2 ಕೊರಿಂಥದವರಿಗೆ 9 : 1 (IRVKN)
* ರೋಮಾ. 15:25 ದೇವಜನರಿಗೋಸ್ಕರ ನೀವು ಸಂಗ್ರಹಿಸುತ್ತಿರುವ ಹಣದ ಕುರಿತು ನಾನು ನಿಮಗೆ ಬರೆಯುವ ಅವಶ್ಯಕತೆಯಿಲ್ಲ.
2 ಕೊರಿಂಥದವರಿಗೆ 9 : 2 (IRVKN)
ನಿಮ್ಮ ಮನಸ್ಸಿನ ಬಯಕೆ ಏನೆಂಬುದು ನನಗೆ ಗೊತ್ತುಂಟು. ಕಳೆದ ವರ್ಷದಿಂದಲೂ ಅಖಾಯದವರು ಸಹಾಯಮಾಡುವುದಕ್ಕೆ ಸಿದ್ಧರಾಗಿದ್ದರೆಂದು ಮಕೆದೋನ್ಯದವರ ಮುಂದೆ † 2 ಕೊರಿ 8:24 ನಿಮ್ಮನ್ನು ಹೊಗಳುತ್ತಾ ಇದ್ದೇನೆ. ಮತ್ತು ನಿಮ್ಮ ಆಸಕ್ತಿಯು ಅವರಲ್ಲಿ ಬಹುಜನರನ್ನು ಪ್ರೇರೇಪಿಸಿತು.
2 ಕೊರಿಂಥದವರಿಗೆ 9 : 3 (IRVKN)
ಆದರೂ ನಾವು ನಿಮ್ಮನ್ನು ಹೊಗಳಿದ್ದು ಆಧಾರರಹಿತವಾಗದೆ ನಾನು ಹೇಳಿದ ಪ್ರಕಾರವೇ ‡ 1 ಕೊರಿ 16:2 ನೀವು ಸಿದ್ಧರಾಗಿರಬಹುದೆಂದು ಆ ಸಹೋದರರನ್ನು ಕಳುಹಿಸಿದ್ದೇನೆ.
2 ಕೊರಿಂಥದವರಿಗೆ 9 : 4 (IRVKN)
ನೀವು ಸಿದ್ಧವಾಗದಿದ್ದರೆ § ಅ. ಕೃ. 20:4 ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬುದನ್ನು ಕಂಡು ನಮಗೆ ನಿಮ್ಮ ಮೇಲೆ ಇಂಥ ಭರವಸೆ ಇಟ್ಟಿದ್ದಕ್ಕೆ ನಾವು ನಾಚಿಕೆಪಡಬೇಕಾದೀತು; ನಿಮಗೂ ನಾಚಿಕೆಯಾಗುವುದೆಂದು ನಾನು ಹೀಗೆ ಹೇಳುತ್ತೇನೆ.
2 ಕೊರಿಂಥದವರಿಗೆ 9 : 5 (IRVKN)
ಹೀಗಿರಲಾಗಿ ಈ ಸಹೋದರರು ಮುಂಚಿತವಾಗಿ ನಿಮ್ಮ ಬಳಿಗೆ ಬಂದು ನೀವು ಮೊದಲೇ ವಾಗ್ದಾನಮಾಡಿದ ಕೊಡುಗೆಯನ್ನು ಸಿದ್ಧಪಡಿಸಲು ನಿಮಗೆ ಸಹಾಯಮಾಡುವಂತೆ ಇವರನ್ನು ಬೇಡಿಕೊಳ್ಳುವುದು ಅವಶ್ಯವೆಂದು ನನಗೆ ತೋಚಿತು. ಹೀಗೆ ಈ ದಾನ ಒತ್ತಾಯದ ವಸೂಲಿ ಆಗಿರದೆ ಮನಃಪೂರ್ವಕವಾಗಿ ಕೊಟ್ಟ ದಾನ ಆಗಿರುತ್ತದೆ.
2 ಕೊರಿಂಥದವರಿಗೆ 9 : 6 (IRVKN)
ಪೌಲನು ಕೊರಿಂಥದ ಸಭೆಯವರನ್ನು ಉದಾರವಾಗಿ ಕೊಡುವುದಕ್ಕೆ ಪ್ರೇರೇಪಿಸಿದ್ದು ಆದರೆ ಮಿತವಾಗಿ ಬಿತ್ತುವವನು ಮಿತವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ.
2 ಕೊರಿಂಥದವರಿಗೆ 9 : 7 (IRVKN)
ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; * ಧರ್ಮೋ 15:10; 2 ಕೊರಿ 8:12 ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ † ವಿಮೋ 25:2 ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.
2 ಕೊರಿಂಥದವರಿಗೆ 9 : 8 (IRVKN)
‡ ಫಿಲಿ. 4:19; ಎಫೆ 3:20 ದೇವರು ಸಕಲ ವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತನಾದ್ದರಿಂದ, ನೀವೂ ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು.
2 ಕೊರಿಂಥದವರಿಗೆ 9 : 9 (IRVKN)
§ ಕೀರ್ತ 112:9 “ಅವನು ಬಡವರಿಗೆ ಧಾರಾಳವಾಗಿ ನೀಡುವನು; ಅವನ ನೀತಿಯು ಸದಾಕಾಲವೂ ಇರುವುದು.”
2 ಕೊರಿಂಥದವರಿಗೆ 9 : 10 (IRVKN)
* ಯೆಶಾ 55:10 ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.
2 ಕೊರಿಂಥದವರಿಗೆ 9 : 11 (IRVKN)
ಹೀಗೆ ನೀವು † 1 ಕೊರಿ 1:5 ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಇದಲ್ಲದೆ ನಿಮ್ಮ ದಾನಗಳು ನಮ್ಮ ಕೈಯಿಂದ ಮತ್ತೊಬ್ಬರಿಗೆ ಸೇರಿದಾಗ ಅದು ದೇವರಿಗೆ ಕೃತಜ್ಞತಾಸ್ತುತಿಯನ್ನು ಉಂಟುಮಾಡುತ್ತದೆ.
2 ಕೊರಿಂಥದವರಿಗೆ 9 : 12 (IRVKN)
ಹೇಗೆಂದರೆ ನೀವು ಮಾಡುವ ಈ ಧರ್ಮಕಾರ್ಯವು ‡ 2 ಕೊರಿ 8; 14 ದೇವಜನರ ಕೊರತೆಗಳನ್ನು ನೀಗಿಸುವುದು ಮಾತ್ರವಲ್ಲದೆ ಅನೇಕ ರೀತಿಯಲ್ಲಿ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟುಮಾಡಲು ಇದು ಕಾರಣವಾಗುತ್ತದೆ.
2 ಕೊರಿಂಥದವರಿಗೆ 9 : 13 (IRVKN)
ನೀವು ಮಾಡುವ ಈ ಸಹಾಯ ಹಾಗೂ ನಿಮ್ಮ ಯೋಗ್ಯ ಭಾವವನ್ನು ಅನೇಕರು ನೋಡುವಾಗ, § 1 ತಿಮೊ. 6:12,13; ಇಬ್ರಿ. 3:4,14; 10:23 ನೀವು ಮಾಡಿದ ಕ್ರಿಯೆಗೆ ಸರಿಯಾಗಿ, ಕ್ರಿಸ್ತನ ಸುವಾರ್ತೆಯನ್ನು ನೀವು ಅನುಸರಿಸುವುದರಿಂದಲೂ, ಅವರಿಗೂ ಮತ್ತು ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡುವುದರಿಂದಲೂ ಅವರು * ಮತ್ತಾ 5:16; 1 ಪೇತ್ರ 2:12 ದೇವರನ್ನು ಕೊಂಡಾಡುವರು.
2 ಕೊರಿಂಥದವರಿಗೆ 9 : 14 (IRVKN)
ಇದಲ್ಲದೆ ನಿಮಗೋಸ್ಕರ ವಿಜ್ಞಾಪನೆ ಮಾಡಿ ದೇವರ ಅತಿಶಯವಾದ ಕೃಪೆಯು ನಿಮಗೆ ದೊರೆತಿರುವುದರಿಂದ ಅವರು ನಿಮ್ಮನ್ನು ನೋಡಲು ಬಯಸಿರುವರಲ್ಲದೆ ನಿಮಗಾಗಿ ಪ್ರಾರ್ಥಿಸುವರು.
2 ಕೊರಿಂಥದವರಿಗೆ 9 : 15 (IRVKN)
† ಯೋಹಾ 3:16; ಎಫೆ 2:8 ವರ್ಣಿಸಲಸಾಧ್ಯವಾದ ದಾನಗಳ ನಿಮಿತ್ತ ದೇವರಿಗೆ ಸ್ತೋತ್ರವಾಗಲಿ.
❮
❯
1
2
3
4
5
6
7
8
9
10
11
12
13
14
15