2 ಪೂರ್ವಕಾಲವೃತ್ತಾ 23 : 1 (IRVKN)
ರಾಣಿಯಾದ ಅತಲ್ಯಳ ವಿರುದ್ಧ ದಂಗೆ ಏಳನೆಯ ವರ್ಷದಲ್ಲಿ ಯೆಹೋಯಾದನು ಧೈರ್ಯತಂದುಕೊಂಡು ಯೆರೋಹಾಮನ ಮಗನಾದ ಅಜರ್ಯ, ಯೆಹೋಹಾನಾನನ ಮಗನಾದ ಇಷ್ಮಾಯೇಲ್, ಓಬೇದನ ಮಗನಾದ ಅಜರ್ಯ, ಅದಾಯನ ಮಗನಾದ ಮಾಸೇಯ, ಜಿಕ್ರಿಯ ಮಗನಾದ ಎಲೀಷಾಫಾಟ್ ಎಂಬ ಶತಾಧಿಪತಿಗಳೊಡನೆ ಒಪ್ಪಂದ ಮಾಡಿಕೊಂಡನು.
2 ಪೂರ್ವಕಾಲವೃತ್ತಾ 23 : 2 (IRVKN)
ಇವರು ಯೆಹೂದದಲ್ಲೆಲ್ಲಾ ಸಂಚರಿಸಿ ಎಲ್ಲಾ ಪಟ್ಟಣಗಳಿಂದ ಲೇವಿಯರನ್ನೂ, ಇಸ್ರಾಯೇಲರ ಗೋತ್ರ ಪ್ರಧಾನರನ್ನೂ ಒಟ್ಟುಗೂಡಿಸಲು ಅವರು ಯೆರೂಸಲೇಮಿಗೆ ಬಂದರು.
2 ಪೂರ್ವಕಾಲವೃತ್ತಾ 23 : 3 (IRVKN)
ಹೀಗೆ ಕೂಡಿ ಬಂದವರೆಲ್ಲರೂ ದೇವಾಲಯದಲ್ಲಿ ಅರಸನೊಂದಿಗೆ ಒಪ್ಪಂದ ಮಾಡಿಕೊಂಡರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು, ಯೆಹೋವನು ದಾವೀದನ ಸಂತಾನದವರಿಗೆ ಮಾಡಿದ ವಾಗ್ದಾನಕ್ಕೆ ಅನುಸಾರವಾಗಿ ಅರಸನಾಗತಕ್ಕವನು ಇವನೇ.
2 ಪೂರ್ವಕಾಲವೃತ್ತಾ 23 : 4 (IRVKN)
ಈಗ ನೀವು ಮಾಡತಕ್ಕದ್ದು ಏನೆಂದರೆ: ಸಬ್ಬತ್ ದಿನದಂದು ದೇವಾಲಯದ ಸೇವೆಗೆ ಬರಬೇಕಾದ ಲೇವಿಯರಲ್ಲೂ, ಯಾಜಕರಲ್ಲೂ ಮೂರರಲ್ಲೊಂದು ಭಾಗದವರು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು.
2 ಪೂರ್ವಕಾಲವೃತ್ತಾ 23 : 5 (IRVKN)
ಇನ್ನೊಂದು ಭಾಗದವರು ಅರಸನ ಅರಮನೆಯನ್ನೂ, ಮತ್ತೊಂದು ಭಾಗದವರು ಯೆಸೋದ್ ಬಾಗಿಲನ್ನೂ ಕಾಯಬೇಕು. ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರದಲ್ಲೇ ಇರಬೇಕು.
2 ಪೂರ್ವಕಾಲವೃತ್ತಾ 23 : 6 (IRVKN)
ಯಾಜಕರೂ ಹಾಗು ಸೇವೆಯಲ್ಲಿರುವ ಲೇವಿಯರು ಹೊರತಾಗಿ ಯಾರೂ ಆಲಯದೊಳಗೆ ಬರಬಾರದು. ಏಕೆಂದರೆ ಅವರು ಪರಿಶುದ್ಧರಾಗಿರುವುದರಿಂದ ಬರಬಹುದು. ಉಳಿದ ಜನರೆಲ್ಲರೂ ಯೆಹೋವನ ಅಜ್ಞಾನುಸಾರವಾಗಿ ಹೊರಗಿರಬೇಕು.
2 ಪೂರ್ವಕಾಲವೃತ್ತಾ 23 : 7 (IRVKN)
ಲೇವಿಯರು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ನಿಂತು ಆಲಯದೊಳಕ್ಕೆ ನುಗ್ಗುವವರನ್ನು ಸಂಹರಿಸಬೇಕು. ಅರಸನು ಹೋಗಿ ಬರುವಾಗಲೆಲ್ಲಾ ಅವರು ಅವನ ಜೊತೆಯಲ್ಲೇ ಇರಬೇಕು” ಎಂದು ಹೇಳಿದನು.
2 ಪೂರ್ವಕಾಲವೃತ್ತಾ 23 : 8 (IRVKN)
ಲೇವಿಯ ಎಲ್ಲಾ ಯೆಹೂದ್ಯರೂ ಯಾಜಕನಾದ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು ಸಬ್ಬತ್ ದಿನದಲ್ಲಿ ಸೇವಾ ವಿಮುಕ್ತರಾದ ವರ್ಗಗಳವರನ್ನು ಕಳುಹಿಸಿಬಿಡಲಿಲ್ಲ; ಆದುದರಿಂದ ಪ್ರತಿಯೊಬ್ಬನು ಸಬ್ಬತ್ ದಿನ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈಕೆಳಗಿನವರನ್ನು ಸೇರಿಸಿಕೊಂಡನು.
2 ಪೂರ್ವಕಾಲವೃತ್ತಾ 23 : 9 (IRVKN)
ದೇವಾಲಯದಲ್ಲಿಟ್ಟಿದ್ದ ಅರಸನಾದ ದಾವೀದನ ಬರ್ಜಿ, ಗುರಾಣಿ, ಖೇಡ್ಯಗಳೇ ಮುಂತಾದ ಆಯುಧಗಳನ್ನು ಯಾಜಕನಾದ ಯೆಹೋಯಾದನು ಶತಾಧಿಪತಿಗಳಿಗೆ ಕೊಟ್ಟನು.
2 ಪೂರ್ವಕಾಲವೃತ್ತಾ 23 : 10 (IRVKN)
ಆಯುಧಪಾಣಿಗಳಾದ ಎಲ್ಲಾ ಜನರನ್ನು ಅರಸನ ಸುತ್ತಲೂ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಯಜ್ಞವೇದಿಯ ವರೆಗೂ ಸಾಲಾಗಿ ನಿಲ್ಲಿಸಿದನು.
2 ಪೂರ್ವಕಾಲವೃತ್ತಾ 23 : 11 (IRVKN)
ಆಮೇಲೆ ಯೆಹೋಯಾದನ ಮಕ್ಕಳು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ಅಭಿಷೇಕ ಮಾಡಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ” ಎಂದು ಹರಸಿದರು.
2 ಪೂರ್ವಕಾಲವೃತ್ತಾ 23 : 12 (IRVKN)
ಜನರು ಅತ್ತಿತ್ತ ಓಡಾಡುತ್ತಾ ಅರಸನನ್ನು ಹರಸುವ ಗದ್ದಲವನ್ನು ಅತಲ್ಯಳು ಕೇಳಿ ಅವರು ಇದ್ದ ಯೆಹೋವನ ಆಲಯಕ್ಕೆ ಬಂದಳು.
2 ಪೂರ್ವಕಾಲವೃತ್ತಾ 23 : 13 (IRVKN)
ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತ್ತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ನುಡಿಸುತ್ತಾ ಕೀರ್ತನೆಗಳನ್ನು ಹಾಡುತ್ತಿದ್ದರು. ಇದನ್ನು ಕಂಡಕೂಡಲೆ ಅತಲ್ಯಳು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ” ಎಂದು ಕೂಗಿದಳು.
2 ಪೂರ್ವಕಾಲವೃತ್ತಾ 23 : 14 (IRVKN)
ಆಗ ಯಾಜಕನಾದ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರೆದುಕೊಂಡು ಹೋಗಿ ಅವರಿಗೆ, “ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ” ಎಂದು ಆಜ್ಞಾಪಿಸಿದನು.
2 ಪೂರ್ವಕಾಲವೃತ್ತಾ 23 : 15 (IRVKN)
ಅವರು ಆಕೆಯನ್ನು ಹಿಡಿದು ಅರಸನ ಅರಮನೆಗೆ ಹೋಗುವ ಕುದುರೆ ಬಾಗಿಲಿನ ತನಕ ಒಯ್ದು, ಅವಳನ್ನು ಕೊಂದು ಹಾಕಿದರು.
2 ಪೂರ್ವಕಾಲವೃತ್ತಾ 23 : 16 (IRVKN)
ಯೆಹೋಯಾದನಿಂದ ಧಾರ್ಮಿಕ ಸುಧಾರಣೆ ಆ ನಂತರ ಯೆಹೋಯಾದನು ಎಲ್ಲಾ ಜನರನ್ನೂ, ಅರಸನನ್ನೂ ಪ್ರೇರೇಪಿಸಿ ತಾವೆಲ್ಲರೂ ಯೆಹೋವನ ಪ್ರಜೆಗಳಾಗಿರುವೆವೆಂದು ಅವರೊಡನೆ ಪ್ರಮಾಣ ಮಾಡಿದನು.
2 ಪೂರ್ವಕಾಲವೃತ್ತಾ 23 : 17 (IRVKN)
ತರುವಾಯ ಜನರೆಲ್ಲರೂ ಬಾಳನ ಕ್ಷೇತ್ರಕ್ಕೆ ಹೋಗಿ ಪೂಜಾರಿಯಾದ ಮತ್ತಾನನನ್ನು ಯಜ್ಞವೇದಿಗಳ ಎದುರಿನಲ್ಲಿಯೇ ಕೊಂದುಹಾಕಿದನು; ಆ ಕ್ಷೇತ್ರವನ್ನೂ ಅದರಲ್ಲಿದ್ದ ಯಜ್ಞವೇದಿ ಹಾಗೂ ವಿಗ್ರಹಗಳನ್ನೂ ಒಡೆದುಹಾಕಿ ಹಾಳುಮಾಡಿ ಬಿಟ್ಟರು.
2 ಪೂರ್ವಕಾಲವೃತ್ತಾ 23 : 18 (IRVKN)
ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ ಮೋಶೆಯ ಧರ್ಮಶಾಸ್ತ್ರಾನುಸಾರ ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆ ಮಾಡುವುದೇ ಅವರ ಕರ್ತವ್ಯವಾಗಿತ್ತು.
2 ಪೂರ್ವಕಾಲವೃತ್ತಾ 23 : 19 (IRVKN)
ಯಾವ ವಿಷಯದಲ್ಲಾದರೂ ಅಶುದ್ಧನಾದವನು ಯೆಹೋವನ ಆಲಯವನ್ನು ಪ್ರವೇಶಿಸದಂತೆ ಯೆಹೋಯಾದನು ಆಯಾ ಬಾಗಿಲುಗಳಲ್ಲಿ ದ್ವಾರಪಾಲಕರನ್ನಿರಿಸಿದನು.
2 ಪೂರ್ವಕಾಲವೃತ್ತಾ 23 : 20 (IRVKN)
ಆಮೇಲೆ ಅವನು ಶತಾಧಿಪತಿಗಳು, ಶ್ರೀಮಂತರು, ಜನನಾಯಕರು ಹಾಗೂ ಸಾಧಾರಣ ಜನರು ಇವರೊಡನೆ ಅರಸನನ್ನು ಯೆಹೋವನ ಆಲಯದಿಂದ ಮೇಲಣ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.
2 ಪೂರ್ವಕಾಲವೃತ್ತಾ 23 : 21 (IRVKN)
ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು; ಪಟ್ಟಣವು ಶಾಂತವಾಯಿತು; ಅತಲ್ಯಳನ್ನು ಕತ್ತಿಯಿಂದ ಸಂಹರಿಸಿದರು.
❮
❯
1
2
3
4
5
6
7
8
9
10
11
12
13
14
15
16
17
18
19
20
21