2 ಅರಸುಗಳು 13 : 1 (IRVKN)
{ಇಸ್ರಾಯೇಲರ ಅರಸನಾದ ಯೆಹೋವಾಹಾಜನು} [PS] ಯೆಹೂದದ ಅರಸನೂ, ಅಹಜ್ಯನ ಮಗನೂ ಆದ ಯೆಹೋವಾಷನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಯೇಹುವಿನ ಮಗನಾದ ಯೆಹೋವಾಹಾಜನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹದಿನೇಳು ವರ್ಷ ಆಳ್ವಿಕೆ ಮಾಡಿದನು.
2 ಅರಸುಗಳು 13 : 2 (IRVKN)
ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. [PE][PS]
2 ಅರಸುಗಳು 13 : 3 (IRVKN)
ಆದುದರಿಂದ ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದನು. ಅವರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಅವರ ಅಧೀನದಲ್ಲಿದ್ದರು.
2 ಅರಸುಗಳು 13 : 4 (IRVKN)
ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಯೆಹೋವನು ಅವನ ಮೊರೆಯನ್ನು ಲಾಲಿಸಿದನು.ಅಲ್ಲದೆ ಅವರು ಅರಾಮ್ಯರ ಅರಸನಿಂದ ಬಹಳವಾಗಿ ಬಾಧಿಸಲ್ಪಟ್ಟರುವುದನ್ನು ನೋಡಿ,
2 ಅರಸುಗಳು 13 : 5 (IRVKN)
ಯೆಹೋವನು ಇಸ್ರಾಯೇಲರ ಮೇಲೆ ಕಟಾಕ್ಷವಿಟ್ಟು ಅವರಿಗೆ ಒಬ್ಬ ರಕ್ಷಕನನ್ನು ಅನುಗ್ರಹಿಸಿದನು. ಅವನ ಮುಖಾಂತರವಾಗಿ ಅವರು ಅರಾಮ್ಯರ ಕೈಯಿಂದ ಬಿಡುಗಡೆಯಾಗಿ ಮೊದಲಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು. [PE][PS]
2 ಅರಸುಗಳು 13 : 6 (IRVKN)
ಆದರೂ ಇಸ್ರಾಯೇಲರು ತಮ್ಮನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮನೆಯವರ ಮಾರ್ಗದಲ್ಲಿ ನಡೆದರು. ಅದನ್ನು ಬಿಡಲೇ ಇಲ್ಲ. ಸಮಾರ್ಯದಲ್ಲಿ ಅಶೇರ ವಿಗ್ರಹಸ್ತಂಭವು ಇದ್ದೇ ಇತ್ತು.
2 ಅರಸುಗಳು 13 : 7 (IRVKN)
ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು. [PE][PS]
2 ಅರಸುಗಳು 13 : 8 (IRVKN)
ಯೆಹೋವಾಹಾಜನ ಉಳಿದ ಚರಿತ್ರೆಯೂ, ಅವನ ಶೂರಕೃತ್ಯಗಳ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
2 ಅರಸುಗಳು 13 : 9 (IRVKN)
ಯೆಹೋವಾಹಾಜನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋವಾಷನು ಅರಸನಾದನು. [PS]
2 ಅರಸುಗಳು 13 : 10 (IRVKN)
{ಇಸ್ರಾಯೇಲರ ಅರಸನಾದ ಯೋವಾಷನು} [PS] ಯೆಹೂದದ ಅರಸನಾದ ಯೋವಾಷನ ಆಳ್ವಿಕೆಯ ಮೂವತ್ತೇಳನೆಯ ವರ್ಷದಲ್ಲಿ ಯೆಹೋವಾಹಾಜನ ಮಗನಾದ ಯೆಹೋವಾಷನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹದಿನಾರು ವರ್ಷ ಆಳಿದನು.
2 ಅರಸುಗಳು 13 : 11 (IRVKN)
ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
2 ಅರಸುಗಳು 13 : 12 (IRVKN)
ಯೋವಾಷನ ಉಳಿದ ಚರಿತ್ರೆಯೂ, ಅವನ ಶೂರ ಕೃತ್ಯಗಳೂ, ಇವನು ಯೆಹೂದ್ಯರ ಅರಸನಾದ ಅಮಚ್ಯನು ಎಂಬವನೊಡನೆ ನಡಿಸಿದ ಯುದ್ಧದ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
2 ಅರಸುಗಳು 13 : 13 (IRVKN)
ಯೋವಾಷನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲರ ರಾಜಸ್ಮಶಾನದಲ್ಲಿ ಸಮಾಧಿಮಾಡಿದರು. ಇವನ ತರುವಾಯ ಯಾರೊಬ್ಬಾಮನು ಸಿಂಹಾಸನವನ್ನೇರಿದನು. [PS]
2 ಅರಸುಗಳು 13 : 14 (IRVKN)
{ಎಲೀಷನ ಮರಣ} [PS] ಆ ಕಾಲದಲ್ಲಿ ಎಲೀಷನು ಮರಣಕರವಾದ ರೋಗಕ್ಕೆ ಗುರಿಯಾದನು. ಇಸ್ರಾಯೇಲರ ಅರಸನಾದ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲರಿಗೆ ರಥರಥಾಶ್ವಬಲಗಳಾಗಿದ್ದವನೇ” ಎಂದು ಕೂಗುತ್ತಾ ಅವನ ಮುಖದ ಮೇಲೆ ಬಿದ್ದು ಬಹಳವಾಗಿ ಅತ್ತನು.
2 ಅರಸುಗಳು 13 : 15 (IRVKN)
ಆಗ ಎಲೀಷನು ಇಸ್ರಾಯೇಲರ ಅರಸನಿಗೆ, “ಬಿಲ್ಲನ್ನೂ, ಬಾಣಗಳನ್ನೂ ತರಿಸು” ಎಂದು ಹೇಳಿದನು. ಅವನು ತೆಗೆದುಕೊಂಡನು.
2 ಅರಸುಗಳು 13 : 16 (IRVKN)
ಆಗ ಎಲೀಷನು ಇಸ್ರಾಯೇಲರ ಅರಸನಿಗೆ, “ಬಿಲ್ಲನ್ನು ಹಿಡಿದುಕೋ” ಎಂದು ಆಜ್ಞಾಪಿಸಿದನು. ಅವನು ಹಿಡಿದುಕೊಳ್ಳಲು ತನ್ನ ಕೈಯನ್ನು ಅವನ ಕೈಮೇಲಿಟ್ಟನು. [PE][PS]
2 ಅರಸುಗಳು 13 : 17 (IRVKN)
ಎಲೀಷನು, “ಮೂಡಣ ದಿಕ್ಕಿಗಿರುವ ಕಿಟಕಿಯನ್ನು ತೆರೆ” ಎಂದನು. ಅವನು ತೆರೆದನು. ಅನಂತರ ಎಲೀಷನು, “ಬಾಣವನ್ನು ಎಸೆ” ಎಂದು ಆಜ್ಞಾಪಿಸಿದನು. ಅವನು ಎಸೆಯಲು ಎಲೀಷನು, “ಇದು ಜಯಪ್ರದವಾದ ಯೆಹೋವನ ಬಾಣ; ಅರಾಮ್ಯರನ್ನು ಜಯಿಸುವ ಬಾಣ. ನೀನು ಅರಾಮ್ಯರನ್ನು ಅಫೇಕದಲ್ಲಿ ಸೋಲಿಸಿ ಸಂಹರಿಸಿಬಿಡುವಿ” ಎಂದು ಹೇಳಿದನು.
2 ಅರಸುಗಳು 13 : 18 (IRVKN)
ಇದಲ್ಲದೆ ಎಲೀಷನು ಇಸ್ರಾಯೇಲರ ಅರಸನಿಗೆ, “ಬಾಣಗಳನ್ನು ತೆಗೆದುಕೋ” ಎಂದು ಆಜ್ಞಾಪಿಸಿದಾಗ ಅವನು ಅವುಗಳನ್ನು ತೆಗೆದುಕೊಳ್ಳಲು ಎಲೀಷನು ಅರಸನಿಗೆ, “ಇವುಗಳಿಂದ ನೆಲವನ್ನು ಹೊಡಿ” ಎಂದನು. ಅವನು ಮೂರು ಸಾರಿ ಹೊಡೆದು ಸುಮ್ಮನೆ ನಿಂತನು.
2 ಅರಸುಗಳು 13 : 19 (IRVKN)
ಆಗ ದೇವರ ಮನುಷ್ಯನು ಅವನ ಮೇಲೆ ಕೋಪಗೊಂಡು, “ನೀನು ಐದಾರು ಸಾರಿ ಹೊಡೆಯಬೇಕಾಗಿತ್ತು. ಹಾಗೆ ಮಾಡಿದ್ದರೆ ಅರಾಮ್ಯರು ನಿರ್ನಾಮವಾಗಿ ಹೋಗುವವರೆಗೂ ಅವರ ಮೇಲೆ ನಿನಗೆ ಜಯದೊರಕುತ್ತಿತ್ತು. ನೀನು ಮೂರೇ ಸಾರಿ ಹೊಡೆದದ್ದರಿಂದ ಅವರನ್ನು ಮೂರು ಸಾರಿ ಮಾತ್ರ ಸೋಲಿಸುವಿ” ಎಂದು ಹೇಳಿದನು. [PE][PS]
2 ಅರಸುಗಳು 13 : 20 (IRVKN)
ಎಲೀಷನು ಮೃತಿ ಹೊಂದಲು, ಅವನ ಶವವನ್ನು ಅವರು ಸಮಾಧಿಮಾಡಿದರು. ಮೋವಾಬ್ಯರು ಪ್ರತಿ ವರ್ಷದ ಪ್ರಾರಂಭದಲ್ಲಿ ಸುಲಿಗೆ ಮಾಡುವುದಕ್ಕೋಸ್ಕರ ಗುಂಪು ಗುಂಪಾಗಿ ಬರುತ್ತಿದ್ದರು.
2 ಅರಸುಗಳು 13 : 21 (IRVKN)
ಒಂದು ದಿನ ಜನರು ಒಬ್ಬ ಸತ್ತವನನ್ನು ಸಮಾಧಿಮಾಡುವುದಕ್ಕೆ ಹೋದಾಗ, ಮೋವಾಬ್ಯರ ಗುಂಪು ಬರುತ್ತಿರುವುದನ್ನು ಕಂಡು ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿಹೋದರು. ಸತ್ತ ಮನುಷ್ಯನ ದೇಹವು ಎಲೀಷನ ಎಲುಬುಗಳಿಗೆ ತಗಲಿದ ಕೂಡಲೆ ಅವನು ಜೀವ ಬಂದು ಎದ್ದು ನಿಂತನು. [PS]
2 ಅರಸುಗಳು 13 : 22 (IRVKN)
{ಇಸ್ರಾಯೇಲ್ಯರಿಗೂ ಅರಾಮ್ಯರಿಗೂ ನಡೆದ ಯುದ್ಧ} [PS] ಆದರೆ ಅರಾಮ್ಯರ ಅರಸನಾದ ಹಜಾಯೇಲನು ಯೆಹೋವಾಹಾಜನ ಆಳ್ವಿಕೆಯಲ್ಲೆಲ್ಲಾ ಇಸ್ರಾಯೇಲರನ್ನು ಪೀಡಿಸುತ್ತಿದ್ದನು.
2 ಅರಸುಗಳು 13 : 23 (IRVKN)
ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್, ಇಸಾಕ್, ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪು ಮಾಡಿಕೊಂಡು ಅವರಿಗೆ ದಯೆ ತೋರಿಸಿ, ಅವರ ಮೇಲೆ ಅನುಕಂಪಗೊಂಡನು. [PE][PS]
2 ಅರಸುಗಳು 13 : 24 (IRVKN)
ಅರಾಮ್ಯರ ಅರಸನಾದ ಹಜಾಯೇಲನು ಮರಣಹೊಂದಲು ಅವನಿಗೆ ಬದಲಾಗಿ ಅವನ ಮಗನಾದ ಬೆನ್ಹದದನು ಅರಸನಾದನು.
2 ಅರಸುಗಳು 13 : 25 (IRVKN)
ಯೆಹೋವಾಹಾಜನ ಮಗನಾದ ಯೆಹೋವಾಷನು ತನ್ನ ತಂದೆಯ ಕಾಲದಲ್ಲಿ ಹಜಾಯೇಲನು ಯುದ್ಧಮಾಡಿ ಕಿತ್ತುಕೊಂಡಿದ್ದ ಪಟ್ಟಣಗಳನ್ನು ಬೆನ್ಹದದನಿಂದ ತಿರುಗಿ ತೆಗೆದುಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಸೋಲಿಸಿ ಇಸ್ರಾಯೇಲರ ಎಲ್ಲಾ ಪಟ್ಟಣಗಳನ್ನು ಹಿಂದಕ್ಕೆ ತೆಗೆದುಕೊಂಡನು. [PE]
❮
❯