2 ಪೇತ್ರನು 2 : 1 (IRVKN)
ದುರ್ಮಾರ್ಗತನವನ್ನು ಬೋಧಿಸುವವರ ವಿಷಯದಲ್ಲಿ ಎಚ್ಚರಿಕೆ (ಯೂದ 1-19) ಆದರೆ ಇಸ್ರಾಯೇಲ್ ಜನರೊಂದಿಗೆ * ಧರ್ಮೋ 13:1-3; ಯೆರೆ 14:14; 23:16; ಅ. ಕೃ. 13:6; 1 ಯೋಹಾ 4:1: ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ † ಅ. ಕೃ. 20:30; 2 ಕೊರಿ 11:13; 1 ತಿಮೊ. 4:1: ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ‡ ಯೂದ. 4; ಗಲಾ. 2:4: ರಹಸ್ಯವಾಗಿ ಒಳಗೆತರುವವರೂ § 1 ಕೊರಿ 6:20; 7:23; ಗಲಾ. 3:13; 4:5; ವಿಮೋ 15:16: ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಮತ್ತಾ 10:33: ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.
2 ಪೇತ್ರನು 2 : 2 (IRVKN)
ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. † ರೋಮಾ. 2:24: ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು.
2 ಪೇತ್ರನು 2 : 3 (IRVKN)
ಅವರು ‡ 1 ತಿಮೊ. 6:5; ತೀತ. 1:11: ದ್ರವ್ಯಾಶೆಯುಳ್ಳವರಾಗಿ § ರೋಮಾ. 16:18; ಕೊಲೊ 2:4: ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ * ಧರ್ಮೋ 32:35; ಫಿಲಿ. 3:19: ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.
2 ಪೇತ್ರನು 2 : 4 (IRVKN)
ಹೇಗೆಂದರೆ † ಯೂದ. 6: ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ‡ ಮತ್ತಾ 25:41: ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ § ಪ್ರಕ 20:2,3,10: ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.
2 ಪೇತ್ರನು 2 : 5 (IRVKN)
ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ * 2 ಪೇತ್ರ. 3:6; 1 ಪೇತ್ರ. 3:20; ಆದಿ 7:10, 8:14: ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ † 1 ಪೇತ್ರ. 3:20: ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.
2 ಪೇತ್ರನು 2 : 6 (IRVKN)
‡ ಆದಿ 19:24: ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ § ಅರಣ್ಯ 26:10: ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
2 ಪೇತ್ರನು 2 : 7 (IRVKN)
ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ * ಆದಿ 19:16: ಲೋಟನನ್ನು ಕಾಪಾಡಿದನು.
2 ಪೇತ್ರನು 2 : 8 (IRVKN)
ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ † ಕೀರ್ತ 119:136,158; ಯೆಹೆ. 9:4: ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ಬಹಳವಾಗಿ ನೊಂದುಕೊಂಡನು.
2 ಪೇತ್ರನು 2 : 9 (IRVKN)
ಕರ್ತನು ‡ 1 ಕೊರಿ 10:13; ಪ್ರಕ 3:10: ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.
2 ಪೇತ್ರನು 2 : 10 (IRVKN)
ಮುಖ್ಯವಾಗಿ [§ ಯೂದ. 16, 1 8 ]ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು [* ಯೂದ. 8 ]ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. [† ಯೂದ. 8 ಕೆಲವು ಪ್ರತಿಗಳಲ್ಲಿ ದೇವದೂತರು ಎಂದು ಬರೆದದೆ. ]ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು.
2 ಪೇತ್ರನು 2 : 11 (IRVKN)
‡ ಯೂದ. 9: ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಅವರಿಗೆ ವಿರೋಧವಾಗಿ ದೂಷಣೆಯನ್ನು, ನಿಂದೆಯನ್ನು ಹೇಳದಿರಲು, ಆ ಗರ್ವಿಷ್ಠರು ಮಹಿಮಾಪದವಿಗಳನ್ನು ದೂಷಿಸಲು ಹಿಂಜರಿಯುವುದಿಲ್ಲ.
2 ಪೇತ್ರನು 2 : 12 (IRVKN)
§ ಯೂದ. 10; ಯೆರೆ 12:3: ಸ್ವಾಭಾವಿಕವಾಗಿ ಸೆರೆಹಿಡಿಯಲ್ಪಟ್ಟು ನಾಶವಾಗುವುದಕ್ಕೆ ಹುಟ್ಟಿರುವ * ಫಿಲಿ. 3:19: ವಿವೇಕಶೂನ್ಯ ಪ್ರಾಣಿಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಿಸುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಸಂಪೂರ್ಣ ನಾಶವಾಗುವರು.
2 ಪೇತ್ರನು 2 : 13 (IRVKN)
ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. † ಅಥವಾ, ತಾತ್ಕಾಲಿಕ ಭೋಗಾನುಭವವನ್ನೇ. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ‡ 1 ಕೊರಿ 11:21: ನಿಮ್ಮೊಂದಿಗೆ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು § ಕೆಲವು ಪ್ರತಿಗಳಲ್ಲಿ, ಪ್ರೇಮಭೋಜನಗಳಲ್ಲಿ ಎಂದು ಬರೆದದೆ; ಯೂದ. 12: ಉಂಡು ಕುಡಿದು ಕಳಂಕಕ್ಕೂ, ಅವಮಾನಕ್ಕೂ ಕಾರಣರಾಗಿದ್ದಾರೆ.
2 ಪೇತ್ರನು 2 : 14 (IRVKN)
ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, * 1 ಪೇತ್ರ. 4:1: ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, † ಎಫೆ 2:3: ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.
2 ಪೇತ್ರನು 2 : 15 (IRVKN)
ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ ‡ ಅರಣ್ಯ 22:5,7; ಧರ್ಮೋ 23:4; ನೆಹೆ 13:2; ಯೂದ 11: ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು.
2 ಪೇತ್ರನು 2 : 16 (IRVKN)
ಆದರೆ ಅವನ ದುಷ್ಟ ಕೃತ್ಯಕ್ಕೆ ಖಂಡನೆಯಾಯಿತು. § ಅರಣ್ಯ 22:21,23,28: ಮೂಕ ಪ್ರಾಣಿಯಾದ ಕತ್ತೆಯು ಮನುಷ್ಯಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನವನ್ನು ಅಡ್ಡಿ ಮಾಡಿತು.
2 ಪೇತ್ರನು 2 : 17 (IRVKN)
ಇವರು * ಯೂದ 12: ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. † ಯೂದ 13: ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ.
2 ಪೇತ್ರನು 2 : 18 (IRVKN)
ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ‡ 2 ಪೇತ್ರ. 1:4; 2:20: ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ § ಯೂದ 16: ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
2 ಪೇತ್ರನು 2 : 19 (IRVKN)
ಇಂಥವರು * ಗಲಾ. 5:13; ಯಾಕೋಬ. 1:25: ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ. ಆದರೆ † ಯೋಹಾ 8:34; ರೋಮಾ. 6:16: ತಾವೇ ಕೆಟ್ಟತನಕ್ಕೆ ದಾಸರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋಲುವನೋ ಅವನು ಅದರ ದಾಸನಾಗಿದ್ದಾನಷ್ಟೇ.
2 ಪೇತ್ರನು 2 : 20 (IRVKN)
ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ‡ ವ. 18: ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ § ಮತ್ತಾ 12:45: ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.
2 ಪೇತ್ರನು 2 : 21 (IRVKN)
* ಯೆಹೆ. 18:24; ಲೂಕ 12:47; ಯಾಕೋಬ. 4:17: ಅವರು ನೀತಿಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯನ್ನು ಬಿಟ್ಟು ದೂರ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಹೋಗಿದ್ದರೆ ಚೆನ್ನಾಗಿತ್ತು.
2 ಪೇತ್ರನು 2 : 22 (IRVKN)
† ಜ್ಞಾ. 26:11: “ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಂಡಿತು. ಮತ್ತು ಮೈತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವುದಕ್ಕೆ ಹೋಯಿತು.” ಎಂಬ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22