2 ಕೊರಿಂಥದವರಿಗೆ 3 : 1 (IRVKN)
ಹೊಸ ಒಡಂಬಡಿಕೆಯ ಸೇವಕರು * 2 ಕೊರಿ 5:12, 10:12, 12:11 ನಮ್ಮನ್ನು ನಾವೇ ಮತ್ತೆ ಹೊಗಳಿಕೊಳ್ಳುವುದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡೆದುಕೊಳ್ಳಬೇಕೋ?
2 ಕೊರಿಂಥದವರಿಗೆ 3 : 2 (IRVKN)
ಸ್ವತಃ † 1 ಕೊರಿ 9:2 “ನೀವೇ ನಮ್ಮ ಯೋಗ್ಯತಾ ಪತ್ರ” ಅದು ನಮ್ಮ ಹೃದಯಗಳಲ್ಲೇ ಬರೆದಿದೆ ಆ ಪತ್ರವನ್ನು ಎಲ್ಲರೂ ಬಲ್ಲರು. ಎಲ್ಲರೂ ಓದುತ್ತಾರೆ.
2 ಕೊರಿಂಥದವರಿಗೆ 3 : 3 (IRVKN)
ನೀವು, ನಮ್ಮ ಸೇವೆಯ ಫಲವಾಗಿ, ಕ್ರಿಸ್ತನು ನಮ್ಮ ಕೈಯಿಂದ ಬರೆಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷಪಡಿಸಿದ್ದೀರಿ. ಅದು ಮಸಿಯಿಂದ ಬರೆದದ್ದಲ್ಲ. ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು. ‡ ವಿಮೋ 24:12, ಧರ್ಮೋ 4:13 ಕಲ್ಲಿನ ಹಲಿಗೆಯ ಮೇಲಲ್ಲಾ, § ಜ್ಞಾ. 3:3, 7:, ಯೆಹೆ. 11:19, 36:26 ಮನುಷ್ಯನ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು.
2 ಕೊರಿಂಥದವರಿಗೆ 3 : 4 (IRVKN)
ನಮಗೆ ಇಂಥ ಭರವಸೆಯು ಕ್ರಿಸ್ತನ ಮೂಲಕವೇ ದೇವರಲ್ಲಿದೆ.
2 ಕೊರಿಂಥದವರಿಗೆ 3 : 5 (IRVKN)
* ಎಫೆ 2:8 ನಮ್ಮಿಂದಲೇ ಏನಾದರೂ ಉಂಟಾಯಿತೆಂದು ತೀರ್ಮಾನಿಸಿಕೊಳ್ಳುವುದಕ್ಕೆ ನಮಗೆ ನಾವೇ ಯೋಗ್ಯರಲ್ಲ † 1 ಕೊರಿ 5:10 ನಮಗಿರುವ ಯೋಗ್ಯತೆಯೂ ದೇವರಿಂದಲೇ ಬಂದದ್ದು.
2 ಕೊರಿಂಥದವರಿಗೆ 3 : 6 (IRVKN)
ಆತನು ‡ ಯೆರೆ 31:31, ಲೂಕ 22:30, 1 ಕೊರಿ 11:25 ಹೊಸ ಒಡಂಬಡಿಕೆಗೆ § ಎಫೆ 3:7, 2 ಕೊರಿ 4:1, 5:18 ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ * ಆತ್ಮೀಕವಾದದ್ದು ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. † ಯೋಹಾ 6:63 ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.
2 ಕೊರಿಂಥದವರಿಗೆ 3 : 7 (IRVKN)
‡ 2 ಕೊರಿ 3:9, ರೋಮಾ. 4:15 ಕಲ್ಲಿನ ಮೇಲೆ ಕೊರೆಯಲಾದ ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿದ್ದಾಗಿತ್ತು. ಆ ಮಹಿಮೆಯಿಂದ ಮೋಶೆಯ ಮುಖವನ್ನು ಆವರಿಸಿದ್ದ ಮಹಿಮೆಯೂ ಕುಂದಿಹೋಗುವಂಥದ್ದಾಗಿದ್ದರೂ ಆ ಮಹಿಮೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿ ನೋಡಲು ಇಸ್ರಾಯೇಲರಿಗೆ ಆಗಲಿಲ್ಲ.
2 ಕೊರಿಂಥದವರಿಗೆ 3 : 8 (IRVKN)
ಹೀಗಿದ್ದ ಮೇಲೆ § ಆತ್ಮೀಕವಾದ ದೇವರಾತ್ಮಸಂಬಂಧವಾದ ಈ ಸೇವೆಯು ಇನ್ನೆಷ್ಟು ಮಹಿಮೆಯಿಂದ ಇರಬೇಕಲ್ಲವೇ?
2 ಕೊರಿಂಥದವರಿಗೆ 3 : 9 (IRVKN)
* 2 ಕೊರಿ 3:7, ಇಬ್ರಿ. 12:18-21 ಅಪರಾಧ ನಿರ್ಣಯಕ್ಕೆ ಸಾಧನವಾಗಿರುವ ಸೇವೆಯು ಮಹಿಮೆಹೊಂದಿರಲಾಗಿ, ನೀತಿಗೆ ಸಾಧನವಾಗಿರುವ ಸೇವೆಯು ಇನ್ನೆಷ್ಟೋ ಅಧಿಕ ಮಹಿಮೆಯುಳ್ಳದ್ದಾಗಿ ಇರತ್ತದಲ್ಲವೋ?
2 ಕೊರಿಂಥದವರಿಗೆ 3 : 10 (IRVKN)
ಅಧಿಕವಾದ ಮಹಿಮೆಯುಳ್ಳದ್ದು ಬಂದದ್ದರಿಂದ ಮೊದಲಿದ್ದ ಮಹಿಮೆಯು ಅದರ ಎದುರು ಮಹಿಮೆಯಿಲ್ಲದಂತಾಯಿತು.
2 ಕೊರಿಂಥದವರಿಗೆ 3 : 11 (IRVKN)
ಅಳಿದು ಹೋಗುವಂಥದ್ದೇ, ಅಷ್ಟು ಪ್ರಭಾವವುಳ್ಳದ್ದಾಗಿದ್ದರೆ ಶಾಶ್ವತವಾಗಿ ಉಳಿಯುವಂಥದ್ದು ಮತ್ತೆಷ್ಟು ಹೆಚ್ಚಾದ ಪ್ರಭಾವವುಳ್ಳದ್ದಾಗಿರಬೇಕಲ್ಲವೋ?
2 ಕೊರಿಂಥದವರಿಗೆ 3 : 12 (IRVKN)
ನಮಗೆ ಇಂಥ ಭರವಸೆ ಇರುವುದರಿಂದಲೇ ನಾವು ಇಷ್ಟು ಧೈರ್ಯದಿಂದ ಇದ್ದೇವೆ.
2 ಕೊರಿಂಥದವರಿಗೆ 3 : 13 (IRVKN)
ಕುಂದಿಹೋಗುವಂಥ ಮಹಿಮೆಯು ಕುಂದಿಹೋಗುವುದನ್ನು ಇಸ್ರಾಯೇಲರು ಕಾಣದಂತೆ ಮೋಶೆಯು ತನ್ನ ಮುಖಕ್ಕೆ ಮುಸುಕು ಹಾಕಿಕೊಳ್ಳುತ್ತಿದ್ದನು. ನಾವು ಮೋಶೆಯಂತೆ ಮಾಡುವುದಿಲ್ಲ.
2 ಕೊರಿಂಥದವರಿಗೆ 3 : 14 (IRVKN)
ಆದರೆ ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಈ ದಿನದವರೆಗೂ ಹಳೇ ಒಡಂಬಡಿಕೆಯು † ಅ. ಕೃ. 13:15, 21 ಓದುವಾಗೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತ ಯೇಸುವಿನ ಮುಖಾಂತರವೇ ತೆರೆಯಲು ಸಾಧ್ಯ.
2 ಕೊರಿಂಥದವರಿಗೆ 3 : 15 (IRVKN)
ಈ ದಿನದವರೆಗೂ ಮೋಶೆಯ ಧರ್ಮಶಾಸ್ತ್ರವು ಓದುವಾಗೆಲ್ಲಾ ಮುಸುಕು ಅವರ ಹೃದಯವನ್ನು ಮುಚ್ಚಿರುತ್ತದೆ.
2 ಕೊರಿಂಥದವರಿಗೆ 3 : 16 (IRVKN)
‡ ರೋಮಾ. 11; 23 ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವುದು.
2 ಕೊರಿಂಥದವರಿಗೆ 3 : 17 (IRVKN)
ಆ ಕರ್ತನು ದೇವರಾತ್ಮನೇ. § ಯೆಶಾ 40:30-31 ಕರ್ತನ ಆತ್ಮನು ಇರುವಲ್ಲಿ ಸ್ವಾತಂತ್ರ್ಯವಿರುತ್ತದೆ.
2 ಕೊರಿಂಥದವರಿಗೆ 3 : 18 (IRVKN)
ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ * 2 ಕೊರಿ 4:4-6, ಯೋಹಾ 17:24 ಕರ್ತನ ಪ್ರಭಾವವನ್ನು † 1 ಕೊರಿ 13:12 ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.
❮
❯
1
2
3
4
5
6
7
8
9
10
11
12
13
14
15
16
17
18