2 ಕೊರಿಂಥದವರಿಗೆ 5 : 1 (IRVKN)
* 2 ಕೊರಿ 4:7 ಭೂಮಿಯ ಮೇಲಿರುವ † 2 ಪೇತ್ರ 1:13-14 ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; ‡ ಮಾರ್ಕ 14:58 ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ.
2 ಕೊರಿಂಥದವರಿಗೆ 5 : 2 (IRVKN)
ನಾವು ಈ ದೇಹದಲ್ಲಿರುವವರೆಗೆ ನರಳುತ್ತಾ; § 1 ಕೊರಿ 15:53-54 ಪರಲೋಕದಿಂದ ದೊರಕುವ ನಮ್ಮ ನಿವಾಸವನ್ನು ದೇಹದ ಮೇಲೆ ನಾವು ಎಂದು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ.
2 ಕೊರಿಂಥದವರಿಗೆ 5 : 3 (IRVKN)
ಅದನ್ನು ಧರಿಸಿಕೊಂಡಾಗ ನಾವು ಬೆತ್ತಲೆಯಾಗಿ ಇರಲಾರೆವು.
2 ಕೊರಿಂಥದವರಿಗೆ 5 : 4 (IRVKN)
ಏಕೆಂದರೆ, ಈ ದೇಹವೆಂಬ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಈ ದೇಹವು ಕಳಚಿಹೋಗಬೇಕೆಂಬುದು ನಮ್ಮ ಬಯಕೆ ಅಲ್ಲ; ಬದಲಾಗಿ ಅದರ ಮೇಲೆ ಧರಿಸಿಕೊಳ್ಳಬೇಕೆಂಬುದೇ. ಆದ್ದರಿಂದ * 1 ಕೊರಿ 15:54 ನಶ್ವರವಾದದ್ದು ಅಳಿದುಹೋಗಿ ಅಮರವಾದದ್ದು ಉಳಿಯುವಂತೆ ಅಪೇಕ್ಷಿಸುತ್ತೇವೆ.
2 ಕೊರಿಂಥದವರಿಗೆ 5 : 5 (IRVKN)
ಆ ಸ್ಥಿತಿಗಾಗಿ ನಮ್ಮನ್ನು ಸಿದ್ಧಗೊಳಿಸಿರುವಾತನು ದೇವರೇ; ಅದಕ್ಕಾಗಿ ರೋಮಾ. 8:23; 2 ಕೊರಿ 1:22 ಆತನು ಪವಿತ್ರಾತ್ಮನನ್ನು ನಮಗೆ ಸಂಚಕಾರವಾಗಿ ನೀಡಿದ್ದಾನೆ.
2 ಕೊರಿಂಥದವರಿಗೆ 5 : 6 (IRVKN)
ಹೀಗಿರುವುದರಿಂದ ನಾವು ಯಾವಾಗಲೂ ನಂಬಿಕೆಯುಳ್ಳವರಾಗಿರಬೇಕು; ಇಬ್ರಿ. 11:13,14 ದೇಹದಲ್ಲಿ ವಾಸಿಸುವವರೆಗೂ ಕರ್ತನಿಂದ ದೂರದಲ್ಲಿರುವ ಪ್ರವಾಸಿಗಳಾಗಿದ್ದೇವೆ
2 ಕೊರಿಂಥದವರಿಗೆ 5 : 7 (IRVKN)
§ 1 ಕೊರಿ 13:12 ನಾವು ನೋಡುತ್ತಾ ನಡೆಯದೇ, * ಯೋಹಾ 20:29; 2 ಕೊರಿ 4:18 ನಂಬುವವರಾಗಿಯೇ ನಡೆಯುತ್ತೇವೆ.
2 ಕೊರಿಂಥದವರಿಗೆ 5 : 8 (IRVKN)
ಇದನ್ನು ಕುರಿತು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ಫಿಲಿ. 1:23 ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿ ಇರುವುದೇ ಉತ್ತಮವೆಂದು ಎಣಿಸುವವರಾಗಿದ್ದೇವೆ.
2 ಕೊರಿಂಥದವರಿಗೆ 5 : 9 (IRVKN)
ಆದ್ದರಿಂದ ನಾವು ದೇಹವೆಂಬ ಮನೆಯಲ್ಲಿದ್ದರೂ ಸರಿಯೇ ಅಥವಾ ಅದನ್ನು ಬಿಟ್ಟಿದ್ದರೂ ಸರಿಯೇ, ಕರ್ತನನ್ನು ಮೆಚ್ಚಿಸುವವರಾಗಿರಬೇಕೆಂಬುದೇ ನಮ್ಮ ಗುರಿಯಾಗಿದೆ.
2 ಕೊರಿಂಥದವರಿಗೆ 5 : 10 (IRVKN)
ತೀತ. 62:12 ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ § ಮತ್ತಾ 25:31-32; ರೋಮಾ. 14:10; ಅ. ಕೃ. 10:42 ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.
2 ಕೊರಿಂಥದವರಿಗೆ 5 : 11 (IRVKN)
ಸಂಧಾನಮಾಡುವ ಸೇವೆ ಆದ್ದರಿಂದ, ಕರ್ತನಲ್ಲಿ ಭಯವುಳ್ಳವರಾಗಿರಬೇಕೆಂದು ನಾವು, ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಎಂಥವರೆಂದು ದೇವರಿಗೆ ಪ್ರಕಟವಾಗಿದ್ದೇವೆ. ಅದು * 2 ಕೊರಿ 4:2 ನಿಮ್ಮ ಮನಸ್ಸಾಕ್ಷಿಗೆ ಕೂಡಾ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.
2 ಕೊರಿಂಥದವರಿಗೆ 5 : 12 (IRVKN)
2 ಕೊರಿ 3:1 ನಾವು ನಮ್ಮನ್ನು ಮತ್ತೆ, ಮತ್ತೆ ನಿಮ್ಮೆದುರು ಹೊಗಳಿಕೊಳ್ಳುವುದಿಲ್ಲ; ಅಂತರಂಗವನ್ನು ಅರಿಯದೆ ಅವನ ಹೊರ ತೋರಿಕೆಯನ್ನೇ ನೆಚ್ಚಿ ನಲಿಯುವವರಿಗೆ ಸೂಕ್ತ ಪ್ರತ್ಯುತ್ತರವನ್ನು ಕೊಡಲು ನೀವು ಶಕ್ತರಾಗುತ್ತೀರಿ.
2 ಕೊರಿಂಥದವರಿಗೆ 5 : 13 (IRVKN)
2 ಕೊರಿ 11:1,16,7; 12:6,11; ಅ. ಕೃ. 26:24,25 ನಮಗೆ ಬುದ್ಧಿಭ್ರಮಣೆಯಾಗಿದ್ದರೆ ಅದು ದೇವರ ಮಹಿಮೆಗಾಗಿಯೇ; ಹಾಗೂ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ಪ್ರಯೋಜನಕ್ಕಾಗಿಯೇ.
2 ಕೊರಿಂಥದವರಿಗೆ 5 : 14 (IRVKN)
ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; § ರೋಮಾ. 5:15 ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ.
2 ಕೊರಿಂಥದವರಿಗೆ 5 : 15 (IRVKN)
ಕ್ರಿಸ್ತನು ಎಲ್ಲರಿಗೋಸ್ಕರ ಸತ್ತದ್ದರಿಂದಾಗಿ * ರೋಮಾ. 6:11,12; 14:7 ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೇ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕು.
2 ಕೊರಿಂಥದವರಿಗೆ 5 : 16 (IRVKN)
ಹೀಗಿರಲಾಗಿ ಗಲಾ. 2:6; ಫಿಲಿ. 3:7,8; ಕೊಲೊ 2:11 ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.
2 ಕೊರಿಂಥದವರಿಗೆ 5 : 17 (IRVKN)
ಆದ್ದರಿಂದ 2 ಕೊರಿ 12:2; ಗಲಾ. 1:22 ಯಾವನಾದರೂ ಕ್ರಿಸ್ತನಲ್ಲಿದ್ದರೆ § ಯೋಹಾ 3:3; ರೋಮಾ. 6:4; ಗಲಾ. 6:15 ಅವನು ನೂತನ ಸೃಷ್ಟಿಯಾಗಿದ್ದಾನೆ. * ಯೆಶಾ 43:18,19; ಪ್ರಕ 21:5; ಎಫೆ 2:15; 4:24 ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.
2 ಕೊರಿಂಥದವರಿಗೆ 5 : 18 (IRVKN)
ಇವೆಲ್ಲವುಗಳು ದೇವರಿಂದಲೇ ಉಂಟಾದದ್ದು. ಕೊಲೊ 1:20; ರೋಮಾ. 5:10 ದೇವರು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಂಧಾನಪಡಿಸಿಕೊಂಡು, ಸಂಧಾನಮಾಡುವ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ;
2 ಕೊರಿಂಥದವರಿಗೆ 5 : 19 (IRVKN)
ಹೇಗೆಂದರೆ, ಕ್ರಿಸ್ತನಲ್ಲಿ ದೇವರು ಜಗತ್ತನ್ನು ತನ್ನೊಡನೆ ಸಂಧಾನಮಾಡಿಕೊಳ್ಳುತ್ತಿದ್ದಾನೆ; ಮನುಷ್ಯರ ಅಪರಾಧಗಳನ್ನು ಕೀರ್ತ 32:2; ರೋಮಾ. 4:8; 1 ಕೊರಿ 13:5 ಅವರ ಲೆಕ್ಕಕ್ಕೆ ಹಾಕದೇ, ಈ ಸಂಧಾನದ ಸಂದೇಶವನ್ನು ಎಲ್ಲರಿಗೂ ಸಾರುವಂತೆ ಅದನ್ನು ನಮ್ಮ ಮೇಲೆ ಹೊರಿಸಿದ್ದಾನೆ.
2 ಕೊರಿಂಥದವರಿಗೆ 5 : 20 (IRVKN)
§ ಎಫೆ 6:20 ಆದ್ದರಿಂದ ನಾವು ಕ್ರಿಸ್ತನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಿದ್ದಾನೆ. ದೇವರೊಡನೆ ನೀವು ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತೇವೆ.
2 ಕೊರಿಂಥದವರಿಗೆ 5 : 21 (IRVKN)
ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.

1 2 3 4 5 6 7 8 9 10 11 12 13 14 15 16 17 18 19 20 21