2 ಕೊರಿಂಥದವರಿಗೆ 2 : 1 (IRVKN)
ಇನ್ನೊಮ್ಮೆ ನಿಮ್ಮ ಬಳಿಗೆ ಬಂದು, ನಿಮ್ಮನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ನಿರ್ಧರಿಸಿಕೊಂಡೆ.
2 ಕೊರಿಂಥದವರಿಗೆ 2 : 2 (IRVKN)
ನಾನೇ ನಿಮ್ಮನ್ನು ದುಃಖಪಡಿಸಿದರೆ, ನನ್ನನ್ನು ಸಂತೋಷಪಡಿಸುವವರು ಯಾರು? ನನ್ನಿಂದ ದುಃಖಕ್ಕೆ ಒಳಗಾದ ನೀವೇ ಅಲ್ಲವೇ?
2 ಕೊರಿಂಥದವರಿಗೆ 2 : 3 (IRVKN)
ಆದಕಾರಣ ನಾನು ಆ ಪತ್ರವನ್ನು ಬರೆದದ್ದು: ನನ್ನನ್ನು ಸಂತೋಷಪಡಿಸಬೇಕಾದವರೇ ನನ್ನನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ಬರಲಿಲ್ಲ. ನನ್ನ ಸಂತೋಷವೇ ನಿಮ್ಮೆಲ್ಲರ ಸಂತೋಷವೆಂದು ನೀವು ಭಾವಿಸುತ್ತೀರೆಂದು * 2 ಕೊರಿ 7:16 ನಂಬಿದ್ದೇನೆ.
2 ಕೊರಿಂಥದವರಿಗೆ 2 : 4 (IRVKN)
ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದುಕೊಳ್ಳಬೇಕೆಂತಲೇ 2 ಕೊರಿ 7:8-12 ನಾನು ಬಹಳವಾಗಿ ಕಣ್ಣೀರಿಡುತ್ತಾ ಹೃದಯದ ಬಹು ಸಂಕಟದಿಂದಲೂ ವ್ಯಾಕುಲದಿಂದಲೂ ನಿಮಗೆ ಬರೆದೆನೇ ಹೊರತು ನಿಮ್ಮನ್ನು ನೋಯಿಸುವುದಕ್ಕಾಗಿಯಲ್ಲ.
2 ಕೊರಿಂಥದವರಿಗೆ 2 : 5 (IRVKN)
1 ಕೊರಿ 5:1-2 ಮನಸ್ಸಿಗೆ ನೋವುಂಟುಮಾಡಿದವನು ಒಬ್ಬನು ನಿಮ್ಮಲ್ಲಿ ಇದ್ದರೂ ಅವನು ನನ್ನನ್ನು ಮಾತ್ರ ದುಃಖಪಡಿಸದೆ ನಿಮ್ಮಲ್ಲಿ ಬಹುಜನರನ್ನೂ ನೋಯಿಸಿದ್ದಾನೆ. ಆ ದುಃಖವು ಎಲ್ಲರಲ್ಲಿಯೂ ಉಂಟಾಯಿತೆಂದು ನಾನು ಹೇಳುವುದಿಲ್ಲ.
2 ಕೊರಿಂಥದವರಿಗೆ 2 : 6 (IRVKN)
ಇಂಥವನಿಗೆ ನಿಮ್ಮಲ್ಲಿ ಬಹುಜನರಿಂದಾದ § 1 ಕೊರಿ 5:4-5, 2 ಕೊರಿ 7:11 ಆ ಶಿಕ್ಷೆಯೇ ಸಾಕು.
2 ಕೊರಿಂಥದವರಿಗೆ 2 : 7 (IRVKN)
* ಗಲಾ. 6:1, ಎಫೆ 4:32 ಇನ್ನೂ ಅವನನ್ನು ಶಿಕ್ಷಿಸದೇ ಮನ್ನಿಸಿರಿ, ಸಂತೈಸಿರಿ. ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿ ಹೋಗುವನು.
2 ಕೊರಿಂಥದವರಿಗೆ 2 : 8 (IRVKN)
ಆದ್ದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ತೋರಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
2 ಕೊರಿಂಥದವರಿಗೆ 2 : 9 (IRVKN)
2 ಕೊರಿ 7:15, 10:6 ಎಲ್ಲಾ ವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಎಂದು ನಿಮ್ಮ ಗುಣವನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕೆಂಬುವ ಉದ್ದೇಶದಿಂದಲೇ ಹೀಗೆ ಬರೆದೆನು.
2 ಕೊರಿಂಥದವರಿಗೆ 2 : 10 (IRVKN)
ನೀವು ಯಾರನ್ನು ಕ್ಷಮಿಸುತ್ತೀರೋ ನಾನು ಸಹ ಅವನನ್ನು ಕ್ಷಮಿಸುತ್ತೇನೆ. ನಿಮಗೋಸ್ಕರವೇ ಅವನನ್ನು ಕ್ರಿಸ್ತನ ಸನ್ನಿಧಾನದಲ್ಲಿ ಕ್ಷಮಿಸಿದ್ದೇನೆ.
2 ಕೊರಿಂಥದವರಿಗೆ 2 : 11 (IRVKN)
ಸೈತಾನನು ನಮ್ಮನ್ನು ವಂಚಿಸಬಾರದೆಂದು ಹೀಗೆ ಮಾಡಿದೆನು. 1 ಪೇತ್ರ. 5:8 ಅವನ ಕುತಂತ್ರಗಳನ್ನು ನಾವು ಚೆನ್ನಾಗಿ ತಿಳಿದಿದ್ದೇವಲ್ಲಾ.
2 ಕೊರಿಂಥದವರಿಗೆ 2 : 12 (IRVKN)
ಸುವಾರ್ತಾ ಸೇವೆಯ ಶ್ರೇಷ್ಠತೆಯನ್ನು ಕುರಿತದ್ದು ದೇವರು ನನಗಾಗಿ ಬಾಗಿಲನ್ನು ತೆರೆದಿದ್ದಾನೆಂದು ಯೋಚಿಸಿ ಕ್ರಿಸ್ತನ ಸುವಾರ್ತೆಯನ್ನು ಸಾರುವುದಕ್ಕಾಗಿ § ಅ. ಕೃ. 16:8, 20:6 ನಾನು ತ್ರೋವ ಪಟ್ಟಣಕ್ಕೆ ಬಂದೆನು.
2 ಕೊರಿಂಥದವರಿಗೆ 2 : 13 (IRVKN)
ಆದರೂ ನನ್ನ ಸಹೋದರ ತೀತನು ನನಗೆ ಅಲ್ಲಿ ಸಿಕ್ಕಲಿಲ್ಲವಾದ ಕಾರಣ * 2 ಕೊರಿ 7:5 ನನ್ನ ಮನಸ್ಸಿಗೆ ಸಮಾಧಾನವಿಲ್ಲದೆ ಅಲ್ಲಿದ್ದವರಿಗೆ ವಂದಿಸಿ ಅಲ್ಲಿಂದ ಹೊರಟು ಮಕೆದೋನ್ಯಕ್ಕೆ ಬಂದೆನು.
2 ಕೊರಿಂಥದವರಿಗೆ 2 : 14 (IRVKN)
ಕ್ರಿಸ್ತನ ಮುಖಾಂತರ ನಮ್ಮನ್ನು ಕೊಲೊ 2:15 ವಿಜಯೋತ್ಸವದತ್ತ ನಡೆಸುವ ಹಾಗೂ ನಮ್ಮ ಮೂಲಕವಾಗಿ ತನ್ನ ಜ್ಞಾನವೆಂಬ ‡ ಎಫೆ 5:2, ಫಿಲಿ. 4:18 ಸುವಾಸನೆಯನ್ನು ಎಲ್ಲಾ ಸ್ಥಳಗಳಲ್ಲಿ ಹರಡಿಸಿದ ದೇವರಿಗೆ ಸ್ತೋತ್ರವಾಗಲಿ.
2 ಕೊರಿಂಥದವರಿಗೆ 2 : 15 (IRVKN)
ರಕ್ಷಣಾ ಮಾರ್ಗದಲ್ಲಿರುವವರಲ್ಲಿಯೂ ಮತ್ತು § 2 ಕೊರಿ 4:3 ನಾಶನದ ಮಾರ್ಗದಲ್ಲಿರುವವರಲ್ಲಿಯೂ ನಾವು ದೇವರಿಗೆ ಕ್ರಿಸ್ತನ ಪರಿಮಳವಾಗಿದ್ದೇವೆ.
2 ಕೊರಿಂಥದವರಿಗೆ 2 : 16 (IRVKN)
* ಲೂಕ 2:34, ಯೋಹಾ 9:39, 1 ಪೇತ್ರ. 2:7-8 ನಾವು ವಿನಾಶಮಾರ್ಗದಲ್ಲಿರುವವರಿಗೆ ಮೃತ್ಯುಕಾರಕ ಗಂಧ; ರಕ್ಷಣಾಮಾರ್ಗದಲ್ಲಿರುವವರಿಗೆ ಸಜೀವದಾಯಕ ಸುಗಂಧ. † 2 ಕೊರಿ 3:5-6 ಇಂಥ ಕಾರ್ಯಗಳಿಗೆ ಯಾರು ಯೋಗ್ಯರು?
2 ಕೊರಿಂಥದವರಿಗೆ 2 : 17 (IRVKN)
ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.

1 2 3 4 5 6 7 8 9 10 11 12 13 14 15 16 17