2 ಕೊರಿಂಥದವರಿಗೆ 1 : 1 (IRVKN)
ಪೀಠಿಕೆ ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ * ಎಫೆ 1:1; ಕೊಲೊ 1:1 ಅಪೊಸ್ತಲನಾದ ಪೌಲನೂ ಸಹೋದರನಾದ ತಿಮೊಥೆಯನೂ ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಅಖಾಯ ಸೀಮೆಯಲ್ಲಿ ಇರುವ ದೇವಜನರೆಲ್ಲರಿಗೂ ಬರೆಯುವುದೇನಂದರೆ,
2 ಕೊರಿಂಥದವರಿಗೆ 1 : 2 (IRVKN)
ರೋಮಾ. 1:7 ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯು, ಶಾಂತಿಯು ಉಂಟಾಗಲಿ.
2 ಕೊರಿಂಥದವರಿಗೆ 1 : 3 (IRVKN)
ಪೌಲನು ತನಗೆ ಉಂಟಾದ ಆದರಣೆಯಿಂದ ಅನೇಕರಿಗೆ ಉಪಯೋಗ ಉಂಟಾಗುವುದೆಂದು ಹೇಳಿದ್ದು ಎಫೆ 1:3, ರೋಮಾ. 15:6 ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಕನಿಕರವುಳ್ಳ ತಂದೆಯೂ § ಯೆಶಾ 51:12, 66:13 ಸಕಲ ವಿಧವಾಗಿ ಸಂತೈಸುವ ದೇವರೂ ಆಗಿದ್ದು,
2 ಕೊರಿಂಥದವರಿಗೆ 1 : 4 (IRVKN)
ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವುದಕ್ಕೆ ಶಕ್ತರಾಗುತ್ತೇವೆ.
2 ಕೊರಿಂಥದವರಿಗೆ 1 : 5 (IRVKN)
ಏಕೆಂದರೆ * 2 ಕೊರಿ 4:10, ಕೊಲೊ 1:24 ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಕ್ರಿಸ್ತನ ಮೂಲಕವಾಗಿ ಹೆಚ್ಚಾದ ಆದರಣೆಯೂ ನಮಗೆ ದೊರೆಯುತ್ತದೆ.
2 ಕೊರಿಂಥದವರಿಗೆ 1 : 6 (IRVKN)
ನಾವು ಕಷ್ಟಗಳನ್ನನುಭವಿಸುವುದರಿಂದ ನಿಮಗೆ ಆದರಣೆಯೂ, ರಕ್ಷಣೆಯೂ ಉಂಟಾಗುತ್ತದೆ. ನಾವು ಸಮಾಧಾನದಿಂದಿರುವುದಾದರೆ ಅದರಿಂದ ನಿಮಗೆ ಆದರಣೆ ಆಗುತ್ತದೆ. ನಾವು ಅನುಭವಿಸುವಂಥ ಬಾಧೆಗಳನ್ನು ನೀವೂ ತಾಳ್ಮೆಯಿಂದ ಸಹಿಸಿಕೊಳ್ಳುವಂತೆ ಅದು ನಿಮ್ಮನ್ನು ಧೈರ್ಯಗೊಳಿಸುತ್ತದೆ.
2 ಕೊರಿಂಥದವರಿಗೆ 1 : 7 (IRVKN)
ರೋಮಾ. 8:17 ನೀವು ಬಾಧೆಗಳಲ್ಲಿ ನಮ್ಮೊಂದಿಗೆ ಪಾಲುಗಾರರಾಗಿರುವ ಪ್ರಕಾರವೇ ಆದರಣೆಯೂ ಪಾಲುಗಾರರಾಗಿದ್ದೀರೆಂದು ತಿಳಿದಿರುವುದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.
2 ಕೊರಿಂಥದವರಿಗೆ 1 : 8 (IRVKN)
ಸಹೋದರರೇ, ಅ. ಕೃ. 19:23, 1 ಕೊರಿ 15:32 ಆಸ್ಯ ಸೀಮೆಯಲ್ಲಿ ನಾವು ಅನುಭವಿಸಿದ ಕಷ್ಟ-ಸಂಕಟಗಳು ನಿಮಗೆ ತಿಳಿದಿರಲಿ ಎಂದು ನಾನು ಬಯಸುತ್ತೇನೆ. ಅಲ್ಲಿ ನಮ್ಮ ಶಕ್ತಿಗೆ ಮೀರಿದಂಥ ತೊಂದರೆಗಳನ್ನು ಅನುಭವಿಸಿ ನಾವು ಕುಗ್ಗಿಹೋಗಿ ಬದುಕುವ ನಿರೀಕ್ಷೆಯೇ ಇಲ್ಲವಾದವು.
2 ಕೊರಿಂಥದವರಿಗೆ 1 : 9 (IRVKN)
ಸಾಯುವುದು ನಿಶ್ಚಯವೆಂದೆನಿಸಿದಾಗ ನಾವು ನಮ್ಮ ಮೇಲೆ ಭರವಸವನ್ನಿಟ್ಟುಕೊಳ್ಳದೆ § 2 ಕೊರಿ 4:14 ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು.
2 ಕೊರಿಂಥದವರಿಗೆ 1 : 10 (IRVKN)
(10-11)ಆತನು ನಮ್ಮನ್ನು ಅಂಥ ಭಯಂಕರ ಮರಣದಿಂದ ತಪ್ಪಿಸಿದನು. ಮುಂದೆಯೂ ತಪ್ಪಿಸುವನು. * ರೋಮಾ. 15:30, ಫಿಲಿ. 1:19 ನೀವು ನಮಗೋಸ್ಕರ ಪ್ರಾರ್ಥನೆ ಮಾಡುವುದರ ನಿಮಿತ್ತವಾಗಿ ಇನ್ನು ಮುಂದೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. † 2 ಕೊರಿ 4:15, 9:11-12 ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿಮಿತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವುದು.
2 ಕೊರಿಂಥದವರಿಗೆ 1 : 11 (IRVKN)
2 ಕೊರಿಂಥದವರಿಗೆ 1 : 12 (IRVKN)
ನಾವು 1 ಕೊರಿ 2:4,13 ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, § 2 ಕೊರಿ 2:17, 4:2 ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.
2 ಕೊರಿಂಥದವರಿಗೆ 1 : 13 (IRVKN)
ನೀವು ನಮ್ಮ ಪತ್ರಿಕೆಗಳಲ್ಲಿ ಓದಿ ಅರ್ಥಮಾಡಿಕೊಂಡ ಸಂಗತಿಗಳನ್ನೇ ಹೊರತು ಬೇರೆ ಯಾವುದನ್ನು ನಾವು ನಿಮಗೆ ಬರೆಯಲಿಲ್ಲ.
2 ಕೊರಿಂಥದವರಿಗೆ 1 : 14 (IRVKN)
ನೀವು ನಮ್ಮನ್ನು ಸ್ವಲ್ಪಮಟ್ಟಿಗೆ ಅರ್ಥಮಾಡಿಕೊಂಡಿದ್ದೀರಿ ಕಡೆ ವರೆಗೂ ಒಪ್ಪಿಕೊಳ್ಳುವಿರಿ ಎಂಬುದಾಗಿಯೂ, ನಮ್ಮ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ನೀವು ನಮ್ಮ ಅಭಿಮಾನಕ್ಕೆ ಕಾರಣವಾದಂತೆ ನಾವು ನಿಮ್ಮ ಅಭಿಮಾನಕ್ಕೆ ಕಾರಣರಾಗಿರುವೆವು ಎಂದು ನೀವು ಒಪ್ಪಿಕೊಳ್ಳುತ್ತೀರಿ.
2 ಕೊರಿಂಥದವರಿಗೆ 1 : 15 (IRVKN)
ಪೌಲನು ಕೊರಿಂಥ ಪಟ್ಟಣಕ್ಕೆ ಹೋಗುವುದನ್ನು ಮುಂದಕ್ಕೆ ಹಾಕಿದ್ದು ನಾನು ಇಂಥ ಭರವಸವುಳ್ಳವನಾಗಿದ್ದರಿಂದ ನೀವು * ಅ. ಕೃ. 18:1-18 ಎರಡನೆಯ ಸಾರಿ ಕೃಪಾರ್ಶೀವಾದವನ್ನು ಪಡೆದುಕೊಳ್ಳುವಂತೆ ನಿಮ್ಮ ಬಳಿಗೆ ಮೊದಲೇ ಬರಬೇಕೆಂದಿದ್ದೆನು.
2 ಕೊರಿಂಥದವರಿಗೆ 1 : 16 (IRVKN)
ಅ. ಕೃ. 19:21, 1 ಕೊರಿ 16:15-17 ಮೊದಲು ನಿಮ್ಮ ಬಳಿಗೆ ಬಂದು ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ಅನಂತರ ಮಕೆದೋನ್ಯವನ್ನು ಬಿಟ್ಟು ತಿರುಗಿ ನಿಮ್ಮ ಬಳಿಗೆ ಬಂದು ನೀವು ನನ್ನನ್ನು ಯೂದಾಯಕ್ಕೆ ಕಳುಹಿಸಿ ಕೊಡಬೇಕೆಂದು ಯೋಚಿಸಿದ್ದೆನು.
2 ಕೊರಿಂಥದವರಿಗೆ 1 : 17 (IRVKN)
ಹೀಗೆ ಯೋಚಿಸಿದ್ದರಿಂದ ನಾನು ಚಂಚಲಚಿತ್ತನಾಗಿದ್ದೇನೋ? ಕೇವಲ ಪ್ರಾಪಂಚಿಕ ಗುಣಮಟ್ಟಕ್ಕೆ ಯೋಚಿಸಿ ಈ ಕ್ಷಣ “ಹೌದು” ಮರು ಕ್ಷಣ “ಇಲ್ಲ” ಎಂದು ಹೇಳುವವನಂತಿದ್ದೇನೋ? ಎಂದಿಗೂ ಇಲ್ಲ.
2 ಕೊರಿಂಥದವರಿಗೆ 1 : 18 (IRVKN)
ದೇವರು 1 ಕೊರಿ 1:9 ನಂಬಿಗಸ್ತನಾಗಿರುವಂತೆ ನಾವು ನಿಮಗೆ ಹೇಳುವ ಮಾತು ಒಂದು ಸಾರಿ “ಹೌದೆಂದು” ಮತ್ತೊಂದು ಸಾರಿ “ಇಲ್ಲವೆಂದು” ಆಗಿರಲು ಸಾಧ್ಯವಿಲ್ಲ. ಅದಕ್ಕೆ ನಂಬಿಗಸ್ತನಾದ ದೇವರೇ ಸಾಕ್ಷಿಯಾಗಿದ್ದಾನೆ.
2 ಕೊರಿಂಥದವರಿಗೆ 1 : 19 (IRVKN)
ನಾನೂ, § ಅ. ಕೃ. 15:22 ಸಿಲ್ವಾನನೂ, ತಿಮೊಥೆಯನೂ ನಿಮ್ಮಲ್ಲಿ ಪ್ರಸಿದ್ಧಿಪಡಿಸಿದ ದೇವರ ಮಗನಾದ ಯೇಸು ಕ್ರಿಸ್ತನು ಈ ಕ್ಷಣ “ಹೌದು” ಮರುಕ್ಷಣ “ಇಲ್ಲ” ಎಂದು ಹೇಳುವವನಲ್ಲ. * ಇಬ್ರಿ. 13:8 ಆತನಲ್ಲಿ ಹೌದೆಂಬುದೇ ನೆಲೆಗೊಂಡಿದೆ.
2 ಕೊರಿಂಥದವರಿಗೆ 1 : 20 (IRVKN)
ಇಬ್ರಿ. 10:23 ಆದ್ದರಿಂದ ದೇವರ ಕೊಟ್ಟಿರುವ ವಾಗ್ದಾನಗಳೆಲ್ಲವೂ ಕ್ರಿಸ್ತನಲ್ಲಿ “ಹೌದು” ಎಂಬುದೇ ಆಗಿದೆ. ‡ ಯೆಶಾ 65:16, ಪ್ರಕ 3:14 ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ಆತನ ಮೂಲಕವಾಗಿ ನಾವು “ಆಮೆನ್” ಎಂದು ಹೇಳುತ್ತೇವೆ.
2 ಕೊರಿಂಥದವರಿಗೆ 1 : 21 (IRVKN)
ನಮ್ಮನ್ನು ಅಭಿಷೇಕಿಸಿ § ಅಭಿಷಿಕ್ತನ ಕ್ರಿಸ್ತನ ಅನ್ಯೋನ್ಯತೆಯಲ್ಲಿ ಸೇರಿಸಿ ನಮ್ಮನ್ನು ನಿಮ್ಮೊಂದಿಗೆ ಸ್ಥಿರಪಡಿಸುವವನು ದೇವರೇ.
2 ಕೊರಿಂಥದವರಿಗೆ 1 : 22 (IRVKN)
ಆತನು * ಎಫೆ 1:13, 4:30 ನಮ್ಮ ಮೇಲೆ ತನ್ನ ಮುದ್ರೆಯನ್ನೊತ್ತಿ ನಮ್ಮ ಹೃದಯಗಳಲ್ಲಿ † 2 ಕೊರಿ 5:5 ಪವಿತ್ರಾತ್ಮನನ್ನು ಖಾತರಿಯಾಗಿ ಅನುಗ್ರಹಿಸಿದ್ದಾನೆ.
2 ಕೊರಿಂಥದವರಿಗೆ 1 : 23 (IRVKN)
2 ಕೊರಿ 2:1-3, 1 ಕೊರಿ 4:21 ನಿಮಗೆ ತೊಂದರೆ ಆಗಬಾರದೆಂದೇ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯ ಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.
2 ಕೊರಿಂಥದವರಿಗೆ 1 : 24 (IRVKN)
ನಿಮ್ಮ ನಂಬಿಕೆಯ ವಿಷಯದಲ್ಲಿಯೂ ನಾವು ನಿಮ್ಮ ಮೇಲೆ § 1 ಪೇತ್ರ. 5:3, 2 ಕೊರಿ 4:5 ದೊರೆತನಮಾಡುವವರೆಂಬುದಾಗಿ ಅಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿರುವಂತೆ ನಿಮ್ಮ ಸಂತೋಷಕ್ಕೆ ನಾವು ಸಹಾಭಾಗಿಗಳಾಗಿದೇವಷ್ಟೇ.

1 2 3 4 5 6 7 8 9 10 11 12 13 14 15 16 17 18 19 20 21 22 23 24