2 ಪೂರ್ವಕಾಲವೃತ್ತಾ 36 : 1 (IRVKN)
ಯೆಹೂದದ ಅರಸನಾದ ಯೆಹೋವಾಹಾಜನು ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನು ಅವನ ತಂದೆಯ ಬದಲಾಗಿ ಯೆರೂಸಲೇಮಿನಲ್ಲಿ ಅವನನ್ನು ಅರಸನನ್ನಾಗಿ ಮಾಡಿದರು.
2 ಪೂರ್ವಕಾಲವೃತ್ತಾ 36 : 2 (IRVKN)
ಯೆಹೋವಾಹಾಜನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.
2 ಪೂರ್ವಕಾಲವೃತ್ತಾ 36 : 3 (IRVKN)
ಐಗುಪ್ತದ ಅರಸನು ಯೆರೂಸಲೇಮಿಗೆ ಬಂದು ಅವನನ್ನು ಪಟ್ಟದಿಂದ ತೆಗೆದುಹಾಕಿ, ಯೆಹೂದ್ಯರು ತನಗೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರುವಂತೆ ಮಾಡಿದನು.
2 ಪೂರ್ವಕಾಲವೃತ್ತಾ 36 : 4 (IRVKN)
ಐಗುಪ್ತದ ಅರಸನಾದ ನೆಕೋವನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಯೆಹೂದದ ಮತ್ತು ಯೆರೂಸಲೇಮಿನ ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೆಸರಿಟ್ಟನು ಮತ್ತು ಅವನ ಸಹೋದರನಾದ ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ತೆಗೆದುಕೊಂಡು ಹೋದನು.
2 ಪೂರ್ವಕಾಲವೃತ್ತಾ 36 : 5 (IRVKN)
ಯೆಹೂದದ ಅರಸನಾದ ಯೆಹೋಯಾಕೀಮನು ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
2 ಪೂರ್ವಕಾಲವೃತ್ತಾ 36 : 6 (IRVKN)
ಬಾಬೆಲಿನ, ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಅವನನ್ನು ಬಾಬಿಲೋನಿಗೆ ಒಯ್ಯುವುದಕ್ಕೋಸ್ಕರ ಅವನಿಗೆ ಬೇಡಿಹಾಕಿ,
2 ಪೂರ್ವಕಾಲವೃತ್ತಾ 36 : 7 (IRVKN)
ಯೆಹೋವನ ಆಲಯದ ಹಲವು ಸಾಮಾನುಗಳನ್ನು ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು.
2 ಪೂರ್ವಕಾಲವೃತ್ತಾ 36 : 8 (IRVKN)
ಯೆಹೋಯಾಕೀಮನ ಉಳಿದ ಚರಿತ್ರೆಯೂ, ಅವನು ನಡಿಸಿದ ಅಸಹ್ಯ ಕೃತ್ಯಗಳೂ, ಅವನಲ್ಲಿ ಕಂಡುಬಂದದ್ದೆಲ್ಲವೂ ಇಸ್ರಾಯೇಲರ ಮತ್ತು ಯೆಹೂದ್ಯರ ರಾಜ ಗ್ರಂಥದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಅರಸನಾದನು.
2 ಪೂರ್ವಕಾಲವೃತ್ತಾ 36 : 9 (IRVKN)
ಯೆಹೂದದ ಅರಸನಾದ ಯೆಹೋಯಾಕೀನನು ಯೆಹೋಯಾಕೀನನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿನಗಳ ಕಾಲ ಆಳಿದನು. ಅವನು ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
2 ಪೂರ್ವಕಾಲವೃತ್ತಾ 36 : 10 (IRVKN)
ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ, ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ* ಚಿಕ್ಕಪ್ಪನಾದ ಅಥವಾ ಸಹೋದರನಾದ. ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು.
2 ಪೂರ್ವಕಾಲವೃತ್ತಾ 36 : 11 (IRVKN)
ಯೆಹೂದದ ಅರಸನಾದ ಚಿದ್ಕೀಯನು ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು.
2 ಪೂರ್ವಕಾಲವೃತ್ತಾ 36 : 12 (IRVKN)
ಅವನು ತನ್ನ ದೇವರಾದ ಯೆಹೋವನಿಗೆ ವಿರೋಧವಾಗಿ ನಡೆದದ್ದಲ್ಲದೆ ಅವನ ಮಾತುಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.
2 ಪೂರ್ವಕಾಲವೃತ್ತಾ 36 : 13 (IRVKN)
ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು.
2 ಪೂರ್ವಕಾಲವೃತ್ತಾ 36 : 14 (IRVKN)
ಪ್ರಧಾನಯಾಜಕರೂ, ಪ್ರಜೆಗಳೂ ಕೂಡ ಮಹಾ ದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯ ಕೃತ್ಯಗಳನ್ನು ಅನುಸರಿಸಿ, ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇಮಿನ ದೇವಾಲಯವನ್ನು ಹೊಲೆಮಾಡಿದರು.
2 ಪೂರ್ವಕಾಲವೃತ್ತಾ 36 : 15 (IRVKN)
ಯೆರೂಸಲೇಮಿನ ಪತನ ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.
2 ಪೂರ್ವಕಾಲವೃತ್ತಾ 36 : 16 (IRVKN)
ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.
2 ಪೂರ್ವಕಾಲವೃತ್ತಾ 36 : 17 (IRVKN)
ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.
2 ಪೂರ್ವಕಾಲವೃತ್ತಾ 36 : 18 (IRVKN)
ದೇವಾಲಯದ ಎಲ್ಲಾ ಚಿಕ್ಕ, ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರದ ಹಾಗೂ ಅರಸನ ಮತ್ತು ಅವನ ಸರದಾರರ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು.
2 ಪೂರ್ವಕಾಲವೃತ್ತಾ 36 : 19 (IRVKN)
ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.
2 ಪೂರ್ವಕಾಲವೃತ್ತಾ 36 : 20 (IRVKN)
ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆಯೊಯ್ದನು. ಪಾರಸಿಯರ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
2 ಪೂರ್ವಕಾಲವೃತ್ತಾ 36 : 21 (IRVKN)
ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು.
2 ಪೂರ್ವಕಾಲವೃತ್ತಾ 36 : 22 (IRVKN)
ಕೋರೆಷನ ಪ್ರಕಟಣೆ ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ,
2 ಪೂರ್ವಕಾಲವೃತ್ತಾ 36 : 23 (IRVKN)
ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ, “ಪರಲೋಕದ ದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಪ್ರಯಾಣ ಬೆಳೆಸಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು” ಎಂದು ಪ್ರಕಟಿಸಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23