2 ಅರಸುಗಳು 9 : 1 (IRVKN)
{#1ಯೇಹುವಿನ ರಾಜಾಭಿಷೇಕ } [PS]ಪ್ರವಾದಿಯಾದ ಎಲೀಷನು ಪ್ರವಾದಿಮಂಡಳಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.”
2 ಅರಸುಗಳು 9 : 2 (IRVKN)
ಆ ಊರನ್ನು ತಲುಪಿದ ನಂತರ ನಿಂಷಿಯ ಮೊಮ್ಮಗನೂ, ಯೆಹೋಷಾಫಾಟನ ಮಗನೂ ಆದ ಯೇಹುವು ಎಲ್ಲಿರುತ್ತಾನೆಂದು ವಿಚಾರಿಸಿ, ಅವನು ಸಿಕ್ಕಿದಾಗ ಅವನನ್ನು ಅವರ ಜೊತೆಗಾರರ ಗುಂಪಿನಿಂದ ಒಳಗಿನ ಕೋಣೆಗೆ ಕರೆದುಕೊಂಡು ಹೋಗು.
2 ಅರಸುಗಳು 9 : 3 (IRVKN)
ತರುವಾಯ ಕುಪ್ಪಿಯಲ್ಲಿರುವ ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು, “ಯೆಹೋವನು ಹೀಗೆ ಅನ್ನುತ್ತಾನೆ, ‘ನಾನು ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ’ ಎಂಬುದಾಗಿ ಹೇಳಿದ ಕೂಡಲೆ ಬಾಗಿಲು ತೆರೆದು ಓಡಿಹೋಗು” ಎಂದು ಆಜ್ಞಾಪಿಸಿದನು. [PE]
2 ಅರಸುಗಳು 9 : 4 (IRVKN)
[PS]ಆಗ ಯೌವನಸ್ಥನಾದ ಪ್ರವಾದಿಯು ಎಲೀಷನ ಅಪ್ಪಣೆಯಂತೆ ರಾಮೋತ್ ಗಿಲ್ಯಾದಿಗೆ ಹೋದನು.
2 ಅರಸುಗಳು 9 : 5 (IRVKN)
ಸೈನ್ಯಾಧಿಪತಿಗಳೆಲ್ಲಾ ಒಂದು ಕಡೆ ಸೇರಿರುವುದನ್ನು ಕಂಡು ಅವನು ಅವರನ್ನು ಸಮೀಪಿಸಿ, “ನಾಯಕನೇ ನಿನಗೊಂದು ಮಾತು ಹೇಳುವುದಿದೆ” ಎಂದನು. ಯೇಹುವು ಅವನಿಗೆ, “ನಮ್ಮಲ್ಲಿ ಯಾರಿಗೆ?” ಎಂದು ಕೇಳಲು ಅವನು, “ಸೇನಾಧಿಪತಿಯಾದ ನಿನಗೆ” ಎಂದು ಉತ್ತರಕೊಟ್ಟನು.
2 ಅರಸುಗಳು 9 : 6 (IRVKN)
ಯೇಹುವು ಎದ್ದು ಒಳಗಿನ ಕೋಣೆಗೆ ಹೋಗಲು ಆ ಯೌವನಸ್ಥನು ಅವನ ತಲೆಯ ಮೇಲೆ ಎಣ್ಣೆಯನ್ನು ಹೊಯ್ದು, “ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳು, ಆತನು ನಿನಗೆ, ‘ನಾನು ನಿನ್ನನ್ನು ನನ್ನ ಪ್ರಜೆಯಾದ ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಿದ್ದೇನೆ.
2 ಅರಸುಗಳು 9 : 7 (IRVKN)
ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಯೆಹೋವನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿತೀರಿಸಿದಂತಾಗುವುದು.
2 ಅರಸುಗಳು 9 : 8 (IRVKN)
ಅಹಾಬನ ಕುಟುಂಬದವರೆಲ್ಲಾ ನಿರ್ನಾಮವಾಗಬೇಕು. ಅವನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಗುಲಾಮನಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ತೆಗೆದುಹಾಕುವೆನು.
2 ಅರಸುಗಳು 9 : 9 (IRVKN)
ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿಯು ಅಹಾಬನ ಮನೆಗೂ ಆಗುವುದು.
2 ಅರಸುಗಳು 9 : 10 (IRVKN)
ಈಜೆಬೆಲಳ ಶವವು ಸಮಾಧಿಯನ್ನು ಸೇರುವುದಿಲ್ಲ. ನಾಯಿಗಳು ಅವಳ ಹೆಣವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು’ ” ಎನ್ನುತ್ತಾನೆ ಎಂದು ಹೇಳಿ ಬಾಗಿಲನ್ನು ತೆರೆದು ಓಡಿಹೋದನು. [PE]
2 ಅರಸುಗಳು 9 : 11 (IRVKN)
[PS]ಯೇಹುವು ತಿರುಗಿ ತನ್ನ ಒಡೆಯನ ಸೇವಕರ ಹತ್ತಿರ ಬರಲು ಅವರು ಅವನನ್ನು, “ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಅದಕ್ಕೆ ಯೇಹುವು, “ಆ ಮನುಷ್ಯನು ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೇ ಗೊತ್ತಿದೆಯಲ್ಲಾ” ಎಂದು ಉತ್ತರಕೊಟ್ಟನು.
2 ಅರಸುಗಳು 9 : 12 (IRVKN)
ಆದರೆ ಅವರು, “ಅದು ಸುಳ್ಳು, ಅವನು ಹೇಳಿದ್ದನ್ನು ತಿಳಿಸು” ಎಂದು ಅವನನ್ನು ಒತ್ತಾಯಪಡಿಸಿದ್ದರಿಂದ ಯೇಹುವು, “ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನು ಹೇಳಿದ ಎಲ್ಲ ಮಾತುಗಳನ್ನು ಹೇಳಿದನು.”
2 ಅರಸುಗಳು 9 : 13 (IRVKN)
ಕೂಡಲೆ ಅವರು ಅವನಿಗೋಸ್ಕರ ಮೆಟ್ಟಿಲುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಸಿ ತುತ್ತೂರಿಯನ್ನು ಊದಿಸಿ ಯೇಹುವು ಅರಸನಾಗಿದ್ದಾನೆಂದು ಘೋಷಣೆಗಳನ್ನು ಕೂಗಿದರು. [PE]
2 ಅರಸುಗಳು 9 : 14 (IRVKN)
{#1ಇಸ್ರಾಯೇಲಿನ ಅರಸನಾದ ಯೋರಾಮನ ಕೊಲೆ } [PS]ಹೀಗೆ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಯೋರಾಮನಿಗೆ ವಿರುದ್ಧವಾಗಿ ಒಳಸಂಚುಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನು ರಾಮೋತ್ ಗಿಲ್ಯಾದಿಗೆ ವಿರುದ್ಧವಾಗಿ ಬರಲು ಯೋರಾಮನು ಅದನ್ನು ಕಾಪಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರ ಸಹಿತವಾಗಿ ಹೋಗಿ ಅದಕ್ಕೆ ಕಾವಲುದಂಡುಗಳನ್ನು ಇರಿಸಿದನು.
2 ಅರಸುಗಳು 9 : 15 (IRVKN)
ಅರಸನಾದ ಯೋರಾಮನು, ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುತ್ತಿರುವಾಗ ಗಾಯ ಹೊಂದಿದ್ದರಿಂದ, ಅದನ್ನು ವಾಸಿಮಾಡಿಕೊಳ್ಳುವುದಕ್ಕಾಗಿ ಹಿಂದಿರುಗಿ ಇಜ್ರೇಲ ಪಟ್ಟಣಕ್ಕೆ ಬಂದಿದ್ದನು. ಯೇಹುವು ತನ್ನ ಜೊತೆಗಾರರಿಗೆ, “ನೀವು ನನ್ನವರಾಗಿದ್ದರೆ ಈ ಸುದ್ದಿಯು ಇಜ್ರೇಲನ್ನು ಮುಟ್ಟದಂತೆ ಒಬ್ಬನನ್ನೂ ಈ ಪಟ್ಟಣದಿಂದ ಹೊರಗೆ ಹೋಗದಂತೆ ನೋಡಿಕೊಳ್ಳಿ” ಎಂದು ಹೇಳಿದನು. [PE]
2 ಅರಸುಗಳು 9 : 16 (IRVKN)
[PS]ಅನಂತರ ಯೇಹುವು ರಥದಲ್ಲಿ ಕುಳಿತು ಇಜ್ರೇಲಿಗೆ ಹೋಗುವುದಕ್ಕಾಗಿ ಹೊರಟನು. ಅಲ್ಲಿ ಅಸ್ವಸ್ಥನಾದ ಯೋರಾಮನು ಅವನನ್ನು ನೋಡುವುದಕ್ಕೆ ಬಂದಿದ್ದ ಯೆಹೂದ್ಯರ ಅರಸನಾದ ಅಹಜ್ಯನೂ ಇದ್ದನು.
2 ಅರಸುಗಳು 9 : 17 (IRVKN)
ಇಜ್ರೇಲಿನ ಬುರುಜಿನಲ್ಲಿದ್ದ ಕಾವಲುಗಾರರು ಯೇಹುವಿನ ಗುಂಪಿನವರನ್ನು ಕಂಡು, “ಜನರ ಒಂದು ಗುಂಪು ಬರುವುದು ಕಾಣಿಸುತ್ತದೆ” ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು ಅವನಿಗೆ, “ನೀನು ಒಬ್ಬ ರಾಹುತನನ್ನು ಕರೆದು ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಿದ್ದಾರೊ? ಎಂದು ಕೇಳುವುದಕ್ಕಾಗಿ ಕಳುಹಿಸು” ಎಂಬುದಾಗಿ ಆಜ್ಞಾಪಿಸಿದನು.
2 ಅರಸುಗಳು 9 : 18 (IRVKN)
ರಾಹುತನು ಯೇಹುವನ್ನು ಎದುರುಗೊಂಡು, “ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನಾಗಬೇಕು ನೀನು ನನ್ನ ಹಿಂದೆ ಬಾ” ಎಂದು ಹೇಳಿದನು. ಕಾವಲುಗಾರನು ಅರಸನಿಗೆ, “ರಾಹುತನು ಆ ಗುಂಪನ್ನು ತಲುಪಿದ್ದಾನೆ. ಆದರೆ ಹಿಂತಿರುಗಿ ಬರುವುದು ಕಾಣಿಸುತ್ತಿಲ್ಲ” ಎಂದು ತಿಳಿಸಿದಾಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು. [PE]
2 ಅರಸುಗಳು 9 : 19 (IRVKN)
[PS]ಅವನು ಹೋಗಿ ಯೇಹುವನ್ನು ಎದುರುಗೊಂಡು, “ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನಾಗಬೇಕಾಗಿದೆ ನೀನು ನನ್ನ ಹಿಂದೆ ಬಾ” ಎಂದನು.
2 ಅರಸುಗಳು 9 : 20 (IRVKN)
ಕಾವಲುಗಾರನು ತಿರುಗಿ ಅರಸನಿಗೆ, “ಎರಡನೆಯವನೂ ಆ ಗುಂಪನ್ನು ತಲುಪಿದ್ದಾನೆ. ಆದರೆ ಹಿಂತಿರುಗಿ ಬರುವುದು ಕಾಣಿಸುತ್ತಿಲ್ಲ. ರಥದಲ್ಲಿ ಕುಳಿತಿರುವವನು ಕುದುರೆಗಳನ್ನು ಹುಚ್ಚು ಹಿಡಿದವನಂತೆ ಓಡಿಸುವುದನ್ನು ನೋಡಿದರೆ ಅವನು ನಿಂಷಿಯ ಮೊಮ್ಮಗನಾದ ಯೇಹುವೇ ಇರಬೇಕು” ಎಂದು ಹೇಳಿದನು.
2 ಅರಸುಗಳು 9 : 21 (IRVKN)
ಯೋರಾಮನು ರಥವನ್ನು ಸಿದ್ಧಮಾಡಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ಅವರು ಸಿದ್ಧಮಾಡಿದರು. ಆಗ ಇಸ್ರಾಯೇಲರ ಅರಸನಾದ ಯೋರಾಮನು ಯೆಹೂದ್ಯರ ಅರಸನಾದ ಅಹಜ್ಯನೂ ತಮ್ಮ ತಮ್ಮ ರಥಗಳಲ್ಲಿ ಕುಳಿತುಕೊಂಡು ಯೇಹುವನ್ನು ಎದುರುಗೊಳ್ಳುವುಕ್ಕಾಗಿ ಹೊರಟು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.
2 ಅರಸುಗಳು 9 : 22 (IRVKN)
ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?” ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯಾದ ಈಜೆಬೆಲಳ ದೇವದ್ರೋಹವೂ, ಮಂತ್ರತಂತ್ರಗಳೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.
2 ಅರಸುಗಳು 9 : 23 (IRVKN)
ಕೂಡಲೆ ಯೋರಾಮನು ತನ್ನ ರಥವನ್ನು ತಿರುಗಿಸಿ ಅಹಜ್ಯನಿಗೆ, “ಅಹಜ್ಯನೇ, ಇದು ಒಳಸಂಚು” ಎಂದು ಹೇಳಿ ಓಡಿಹೋದನು.
2 ಅರಸುಗಳು 9 : 24 (IRVKN)
ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು. ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ಮುದುರಿ ರಥದಲ್ಲಿ ಬಿದ್ದನು. [PE]
2 ಅರಸುಗಳು 9 : 25 (IRVKN)
[PS]ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ, “ಯೋರಾಮನ ಶವವನ್ನು ಎತ್ತಿ ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಬಿಸಾಡು. ಒಂದು ದಿನ ನಾವಿಬ್ಬರೂ ಕುದುರೆ ಹತ್ತಿ, ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ, ಯೆಹೋವನು ಈ ಪ್ರವಾದನೆಯನ್ನು ಅವನ ವಿರುದ್ಧ ಹೇಳಿದ್ದನು:
2 ಅರಸುಗಳು 9 : 26 (IRVKN)
ಯೆಹೋವನು ಅಹಾಬನಿಗೆ, ‘ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲಾ, ಯೆಹೋವನ ಆ ಮಾತು ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲಿ ಬಿಸಾಡು” ಎಂದು ಹೇಳಿದನು. [PE]
2 ಅರಸುಗಳು 9 : 27 (IRVKN)
{#1ಯೆಹೂದ್ಯರ ಅರಸನಾದ ಅಹಜ್ಯನ ಕೊಲೆ } [PS]ಯೆಹೂದ್ಯರ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ” ಎಂದು ಕೂಗಲು, ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.
2 ಅರಸುಗಳು 9 : 28 (IRVKN)
ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಯೆರೂಸಲೇಮಿನಲ್ಲಿರುವ ದಾವೀದ ನಗರಕ್ಕೆ ತಂದು ಅದನ್ನು ಅವನ ಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.
2 ಅರಸುಗಳು 9 : 29 (IRVKN)
ಅಹಜ್ಯನು ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಹನ್ನೊಂದನೆಯ ವರ್ಷದಲ್ಲಿ ಯೆಹೂದ್ಯರಿಗೆ ಅರಸನಾಗಿದ್ದನು. [PE]
2 ಅರಸುಗಳು 9 : 30 (IRVKN)
{#1ಈಜೆಬೆಲಳ ಕೊಲೆ }
2 ಅರಸುಗಳು 9 : 31 (IRVKN)
[PS]ಅನಂತರ ಯೇಹುವು ಇಜ್ರೇಲಿಗೆ ಬಂದನು. ಈಜೆಬೆಲಳು ಅದನ್ನು ಕೇಳಿ ತನ್ನ ತಲೆಯನ್ನು ನಯವಾಗಿ ಬಾಚಿಕೊಂಡು, ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ಕಿಟಕಿಯಿಂದ ಇಣುಕಿ ನೋಡಿದಳು. [PE][PS]ಅನಂತರ ಅರಮನೆಯ ಬಾಗಿಲಿನಿಂದ ಪ್ರವೇಶಮಾಡಿದ ಯೇಹುವನ್ನು ಕಂಡು ಅವನಿಗೆ, “ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವೋ? ಕ್ಷೇಮವೋ?” ಎಂದು ಕೇಳಿದಳು.
2 ಅರಸುಗಳು 9 : 32 (IRVKN)
ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ, “ಅಲ್ಲಿ ನನ್ನ ಪಕ್ಷದವರು ಯಾರಿದ್ದಾರೆ?” ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು, ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು. [PE]
2 ಅರಸುಗಳು 9 : 33 (IRVKN)
[PS]ಅವನು ಅವರಿಗೆ, “ಆಕೆಯನ್ನು ಕೆಳಗೆ ದೊಬ್ಬಿರಿ” ಎಂದು ಆಜ್ಞಾಪಿಸಲು ಅವರು ಆಕೆಯನ್ನು ಕೆಳಗೆ ದೊಬ್ಬಿಬಿಟ್ಟರು. ಆಕೆಯ ರಕ್ತವು ಗೋಡೆಗಳಿಗೂ, ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿದು ಹಾಕಿದನು.
2 ಅರಸುಗಳು 9 : 34 (IRVKN)
ಅನಂತರ ಅವನು ಅರಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಸೇವಕರಿಗೆ, “ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ನೋಡಿ ಅದನ್ನು ಸಮಾಧಿಮಾಡಿರಿ, ಆಕೆಯು ರಾಜಪುತ್ರಿಯಾಗಿರುತ್ತಾಳಲ್ಲವೇ” ಎಂದು ಆಜ್ಞಾಪಿಸಿದನು. [PE]
2 ಅರಸುಗಳು 9 : 35 (IRVKN)
[PS]ಸೇವಕರು ಶವವನ್ನು ಸಮಾಧಿಮಾಡುವುದಕ್ಕಾಗಿ ಹೋದರು. ಆದರೆ ಅವರಿಗೆ ಆಕೆಯ ತಲೆಬುರುಡೆ, ಕೈಕಾಲುಗಳ ಹೊರತಾಗಿ ಬೇರೇನೂ ಸಿಕ್ಕಲಿಲ್ಲ.
2 ಅರಸುಗಳು 9 : 36 (IRVKN)
ಅವರು ಹಿಂದಿರುಗಿ ಯೇಹುವಿನ ಹತ್ತಿರ ಬಂದು ಆ ಸಂಗತಿಯನ್ನು ತಿಳಿಸಲು ಅವನು ಅವರಿಗೆ, “ಯೆಹೋವನು, ತನ್ನ ದಾಸನಾಗಿರುವ ತಿಷ್ಬೀಯನಾದ ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ಈಗ ನೆರವೇರಿತು, ನಾಯಿಗಳು ಈಜೆಬೆಲಳ ದೇಹಮಾಂಸವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು.
2 ಅರಸುಗಳು 9 : 37 (IRVKN)
ಆಕೆಯ ಶವವು ಇಜ್ರೇಲಿನ ಹೊಲಕ್ಕೆ ಗೊಬ್ಬರವಾಗುವುದು. ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು” ಎಂದನು. [PE]
❮
❯