2 ಸಮುವೇಲನು 16 : 1 (IRVKN)
{ಚೀಬನು ಅರಸನಿಗೆ ಆಹಾರ ತಂದದ್ದೂ} [PS] ದಾವೀದನು ಗುಡ್ಡದ ತುದಿಯ ಆಚೆಗೆ ಹೋದ ಕೂಡಲೆ ಮೆಫೀಬೋಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳನ್ನೂ, ನೂರು ಒಣಗಿದ ದ್ರಾಕ್ಷಿ ಗೊಂಚಲುಗಳನ್ನೂ, ನೂರು ಅಂಜೂರ ಹಣ್ಣುಗಳನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಹೇರಿಕೊಂಡು ಬಂದು ಅವನನ್ನು ಎದುರುಗೊಂಡನು.
2 ಸಮುವೇಲನು 16 : 2 (IRVKN)
ಅರಸನು ಚೀಬನನ್ನು, “ಇವುಗಳನ್ನು ಯಾಕೆ ತಂದಿ?” ಎಂದು ಕೇಳಿದನು. ಅವನು, “ಅರಸನ ಮನೆಯವರು ಸವಾರಿಮಾಡುವುದಕ್ಕಾಗಿ ಕತ್ತೆಗಳನ್ನು, ಆಳುಗಳು ತಿನ್ನುವುದಕ್ಕಾಗಿ ಹಣ್ಣು ಮತ್ತು ರೊಟ್ಟಿಗಳನ್ನು, ಅರಣ್ಯದಲ್ಲಿ ದಣಿದವರು ಕುಡಿಯುವುದಕ್ಕಾಗಿ ದ್ರಾಕ್ಷಾರಸವನ್ನು ತಂದಿದ್ದೇನೆ” ಎಂದು ಉತ್ತರಕೊಟ್ಟನು.
2 ಸಮುವೇಲನು 16 : 3 (IRVKN)
ಅರಸನು ತಿರುಗಿ ಅವನನ್ನು, “ನಿನ್ನ ಯಜಮಾನನ ಮಗನು ಎಲ್ಲಿದ್ದಾನೆ?” ಎಂದು ಕೇಳಲು ಅವನು, “ತನ್ನ ತಂದೆಯ ರಾಜ್ಯವನ್ನು ಇಸ್ರಾಯೇಲರು ಮರಳಿ ತನಗೇ ಕೊಡುವರೆಂದು ಹೇಳಿ ಅವನು ಯೆರೂಸಲೇಮಿನಲ್ಲೇ ಉಳಿದನು” ಅಂದನು
2 ಸಮುವೇಲನು 16 : 4 (IRVKN)
ಆಗ ಅರಸನು ಅವನಿಗೆ, “ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ” ಎಂದು ಹೇಳಲು ಅವನು, “ಅರಸನೇ ನಿನಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ. ನನ್ನ ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ” ಎಂದನು. [PS]
2 ಸಮುವೇಲನು 16 : 5 (IRVKN)
{ಶಿಮ್ಮಿಯು ದಾವೀದನನ್ನು ಶಪಿಸಿದ್ದು} [PS] ಅರಸನಾದ ದಾವೀದನು ಬಹುರೀಮಿಗೆ ಬಂದಾಗ ಸೌಲನ ವಂಶದವನೂ, ಗೇರನ ಮಗನೂ ಆದ ಶಿಮ್ಮೀಯು ದಾವೀದನನ್ನು ಶಪಿಸುತ್ತಾ, ಆ ಊರಿನಿಂದ ಹೊರಗೆ ಬಂದನು.
2 ಸಮುವೇಲನು 16 : 6 (IRVKN)
ಅವನು ದಾವೀದನಿಗೂ, ಅವನ ಎಲ್ಲಾ ಸೇವಕರಿಗೂ, ಎಡಬಲದಲ್ಲಿರುವ ಸೈನಿಕರಿಗೂ ಮತ್ತು ಶೂರರಿಗೂ ಕಲ್ಲೆಸೆಯ ತೊಡಗಿದನು.
2 ಸಮುವೇಲನು 16 : 7 (IRVKN)
ಅವನು ಅವರನ್ನು ಶಪಿಸುತ್ತಾ, “ಹೋಗು ಕೊಲೆಗಾರನೆ, ನೀಚನೆ ಹೋಗು,
2 ಸಮುವೇಲನು 16 : 8 (IRVKN)
ಸೌಲನ ರಾಜ್ಯವನ್ನು ಕಸಿದುಕೊಂಡು ಅವನ ಮನೆಯವರನ್ನು ಕೊಂದದ್ದಕ್ಕಾಗಿ ಯೆಹೋವನು ನಿನಗೆ ಮುಯ್ಯಿ ತೀರಿಸಿದ್ದಾನೆ. ಆತನು ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನಿಗೆ ಕೊಟ್ಟು ಬಿಟ್ಟನು. ಕೊಲೆಗಾರನೇ ಇಗೋ, ನಿನಗೆ ಈಗ ತಕ್ಕ ಆಪತ್ತು ಬಂದಿದೆ” ಎಂದನು.
2 ಸಮುವೇಲನು 16 : 9 (IRVKN)
ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ, “ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ಶಪಿಸುವುದೇನು? ಅಪ್ಪಣೆಯಾಗಲಿ. ನಾನು ಅವನಿರುವಲ್ಲಿಗೆ ಹೋಗಿ, ಅವನ ತಲೆಯನ್ನು ಹಾರಿಸಿಕೊಂಡು ಬರುವೆನು” ಎಂದನು.
2 ಸಮುವೇಲನು 16 : 10 (IRVKN)
ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನಾನು ನಿಮಗೇನು ಮಾಡಿದೆ? ಬಹುಶಃ ಅವನು ನನ್ನನ್ನು ಶಪಿಸಿದ್ದಾನೆ, ಏಕೆಂದರೆ, ‘ದಾವೀದನನ್ನು ಶಪಿಸು’ ಎಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದಿ?’ ಎಂದು ಅವನನ್ನು ಕೇಳುವವರು ಯಾರು?” ಎಂದು ಉತ್ತರ ಕೊಟ್ಟನು.
2 ಸಮುವೇಲನು 16 : 11 (IRVKN)
ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿರಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನನು ಹೀಗೆ ಮಾಡುವುದು ಯಾವ ದೊಡ್ಡ ಮಾತು? ಬಿಡಿರಿ, ಅವನು ಶಪಿಸಲಿ. ಹೀಗೆ ಮಾಡಬೇಕೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ್ದಾನೆ.
2 ಸಮುವೇಲನು 16 : 12 (IRVKN)
ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈ ಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು” ಎಂದು ಹೇಳಿದನು.
2 ಸಮುವೇಲನು 16 : 13 (IRVKN)
ದಾವೀದನೂ ಅವನ ಜನರೂ ದಾರಿ ಹಿಡಿದು ಹೋಗುವಾಗ ಶಿಮ್ಮಿಯು ಶಪಿಸುತ್ತಾ, ಕಲ್ಲೆಸೆಯುತ್ತಾ, ಮಣ್ಣೆರೆಚುತ್ತಾ ಗುಡ್ಡದ ಪಕ್ಕದಲ್ಲೇ ನಡೆಯುತ್ತಿದ್ದನು.
2 ಸಮುವೇಲನು 16 : 14 (IRVKN)
ಅರಸನೂ ಅವನ ಜೊತೆಯಲ್ಲಿ ಬಂದವರೆಲ್ಲರೂ ದಣಿದವರಾಗಿ, ಹೋಗಬೇಕಾದ ಸ್ಥಳವನ್ನು ಸೇರಿ, ಅಲ್ಲಿ ವಿಶ್ರಮಿಸಿಕೊಂಡರು. [PS]
2 ಸಮುವೇಲನು 16 : 15 (IRVKN)
{ಅಬ್ಷಾಲೋಮನು ಅಹೀತೋಫೆಲನ ಉಪದೇಶದಿಂದ ನಡೆದುಕೊಂಡ ರೀತಿ} [PS] ಅಬ್ಷಾಲೋಮನು ಎಲ್ಲಾ ಇಸ್ರಾಯೇಲರೊಡನೆ ಯೆರೂಸಲೇಮಿಗೆ ಬಂದನು. ಅಹೀತೋಫೇಲನೂ ಅವನ ಸಂಗಡ ಇದ್ದನು.
2 ಸಮುವೇಲನು 16 : 16 (IRVKN)
ಅರ್ಕಿಯನೂ ದಾವೀದನ ಸ್ನೇಹಿತನೂ ಆಗಿದ್ದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದು, “ಅರಸನು ಚಿರಂಜೀವಿಯಾಗಿರಲಿ, ಅರಸನು ಚಿರಂಜೀವಿಯಾಗಿರಲಿ” ಎಂದು ಕೂಗಿದನು.
2 ಸಮುವೇಲನು 16 : 17 (IRVKN)
ಅಬ್ಷಾಲೋಮನು ಅವನಿಗೆ “ಸ್ನೇಹಿತನ ಬಗ್ಗೆ ನಿನಗಿರುವ ಪ್ರಾಮಾಣಿಕತೆ ಪ್ರೀತಿ ಇಷ್ಟೇತಾನೇ? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ?” ಅಂದನು.
2 ಸಮುವೇಲನು 16 : 18 (IRVKN)
ಅದಕ್ಕೆ ಹೂಷೈಯು, “ಹಾಗಲ್ಲ ಯೆಹೋವನೂ, ಈ ಜನರೂ, ಎಲ್ಲಾ ಇಸ್ರಾಯೇಲರೂ ಯಾರನ್ನು ಆರಿಸಿದ್ದಾರೋ ನಾನು ಅವನ ಪಕ್ಷದವನಾಗಿರುತ್ತೇನೆ. ನಾನು ಅವನ ಬಳಿಯಲ್ಲಿ ವಾಸಿಸುವೆನು.
2 ಸಮುವೇಲನು 16 : 19 (IRVKN)
ಇದಲ್ಲದೆ ನಾನು ಈಗ ಸೇವೆಮಾಡಬೇಕೆಂದಿರುವುದು ರಾಜಪುತ್ರನ ಸನ್ನಿಧಿಯಲ್ಲಿ ಅಲ್ಲವೇ? ನಿನ್ನ ತಂದೆಯ ಸನ್ನಿಧಿಯಲ್ಲಿ ಸೇವೆ ಸಲ್ಲಿಸಿದಂತೆ ನಿನ್ನ ಸನ್ನಿಧಿಯಲ್ಲಿಯೂ ಸೇವೆ ಸಲ್ಲಿಸುವೆನು” ಎಂದು ಉತ್ತರ ಕೊಟ್ಟನು. [PE][PS]
2 ಸಮುವೇಲನು 16 : 20 (IRVKN)
ಅನಂತರ ಅಬ್ಷಾಲೋಮನು, “ನಾವು ಈಗ ಮಾಡತಕ್ಕದ್ದೇನು? ಆಲೋಚನೆ ಹೇಳು” ಎಂಬುದಾಗಿ ಅಹೀತೋಫೆಲನನ್ನು ಕೇಳಿದನು.
2 ಸಮುವೇಲನು 16 : 21 (IRVKN)
ಆಗ ಅಹೀತೋಫೆಲನು, “ಹೋಗಿ ನಿನ್ನ ತಂದೆಯು ಮನೆಕಾಯುವುದಕ್ಕೆ ಬಿಟ್ಟಿರುವ ಅವನ ಉಪಪತ್ನಿಯರೊಡನೆ ಸಂಗಮಿಸು. ಹೀಗೆ ಮಾಡುವುದಾದರೆ ನೀನು ನಿನ್ನ ತಂದೆಗೆ ವೈರಿಯಾಗುವೆ ಎಂದು ಎಲ್ಲಾ ಇಸ್ರಾಯೇಲ್ಯರಿಗೆ ತಿಳಿಯುವುದರಿಂದ ನಿನ್ನ ಪಕ್ಷದವರು ಬಲಗೊಳ್ಳುವರು” ಎಂದು ಉತ್ತರ ಕೊಟ್ಟನು.
2 ಸಮುವೇಲನು 16 : 22 (IRVKN)
ಆಗ ಅವರು ಅಬ್ಷಾಲೋಮನಿಗೋಸ್ಕರ ಮಾಳಿಗೆಯ ಮೇಲೆ ಗುಡಾರ ಹಾಕಿದರು. ಅವನು ಎಲ್ಲಾ ಇಸ್ರಾಯೇಲ್ಯರ ಮುಂದೆಯೇ ತನ್ನ ತಂದೆಯ ಉಪಪತ್ನಿಗಳನ್ನು ಸಂಗಮಿಸಿದನು.
2 ಸಮುವೇಲನು 16 : 23 (IRVKN)
ಆ ಕಾಲದಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿರುವಷ್ಟು ಬೆಲೆಯಿತ್ತು. ದಾವೀದನೂ ಮತ್ತು ಅಬ್ಷಾಲೋಮನೂ ಅವನ ಆಲೋಚನೆಗಳನ್ನು ಗೌರವಿಸುತ್ತಿದ್ದರು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23

BG:

Opacity:

Color:


Size:


Font: