2 ಕೊರಿಂಥದವರಿಗೆ 11 : 1 (IRVKN)
{ತಾನು ಸಾರಿದ ಕ್ರಿಸ್ತನನ್ನು ಕೊರಿಂಥದವರು ಬಿಟ್ಟು ಬೇರೊಂದು ಬೋಧನೆಗೆ ಕಿವಿಗೊಡಬಾರದೆಂದು ಪೌಲನು ಎಚ್ಚರಿಸಿದ್ದು} [PS] ನಾನು ನನ್ನನ್ನು ಹೊಗಳಿಕೊಳ್ಳುವ ಹುಚ್ಚುತನವನ್ನು ನೀವು ಸ್ವಲ್ಪ ಸಹಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ. ನೀವು ನನ್ನನ್ನು ಸಹಿಸಿಕೊಳ್ಳಿರಿ.
2 ಕೊರಿಂಥದವರಿಗೆ 11 : 2 (IRVKN)
ಯಾಕೆಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ [* ಎಫೆ 5:27, ಪ್ರಕ 14:] ಶುದ್ಧ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿಸಿದ್ದೇನಲ್ಲ.
2 ಕೊರಿಂಥದವರಿಗೆ 11 : 3 (IRVKN)
ಆದರೆ [† ಆದಿ 3:4, 1 ತಿಮೊ. 2:14] ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ [‡ 2 ಕೊರಿ 6:6] ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ.
2 ಕೊರಿಂಥದವರಿಗೆ 11 : 4 (IRVKN)
ಯಾಕೆಂದರೆ ಯಾರಾದರು ಬಂದು [§ 1 ಕೊರಿ 3:11] ನಾವು ಬೋಧಿಸಿದ ಯೇಸುವನ್ನಲ್ಲದೆ ಮತ್ತೊಬ್ಬ ಯೇಸುವನ್ನು ನಿಮಗೆ ಪ್ರಕಟಿಸುವಾಗಲೂ ಇಲ್ಲವೇ [* ಗಲಾ. 1:6] ನೀವು ಹೊಂದದೆ ಇದ್ದ ಬೇರೆ ವಿಧವಾದ ಆತ್ಮಪ್ರೇರಣೆಯನ್ನು ಹೊಂದುವಾಗಲೂ, ನೀವು ಒಪ್ಪಿಕೊಳ್ಳದೆ ಇದ್ದ ಬೇರೊಂದು ಸುವಾರ್ತೆಯನ್ನು ಕೇಳುವಾಗಲೂ ನೀವು ಸಹಿಸಿಕೊಳ್ಳುತ್ತಿರುವುದು ಬಹು ಆಶ್ಚರ್ಯ.
2 ಕೊರಿಂಥದವರಿಗೆ 11 : 5 (IRVKN)
[† 2 ಕೊರಿ 12:11, ಗಲಾ. 2:6] “ಅತಿಶ್ರೇಷ್ಟರಾದ ಅಪೊಸ್ತಲರು” ಅನ್ನಿಸಿಕೊಳ್ಳುವ ಅವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದವನಲ್ಲವೆಂದು ಎಣಿಸುತ್ತೇನೆ
2 ಕೊರಿಂಥದವರಿಗೆ 11 : 6 (IRVKN)
[‡ 1 ಕೊರಿ 1:17] ನಾನು ವಾಕ್ಚಾತುರ್ಯದಲ್ಲಿ ನಿಪುಣನಲ್ಲದಿದ್ದರೂ [§ ಎಫೆ 3:4] ಜ್ಞಾನದಲ್ಲಿ ಅಲ್ಪನಲ್ಲ. ಇದನ್ನು ಎಲ್ಲಾ ಸಮಯಸಂದರ್ಭಗಳಲ್ಲೂ ಸ್ಪಷ್ಟಪಡಿಸಿದ್ದೇನೆ. [PS]
2 ಕೊರಿಂಥದವರಿಗೆ 11 : 7 (IRVKN)
{ತಾನು ಕೊರಿಂಥದ ಸಭೆಯಿಂದ ಹಣ ಸಹಾಯ ತೆಗೆದುಕೊಳ್ಳದೆ ಹೋದದ್ದಕ್ಕೆ ದೋಷವೆಣಿಸಕೂಡದೆಂದು ಪೌಲನು ಹೇಳುವುದು} [PS] [* 2 ಕೊರಿ 12:13, ಅ. ಕೃ. 18:3] ನೀವು ಅಭಿವೃದ್ಧಿಹೊಂದಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದರಲ್ಲಿ ಪಾಪಮಾಡಿದ್ದೇನೋ?
2 ಕೊರಿಂಥದವರಿಗೆ 11 : 8 (IRVKN)
ನಿಮಗೆ ಸೇವೆಮಾಡುವುದಕ್ಕೋಸ್ಕರ ನಾನು ಬೇರೆ ಸಭೆಗಳಿಂದ ನೆರವು ಪಡೆಯುತ್ತಿದ್ದೆ, ನಿಮಗೋಸ್ಕರ ಇತರ ಸಭೆಗಳಿಂದ ಹಣ ವಸೂಲಿಮಾಡುತ್ತಿದ್ದೆ.
2 ಕೊರಿಂಥದವರಿಗೆ 11 : 9 (IRVKN)
ನಾನು ನಿಮ್ಮಲ್ಲಿದ್ದಾಗ [† ಫಿಲಿ. 4:12, 2 ಕೊರಿ 12:13-14] ಖರ್ಚಿಗೆ ಏನೂ ಇಲ್ಲದ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ. [‡ ಫಿಲಿ. 4:15-16] ಮಕೆದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. [§ 2 ಕೊರಿ 12:16, 1 ಥೆಸ. 2:6] ನಾನು ನಿಮಗೆ ಯಾವುದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು. ಇನ್ನು ಮೇಲೆಯೂ ನೋಡಿಕೊಳ್ಳುವೆನು.
2 ಕೊರಿಂಥದವರಿಗೆ 11 : 10 (IRVKN)
[* 1 ಕೊರಿ 9:15 ] ಈ ನನ್ನ ಹೊಗಳಿಕೆಯನ್ನು ಅಖಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ತಡೆಯಲಾರರೆಂದು ಕ್ರಿಸ್ತನ ಮುಂದೆ ಸತ್ಯವಾಗಿ ಹೇಳುತ್ತೇನೆ.
2 ಕೊರಿಂಥದವರಿಗೆ 11 : 11 (IRVKN)
ನಿಮ್ಮಿಂದ ನಾನು ಏನನ್ನೂ ತೆಗೆದುಕೊಳ್ಳುತ್ತಿಲ್ಲವೇಕೆ? [† 2 ಕೊರಿ 6:11] ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ಇಲ್ಲ, ನಿಮ್ಮ ಮೇಲೆ ನಮಗಿರುವ ಪ್ರೀತಿ ಎಷ್ಟೆಂದು [‡ 2 ಕೊರಿ 11:31, 12:2-3] ದೇವರೇ ಬಲ್ಲನು.
2 ಕೊರಿಂಥದವರಿಗೆ 11 : 12 (IRVKN)
ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಅಪೊಸ್ತಲರಾಗಿ ಮಾಡುತ್ತಿರುವ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಹುಡುಕುವವರಿಗೆ ಯಾವ ಆಸ್ಪದವೂ ಸಿಕ್ಕದಂತೆ ನಾನೀಗ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ.
2 ಕೊರಿಂಥದವರಿಗೆ 11 : 13 (IRVKN)
ಆದರೆ ಅಂಥವರು [§ ಪ್ರಕ 2:2, ಗಲಾ. 2:4, ಫಿಲಿ. 1:15, 1 ಯೋಹಾ 4:1] ಸುಳ್ಳು ಅಪೊಸ್ತಲರೂ, [* ಫಿಲಿ. 3:2] ಮೋಸಗಾರರಾದ ಕೆಲಸದವರೂ, ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವವರೂ ಆಗಿದ್ದಾರೆ.
2 ಕೊರಿಂಥದವರಿಗೆ 11 : 14 (IRVKN)
ಇದೇನೂ ಆಶ್ಚರ್ಯವಲ್ಲ. ಸೈತಾನನು ತಾನೇ ಪ್ರಕಾಶ ರೂಪವುಳ್ಳ [† ಗಲಾ. 1:8] ದೇವದೂತನ ವೇಷವನ್ನು ಹಾಕಿಕೊಳ್ಳುವಾಗ,
2 ಕೊರಿಂಥದವರಿಗೆ 11 : 15 (IRVKN)
ಅವನ ಸೇವಕರೂ ಸಹ ನೀತಿಗೆ ಸೇವಕರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವುದು ಆಶ್ಚರ್ಯವೇನಲ್ಲ. [‡ ಫಿಲಿ. 3:19] ಅವರ ಅಂತ್ಯಾವಸ್ಥೆಯು ಅವರ ಕೃತ್ಯಗಳಿಗೆ ತಕ್ಕಂತೆಯೇ ಇರುವುದು. [PS]
2 ಕೊರಿಂಥದವರಿಗೆ 11 : 16 (IRVKN)
{ತಾನು ಕ್ರಿಸ್ತನ ಸೇವೆಯಲ್ಲಿ ಪಟ್ಟ ಶ್ರಮೆಯೂ ಕ್ರಿಸ್ತನಿಂದ ಹೊಂದಿದ ದರ್ಶನಗಳೂ ಬಹು ಹೆಚ್ಚೆಂದು ಪೌಲನು ಹೇಳುತ್ತಿರುವುದು} [PS] [§ 2 ಕೊರಿ 12:6 ] ಯಾರೂ ನನ್ನನ್ನು ಬುದ್ಧಿಹೀನನೆಂದು ತಿಳಿಯಬಾರದೆಂದು ತಿರುಗಿ ಹೇಳುತ್ತೇನೆ. ಹಾಗೆ ನೆನಸಿದರೂ ಚಿಂತೆಯಿಲ್ಲ. ನನ್ನನ್ನು ಬುದ್ಧಿಹೀನನಾಗಿಯೇ ಸ್ವೀಕರಿಸಿ. ಆಗ ನಾನು ಆತ್ಮ ಪ್ರಶಂಸೆ ಮಾಡಿಕೊಳ್ಳಲು ಅಲ್ಪಸ್ವಲ್ಪವಾದರೂ ಆಸ್ಪದವಾಗುತ್ತದೆ.
2 ಕೊರಿಂಥದವರಿಗೆ 11 : 17 (IRVKN)
[* 1 ಕೊರಿ, 7:12] ನಾನು ಈಗ ಆಡುವ ಮಾತುಗಳನ್ನು ಕರ್ತನನ್ನು ಅನುಸರಿಸುವವರಾಗಿ ಆಡದೆ ಭರವಸದಿಂದ ತನ್ನನ್ನು ಹೊಗಳಿಕೊಳ್ಳುವ ಬುದ್ಧಿಹೀನನಂತೆ ಆಡುತ್ತೇನೆ.
2 ಕೊರಿಂಥದವರಿಗೆ 11 : 18 (IRVKN)
[† ಫಿಲಿ. 3:3-4] ಅನೇಕರು ಲೋಕಸಂಬಂಧವಾದ ಕಾರ್ಯಗಳಲ್ಲಿ ಹೊಗಳಿಕೊಳ್ಳುವುದರಿಂದ ನಾನೂ ಹೊಗಳಿಕೊಳ್ಳುತ್ತೇನೆ.
2 ಕೊರಿಂಥದವರಿಗೆ 11 : 19 (IRVKN)
[‡ 1 ಕೊರಿ 4:10] ನೀವು ಬುದ್ಧಿವಂತರಾಗಿದ್ದು ಬುದ್ಧಿಹೀನರನ್ನು ಸಂತೋಷದಿಂದ ಸಹಿಸಿಕೊಳ್ಳುತ್ತೀರಲ್ಲಾ
2 ಕೊರಿಂಥದವರಿಗೆ 11 : 20 (IRVKN)
ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ, ಒಬ್ಬನು ನಿಮ್ಮನ್ನು ನುಂಗಿಬಿಟ್ಟರೂ, ಒಬ್ಬನು ನಿಮ್ಮನ್ನು ಮರಳುಗೊಳಿಸಿ ಹಿಡಿದರೂ, ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ, ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ಸಹಿಸಿಕೊಳ್ಳುತ್ತೀರಲ್ಲಾ. [PE][PS]
2 ಕೊರಿಂಥದವರಿಗೆ 11 : 21 (IRVKN)
[§ 2 ಕೊರಿ 10:10] ನಾವು ಬಲವಿಲ್ಲದವರಾಗಿದ್ದೆವೆಂಬುದನ್ನು ನಾಚಿಕೆಗೇಡಿನಿಂದ ಹೇಳುತ್ತಿದ್ದೇನೆ. ಯಾವ ಆಧಾರದಿಂದ ಯಾವನಾದರೂ ದೊಡ್ಡಸ್ತಿಕೆಯಿಂದ ಹೊಗಳಿಕೊಳ್ಳುತ್ತಾನೋ ಅದರಿಂದಲೇ ನಾನು ಹೊಗಳಿಕೊಳ್ಳುವುದಾಗಿ ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ.
2 ಕೊರಿಂಥದವರಿಗೆ 11 : 22 (IRVKN)
ಅವರು ಇಬ್ರಿಯರೋ? [* ರೋಮಾ. 11:1, ಫಿಲಿ. 3:5] ನಾನೂ ಇಬ್ರಿಯನು. ಅವರು ಇಸ್ರಾಯೇಲ್ಯರೋ? ನಾನೂ ಇಸ್ರಾಯೇಲ್ಯನು. ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು.
2 ಕೊರಿಂಥದವರಿಗೆ 11 : 23 (IRVKN)
ಅವರು ಕ್ರಿಸ್ತನ ಸೇವಕರೋ? [† 2 ಕೊರಿ 3:6, 10:7, 1 ಕೊರಿ 15:10] ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ ಕ್ರಿಸ್ತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, [‡ 2 ಕೊರಿ 6:5] ಹೆಚ್ಚಾಗಿ ಸೆರೆಮನೆಯ ವಾಸವನ್ನು ಅನುಭವಿಸಿದ್ದೇನೆ, ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ. [§ 2 ಕೊರಿ 1:9:, 10:4, 11:6-9, ರೋಮಾ. 8:36, 1 ಕೊರಿ 15:30-32] ಅನೇಕ ಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡಿದ್ದೇನೆ.
2 ಕೊರಿಂಥದವರಿಗೆ 11 : 24 (IRVKN)
ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ [* ಧರ್ಮೋ 25:3] ನಲವತ್ತು ಏಟುಗಳು ಬಿದ್ದವು.
2 ಕೊರಿಂಥದವರಿಗೆ 11 : 25 (IRVKN)
[† ಅ. ಕೃ. 16:22] ಮೂರು ಸಾರಿ ಬಾರುಕೋಲಿನಿಂದ ನನ್ನನ್ನು ಹೊಡೆದರು. [‡ ಅ. ಕೃ. 14:19] ಒಂದು ಸಾರಿ ಜನರು ನನ್ನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು. [§ ಅ. ಕೃ. 27:41] ಮೂರು ಸಾರಿ ನಾನಿದ್ದ ಹಡಗು ಒಡೆದು ಹೋಯಿತು. ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿ ಕಳೆದೆನು.
2 ಕೊರಿಂಥದವರಿಗೆ 11 : 26 (IRVKN)
ಕ್ರಿಸ್ತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು. ನದಿಗಳ ಅಪಾಯಗಳೂ, ಕಳ್ಳರ ಅಪಾಯಗಳೂ, [* ಅ. ಕೃ. 9:23, 13:50 5:17, 1 ಥೆಸ. 2:15 ] ಸ್ವಂತ ಜನರಿಂದ ಅಪಾಯಗಳೂ, [† ಅ. ಕೃ. 14:5,19,23; 27:42] ಅನ್ಯಜನರಿಂದ ಅಪಾಯಗಳೂ, [‡ ಅ. ಕೃ. 21:31] ಪಟ್ಟಣದಲ್ಲಿ ಅಪಾಯ, ನಿರ್ಜನ ಸ್ಥಳದಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ, ಸುಳ್ಳು ಸಹೋದರರೊಳಗಿನಿಂದಾದ ಅಪಾಯಗಳೂ ನನಗೆ ಸಂಭವಿಸಿದವು.
2 ಕೊರಿಂಥದವರಿಗೆ 11 : 27 (IRVKN)
ಶ್ರಮೆಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟ, ಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ.
2 ಕೊರಿಂಥದವರಿಗೆ 11 : 28 (IRVKN)
ಇಂಥ ಇನ್ನಿತರ ಬೇರೆ ಸಂಗತಿಗಳಲ್ಲದೆ, ಎಲ್ಲಾ ಸಭೆಗಳ ಕುರಿತಾದ ಚಿಂತೆಯು ದಿನದಿನ ನನ್ನನ್ನು ಕಾಡಿಸುತ್ತಿತ್ತು.
2 ಕೊರಿಂಥದವರಿಗೆ 11 : 29 (IRVKN)
[§ 1 ಕೊರಿ 8:13, 9:22] ಯಾವನಾದರೂ ಬಲಹೀನನಾಗಿದ್ದರೆ ನಾನೂ ಅವನೊಂದಿಗೆ ಬಲಹೀನನಾಗದೆ ಇದ್ದೆನೋ? ಯಾವನಾದರೂ ತಪ್ಪಿಹೋಗಿದ್ದಲ್ಲಿ ನಾನು ಸಂತಾಪಪಡದೆ ಇದ್ದೆನೋ? [PE][PS]
2 ಕೊರಿಂಥದವರಿಗೆ 11 : 30 (IRVKN)
[* 2 ಕೊರಿ 10:10, 12:5,9] ನಾನು ಹೊಗಳಿಕೊಳ್ಳುವುದ್ದಾದರೆ ನನ್ನ ಬಲಹೀನತೆಯನ್ನು ಕುರಿತೆ ಹೊಗಳಿಕೊಳ್ಳುತ್ತೇನೆ.
2 ಕೊರಿಂಥದವರಿಗೆ 11 : 31 (IRVKN)
ನನ್ನ ಮಾತುಗಳು ಸುಳ್ಳಲ್ಲವೆಂಬುದನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ, ತಂದೆಯೂ ಆಗಿರುವಾತನು ನಿರಂತರ ಸ್ತುತಿ ಹೊಂದತಕ್ಕ ದೇವರೇ ಬಲ್ಲನು.
2 ಕೊರಿಂಥದವರಿಗೆ 11 : 32 (IRVKN)
[† ಅ. ಕೃ. 9:24-25] ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಕಾಯುತ್ತಿರಲು
2 ಕೊರಿಂಥದವರಿಗೆ 11 : 33 (IRVKN)
ಅವರು ನನ್ನನ್ನು ಒಂದು ಬುಟ್ಟಿಯಲ್ಲಿ ಕುಳ್ಳಿರಿಸಿ ಗೋಡೆಯಲ್ಲಿದ್ದ ಒಂದು ಕಿಟಕಿಯಿಂದ ಇಳಿಸಿಬಿಟ್ಟರು. ಹೀಗೆ ಅವನ ಕೈಯಿಂದ ತಪ್ಪಿಸಿಕೊಂಡು ಓಡಿಹೋದೆನು. [PE]
❮
❯