2 ಪೂರ್ವಕಾಲವೃತ್ತಾ 26 : 1 (IRVKN)
ಯೆಹೂದದ ಅರಸನಾದ ಉಜ್ಜೀಯನು ಆನಂತರ ಎಲ್ಲಾ ಯೆಹೂದ್ಯರು ಅಮಚ್ಯನ ಮಗನಾದ ಉಜ್ಜೀಯನನ್ನು ಅರಸನ್ನನ್ನಾಗಿ ಮಾಡಿದರು. ಉಜ್ಜೀಯನು ಅರಸನಾದಾಗ ಹದಿನಾರು ವರ್ಷದವನಾಗಿದ್ದ.
2 ಪೂರ್ವಕಾಲವೃತ್ತಾ 26 : 2 (IRVKN)
ಇವನು ಏಲೋತ್ ಪಟ್ಟಣವನ್ನು ಪುನಃ ಯೆಹೂದ ರಾಜ್ಯಕ್ಕೆ ಸೇರಿಸಿಕೊಂಡು ಭದ್ರಪಡಿಸಿದನು.
2 ಪೂರ್ವಕಾಲವೃತ್ತಾ 26 : 3 (IRVKN)
ಅವನು ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷಗಳ ಕಾಲ ಆಳಿದನು. ಯೆರೂಸಲೇಮಿನವಳಾದ ಯೆಕೊಲ್ಯ ಎಂಬಾಕೆಯು ಅವನ ತಾಯಿ.
2 ಪೂರ್ವಕಾಲವೃತ್ತಾ 26 : 4 (IRVKN)
ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.
2 ಪೂರ್ವಕಾಲವೃತ್ತಾ 26 : 5 (IRVKN)
ದೈವಭಕ್ತಿಯನ್ನು * ಅಥವಾ ಜೆಕರ್ಯನು ದೈವೋಕ್ತಿಗಳಲ್ಲಿ ಪರಿಣಿತನಾಗಿದ್ದನು. ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.
2 ಪೂರ್ವಕಾಲವೃತ್ತಾ 26 : 6 (IRVKN)
ಅವನು ಫಿಲಿಷ್ಟಿಯರ ಮೇಲೆ ಯುದ್ಧಕ್ಕಾಗಿ ಹೊರಟು ಗತ್ ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
2 ಪೂರ್ವಕಾಲವೃತ್ತಾ 26 : 7 (IRVKN)
ಫಿಲಿಷ್ಟಿಯರೊಡನೆ ಗೂರ್ ಬಾಳಿನಲ್ಲಿರುವ ಅರಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧ ಮಾಡಿದಾಗ ಯೆಹೋವನು ಅವನಿಗೆ ಸಹಾಯ ಮಾಡಿದನು.
2 ಪೂರ್ವಕಾಲವೃತ್ತಾ 26 : 8 (IRVKN)
ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುತ್ತಿದ್ದರು. ಅವನು ಅಧಿಕಬಲವುಳ್ಳವನ್ನಾದುದರಿಂದ ಅವನ ಹೆಸರು ಐಗುಪ್ತದ ಮೇರೆಯವರೆಗೂ ಹಬ್ಬಿತು.
2 ಪೂರ್ವಕಾಲವೃತ್ತಾ 26 : 9 (IRVKN)
ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆಬಾಗಿಲು, ತಗ್ಗಿನ ಬಾಗಿಲು, ಗೋಡೆ ತಿರುಗುವ ಭಾಗಗಳ ಮೇಲೆ ಗೋಪುರಗಳನ್ನು ಕಟ್ಟಿಸಿ ಭದ್ರಗೊಳಿಸಿದನು.
2 ಪೂರ್ವಕಾಲವೃತ್ತಾ 26 : 10 (IRVKN)
ಅವನಿಗೆ ಇಳಿಜಾರಿನ ಪ್ರದೇಶದಲ್ಲಿಯೂ, ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಗೋಪುರಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ವ್ಯವಸಾಯದಲ್ಲಿ ಬಹಳ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿ ತೋಟಗಳಲ್ಲಿ ಕೆಲಸಗಾರರನ್ನು ನೇಮಿಸಿದನು.
2 ಪೂರ್ವಕಾಲವೃತ್ತಾ 26 : 11 (IRVKN)
ಇದಲ್ಲದೆ, ಉಜ್ಜೀಯನಿಗೆ ಯುದ್ಧಕ್ಕೋಸ್ಕರ ಸೈನ್ಯವೂ ಇತ್ತು. ಲೇಖಕನಾದ ಯೆಗೀಯೇಲ್, ಅಧಿಕಾರಿಯಾದ ಮಾಸೇಯ ಇವರು ಹಾಕಿಕೊಟ್ಟ ಪಟ್ಟಿಯಕ್ರಮ ಪ್ರಕಾರ ಅರಸನ ಸರದಾರರಲ್ಲಿ ಒಬ್ಬನಾದ ಹನನ್ಯನ ಆಜ್ಞಾನುಸಾರವಾಗಿ. ಆಯಾ ಗುಂಪುಗಳು ಯುದ್ಧಕ್ಕೆ ಹೊರಡುತ್ತಿದ್ದವು.
2 ಪೂರ್ವಕಾಲವೃತ್ತಾ 26 : 12 (IRVKN)
ಯುದ್ಧವೀರರೂ ಎಲ್ಲಾ ಗೋತ್ರಪ್ರಧಾನರ ಸಂಖ್ಯೆಯು ಎರಡು ಸಾವಿರದ ಆರು ನೂರು.
2 ಪೂರ್ವಕಾಲವೃತ್ತಾ 26 : 13 (IRVKN)
ಇವರ ಕೈಕೆಳಗಿದ್ದ ಭಟರ ಸಂಖ್ಯೆಯು ಮೂರು ಲಕ್ಷದ ಏಳು ಸಾವಿರದ ಐನೂರು; ಇವರು ಅರಸನ ಸೇವೆಯಲ್ಲಿದ್ದು ಅವನ ವೈರಿಗಳಿಗೆ ವಿರುದ್ಧವಾಗಿ ಪರಾಕ್ರಮದಿಂದ ಯುದ್ಧಮಾಡುತ್ತಿದ್ದರು.
2 ಪೂರ್ವಕಾಲವೃತ್ತಾ 26 : 14 (IRVKN)
ಉಜ್ಜೀಯನು ಈ ಎಲ್ಲಾ ಸೈನ್ಯದವರಿಗೆ ಬೇಕಾದ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು, ಕವಣೆಯಕಲ್ಲು ಇವುಗಳನ್ನು ಒದಗಿಸಿ ಕೊಟ್ಟನು.
2 ಪೂರ್ವಕಾಲವೃತ್ತಾ 26 : 15 (IRVKN)
ಇದಲ್ಲದೆ, ಅವನು ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನು ಬಳಸುವುದಕ್ಕಾಗಿ, ತಜ್ಞರ ಆಜ್ಞೆಯ ಮೇರೆಗೆ ಯಂತ್ರಗಳನ್ನೂ ಮಾಡಿಸಿ, ಅವುಗಳನ್ನು ಯೆರೂಸಲೇಮಿನ ಗೋಪುರಗಳ ಮೇಲೆಯೂ, ಕೋಟೆಕೊತ್ತಲಗಳನ್ನು ಮೇಲೆಯೂ ಇಡಿಸಿದ್ದನು. ಅವನು ಬಲಿಷ್ಠನಾಗುವ ಹಾಗೆ ದೇವರ ಅತಿಶಯವಾದ ಸಹಾಯವು ಆಶ್ಚರ್ಯವಾದ ರೀತಿಯಲ್ಲಿ ಅವನಿಗೆ ದೊರೆಯುತ್ತಿದ್ದುದರಿಂದ; ಅವನ ಕೀರ್ತಿಯೂ ಬಹು ದೂರದ ಮೇರೆಯವರೆಗೂ ಹಬ್ಬಿತು.
2 ಪೂರ್ವಕಾಲವೃತ್ತಾ 26 : 16 (IRVKN)
ಉಜ್ಜೀಯನ ಪಾಪವೂ ಶಿಕ್ಷೆಯೂ ಆದರೆ ಅವನು ಬಲಿಷ್ಠನಾದ ಮೇಲೆ ಅವನ ಅವನತಿಗಾಗಿ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಗೆ ಪ್ರವೇಶಿಸಿದನು.
2 ಪೂರ್ವಕಾಲವೃತ್ತಾ 26 : 17 (IRVKN)
ಆಗ ಮಹಾಯಾಜಕನಾದ ಅಜರ್ಯನೂ ಹಾಗು ಧೈರ್ಯಶಾಲಿಗಳಾದ ಯೆಹೋವನ ಎಂಭತ್ತು ಮಂದಿ ಇತರ ಯಾಜಕರೂ ಅರಸನಾದ ಉಜ್ಜೀಯನ ಹಿಂದೆಯೇ ಹೋಗಿ
2 ಪೂರ್ವಕಾಲವೃತ್ತಾ 26 : 18 (IRVKN)
ಅರಸನ ಎದುರಿಗೆ ನಿಂತು ಅವನಿಗೆ, “ಉಜ್ಜೀಯನೇ, ಯೆಹೋವನಿಗೋಸ್ಕರ ಧೂಪ ಹಾಕುವುದು ನಿನ್ನ ಕೆಲಸವಲ್ಲ; ಅದಕ್ಕೋಸ್ಕರ ಆರೋನನ ಸಂತಾನದವರಾದ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟುಹೋಗು; ನೀನು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಯೆಹೋವನಿಂದ ನಿನಗೆ ಗೌರವ ದೊರಕಲಾರದು” ಎಂದರು.
2 ಪೂರ್ವಕಾಲವೃತ್ತಾ 26 : 19 (IRVKN)
ಆಗ ಧೂಪ ಹಾಕಬೇಕೆಂದು ಕೈಯಲ್ಲಿ ಧೂಪಾರತಿಯನ್ನು ಹಿಡಿದುಕೊಂಡಿದ್ದ ಉಜ್ಜೀಯನು ಕೋಪಗೊಂಡನು. ಅವನು ಯೆಹೋವನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು, ಯಾಜಕರೊಡನೆ ಸಿಟ್ಟಿನಿಂದ ಮಾತನಾಡುತ್ತಿರುವಾಗಲೆ ಯಾಜಕರ ಸಮಕ್ಷಮದಲ್ಲೇ, ಅವನ ಹಣೆಯ ಮೇಲೆ ಕುಷ್ಠವು ಕಾಣಿಸಿಕೊಂಡಿತು.
2 ಪೂರ್ವಕಾಲವೃತ್ತಾ 26 : 20 (IRVKN)
ಮಹಾಯಾಜಕನಾದ ಅಜರ್ಯನೂ ಎಲ್ಲಾ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ, ಅವನ ಹಣೆಯಲ್ಲಿ ಕುಷ್ಠವು ಕಂಡುಬಂದ ಕಾರಣ, ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಡಿಸಿದರು. ಯೆಹೋವನು ತನ್ನನ್ನು ಬಾಧಿಸಿದ್ದಾನೆಂದು ಅವನಿಗೆ ತಿಳಿಯಿತು. ಅವನೂ ಶೀಘ್ರವಾಗಿ ಹೊರಗೆ ಹೋಗಲು ಆತುರಪಟ್ಟನು.
2 ಪೂರ್ವಕಾಲವೃತ್ತಾ 26 : 21 (IRVKN)
ಉಜ್ಜೀಯನು ಜೀವದಿಂದಿರುವ ವರೆಗೂ ಕುಷ್ಠರೋಗಿಯಾಗಿದ್ದು, ಯೆಹೋವನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಅವನು ಕುಷ್ಠದ ದೆಸೆಯಿಂದ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾದಿಪತ್ಯವನ್ನೂ ಮತ್ತು ಪ್ರಜಾಪಾಲನೆಯನ್ನೂ ಅವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.
2 ಪೂರ್ವಕಾಲವೃತ್ತಾ 26 : 22 (IRVKN)
ಉಜ್ಜೀಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದಿದ್ದಾನೆ.
2 ಪೂರ್ವಕಾಲವೃತ್ತಾ 26 : 23 (IRVKN)
ಉಜ್ಜೀಯನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಕುಷ್ಠ ರೋಗಿಯದೆಂದು ಬಗೆದು, ರಾಜ ಕುಟುಂಬದ ಸ್ಮಶಾನವಿದ್ದ ಹೊಲದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23