2 ಪೂರ್ವಕಾಲವೃತ್ತಾ 22 : 1 (IRVKN)
ಅರಸನಾದ ಅಹಜ್ಯನು ಯೆರೂಸಲೇಮಿನವರು ಯೆಹೋರಾಮನ ಮರಣದ ನಂತರ, ಅವನ ಕಿರಿಯ ಮಗನಾದ ಅಹಜ್ಯನನ್ನು ಅರಸನನ್ನಾಗಿ ಮಾಡಿದರು. ಅರಬಿಯರೊಡನೆ ಯೆಹೋರಾಮನ ಪಾಳೆಯಕ್ಕೆ ಬಂದ ಕೊಳ್ಳೆಗಾರರು ಅವನ ಹಿರಿಯ ಮಕ್ಕಳನ್ನೆಲ್ಲಾ ಕೊಂದುಬಿಟ್ಟಿದ್ದರು. ಆದುದರಿಂದ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.
2 ಪೂರ್ವಕಾಲವೃತ್ತಾ 22 : 2 (IRVKN)
ಅಹಜ್ಯನು ಪಟ್ಟಕ್ಕೆ ಬಂದಾಗ ಅವನಿಗೆ ನಲ್ವತ್ತೆರಡು ವರ್ಷವಾಗಿತ್ತು. ಅವನು ಯೆರೂಸಲೇಮಿನಲ್ಲಿ ಒಂದು ವರ್ಷ ಆಡಳಿತ ನಡೆಸಿದನು. ಒಮ್ರಿಯನ ಮೊಮ್ಮಗಳಾದ ಅತಲ್ಯ ಎಂಬಾಕೆಯು ಇವನ ತಾಯಿ.
2 ಪೂರ್ವಕಾಲವೃತ್ತಾ 22 : 3 (IRVKN)
ತನ್ನ ತಾಯಿಯ ದುರ್ಬೋಧನೆಗೆ ಕಿವಿಗೊಟ್ಟು, ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಮಾರ್ಗದಲ್ಲೇ ನಡೆದನು.
2 ಪೂರ್ವಕಾಲವೃತ್ತಾ 22 : 4 (IRVKN)
ಅವನ ತಂದೆ ತೀರಿಹೋದ ಮೇಲೆ ಅಹಾಬನ ಕುಟುಂಬದವರೇ, ಅವನಿಗೆ ತಪ್ಪಾದ ಸಲಹೆ ಕೊಡುವವರಾದರು. ಆದುದರಿಂದ ಅವನು ಯೆಹೋವನಿಗೆ ವಿರುದ್ಧವಾಗಿ ದ್ರೋಹಿಯಾಗಿ ನಡೆದನು.
2 ಪೂರ್ವಕಾಲವೃತ್ತಾ 22 : 5 (IRVKN)
ಅವರ ಪ್ರೇರಣೆಯಿಂದಲೇ ಅವನು ಇಸ್ರಾಯೇಲರ ಅರಸನೂ ಅಹಾಬನ ಮಗನೂ ಆದ ಯೋರಾಮನ ಜೊತೆಯಲ್ಲಿ ಅರಾಮ್ಯರ ಅರಸನಾದ ಹಜಾಯೇಲನಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ, ರಾಮೋತ್ ಗಿಲ್ಯಾದಿಗೆ ಹೋದನು. ಅರಾಮ್ಯರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಿದರು.
2 ಪೂರ್ವಕಾಲವೃತ್ತಾ 22 : 6 (IRVKN)
ಅರಾಮ್ಯರು ಯೋರಾಮನಿಗೆ ರಾಮದಲ್ಲಿ ಮಾಡಿದ ಗಾಯಗಳಿಗೆ ಚಿಕಿತ್ಸೆ ಮಾಡಿಸಿಕೊಳ್ಳುವುದಕ್ಕಾಗಿ ಅವನು ಇಜ್ರೇಲಿಗೆ ಬಂದನು. ಯೋರಾಮನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗನಾಗಿರುವ ಅಹಜ್ಯನು ಅವನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.
2 ಪೂರ್ವಕಾಲವೃತ್ತಾ 22 : 7 (IRVKN)
ಅಹಜ್ಯನು ಯೋರಾಮನ ಬಳಿಗೆ ಹೋದದ್ದು ದೈವಸಂಕಲ್ಪದಿಂದಲೇ. ಅವನು ಅಲ್ಲಿ ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗನಾದ ಯೇಹುವನ್ನು ಎದುರುಗೊಳ್ಳುವುದಕ್ಕೆ ಹೋದನು. ಯೆಹೋವನು ಅಹಾಬನ ಮನೆಯನ್ನು ನಿರ್ನಾಮ ಮಾಡುವುದಕ್ಕಾಗಿಯೇ ಯೇಹುವಿಗೆ ಪಟ್ಟಾಭಿಷೇಕ ಮಾಡಿಸಿದ್ದನು.
2 ಪೂರ್ವಕಾಲವೃತ್ತಾ 22 : 8 (IRVKN)
ಯೇಹುವು, ಅಹಾಬನ ಮನೆಯವರ ಮೇಲೆ ಆ ನಿರ್ಣಯವನ್ನು ನೆರವೇರಿಸುತ್ತಿರುವಾಗ, ತನಗೆ ಸಿಕ್ಕಿದ ಯೆಹೂದ್ಯ ಪ್ರಧಾನರನ್ನೂ, ಅಹಜ್ಯನಿಗೆ ಸೇವೆಮಾಡುತ್ತಿದ್ದ, ಅವನ ಅಣ್ಣತಮ್ಮಂದಿರ ಮಕ್ಕಳನ್ನೂ ಕೊಲ್ಲಿಸಿದನು.
2 ಪೂರ್ವಕಾಲವೃತ್ತಾ 22 : 9 (IRVKN)
ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರ್ಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದು ತಂದು ಕೊಂದರು, “ಇವನು ಪೂರ್ಣಹೃದಯದಿಂದ ಯೆಹೋವನನ್ನು ಹುಡುಕಿದ, ಯಥಾರ್ಥಭಕ್ತನಾದ ಯೆಹೋಷಾಫಾಟನ ಮೊಮ್ಮಗನಲ್ಲವೇ” ಎಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳುವುದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.
2 ಪೂರ್ವಕಾಲವೃತ್ತಾ 22 : 10 (IRVKN)
ರಾಣಿಯಾದ ಅತಲ್ಯಳು ಅಹಜ್ಯನು ಮರಣ ಹೊಂದಿದನೆಂದು ಅವನ ತಾಯಿಯಾದ ಅತಲ್ಯಳು ಕೇಳಿದ ಕೂಡಲೆ ಯೆಹೂದ ರಾಜ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.
2 ಪೂರ್ವಕಾಲವೃತ್ತಾ 22 : 11 (IRVKN)
ಆದರೆ ರಾಜಪುತ್ರಿಯಾದ ಯೆಹೋಷಬತ್ ಎಂಬಾಕೆಯು, ಹತರಾಗುತ್ತಿದ್ದ ರಾಜಪುತ್ರರ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷನನ್ನು, ಯಾರಿಗೂ ತಿಳಿಯದಂತೆ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು. ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ಸಹೋದರಿಯೂ, ಯಾಜಕನಾದ ಯೆಹೋಯಾದನ ಹೆಂಡತಿಯೂ, ಆಗಿದ್ದ ಯೆಹೋಷಬತಳು ಹೀಗೆ ಅವನನ್ನು ಅತಲ್ಯಳಿಂದ ಹತನಾಗದಂತೆ ರಕ್ಷಿಸಿದಳು.
2 ಪೂರ್ವಕಾಲವೃತ್ತಾ 22 : 12 (IRVKN)
ಅವನು ಆರು ವರ್ಷಗಳವರೆಗೂ ಅವರೊಡನೆ ಗುಪ್ತವಾಗಿ ದೇವಾಲಯದಲ್ಲಿ ಇದ್ದನು. ಆಗ ಅತಲ್ಯಳೇ ದೇಶವನ್ನಾಳುತ್ತಿದ್ದಳು.
❮
❯
1
2
3
4
5
6
7
8
9
10
11
12