2 ಅರಸುಗಳು 6 : 1 (IRVKN)
ಮುಳುಗಿದ್ದ ಕೊಡಲಿ ತೇಲಾಡಿದ್ದು ಒಂದು ದಿನ ಪ್ರವಾದಿಮಂಡಳಿಯವರು ಎಲೀಷನಿಗೆ, “ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರುವ ಈ ಸ್ಥಳವು ಬಹಳ ಇಕ್ಕಟ್ಟಾಗಿದೆ.
2 ಅರಸುಗಳು 6 : 2 (IRVKN)
ಆದುದರಿಂದ ನಾವು ಯೊರ್ದನಿಗೆ ಹೋಗಿ, ಅಲ್ಲಿ ಪ್ರತಿಯೊಬ್ಬನೂ ಒಂದೊಂದು ತೊಲೆಯನ್ನು ಕಡಿದುಕೊಂಡು ಬಂದು, ನಮ್ಮ ವಾಸಕ್ಕಾಗಿ ಒಂದು ಮನೆಯನ್ನು ಮಾಡಿಕೊಳ್ಳೋಣ” ಎಂದರು. ಎಲೀಷನು ಅವರಿಗೆ, “ಹೋಗಿಬನ್ನಿರಿ” ಎಂದು ಹೇಳಿದನು.
2 ಅರಸುಗಳು 6 : 3 (IRVKN)
ಅವರಲ್ಲೊಬ್ಬನು, “ದಯವಿಟ್ಟು ನೀನೂ, ನಿನ್ನ ಸೇವಕರು ನಮ್ಮ ಜೊತೆಯಲ್ಲಿ ಬರಬೇಕು” ಎಂದು ಬೇಡಿಕೊಂಡನು. ಅದಕ್ಕೆ ಎಲೀಷನು, “ಬರುತ್ತೇನೆ” ಎಂದು ಹೇಳಿ ಅವರೊಡನೆ ಹೊರಟನು.
2 ಅರಸುಗಳು 6 : 4 (IRVKN)
ಅವರು ಯೊರ್ದನಿಗೆ ಹೋಗಿ ಮರಗಳನ್ನು ಕಡಿಯುತ್ತಿರುವಾಗ,
2 ಅರಸುಗಳು 6 : 5 (IRVKN)
ಒಬ್ಬನ ಕೊಡಲಿಯು ಕೈಜಾರಿ ನೀರೊಳಗೆ ಬಿದ್ದಿತು. ಆಗ ಅವನು, “ಅಯ್ಯೋ, ಸ್ವಾಮಿ ನಾನು ಅದನ್ನು ಸಾಲವಾಗಿ ತಂದಿದ್ದೆನು” ಎಂದು ಕೂಗಿದನು.
2 ಅರಸುಗಳು 6 : 6 (IRVKN)
ದೇವರ ಮನುಷ್ಯನು ಅವನಿಗೆ, “ಅದು ಎಲ್ಲಿ ಬಿದ್ದಿತು?” ಎಂದು ಕೇಳಲು, ಅದು ಬಿದ್ದ ಸ್ಥಳವನ್ನು ಅವನು ತೋರಿಸಿದನು. ಆಗ ದೇವರ ಮನುಷ್ಯನು ಮರದಿಂದ ಒಂದು ತುಂಡು ಕಟ್ಟಿಗೆಯನ್ನು ಮುರಿದು ಅಲ್ಲಿ ಹಾಕಿದನು, ಕೂಡಲೆ ಕೊಡಲಿಯು ಮೇಲಕ್ಕೆ ಬಂದು ತೇಲಾಡಿತು.
2 ಅರಸುಗಳು 6 : 7 (IRVKN)
ಎಲೀಷನು “ಅದನ್ನು ತೆಗೆದುಕೋ” ಎಂದು ಆಜ್ಞಾಪಿಸಲು ಆ ಮನುಷ್ಯನು ಕೈಚಾಚಿ ಅದನ್ನು ತೆಗೆದುಕೊಂಡನು.
2 ಅರಸುಗಳು 6 : 8 (IRVKN)
ಅರಾಮ್ಯರ ಸೋಲು ಅರಾಮ್ಯರ ಅರಸನು ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನು. ಅವನು ತನ್ನ ಸೇನಾಧಿಪತಿಗಳಿಗೆ, “ಯುದ್ಧದಲ್ಲಿ ಹೊಂಚುಹಾಕತಕ್ಕ ಸ್ಥಳವನ್ನು ಗೊತ್ತುಮಾಡಬೇಕು” ಎಂದನು.
2 ಅರಸುಗಳು 6 : 9 (IRVKN)
ದೇವರ ಮನುಷ್ಯನು ಇಸ್ರಾಯೇಲರ ಅರಸನಿಗೆ, “ಜಾಗರೂಕತೆಯಿಂದಿರಿ, ನೀವು ಇಂಥಿಂಥ ಸ್ಥಳದಲ್ಲಿ ಹೋಗಬಾರದು. ಅಲ್ಲಿ ಅರಾಮ್ಯರು ಅಡಗಿಕೊಂಡಿದ್ದಾರೆ” ಎಂದು ತಿಳಿಸುತ್ತಿದ್ದನು.
2 ಅರಸುಗಳು 6 : 10 (IRVKN)
ದೇವರ ಮನುಷ್ಯನು ಸೂಚಿಸುವ ಎಲ್ಲಾ ಸ್ಥಳಗಳಿಗೂ ಇಸ್ರಾಯೇಲರ ಅರಸನು ಹೇಳಿ ಕಳುಹಿಸುತ್ತಿದ್ದನು. ಹೀಗೆ ಅವನು ಹಲವು ಸಾರಿ ಅರಾಮ್ಯರ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡನು.
2 ಅರಸುಗಳು 6 : 11 (IRVKN)
ಇದರ ದೆಸೆಯಿಂದ ಅರಾಮ್ಯರ ಅರಸನು ಕಳವಳಗೊಂಡು ತನ್ನ ಸೇನಾಧಿಪತಿಗಳನ್ನು ಕರೆದು ಅವರನ್ನು, “ನಮ್ಮವರಲ್ಲಿ ಇಸ್ರಾಯೇಲರ ಅರಸನ ಪಕ್ಷದವರು ಯಾರು? ನನಗೆ ತಿಳಿಸುವುದಿಲ್ಲವೋ” ಎಂದು ಕೇಳಿದನು.
2 ಅರಸುಗಳು 6 : 12 (IRVKN)
ಆಗ ಅವರಲ್ಲೊಬ್ಬನು ಅವನಿಗೆ, “ನನ್ನ ಒಡೆಯನಾದ ಅರಸನೇ, ಹಾಗಲ್ಲ, ಇಸ್ರಾಯೇಲರಲ್ಲಿ ಎಲೀಷನೆಂಬ ಒಬ್ಬ ಪ್ರವಾದಿಯಿರುತ್ತಾನೆ. ನೀನು ನಿನ್ನ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಾಯೇಲರ ಅರಸನಿಗೆ ತಿಳಿಸುತ್ತಾನೆ” ಎಂದನು.
2 ಅರಸುಗಳು 6 : 13 (IRVKN)
ಅರಸನು ಇದನ್ನು ಕೇಳಿ, “ಎಲೀಷನು ಎಲ್ಲಿರುತ್ತಾನೆ ಎಂದು ವಿಚಾರಿಸಿರಿ. ನಾನು ಅವನನ್ನು ಹಿಡಿಸುತ್ತೇನೆ” ಎಂದು ಹೇಳಿದನು. “ಪ್ರವಾದಿಯು ದೋತಾನಿನಲ್ಲಿ ಇರುತ್ತಾನೆ” ಎಂದು ಅರಸನು ತಿಳಿದುಕೊಂಡನು.
2 ಅರಸುಗಳು 6 : 14 (IRVKN)
ಆಗ ಅರಸನು ರಥರಥಾಶ್ವ ಸಹಿತವಾದ ಮಹಾಸೈನ್ಯವನ್ನು ದೋತಾನಿಗೆ ಕಳುಹಿಸಿದನು. ಸೈನ್ಯದವರು ರಾತ್ರಿಯಲ್ಲಿ ಆ ಪಟ್ಟಣವನ್ನು ಸಮೀಪಿಸಿ ಅದಕ್ಕೆ ಮುತ್ತಿಗೆ ಹಾಕಿದರು.
2 ಅರಸುಗಳು 6 : 15 (IRVKN)
ದೇವರ ಮನುಷ್ಯನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಬಂದು ನೋಡಿದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು ಪಟ್ಟಣದ ಸುತ್ತಲೂ ನಿಂತಿರುವುದನ್ನು ಕಂಡು ತನ್ನ ಯಜಮಾನನಿಗೆ, “ಅಯ್ಯೋ, ಸ್ವಾಮಿ ನಾವು ಏನು ಮಾಡೋಣ?” ಎಂದನು.
2 ಅರಸುಗಳು 6 : 16 (IRVKN)
ಆಗ ಎಲೀಷನು ಅವನಿಗೆ, “ಹೆದರಬೇಡ, ಅವರ ಕಡೆಯಲ್ಲಿರುವವರಿಗಿಂತಲೂ, ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ” ಎಂದು ಹೇಳಿ,
2 ಅರಸುಗಳು 6 : 17 (IRVKN)
“ಯೆಹೋವನೇ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆ” ಎಂದು ಪ್ರಾರ್ಥಿಸಲು ಯೆಹೋವನು ಅವನ ಕಣ್ಣುಗಳನ್ನು ತೆರೆದನು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥಾರಥಾಶ್ವಗಳು ಆ ಸೇವಕನಿಗೆ ಕಂಡವು.
2 ಅರಸುಗಳು 6 : 18 (IRVKN)
ಶತ್ರುಗಳಾದ ಅರಾಮ್ಯರು ಸಮೀಪಕ್ಕೆ ಬಂದಾಗ ಎಲೀಷನು, “ಸ್ವಾಮಿ, ಈ ಜನರನ್ನು ಕುರುಡರನ್ನಾಗಿ ಮಾಡು” ಎಂದು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ ಅವರನ್ನು ಕುರುಡರನ್ನಾಗಿ ಮಾಡಿದನು.
2 ಅರಸುಗಳು 6 : 19 (IRVKN)
ಆಗ ಎಲೀಷನು ಅವರಿಗೆ, “ನೀವು ಹೋಗಬೇಕೆಂದಿದ್ದ ಪಟ್ಟಣವೂ, ದಾರಿಯೂ ಇದಲ್ಲ, ನನ್ನ ಜೊತೆಯಲ್ಲಿ ಬನ್ನಿರಿ, ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ” ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ಕರೆದುಕೊಂಡು ಹೋದನು.
2 ಅರಸುಗಳು 6 : 20 (IRVKN)
ಅವರು ಸಮಾರ್ಯದೊಳಗೆ ಬಂದಾಗ ಎಲೀಷನು, “ಇವರು ನೋಡುವಂತೆ ಇವರ ಕಣ್ಣುಗಳನ್ನು ತೆರೆ” ಎಂದು ಯೆಹೋವನನ್ನು ಬೇಡಿಕೊಂಡದ್ದರಿಂದ ಆತನು ಅವರ ಕಣ್ಣುಗಳನ್ನು ತೆರೆದನು. ಆಗ ಅವರಿಗೆ ತಾವು ಸಮಾರ್ಯದಲ್ಲಿದ್ದೇವೆಂದು ತಿಳಿದುಬಂತು.
2 ಅರಸುಗಳು 6 : 21 (IRVKN)
ಇಸ್ರಾಯೇಲರ ಅರಸನು ಅವರನ್ನು ಕಂಡು ಎಲೀಷನಿಗೆ, “ಅಪ್ಪಾ, ನಾನು ಇವರನ್ನು ಸಂಹರಿಸಿ ಬಿಡಲೋ? ಸಂಹರಿಸಲೇ?” ಎಂದು ಕೇಳಿದನು.
2 ಅರಸುಗಳು 6 : 22 (IRVKN)
ಅದಕ್ಕೆ ಅವನು, “ಇವರನ್ನು ನೀನು ಸಂಹರಿಸಬೇಡ, ಕತ್ತಿಬಿಲ್ಲುಗಳಿಂದ ಸ್ವಾಧೀನಪಡಿಸಿಕೊಂಡು ಸೆರೆಯಾಗಿ ತಂದವರನ್ನು ನೀನು ಸಂಹರಿಸುವೆಯೋ? ಇವರಿಗೆ ಅನ್ನಪಾನಗಳನ್ನು ಕೊಡು, ಉಂಡು ಕುಡಿದು ತಮ್ಮ ಯಜಮಾನನ ಬಳಿಗೆ ಹಿಂದಿರುಗಿ ಹೋಗಲಿ” ಎಂದು ಉತ್ತರಕೊಟ್ಟನು.
2 ಅರಸುಗಳು 6 : 23 (IRVKN)
ಆಗ ಅರಸನು ಅವರಿಗಾಗಿ ಒಂದು ದೊಡ್ಡ ಔತಣವನ್ನು ಮಾಡಿಸಿ ಅವರು ಅನ್ನ ಪಾನಗಳನ್ನು ತೆಗೆದುಕೊಂಡಾದ ಮೇಲೆ ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆ ಮಾಡುವ ಅರಾಮ್ಯರ ಗುಂಪುಗಳು ಇಸ್ರಾಯೇಲರ ಪ್ರಾಂತ್ಯದೊಳಗೆ ಮತ್ತೆ ಬರಲೇ ಇಲ್ಲ.
2 ಅರಸುಗಳು 6 : 24 (IRVKN)
ಯೆಹೋವನು ಪಟ್ಟಣವನ್ನು ರಕ್ಷಿಸಿದ್ದು ಆ ನಂತರ ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ಬಂದು ಸಮಾರ್ಯಕ್ಕೆ ಮುತ್ತಿಗೆ ಹಾಕಿದನು.
2 ಅರಸುಗಳು 6 : 25 (IRVKN)
ಆಗ ಸಮಾರ್ಯ ಪಟ್ಟಣದಲ್ಲಿ ಘೋರವಾದ ಬರವಿದ್ದಿತು. ಮುತ್ತಿಗೆಯ ದೆಸೆಯಿಂದ ಅದು ಮತ್ತಷ್ಟು ಘೋರವಾಗಿದ್ದುದರಿಂದ ಒಂದು ಕತ್ತೆಯ ತಲೆಗೆ ಎಂಭತ್ತು ರೂಪಾಯಿಗಳೂ, ಅರ್ಧ ಸೇರು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಟ್ಟವು.
2 ಅರಸುಗಳು 6 : 26 (IRVKN)
ಒಂದು ದಿನ ಇಸ್ರಾಯೇಲರ ಅರಸನು ಪೌಳಿಗೋಡೆಯ ಮೇಲೆ ಹಾದುಹೋಗುತ್ತಿರುವಾಗ, ಒಬ್ಬ ಸ್ತ್ರೀಯು, “ಅರಸನೇ, ನನ್ನ ಒಡೆಯನೇ, ನನ್ನನ್ನು ರಕ್ಷಿಸು” ಎಂದು ಮೊರೆಯಿಟ್ಟಳು.
2 ಅರಸುಗಳು 6 : 27 (IRVKN)
ಅರಸನು ಆಕೆಗೆ, “ಯೆಹೋವನು ನಿನ್ನನ್ನು ರಕ್ಷಿಸದಿದ್ದರೆ ನಾನು ಹೇಗೆ ರಕ್ಷಿಸಬಹುದು? ಕಣದಲ್ಲಾಗಲಿ, ದ್ರಾಕ್ಷಿ ಆಲೆಯಲ್ಲಾಗಲಿ ಏನಾದರೂ ಉಂಟೋ” ಎಂದು ಕೇಳಿ,
2 ಅರಸುಗಳು 6 : 28 (IRVKN)
“ನಿನಗಿರುವ ದುಃಖ ಯಾವುದು” ಎಂದು ಅರಸನು ಕೇಳಿದನು. ಆಗ ಆಕೆಯು, “ಈ ಸ್ತ್ರೀಯು ನನಗೆ, ನಿನ್ನ ಮಗನನ್ನು ತೆಗೆದುಕೊಂಡು ಬಾ, ನಾವು ಈ ಹೊತ್ತು ಅವನನ್ನು ತಿಂದುಬಿಡೋಣ, ನಾಳೆ ನನ್ನ ಮಗನನ್ನು ತಿನ್ನೋಣ” ಎಂದು ಹೇಳಿದ್ದರಿಂದ,
2 ಅರಸುಗಳು 6 : 29 (IRVKN)
ನಾವಿಬ್ಬರೂ ನನ್ನ ಮಗನನ್ನು ಕೊಂದು ಬೇಯಿಸಿ ತಿಂದು ಬಿಟ್ಟೆವು. ಮರುದಿನ ನಾನು ಆಕೆಗೆ, “ಈ ಹೊತ್ತು ನಿನ್ನ ಮಗನನ್ನು ತೆಗೆದುಕೊಂಡು ಬಾ, ಅವನನ್ನು ಕೊಂದು ತಿನ್ನೋಣ ಅಂದಾಗ ಆಕೆಯು ಅವನನ್ನು ಎಲ್ಲಿಯೋ ಅಡಗಿಸಿಟ್ಟಳು” ಎಂದು ಹೇಳಿದಳು.
2 ಅರಸುಗಳು 6 : 30 (IRVKN)
ಗೋಡೆಯ ಮೇಲೆ ಹೋಗುತ್ತಿದ್ದ ಅರಸನು ಆ ಸ್ತ್ರೀಯ ಮಾತನ್ನು ಕೇಳಿದೊಡನೆ ತನ್ನ ಬಟ್ಟೆಗಳನ್ನು ಹರಿದುಕೊಂಡನು. ಆಗ ಅವನ ಮೈ ಮೇಲೆ ಗೋಣಿತಟ್ಟು ಇರುವುದು ಜನರಿಗೆ ಕಂಡಿತು.
2 ಅರಸುಗಳು 6 : 31 (IRVKN)
ಇದಲ್ಲದೆ ಅವನು, “ನಾನು ಈ ಹೊತ್ತು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದಿಂದ ಬೇರ್ಪಡಿಸದೆ ಹೋದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟುಕೊಂಡನು.
2 ಅರಸುಗಳು 6 : 32 (IRVKN)
ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿ ಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನ ಒಡೆಯನ ಕಾಲಿನ ಸಪ್ಪಳವು ಕೇಳಿಸುತ್ತಿದೆಯಲ್ಲಾ” ಎಂದು ಹೇಳಿದನು.
2 ಅರಸುಗಳು 6 : 33 (IRVKN)
ಅವನು ಅವರೊಡನೆ ಮಾತನಾಡುತ್ತಿರುವಾಗಲೇ, ಸೇವಕನು ಅರಸನೊಂದಿಗೆ ಬಂದನು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು, ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು” ಎಂದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33