2 ಪೂರ್ವಕಾಲವೃತ್ತಾ 30 : 1 (IRVKN)
{ಪಸ್ಕಾಚರಣೆಗೆ ಸಿದ್ಧತೆ} [PS] ತರುವಾಯ ಹಿಜ್ಕೀಯನು, ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು, ಎಲ್ಲಾ ಇಸ್ರಾಯೇಲರಿಗೂ, ಯೆಹೂದ್ಯರಿಗೂ, ಎಫ್ರಾಯೀಮ್ಯರಿಗೂ, ಮನಸ್ಸೆಯವರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು.
2 ಪೂರ್ವಕಾಲವೃತ್ತಾ 30 : 2 (IRVKN)
ಎರಡನೆಯ ತಿಂಗಳಿನಲ್ಲಿ ಪಸ್ಕಹಬ್ಬವನ್ನು ಯೆರೂಸಲೇಮಿನಲ್ಲಿ ಆಚರಿಸಬೇಕೆಂದು ಅರಸನು, ಪದಾಧಿಕಾರಿಗಳು ಅಭಿಪ್ರಾಯಪಟ್ಟರು.
2 ಪೂರ್ವಕಾಲವೃತ್ತಾ 30 : 3 (IRVKN)
ಯಾಕೆಂದರೆ ಯಾಜಕರಲ್ಲಿ ಸಾಕಷ್ಟು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಒಟ್ಟಾಗಿ ಸೇರಿ ಬಂದಿರಲಿಲ್ಲವಾದುದರಿಂದ ಕೂಡಲೆ ಪಸ್ಕಹಬ್ಬವನ್ನು ಆಚರಿಸಲು ಸಾಧ್ಯವಾಗುವುದಿಲ್ಲವೆಂದು ಅರಸನಿಗೂ ಅವನ ಸರದಾರರಿಗೂ ಯೆರೂಸಲೇಮಿನ ಸರ್ವಸಂಘದವರಿಗೂ ತಿಳಿದುಕೊಂಡರು.
2 ಪೂರ್ವಕಾಲವೃತ್ತಾ 30 : 4 (IRVKN)
ಈ ಅಭಿಪ್ರಾಯವು ಅರಸನಿಗೂ ಸರ್ವಸಮೂಹಕ್ಕೂ ಸರಿಕಂಡದ್ದರಿಂದ
2 ಪೂರ್ವಕಾಲವೃತ್ತಾ 30 : 5 (IRVKN)
ಅವರು, “ಸರ್ವಜನರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಬರಬೇಕು” ಎಂಬುದಾಗಿ ಬೇರ್ಷೆಬದಿಂದ ದಾನ್ ವರೆಗೂ ವಾಸಮಾಡುತ್ತಿದ್ದ ಇಸ್ರಾಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆ ವರೆಗೂ ಧರ್ಮಶಾಸ್ತ್ರವಿಧಿಯ ಪ್ರಕಾರ ಪಸ್ಕಹಬ್ಬವನ್ನು ಆಚರಿಸಿರಲಿಲ್ಲ. [PE][PS]
2 ಪೂರ್ವಕಾಲವೃತ್ತಾ 30 : 6 (IRVKN)
ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು.
2 ಪೂರ್ವಕಾಲವೃತ್ತಾ 30 : 7 (IRVKN)
ನಿಮ್ಮ ಪೂರ್ವಿಕರು ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾಗಿದ್ದುದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.
2 ಪೂರ್ವಕಾಲವೃತ್ತಾ 30 : 8 (IRVKN)
ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡಿರುವ ಪವಿತ್ರಾಲಯಕ್ಕೆ ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವುದು.
2 ಪೂರ್ವಕಾಲವೃತ್ತಾ 30 : 9 (IRVKN)
ನೀವು ಯೆಹೋವನ ಕಡೆಗೆ ತಿರುಗಿಕೊಳ್ಳವುದಾದರೆ ನಿಮ್ಮ ಸಹೋದರರೂ, ಮಕ್ಕಳೂ ತಮ್ಮನ್ನು ಸೆರೆ ಒಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ತಿರುಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ, ಕನಿಕರವೂ ಉಳ್ಳವನಾಗಿದ್ದಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.” [PS]
2 ಪೂರ್ವಕಾಲವೃತ್ತಾ 30 : 10 (IRVKN)
{ಪಸ್ಕ ಆಚರಣೆ} [PS] ದೂತರು ಎಫ್ರಾಯೀಮ್, ಮನಸ್ಸೆ, ಜೆಬುಲೂನ್ ಪ್ರಾಂತ್ಯಗಳಲ್ಲಿ, ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು.
2 ಪೂರ್ವಕಾಲವೃತ್ತಾ 30 : 11 (IRVKN)
ಕೆಲವು ಮಂದಿ ಆಶೇರ್ಯರೂ, ಮನಸ್ಸೆಯವರೂ, ಜೆಬುಲೂನ್ಯರೂ ಮಾತ್ರ ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.
2 ಪೂರ್ವಕಾಲವೃತ್ತಾ 30 : 12 (IRVKN)
ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣೆಹೊಂದಿ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.
2 ಪೂರ್ವಕಾಲವೃತ್ತಾ 30 : 13 (IRVKN)
ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿ ಸೇರಿಬಂದರು; ಆ ಜನಸಮೂಹವು ಮಹಾಸಮೂಹವಾಗಿತ್ತು.
2 ಪೂರ್ವಕಾಲವೃತ್ತಾ 30 : 14 (IRVKN)
ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.
2 ಪೂರ್ವಕಾಲವೃತ್ತಾ 30 : 15 (IRVKN)
ನಂತರ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ಕೊಯ್ದರು.ಆಗ ಯಾಜಕರೂ, ಲೇವಿಯರೂ ನಾಚಿಕೆಪಟ್ಟು, ತಮ್ಮನ್ನು ಶುದ್ಧಿಪಡಿಸಿಕೊಂಡು ಯೆಹೋವನ ಆಲಯದಲ್ಲಿ ಸರ್ವಾಂಗಹೋಮಗಳನ್ನ ಸಮರ್ಪಿಸಿದರು.
2 ಪೂರ್ವಕಾಲವೃತ್ತಾ 30 : 16 (IRVKN)
ಅವರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ ಸೇವೆಯನ್ನು ಮಾಡುತ್ತಿದ್ದರು. ಯಾಜಕರೂ ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು.
2 ಪೂರ್ವಕಾಲವೃತ್ತಾ 30 : 17 (IRVKN)
ಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಇದ್ದುದರಿಂದ ಅಶುದ್ಧರಾದವರೆಲ್ಲರ, ಪಸ್ಕಹಬ್ಬದ ಯಜ್ಞಪಶುಗಳು ಯೆಹೋವನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು.
2 ಪೂರ್ವಕಾಲವೃತ್ತಾ 30 : 18 (IRVKN)
ಜನರಲ್ಲಿ ಅನೇಕರು ಅಂದರೆ, ಹೆಚ್ಚಾಗಿ ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಹಾಗು ಜೆಬುಲೂನ್ ಪ್ರಾಂತ್ಯಗಳವರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸ್ಕದ (ಹಬ್ಬ) ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, “ಯೆಹೋವನೇ, ದಯಾಪರನಾದ ದೇವರೇ, ಅವರೆಲ್ಲರಿಗೆ ಕ್ಷಮೆಯನ್ನು ಅನುಗ್ರಹಿಸು” ಎಂದು ವಿಜ್ಞಾಪನೆ ಮಾಡಿದನು.
2 ಪೂರ್ವಕಾಲವೃತ್ತಾ 30 : 19 (IRVKN)
ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತ್ವವು ಅನೇಕರಲ್ಲಿ ಇಲ್ಲದಿದ್ದರೂ ಪೂರ್ವಿಕರ ದೇವರಾದ ಯೆಹೋವನನ್ನು ಹುಡುಕಬೇಕೆಂದು ಮನಸ್ಸುಮಾಡಿರುವವರಿಗೆಲ್ಲರಿಗೂ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದನು.
2 ಪೂರ್ವಕಾಲವೃತ್ತಾ 30 : 20 (IRVKN)
ಯೆಹೋವನು ಹಿಜ್ಕೀಯನ ಪ್ರಾರ್ಥನೆಯನ್ನು ಲಾಲಿಸಿ ಜನರನ್ನು ಸ್ವಸ್ಥಗೊಳಿಸಿದನು.
2 ಪೂರ್ವಕಾಲವೃತ್ತಾ 30 : 21 (IRVKN)
ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಇಸ್ರಾಯೇಲರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ, ಯಾಜಕರೂ ಮಹಾವಾದ್ಯಗಳೊಡನೆ ಯೆಹೋವನನ್ನು ಪ್ರತಿದಿನವೂ ಸ್ತುತಿ ಕೀರ್ತಿಸುತ್ತಾ ಇದ್ದರು.
2 ಪೂರ್ವಕಾಲವೃತ್ತಾ 30 : 22 (IRVKN)
ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು.
2 ಪೂರ್ವಕಾಲವೃತ್ತಾ 30 : 23 (IRVKN)
ಅಲ್ಲದೆ ಸಮೂಹದವರು ಇನ್ನೂ ಏಳು ದಿನಗಳ ಕಾಲ ಹಬ್ಬವನ್ನು ಆ ಆಚರಿಸಬೇಕೆಂದು ತೀರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು
2 ಪೂರ್ವಕಾಲವೃತ್ತಾ 30 : 24 (IRVKN)
ಹೂದದ ಅರಸನಾದ ಹಿಜ್ಕೀಯನು ಹಿಂಡುಗಳಿಂದ ಸಾವಿರ ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ, ಪದಾಧಿಕಾರಿಗಳು ಸಾವಿರ ಹೋರಿಗಳನ್ನೂ, ಹತ್ತು ಸಾವಿರ ಕುರಿಗಳನ್ನೂ ಯಜ್ಞಕ್ಕಾಗಿ ದಾನಮಾಡಿದರು. ಯಾಜಕರಲ್ಲಿ ಬಹು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡರು.
2 ಪೂರ್ವಕಾಲವೃತ್ತಾ 30 : 25 (IRVKN)
ಯೆಹೂದ್ಯರ ಸರ್ವಸಮೂಹದವರೂ, ಯಾಜಕರು, ಲೇವಿಯರೂ, ಇಸ್ರಾಯೇಲ್ ಪ್ರಾಂತ್ಯಗಳಿಂದ ಸೇರಿಬಂದವರೆಲ್ಲರೂ ಹಾಗು ಇಸ್ರಾಯೇಲ್ ಯೆಹೂದ ಪ್ರಾಂತ್ಯಗಳಲ್ಲಿದ್ದ ಪ್ರವಾಸಿಗಳು ಈ ಉತ್ಸವದಲ್ಲಿ ಪಾಲುಗೊಂಡಿದ್ದರು.
2 ಪೂರ್ವಕಾಲವೃತ್ತಾ 30 : 26 (IRVKN)
ದಾವೀದನ ಮಗನೂ ಇಸ್ರಾಯೇಲರ ಅರಸನೂ ಆದ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥ ಉತ್ಸವವು ನಡೆದಿರಲಿಲ್ಲವಾದುದರಿಂದ ಯೆರೂಸಲೇಮಿನಲ್ಲಿ ಮಹಾಸಂತೋಷವುಂಟಾಯಿತು.
2 ಪೂರ್ವಕಾಲವೃತ್ತಾ 30 : 27 (IRVKN)
ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಪ್ರಾರ್ಥನೆಯ ಸ್ವರವು ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ತಲುಪಿತು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27

BG:

Opacity:

Color:


Size:


Font: