2 ಅರಸುಗಳು 24 : 1 (IRVKN)
ಯೆಹೋಯಾಕೀಮನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊರಟು ಬಂದನು. ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನ ವಿರುದ್ಧವಾಗಿ ತಿರುಗಿ ಬಿದ್ದನು.
2 ಅರಸುಗಳು 24 : 2 (IRVKN)
ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದ ಯೆಹೋವನ ವಾಕ್ಯದ ಪ್ರಕಾರ ಯೆಹೂದ ರಾಜ್ಯವನ್ನು ಹಾಳುಮಾಡುವುದಕ್ಕೋಸ್ಕರ ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನಿಯರ ಸುಲಿಗೆಯ ಗುಂಪುಗಳನ್ನು ಅಲ್ಲಿಗೆ ಕಳುಹಿಸಿದನು.
2 ಅರಸುಗಳು 24 : 3 (IRVKN)
ಯೆಹೂದ ರಾಜ್ಯದ ನಿರಪರಾಧಿಗಳ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸದೆ ಹೋದನು.
2 ಅರಸುಗಳು 24 : 4 (IRVKN)
ಅವುಗಳಿಗಾಗಿ ಯೆಹೋವನು ಯೆರೂಸಲೇಮಿನವರನ್ನು ಕ್ಷಮಿಸದೆ ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದರಿಂದ ಅವರಿಗೆ ಶಿಕ್ಷೆಯಾಯಿತು. ಇದು ಯೆಹೋವನ ಅಪ್ಪಣೆಯ ಪ್ರಕಾರ ನಡೆಯಿತು.
2 ಅರಸುಗಳು 24 : 5 (IRVKN)
ಯೆಹೋಯಾಕೀಮನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ (ಇತಿಹಾಸ) ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
2 ಅರಸುಗಳು 24 : 6 (IRVKN)
ಯೆಹೋಯಾಕೀಮನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಖೀನನು ಅರಸನಾದನು.
2 ಅರಸುಗಳು 24 : 7 (IRVKN)
ಬಾಬೆಲಿನ ಅರಸನು ಐಗುಪ್ತದ ಕಣಿವೆಯಿಂದ ಯೂಫ್ರೆಟಿಸ್ ನದಿವರೆಗೂ ಇದ್ದ, ಎಲ್ಲಾ ಭೂಪ್ರದೇಶವನ್ನು ಸ್ವಾಧೀನಮಾಡಿಕೊಂಡನು. ಅನಂತರ ಐಗುಪ್ತದ ಅರಸನು ತನ್ನ ದೇಶದಿಂದ ರಾಜ್ಯವ್ಯಾಪ್ತಿಗಾಗಿ ಹೊರಡಲಿಲ್ಲ.
2 ಅರಸುಗಳು 24 : 8 (IRVKN)
ಯೆಹೂದದ ಅರಸನಾದ ಯೆಹೋಯಾಖೀನನು ಯೆಹೋಯಾಖೀನನು ಅರಸನಾದಾಗ ಅವನು ಹದಿನೆಂಟು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳುಗಳ ಕಾಲ ಆಳಿದನು. ಯೆರೂಸಲೇಮಿನ ಎಲ್ನಾತಾನನ ಮಗಳಾದ ನೆಹುಷ್ಟಾ ಎಂಬಾಕೆಯು ಇವನ ತಾಯಿ.
2 ಅರಸುಗಳು 24 : 9 (IRVKN)
ಇವನು ತನ್ನ ತಂದೆಯಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.
2 ಅರಸುಗಳು 24 : 10 (IRVKN)
ಇವನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಯೆರೂಸಲೇಮ್ ಪಟ್ಟಣಕ್ಕೆ ವಿರುದ್ಧವಾಗಿ ಬಂದು ಅದಕ್ಕೆ ಮುತ್ತಿಗೆ ಹಾಕಿದರು.
2 ಅರಸುಗಳು 24 : 11 (IRVKN)
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಮುತ್ತಿಗೆ ಹಾಕಿದ ಯೆರೂಸಲೇಮ್ ಪಟ್ಟಣಕ್ಕೆ ನೆಬೂಕದ್ನೆಚ್ಚರನೂ ಬಂದನು.
2 ಅರಸುಗಳು 24 : 12 (IRVKN)
ಆಗ ಯೆಹೂದದ ಅರಸನಾದ ಯೆಹೋಯಾಖೀನನು ತನ್ನ ತಾಯಿಯ ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಬಾಬೆಲಿನ ಅರಸನ ಬಳಿಗೆ ಹೋದನು. ಬಾಬೆಲಿನ ಅರಸನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.
2 ಅರಸುಗಳು 24 : 13 (IRVKN)
ಇದಲ್ಲದೆ, ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಸನ ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ದ್ರವ್ಯವನ್ನು ತೆಗೆದುಕೊಂಡು ಹೋದನು. ಇಸ್ರಾಯೇಲರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು.
2 ಅರಸುಗಳು 24 : 14 (IRVKN)
ಯೆರೂಸಲೇಮಿನಲ್ಲಿದ್ದ ಎಲ್ಲಾ ಪ್ರಭುಗಳನ್ನೂ, ಭಟರನ್ನೂ, ಕಮ್ಮಾರರನ್ನೂ, ಪರಾಕ್ರಮಶಾಲಿಗಳನ್ನು ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಹಿಡಿದು ತನ್ನ ದೇಶಕ್ಕೆ ಕರೆದುಕೊಂಡು ಹೋದನು. ದೇಶದಲ್ಲಿ ಕೇವಲ ಸಾಮಾನ್ಯ ಜನರಾಗಿದ್ದ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ.
2 ಅರಸುಗಳು 24 : 15 (IRVKN)
ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀನನನ್ನೂ, ಅವನ ತಾಯಿ, ಹೆಂಡತಿ, ಕಂಚುಕಿಗಳನ್ನೂ ಮತ್ತು ದೇಶದ ಪ್ರಧಾನ ಪುರುಷರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಯಾಗಿ ತೆಗೆದುಕೊಂಡುಹೋದನು.
2 ಅರಸುಗಳು 24 : 16 (IRVKN)
ಬಾಬೆಲಿನ ಅರಸನು ಏಳು ಸಾವಿರ ಮಂದಿ ಭಟರನ್ನೂ, ಸಾವಿರ ಮಂದಿ ಕಮ್ಮಾರರನ್ನೂ, ಬಡಗಿಗಳನ್ನು ಯೆರೂಸಲೇಮಿನಿಂದ ಬಾಬಿಲೋನಿಗೆ ಕರೆದುಕೊಂಡು ಹೋದನು. ಅವರೆಲ್ಲರೂ ಪರಾಕ್ರಮಶಾಲಿಗಳೂ ಯುದ್ಧವೀರರೂ ಆಗಿದ್ದರು.
2 ಅರಸುಗಳು 24 : 17 (IRVKN)
ಬಾಬೆಲಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬುವವನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಚಿದ್ಕೀಯನೆಂದು ಹೆಸರಿಟ್ಟನು.
2 ಅರಸುಗಳು 24 : 18 (IRVKN)
ಯೆಹೂದದ ಅರಸನಾದ ಚಿದ್ಕೀಯನು ಚಿದ್ಕೀಯನು ತನ್ನ ಇಪ್ಪತ್ತೊಂದನೆಯ ವರ್ಷ ತುಂಬಿದ ಮೇಲೆ ಅರಸನಾಗಿ ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಲಿಬ್ನ ಪಟ್ಟಣದವನಾದ, ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆಯು ಇವನ ತಾಯಿ.
2 ಅರಸುಗಳು 24 : 19 (IRVKN)
ಚಿದ್ಕೀಯನು ಯೆಹೋಯಾಕೀಮನಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.
2 ಅರಸುಗಳು 24 : 20 (IRVKN)
ಯೆಹೋವನು ಯೆರೂಸಲೇಮಿನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕೊನೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ನಾಶಮಾಡುವಷ್ಟು ರೋಷವುಳ್ಳವನಾಗಿದ್ದನು. ಆದರೆ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.
❮
❯
1
2
3
4
5
6
7
8
9
10
11
12
13
14
15
16
17
18
19
20