2 ಕೊರಿಂಥದವರಿಗೆ 3 : 1 (IRVKN)
{ಹೊಸ ಒಡಂಬಡಿಕೆಯ ಸೇವಕರು} [PS] [* 2 ಕೊರಿ 5:12, 10:12, 12:11] ನಮ್ಮನ್ನು ನಾವೇ ಮತ್ತೆ ಹೊಗಳಿಕೊಳ್ಳುವುದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡೆದುಕೊಳ್ಳಬೇಕೋ?
2 ಕೊರಿಂಥದವರಿಗೆ 3 : 2 (IRVKN)
ಸ್ವತಃ [† 1 ಕೊರಿ 9:2] “ನೀವೇ ನಮ್ಮ ಯೋಗ್ಯತಾ ಪತ್ರ” ಅದು ನಮ್ಮ ಹೃದಯಗಳಲ್ಲೇ ಬರೆದಿದೆ ಆ ಪತ್ರವನ್ನು ಎಲ್ಲರೂ ಬಲ್ಲರು. ಎಲ್ಲರೂ ಓದುತ್ತಾರೆ.
2 ಕೊರಿಂಥದವರಿಗೆ 3 : 3 (IRVKN)
ನೀವು, ನಮ್ಮ ಸೇವೆಯ ಫಲವಾಗಿ, ಕ್ರಿಸ್ತನು ನಮ್ಮ ಕೈಯಿಂದ ಬರೆಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷಪಡಿಸಿದ್ದೀರಿ. ಅದು ಮಸಿಯಿಂದ ಬರೆದದ್ದಲ್ಲ. ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು. [‡ ವಿಮೋ 24:12, ಧರ್ಮೋ 4:13] ಕಲ್ಲಿನ ಹಲಿಗೆಯ ಮೇಲಲ್ಲಾ, [§ ಜ್ಞಾ. 3:3, 7:, ಯೆಹೆ. 11:19, 36:26] ಮನುಷ್ಯನ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು.
2 ಕೊರಿಂಥದವರಿಗೆ 3 : 4 (IRVKN)
ನಮಗೆ ಇಂಥ ಭರವಸೆಯು ಕ್ರಿಸ್ತನ ಮೂಲಕವೇ ದೇವರಲ್ಲಿದೆ.
2 ಕೊರಿಂಥದವರಿಗೆ 3 : 5 (IRVKN)
[* ಎಫೆ 2:8] ನಮ್ಮಿಂದಲೇ ಏನಾದರೂ ಉಂಟಾಯಿತೆಂದು ತೀರ್ಮಾನಿಸಿಕೊಳ್ಳುವುದಕ್ಕೆ ನಮಗೆ ನಾವೇ ಯೋಗ್ಯರಲ್ಲ [† 1 ಕೊರಿ 5:10] ನಮಗಿರುವ ಯೋಗ್ಯತೆಯೂ ದೇವರಿಂದಲೇ ಬಂದದ್ದು.
2 ಕೊರಿಂಥದವರಿಗೆ 3 : 6 (IRVKN)
ಆತನು [‡ ಯೆರೆ 31:31, ಲೂಕ 22:30, 1 ಕೊರಿ 11:25] ಹೊಸ ಒಡಂಬಡಿಕೆಗೆ [§ ಎಫೆ 3:7, 2 ಕೊರಿ 4:1, 5:18] ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ [* ಆತ್ಮೀಕವಾದದ್ದು] ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. [† ಯೋಹಾ 6:63] ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.
2 ಕೊರಿಂಥದವರಿಗೆ 3 : 7 (IRVKN)
[‡ 2 ಕೊರಿ 3:9, ರೋಮಾ. 4:15] ಕಲ್ಲಿನ ಮೇಲೆ ಕೊರೆಯಲಾದ ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿದ್ದಾಗಿತ್ತು. ಆ ಮಹಿಮೆಯಿಂದ ಮೋಶೆಯ ಮುಖವನ್ನು ಆವರಿಸಿದ್ದ ಮಹಿಮೆಯೂ ಕುಂದಿಹೋಗುವಂಥದ್ದಾಗಿದ್ದರೂ ಆ ಮಹಿಮೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿ ನೋಡಲು ಇಸ್ರಾಯೇಲರಿಗೆ ಆಗಲಿಲ್ಲ.
2 ಕೊರಿಂಥದವರಿಗೆ 3 : 8 (IRVKN)
ಹೀಗಿದ್ದ ಮೇಲೆ [§ ಆತ್ಮೀಕವಾದ] ದೇವರಾತ್ಮಸಂಬಂಧವಾದ ಈ ಸೇವೆಯು ಇನ್ನೆಷ್ಟು ಮಹಿಮೆಯಿಂದ ಇರಬೇಕಲ್ಲವೇ?
2 ಕೊರಿಂಥದವರಿಗೆ 3 : 9 (IRVKN)
[* 2 ಕೊರಿ 3:7, ಇಬ್ರಿ. 12:18-21] ಅಪರಾಧ ನಿರ್ಣಯಕ್ಕೆ ಸಾಧನವಾಗಿರುವ ಸೇವೆಯು ಮಹಿಮೆಹೊಂದಿರಲಾಗಿ, ನೀತಿಗೆ ಸಾಧನವಾಗಿರುವ ಸೇವೆಯು ಇನ್ನೆಷ್ಟೋ ಅಧಿಕ ಮಹಿಮೆಯುಳ್ಳದ್ದಾಗಿ ಇರತ್ತದಲ್ಲವೋ?
2 ಕೊರಿಂಥದವರಿಗೆ 3 : 10 (IRVKN)
ಅಧಿಕವಾದ ಮಹಿಮೆಯುಳ್ಳದ್ದು ಬಂದದ್ದರಿಂದ ಮೊದಲಿದ್ದ ಮಹಿಮೆಯು ಅದರ ಎದುರು ಮಹಿಮೆಯಿಲ್ಲದಂತಾಯಿತು.
2 ಕೊರಿಂಥದವರಿಗೆ 3 : 11 (IRVKN)
ಅಳಿದು ಹೋಗುವಂಥದ್ದೇ, ಅಷ್ಟು ಪ್ರಭಾವವುಳ್ಳದ್ದಾಗಿದ್ದರೆ ಶಾಶ್ವತವಾಗಿ ಉಳಿಯುವಂಥದ್ದು ಮತ್ತೆಷ್ಟು ಹೆಚ್ಚಾದ ಪ್ರಭಾವವುಳ್ಳದ್ದಾಗಿರಬೇಕಲ್ಲವೋ?
2 ಕೊರಿಂಥದವರಿಗೆ 3 : 12 (IRVKN)
ನಮಗೆ ಇಂಥ ಭರವಸೆ ಇರುವುದರಿಂದಲೇ ನಾವು ಇಷ್ಟು ಧೈರ್ಯದಿಂದ ಇದ್ದೇವೆ.
2 ಕೊರಿಂಥದವರಿಗೆ 3 : 13 (IRVKN)
ಕುಂದಿಹೋಗುವಂಥ ಮಹಿಮೆಯು ಕುಂದಿಹೋಗುವುದನ್ನು ಇಸ್ರಾಯೇಲರು ಕಾಣದಂತೆ ಮೋಶೆಯು ತನ್ನ ಮುಖಕ್ಕೆ ಮುಸುಕು ಹಾಕಿಕೊಳ್ಳುತ್ತಿದ್ದನು. ನಾವು ಮೋಶೆಯಂತೆ ಮಾಡುವುದಿಲ್ಲ.
2 ಕೊರಿಂಥದವರಿಗೆ 3 : 14 (IRVKN)
ಆದರೆ ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಈ ದಿನದವರೆಗೂ ಹಳೇ ಒಡಂಬಡಿಕೆಯು [† ಅ. ಕೃ. 13:15, 21] ಓದುವಾಗೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತ ಯೇಸುವಿನ ಮುಖಾಂತರವೇ ತೆರೆಯಲು ಸಾಧ್ಯ.
2 ಕೊರಿಂಥದವರಿಗೆ 3 : 15 (IRVKN)
ಈ ದಿನದವರೆಗೂ ಮೋಶೆಯ ಧರ್ಮಶಾಸ್ತ್ರವು ಓದುವಾಗೆಲ್ಲಾ ಮುಸುಕು ಅವರ ಹೃದಯವನ್ನು ಮುಚ್ಚಿರುತ್ತದೆ.
2 ಕೊರಿಂಥದವರಿಗೆ 3 : 16 (IRVKN)
[‡ ರೋಮಾ. 11; 23] ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವುದು.
2 ಕೊರಿಂಥದವರಿಗೆ 3 : 17 (IRVKN)
ಆ ಕರ್ತನು ದೇವರಾತ್ಮನೇ. [§ ಯೆಶಾ 40:30-31] ಕರ್ತನ ಆತ್ಮನು ಇರುವಲ್ಲಿ ಸ್ವಾತಂತ್ರ್ಯವಿರುತ್ತದೆ.
2 ಕೊರಿಂಥದವರಿಗೆ 3 : 18 (IRVKN)
ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ [* 2 ಕೊರಿ 4:4-6, ಯೋಹಾ 17:24] ಕರ್ತನ ಪ್ರಭಾವವನ್ನು [† 1 ಕೊರಿ 13:12] ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ. [PE]

1 2 3 4 5 6 7 8 9 10 11 12 13 14 15 16 17 18

BG:

Opacity:

Color:


Size:


Font: