಆಗ ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ಈ ಪ್ರವಾದಿಯು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ, ತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೋ?” ಎಂದನು.
2 ಪೂರ್ವಕಾಲವೃತ್ತಾ 18 : 18 (IRVKN)
ಅದಕ್ಕೆ ಮಿಕಾಯೆಹುವು, “ಅದಿರಲಿ, ಯೆಹೋವನ ವಾಕ್ಯವನ್ನು ಕೇಳಿರಿ, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತಿದ್ದನ್ನೂ ಕಂಡೆನು.
2 ಪೂರ್ವಕಾಲವೃತ್ತಾ 18 : 19 (IRVKN)
ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಇಸ್ರಾಯೇಲರ ಅರಸನಾದ ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸ ಬಲ್ಲಿರಿ?’ ಎಂದು ಕೇಳಿದಾಗ, ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು.
2 ಪೂರ್ವಕಾಲವೃತ್ತಾ 18 : 20 (IRVKN)
ಕಡೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಆತನಿಗೆ, ‘ನಾನು ಹೋಗಿ ಅವನನ್ನು ಪ್ರೇರೇಪಿಸುವೆನು’ ಎಂದಿತು. ‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು,
2 ಪೂರ್ವಕಾಲವೃತ್ತಾ 18 : 21 (IRVKN)
ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳ ಒಳಗೆ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಯೆಹೋವನು ಅದಕ್ಕೆ, ‘ಹೋಗಿ ಅದರಂತೆ ಮಾಡು; ಅವನನ್ನು ಪ್ರೇರೇಪಿಸು ನೀನು ಸಫಲನಾಗುವಿ’ ಎಂದನು.
2 ಪೂರ್ವಕಾಲವೃತ್ತಾ 18 : 22 (IRVKN)
ನೋಡು, ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು, ನಿನ್ನ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ” ಎಂದು ಹೇಳಿದನು.
2 ಪೂರ್ವಕಾಲವೃತ್ತಾ 18 : 23 (IRVKN)
ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕಾಗಿ ಯಾವ ಮಾರ್ಗವಾಗಿ ಬಂದಿತು?” ಎಂದನು.
2 ಪೂರ್ವಕಾಲವೃತ್ತಾ 18 : 24 (IRVKN)
ಅದಕ್ಕೆ ಮೀಕಾಯೆಹುವು, “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು” ಎಂದು ಉತ್ತರ ಕೊಟ್ಟನು.
2 ಪೂರ್ವಕಾಲವೃತ್ತಾ 18 : 25 (IRVKN)
ಆಗ ಇಸ್ರಾಯೇಲರ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪಟ್ಟಣದ ಅಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿರಿ.
2 ಪೂರ್ವಕಾಲವೃತ್ತಾ 18 : 26 (IRVKN)
ಅವರಿಗೆ, ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಹೇಳಿದ್ದಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.
2 ಪೂರ್ವಕಾಲವೃತ್ತಾ 18 : 27 (IRVKN)
ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತನಾಗಿ ಬರುವುದಾದರೆ, ನಾನು ನುಡಿದದ್ದು ಯೆಹೋವನ ಮಾತಲ್ಲ” ಎಂದು ಹೇಳಿ, “ಮಹಾ ಜನರೇ, ನನ್ನ ಮಾತನ್ನು ಗಮನದಲ್ಲಿಟ್ಟುಕೊಳ್ಳಿರಿ” ಎಂದು ಕೂಗಿ ಹೇಳಿದನು.
2 ಪೂರ್ವಕಾಲವೃತ್ತಾ 18 : 28 (IRVKN)
ಆಹಾಬನ ಮರಣ ಇಸ್ರಾಯೇಲರ ಅರಸನೂ ಹಾಗೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಮೋತ್ ಗಿಲ್ಯಾದಿಗೆ ಯುದ್ಧಕ್ಕೆ ಹೊರಟರು.
2 ಪೂರ್ವಕಾಲವೃತ್ತಾ 18 : 29 (IRVKN)
ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ನಾನು ವೇಷ ಹಾಕಿಕೊಂಡು ಯುದ್ಧ ಭೂಮಿಗೆ ಬರುತ್ತೇನೆ; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ” ಎಂದು ಹೇಳಿ ವೇಷ ಹಾಕಿಕೊಂಡನು; ತರುವಾಯ ಯುದ್ಧ ಭೂಮಿಗೆ ಹೋದರು.
2 ಪೂರ್ವಕಾಲವೃತ್ತಾ 18 : 30 (IRVKN)
ಅರಾಮ್ಯರ ಅರಸನು ತನ್ನ ರಥಬಲದ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ, ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ” ಎಂದು ಆಜ್ಞಾಪಿಸಿದ್ದನು.
2 ಪೂರ್ವಕಾಲವೃತ್ತಾ 18 : 31 (IRVKN)
ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ನೆನೆದು, ಅವನಿಗೆ ವಿರುದ್ಧವಾಗಿ ಯುದ್ಧ ಮಾಡುವುದಕ್ಕೆ ಸುತ್ತಿಕೊಂಡರು. ಆಗ ಯೆಹೋಷಾಫಾಟನು ಯೆಹೋವನನ್ನು ಸಹಾಯಕ್ಕಾಗಿ ಕೂಗಿದನು. ಆಗ ದೇವರಾದ ಯೆಹೋವನು ಅವನ ನೆರವಿಗೆ ಬಂದು, ಶತ್ರುಗಳನ್ನು ಅವನ ಕಡೆಯಿಂದ ಹೊರಟು ಹೋಗುವಂತೆ ಮಾಡಿದನು.
2 ಪೂರ್ವಕಾಲವೃತ್ತಾ 18 : 32 (IRVKN)
ಅವನು ಇಸ್ರಾಯೇಲರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂತಿರುಗಿದರು.
2 ಪೂರ್ವಕಾಲವೃತ್ತಾ 18 : 33 (IRVKN)
ಅರಾಮ್ಯರ ಒಬ್ಬ ಸೈನಿಕನು ಗುರಿಯಿಡದೆ ಸುಮ್ಮನೆ ಒಂದು ಬಾಣವನ್ನೆಸೆಯಲು, ಆ ಬಾಣವು ಇಸ್ರಾಯೇಲರ ಅರಸನಿಗೆ, ಅವನ ಕವಚದ ಸಂದಿನಲ್ಲಿ ತಾಕಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ” ಎಂದು ಹೇಳಿದನು.
2 ಪೂರ್ವಕಾಲವೃತ್ತಾ 18 : 34 (IRVKN)
ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಇಸ್ರಾಯೇಲರ ಅರಸನು ಸಾಯಂಕಾಲದವರೆಗೂ ಅರಾಮ್ಯರ ಎದುರಾಗಿ ತನ್ನ ರಥದಲ್ಲೇ ಆತುಕೊಂಡಿರಬೇಕಾಯಿತು. ಸೂರ್ಯಾಸ್ತಮಾನವಾದಾಗ ಅವನು ಸತ್ತನು.
❮
❯